AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ರಾಹುಲ್​​ ಗಾಂಧಿಗೆ ಮತ್ತೊಂದು ಪತ್ರ ಬರೆದ ಮಾಜಿ ಸಚಿವ ಕೆ.ಎನ್​​. ರಾಜಣ್ಣ: ಮಹತ್ವದ ವಿಷಯಗಳ ಉಲ್ಲೇಖ

ರಾಹುಲ್ ಗಾಂಧಿಗೆ ಈಗಾಗಲೇ ನಾಲ್ಕು ಪತ್ರಗಳನ್ನು ಬರೆದಿದ್ದ ಮಾಜಿ ಸಚಿವ ಕೆ.ಎನ್. ರಾಜಣ್ಣ ಮತ್ತೊಂದು ಲೆಟರ್​​ ಬರೆದಿದ್ದಾರೆ.ಈ ಪತ್ರದಲ್ಲಿ ತಮ್ಮ 'ವೋಟ್ ಚೋರಿ' ಹೇಳಿಕೆಯ ಹಿಂದಿನ ಉದ್ದೇಶವನ್ನು ಅವರು ಸ್ಪಷ್ಟಪಡಿಸಿದ್ದಾರೆ. ತಮ್ಮ ಹೇಳಿಕೆ ಹಿಂದಿನ ಅರ್ಥ ಏನಾಗಿತ್ತು ಎಂದು ಸಂಭಾಷಣೆ ಸಮೇತ ಅವರು ಉಲ್ಲೇಖಿಸಿದ್ದು, ತಮ್ಮ ಮಾತುಗಳನ್ನು ತಪ್ಪಾಗಿ ಅರ್ಥೈಸಿದವರರ ವಿರುದ್ಧ ಕ್ರಮ ಕೈಗೊಳ್ಳುವಂತೆ ಆಗ್ರಹಿಸಿದ್ದಾರೆ. ಜೊತೆಗೆ ರಾಹುಲ್​​ ಗಾಂಧಿ ಅವರ ಭೇಟಿಗೂ ಸಮಯ ಕೇಳಿದ್ದಾರೆ.

ರಾಹುಲ್​​ ಗಾಂಧಿಗೆ ಮತ್ತೊಂದು ಪತ್ರ ಬರೆದ ಮಾಜಿ ಸಚಿವ ಕೆ.ಎನ್​​. ರಾಜಣ್ಣ: ಮಹತ್ವದ ವಿಷಯಗಳ ಉಲ್ಲೇಖ
ರಾಹುಲ್​​ ಗಾಂಧಿಗೆ ಮತ್ತೊಂದು ಪತ್ರ ಬರೆದ ರಾಜಣ್ಣ
ಪ್ರಸನ್ನ ಗಾಂವ್ಕರ್​
| Edited By: |

Updated on:Dec 23, 2025 | 11:45 AM

Share

ಬೆಂಗಳೂರು, ಡಿಸೆಂಬರ್​ 23: ಕಾಂಗ್ರೆಸ್​​ ನಾಯಕ ರಾಹುಲ್​ ಗಾಂಧಿಗೆ ಮಾಜಿ ಸಚಿವ ಕೆ.ಎನ್. ರಾಜಣ್ಣ ಮತ್ತೊಂದು ಪತ್ರ ಬರೆದಿದ್ದಾರೆ. ವೋಟ್​​ ಚೋರಿ ಅಭಿಯಾನದ ಬಗ್ಗೆ ತಮ್ಮ ಹೇಳಿಕೆಯನ್ನು ಹೇಗೆ ತಪ್ಪಾಗಿ ಅರ್ಥೈಸಲಾಗಿದೆ ಎಂಬುದರ ಬಗ್ಗೆ ಸಂಭಾಷಣೆ ಸಮೇತ ಪತ್ರದಲ್ಲಿ ಉಲ್ಲೇಖಿಸಲಾಗಿದ್ದು, ಭೇಟಿಗೂ ಸಮಯ ಕೇಳಿದ್ದಾರೆ. ಈಗಾಗಲೇ ನಾಲ್ಕು ಪತ್ರಗಳನ್ನು ಬರೆದಿರುವ ರಾಜಣ್ಣ, ರಾಜ್ಯದಲ್ಲಿನ ವಿದ್ಯಮಾನದಿಂದ ಪಕ್ಷಕ್ಕೆ ಆಗುತ್ತಿರುವ ಡ್ಯಾಮೇಜ್ ಬಗ್ಗೆಯೂ ಅವುಗಳಲ್ಲಿ ಉಲ್ಲೇಖಿಸಿದ್ದರು. ಸಿದ್ದರಾಮಯ್ಯರನ್ನು ಸಿಎಂ ಸ್ಥಾನದಿಂದ ಕೈ ಬಿಟ್ಟರೆ ಆಗುವ ಡ್ಯಾಮೇಜ್ ಬಗ್ಗೆಯೂ ಮನವರಿಕೆ ಯತ್ನ ಮಾಡಿದ್ದರು.

ರಾಜಣ್ಣ ಬರೆದ ಪತ್ರದಲ್ಲೇನಿದೆ?

ತಾನು ತುಮಕೂರು ಜಿಲ್ಲೆಯ ಮಧುಗಿರಿ ವಿಧಾನಸಭಾ ಕ್ಷೇತ್ರದ ಪ್ರಸ್ತುತ ಶಾಸಕನಾಗಿದ್ದು, ಕರ್ನಾಟಕ ಸರ್ಕಾರದಲ್ಲಿ ಸಹಕಾರ ಸಚಿವನಾಗಿಯೂ ಹಾಗೂ ಹಾಸನ ಜಿಲ್ಲಾ ಉಸ್ತುವಾರಿ ಸಚಿವನಾಗಿಯೂ ಈ ಹಿಂದೆ ಸೇವೆ ಸಲ್ಲಿಸಿದ್ದೇನೆ. ಮುಖ್ಯಮಂತ್ರಿಗಳಾದ ಸಿದ್ದರಾಮಯ್ಯ ಅವರ ಸಚಿವ ಸಂಪುಟದಿಂದ ತನ್ನನ್ನು ಕೈಬಿಟ್ಟಿರುವ ಹಿನ್ನೆಲೆಯಲ್ಲಿ, ಕೆಲ ಪ್ರಮುಖ ವಿಷಯಗಳನ್ನು ಗಮನಕ್ಕೆ ತರುತ್ತಿದ್ದೇನೆ ಎಂದು ಪತ್ರದಲ್ಲಿ ರಾಜಣ್ಣ ಹೇಳಿದ್ದಾರೆ.

ಇದನ್ನೂ ಓದಿ: ಕರ್ನಾಟಕ ಅಧಿಕಾರ ಹಂಚಿಕೆ; ಖರ್ಗೆ ಜತೆ ರಾಹುಲ್ ಗಾಂಧಿ 25 ನಿಮಿಷ ಮಾತುಕತೆ

ವೋಟ್ ಚೋರಿ ಕಾರ್ಯಕ್ರಮವನ್ನು ತಾನು ಹೃದಯಪೂರ್ವಕವಾಗಿ ಬೆಂಬಲಿಸಿದ್ದು,ಇಂತಹ ಮಹತ್ವದ ವಿಷಯಗಳನ್ನು ದೇಶದ ಮುಂದೆ ಇಡುವ ನಿಮ್ಮ ನಾಯಕತ್ವ ಮತ್ತು ಮುಂದಾಳತ್ವವನ್ನು ಆಳವಾಗಿ ಮೆಚ್ಚುತ್ತೇನೆ. ನಾನು ನೀಡಿದ್ದ ಹೇಳಿಕೆಯ ಉದ್ದೇಶ ಏನೆಂದರೆ, ಕೆಪಿಸಿಸಿ ನೇಮಕ ಮಾಡಿದ ಬಿಎಲ್ಏಗಳು ತಮ್ಮ ಜವಾಬ್ದಾರಿಯನ್ನು ಸಮರ್ಪಕವಾಗಿ ನಿರ್ವಹಿಸಿಲ್ಲ. ಕೆಪಿಸಿಸಿ ಅಧ್ಯಕ್ಷರಾದ ಡಿ.ಕೆ. ಶಿವಕುಮಾರ್ ಮತ್ತು ಸಂಬಂಧಿಸಿದವರು ಈ ಲೋಪಗಳತ್ತ ಸೂಕ್ತ ಗಮನ ನೀಡಿದ್ದರೆ, ಅವುಗಳನ್ನು ತಪ್ಪಿಸಬಹುದಾಗಿತ್ತು. ಹಾಗಿದ್ದರೆ ಕರ್ನಾಟಕದಲ್ಲಿ ಕಾಂಗ್ರೆಸ್ ಪಕ್ಷವು ಇನ್ನೂ 8 ರಿಂದ 10 ಸ್ಥಾನಗಳನ್ನು ಹೆಚ್ಚಾಗಿ ಗೆಲ್ಲುವ ಸಾಧ್ಯತೆ ಇತ್ತು. ಇದೇ ರೀತಿಯ ಲೋಪಗಳನ್ನು ಇತರ ರಾಜ್ಯಗಳಲ್ಲಿಯೂ ತಪ್ಪಿಸಿದ್ದರೆ, ಇನ್ನೂ 30 ರಿಂದ 40 ಸ್ಥಾನಗಳನ್ನು ಹೆಚ್ಚಾಗಿ ಗೆಲ್ಲಬಹುದಾಗಿತ್ತು. ಆ ಪರಿಸ್ಥಿತಿಯಲ್ಲಿ ನರೇಂದ್ರ ಮೋದಿ ಅವರು ಪ್ರಧಾನಮಂತ್ರಿ ಆಗುತ್ತಿರಲಿಲ್ಲ. ಬದಲಾಗಿ ಕಾಂಗ್ರೆಸ್ ಪಕ್ಷವೇ ಕೇಂದ್ರದಲ್ಲಿ ಅಧಿಕಾರಕ್ಕೆ ಬಂದು, ನಮ್ಮ ಪ್ರಿಯ ಯುವ ನಾಯಕ ರಾಹುಲ್ ಗಾಂಧಿ ಅವರು ಪ್ರಧಾನಮಂತ್ರಿಯಾಗುತ್ತಿದ್ದರು ಎಂಬುದಾಗಿತ್ತು ಎಂದು ಪತ್ರದಲ್ಲಿ ರಾಜಣ್ಣ ತಿಳಿಸಿದ್ದಾರೆ.

ತಮ್ಮ ರಾಜಕೀಯ ಜೀವನ, ಕಾಂಗ್ರೆಸ್​​ ಪಕ್ಷದ ಮೇಲಿನ ನಿಷ್ಠೆ, ಸಚಿವನಾಗಿ ಮಾಡಿದ ಕೆಲಸಗಳು ಸೇರಿ ತಮ್ಮ ರಾಜಕೀಯ ಸಾಧನೆ ಬಗ್ಗೆಯೂ ಪತ್ರದಲ್ಲಿ ರಾಜಣ್ಣ ಉಲ್ಲೇಖಿಸಿದ್ದು, ಸತ್ಯಾಸತ್ಯತೆಯನ್ನು ನಿಮ್ಮಮುಂದಿಡುವ ಸಲುವಾಗಿ ಈ ಪತ್ರ ಬರೆದಿದ್ದೇನೆ. ಜೊತೆಗೆ, ನನ್ನ ಮಾತುಗಳನ್ನು ತಪ್ಪಾಗಿ ಅರ್ಥೈಸಿ, ತಪ್ಪು ರೀತಿಯಲ್ಲಿ ನಿಮ್ಮ ಗಮನಕ್ಕೆ ತಂದವರ ವಿರುದ್ಧ ಕ್ರಮ ಕೈಗೊಳ್ಳಬೇಕೆಂದು ವಿನಂತಿಸುತ್ತೇನೆ. ಈ ವಿಷಯಗಳ ಕುರಿತು ವಿವರವಾಗಿ ಚರ್ಚಿಸಲು, ಭೇಟಿಗೆ ಸಮಯ ನೀಡುವಂತೆಯೂ ಪತ್ರಮುಖೇನ ರಾಹುಲ್​​ ಗಾಂಧಿಗೆ ಅವರು ಮನವಿ ಮಾಡಿದ್ದಾರೆ.

ಮತ್ತಷ್ಟು ಸುದ್ದಿ ಓದಲು ಇಲ್ಲಿ ಕ್ಲಿಕ್​​ ಮಾಡಿ.

Published On - 11:42 am, Tue, 23 December 25

ಗಿಲ್ಲಿ ಅವತಾರವನ್ನೇ ಬದಲಿಸಿದ ಮನೆ ಮಂದಿ; ನೀವು ನಗೋದು ಗ್ಯಾರಂಟಿ
ಗಿಲ್ಲಿ ಅವತಾರವನ್ನೇ ಬದಲಿಸಿದ ಮನೆ ಮಂದಿ; ನೀವು ನಗೋದು ಗ್ಯಾರಂಟಿ
2 ವರ್ಷ ಹೋಟೆಲ್ ರೂಮ್ ಕೊಟ್ಟಿದ್ದಕ್ಕೆ 3 ಅಡಿಯಷ್ಟು ಕಸ ತುಂಬಿ ಹೋದ ಅತಿಥಿ
2 ವರ್ಷ ಹೋಟೆಲ್ ರೂಮ್ ಕೊಟ್ಟಿದ್ದಕ್ಕೆ 3 ಅಡಿಯಷ್ಟು ಕಸ ತುಂಬಿ ಹೋದ ಅತಿಥಿ
ಫ್ಯಾಮಿಲಿ ವೀಕ್: ರಾಶಿಕಾ ತಾಯಿ ಮಾತಿಗೆ ಸ್ಟನ್ ಆದ ಗಿಲ್ಲಿ
ಫ್ಯಾಮಿಲಿ ವೀಕ್: ರಾಶಿಕಾ ತಾಯಿ ಮಾತಿಗೆ ಸ್ಟನ್ ಆದ ಗಿಲ್ಲಿ
ಉಸಿರಾಟ ಸಮಸ್ಯೆ ಎಂದು ಆಸ್ಪತ್ರೆಗೆ ಬಂದ ರೋಗಿಯ ಮೇಲೆ ವೈದ್ಯನಿಂದ ಹಲ್ಲೆ
ಉಸಿರಾಟ ಸಮಸ್ಯೆ ಎಂದು ಆಸ್ಪತ್ರೆಗೆ ಬಂದ ರೋಗಿಯ ಮೇಲೆ ವೈದ್ಯನಿಂದ ಹಲ್ಲೆ
ರಸ್ತೆ ಅಡ್ಡಗಟ್ಟಿ ಬರ್ತ್‌ಡೇ ಆಚರಣೆ, ಪುಂಡರ ಹಾವಳಿ ವಿಡಿಯೋ ವೈರಲ್
ರಸ್ತೆ ಅಡ್ಡಗಟ್ಟಿ ಬರ್ತ್‌ಡೇ ಆಚರಣೆ, ಪುಂಡರ ಹಾವಳಿ ವಿಡಿಯೋ ವೈರಲ್
ರಜತ್ ಅವರ ಸಂಭಾವನೆ ಎಷ್ಟು? ಓಪನ್ ಆಗಿ ಮಾತನಾಡಿದ ಬುಜ್ಜಿ
ರಜತ್ ಅವರ ಸಂಭಾವನೆ ಎಷ್ಟು? ಓಪನ್ ಆಗಿ ಮಾತನಾಡಿದ ಬುಜ್ಜಿ
ರೈಲಿನ ಶೌಚಾಲಯದ ಪಕ್ಕ ಕುಳಿತು ಪ್ರಯಾಣಿಸಿದ ಕ್ರೀಡಾ ಪಟುಗಳು
ರೈಲಿನ ಶೌಚಾಲಯದ ಪಕ್ಕ ಕುಳಿತು ಪ್ರಯಾಣಿಸಿದ ಕ್ರೀಡಾ ಪಟುಗಳು
ಬೆಂಗಳೂರಲ್ಲಿ ನ್ಯೂ ಇಯರ್ ಸೆಲೆಬ್ರೇಟ್ ಮಾಡ್ತೀರಾ? ಈ ವಿಚಾರಗಳನ್ನು ತಿಳಿದಿರಿ
ಬೆಂಗಳೂರಲ್ಲಿ ನ್ಯೂ ಇಯರ್ ಸೆಲೆಬ್ರೇಟ್ ಮಾಡ್ತೀರಾ? ಈ ವಿಚಾರಗಳನ್ನು ತಿಳಿದಿರಿ
ತಿರುಮಲ ವೆಂಕಟೇಶ್ವರನ ದರ್ಶನಕ್ಕೂ ಮುನ್ನ ಭೂವರಾಹ ಸ್ವಾಮಿ ದರ್ಶನ ಕಡ್ಡಾಯ
ತಿರುಮಲ ವೆಂಕಟೇಶ್ವರನ ದರ್ಶನಕ್ಕೂ ಮುನ್ನ ಭೂವರಾಹ ಸ್ವಾಮಿ ದರ್ಶನ ಕಡ್ಡಾಯ
ಇಂದು ಈ ರಾಶಿಯವರ ವ್ಯವಹಾರಗಳಲ್ಲಿ ಯಶಸ್ಸು ಲಭಿಸಲಿದೆ
ಇಂದು ಈ ರಾಶಿಯವರ ವ್ಯವಹಾರಗಳಲ್ಲಿ ಯಶಸ್ಸು ಲಭಿಸಲಿದೆ