AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಡಿ. 11ರಿಂದ ಬಸವನಗುಡಿ ಕಡಲೆಕಾಯಿ ಪರಿಷೆ: ನಾಳೆಯಿಂದಲೇ ಮಾರ್ಗ ಬದಲಾವಣೆ

Kadalekai parishe 2023: ನಗರದ ಬಸವನಗುಡಿಯ ದೊಡ್ಡ ಬಸವಣ್ಣ, ದೊಡ್ಡ ಗಣಪತಿ ದೇವಸ್ಥಾನದಲ್ಲಿ ಡಿ.11ರಿಂದ ಐತಿಹಾಸಿಕ ಕಡಲೆಕಾಯಿ ಪರಿಷೆ ನಡೆಯಲಿದೆ. ಹಾಗಾಗಿ ನಾಳೆಯಿಂದ ಬೆಂಗಳೂರಿನ ಬಸವನಗುಡಿ ವ್ಯಾಪ್ತಿಯಲ್ಲಿ ವಾಹನ ಸಂಚಾರಕ್ಕೆ ಪರ್ಯಾಯ ಮಾರ್ಗಗಳು ಸೇರಿದಂತೆ ಪಾರ್ಕಿಂಗ್​​​ಗೆ ವ್ಯವಸ್ಥೆ ಕಲ್ಪಿಸಲಾಗಿದೆ.

ಡಿ. 11ರಿಂದ ಬಸವನಗುಡಿ ಕಡಲೆಕಾಯಿ ಪರಿಷೆ: ನಾಳೆಯಿಂದಲೇ ಮಾರ್ಗ ಬದಲಾವಣೆ
ಕಡಲೆಕಾಯಿ ಪರಿಷೆ (ಸಂಗ್ರಹ ಚಿತ್ರ)
TV9 Web
| Updated By: ಗಂಗಾಧರ​ ಬ. ಸಾಬೋಜಿ|

Updated on:Dec 08, 2023 | 1:28 PM

Share

ಬೆಂಗಳೂರು, ಡಿಸೆಂಬರ್​​ 08: ಡಿ. 11ರಿಂದ ಬಸವನಗುಡಿಯ ದೊಡ್ಡ ಬಸವಣ್ಣ, ದೊಡ್ಡ ಗಣಪತಿ ದೇವಸ್ಥಾನದಲ್ಲಿ ಐತಿಹಾಸಿಕ ಕಡಲೆಕಾಯಿ ಪರಿಷೆ (Kadalekai parishe) ನಡೆಯಲಿದೆ. ಕಡಲೆಕಾಯಿ ಪರಿಷೆಗೆ ಸಿಲಿಕಾನ್​ ಸಿಟಿ ಜನರು ಸೇರಿದಂತೆ ಸುತ್ತಮುತ್ತಲ ಲಕ್ಷಾಂತರ ಜನರು ಆಗಮಿಸುತ್ತಾರೆ. ಹಾಗಾಗಿ ನಾಳೆಯಿಂದಲೇ ಬೆಂಗಳೂರಿನ ಬಸವನಗುಡಿ ವ್ಯಾಪ್ತಿಯಲ್ಲಿ ವಾಹನ ಸಂಚಾರಕ್ಕೆ ಪರ್ಯಾಯ ಮಾರ್ಗ ಮತ್ತು ಪಾರ್ಕಿಂಗ್​​​ಗೆ ವ್ಯವಸ್ಥೆಯನ್ನು ಕಲ್ಪಿಸಲಾಗಿದೆ.

ಪರ್ಯಾಯ ಮಾರ್ಗಗಳು ಹೀಗಿವೆ

ಲಾಲ್​ಬಾಗ್​​ ವೆಸ್ಟ್​ಗೇಟ್​ ಕಡೆಯಿಂದ ವಾಣಿವಿಲಾಸ ರಸ್ತೆ ಮೂಲಕ 5ನೇ ಮುಖ್ಯರಸ್ತೆ ಚಾಮರಾಜಪೇಟೆ, ಗಾಂಧಿಬಜಾರ್ ಮುಖ್ಯರಸ್ತೆಯಿಂದ ಬುಲ್​​ಟೆಂಪಲ್ ರಸ್ತೆಯ ರಾಮಕೃಷ್ಣಾಶ್ರಮ ವೃತ್ತದಲ್ಲಿ ಬಲತಿರುವು ಪಡೆಯಬೇಕು. ಹಯವದನರಾವ್ ರಸ್ತೆ ಮೂಲಕ ಗವಿಪುರಂ 3ನೇ ಅಡ್ಡರಸ್ತೆ ಮೂಲಕ ಮೌಂಟ್​​ಜಾಯ್​ ಮೂಲಕ ಹನುಮಂತನಗರದ ಕಡೆ ತೆರಳಬಹುದಾಗಿದೆ.

ಇದನ್ನೂ ಓದಿ: Kadlekai Parishe 2023: ಬಸವನಗುಡಿ ಕಡಲೆಕಾಯಿ ಪರಿಷೆ ಯಾವಾಗ, ಏಕಿಷ್ಟು ಪ್ರಾಮುಖ್ಯತೆ, ಕಾರ್ತಿಕ ಮಾಸದಲ್ಲೇ ಏಕೆ ನಡೆಯುತ್ತದೆ? ಇಲ್ಲಿದೆ ಮಾಹಿತಿ

ಆರ್​​.ವಿ.ಟೀಚರ್ಸ್​ ಕಾಲೇಜ್​ ಜಂಕ್ಷನ್​ ಕಡೆಯಿಂದ ಟ್ರಿನಿಟಿ ಆಸ್ಪತ್ರೆ ರಸ್ತೆ, ಕೆ.ಆರ್​​.ರಸ್ತೆಯಲ್ಲಿ ಬ್ಯೂಗಲ್​ ರಾಕ್​ ರಸ್ತೆ ಮೂಲಕ ಹನುಮಂತನಗರ ಕಡೆಗೆ ಸಂಚರಿಸುವ ವಾಹನಗಳು ಟ್ಯಾಗೋರ್ ಸರ್ಕಲ್​ನಲ್ಲಿ ಬಲತಿರುವು ಪಡೆಯಬೇಕು.

ಗಾಂಧಿಬಜಾರ್ ಮುಖ್ಯರಸ್ತೆ ಮೂಲಕ ರಾಮಕೃಷ್ಣಾಶ್ರಮ ಜಂಕ್ಷನ್​​ ಮೂಲಕ ಹಯವದನರಾವ್​ ರಸ್ತೆಯಲ್ಲಿ ಗವಿಪುರಂ ಎಕ್ಸ್​ಟೆಂಕ್ಷನ್​ 3ನೇ ಅಡ್ಡರಸ್ತೆ ಮೂಲಕ ಮೌಂಟ್​​ಜಾಯ್ ರಸ್ತೆ​ ಮೂಲಕ ಹನುಮಂತನಗರ ಕಡೆಗೆ ತೆರಳಬೇಕು.

ಇದನ್ನೂ ಓದಿ: ಬಸವನಗುಡಿ ದೊಡ್ಡ ಗಣಪನ ದೇಗುಲ ಗೋಪುರದಲ್ಲಿ ಬಿರುಕು: ಪತ್ರ ಬರೆದ್ರೂ ಕ್ರಮಕೈಗೊಳ್ಳದ ಪುರಾತತ್ವ ಇಲಾಖೆ?

ತ್ಯಾಗರಾಜನಗರ/ಬನಶಂಕರಿ ಕಡೆಯಿಂದ 5ನೇ ಮುಖ್ಯರಸ್ತೆ, ಎನ್​​.ಆರ್​​.ಕಾಲೋನಿ ರಸ್ತೆಯಲ್ಲಿ ಬುಲ್​ಟೆಂಪಲ್ ರಸ್ತೆ ಮೂಲಕ ಚಾಮರಾಜಪೇಟೆ ಕಡೆಗೆ ಸಂಚರಿಸುವ ವಾಹನಗಳು ಬುಲ್​ಟೆಂಪಲ್ ರಸ್ತೆಯ ಕಾಮತ್ ಯಾತ್ರಿ ನಿವಾಸ ಜಂಕ್ಷನ್​ನಲ್ಲಿ ಎಡ ತಿರುವು ಪಡೆದು ಅಶೋಕ್​​ನಗರ 2ನೇ ಕ್ರಾಸ್​ ರಸ್ತೆ ಮೂಲಕ ಕತ್ರಿಗುಪ್ಪೆ ರಸ್ತೆ ಜಂಕ್ಷನ್​ನಲ್ಲಿ ಬಲತಿರುವು ಪಡೆದು 3ನೇ ಮುಖ್ಯರಸ್ತೆ ನಾರಾಯಣಸ್ವಾಮಿ ಸರ್ಕಲ್​ನಲ್ಲಿ ಕೆ.ಜಿ.ನಗರ ಮುಖ್ಯರಸ್ತೆ ಅಥವಾ ಹಯವದನರಾವ್​ ರಸ್ತೆ ಮೂಲಕ ರಾಮಕೃಷ್ಣಾಶ್ರಮ ಜಂಕ್ಷನ್​ನಿಂದ ಚಾಮರಾಜಪೇಟೆ ಕಡೆಗೆ ವಾಹನಗಳು ಸಂಚರಿಸಲು ಅವಕಾಶ ಕಲ್ಪಿಸಲಾಗಿದೆ.

ವಾಹನಗಳ ಪಾರ್ಕಿಂಗ್​​ ವ್ಯವಸ್ಥೆ

ಬೆಂಗಳೂರಿನ ಬಸವನಗುಡಿ ವ್ಯಾಪ್ತಿಯಲ್ಲಿ ವಾಹನ ಪಾರ್ಕಿಂಗ್​​ಗೆ ವ್ಯವಸ್ಥೆ ಮಾಡಲಾಗಿದೆ. ಎನ್​.ಆರ್​​.ಕಾಲೋನಿಯ ಎಪಿಎಸ್​ ಕಾಲೇಜು ಮೈದಾನ, ಹಯವದನರಾವ್​ ರಸ್ತೆಯ ಕೊಹಿನೂರು ಆಟದ ಮೈದಾನ ಹಾಗೂ ಬುಲ್​ಟೆಂಪಲ್ ರಸ್ತೆಯ ಉದಯಭಾನು ಮೈದಾನದಲ್ಲಿ ಪಾಕಿಂಗ್​​ಗೆ ಅವಕಾಶ ನೀಡಲಾಗಿದೆ.

ರಾಜ್ಯದ ಮತ್ತಷ್ಟು ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ.

Published On - 6:57 am, Fri, 8 December 23

ಓವರ್ ಮಧ್ಯದಲ್ಲಿಯೇ ಅಫ್ರಿದಿ ಬೌಲಿಂಗ್ ನಿಲ್ಲಿಸಿದ ಅಂಪೈರ್
ಓವರ್ ಮಧ್ಯದಲ್ಲಿಯೇ ಅಫ್ರಿದಿ ಬೌಲಿಂಗ್ ನಿಲ್ಲಿಸಿದ ಅಂಪೈರ್
ವಿಮಾನ ನಿಲ್ದಾಣದಲ್ಲಿ ಮೋದಿಗೆ ಜೋರ್ಡಾನ್‌ ಪ್ರಧಾನಿಯಿಂದ ಆತ್ಮೀಯ ಸ್ವಾಗತ
ವಿಮಾನ ನಿಲ್ದಾಣದಲ್ಲಿ ಮೋದಿಗೆ ಜೋರ್ಡಾನ್‌ ಪ್ರಧಾನಿಯಿಂದ ಆತ್ಮೀಯ ಸ್ವಾಗತ
ಅಶ್ವಿನಿ ಗೌಡ, ಚೈತ್ರಾ ಕುಂದಾಪುರ ನಡುವೆ ಜಗಳ: ಗಿಲ್ಲಿ ರಿಯಾಕ್ಷನ್ ನೋಡಿ..
ಅಶ್ವಿನಿ ಗೌಡ, ಚೈತ್ರಾ ಕುಂದಾಪುರ ನಡುವೆ ಜಗಳ: ಗಿಲ್ಲಿ ರಿಯಾಕ್ಷನ್ ನೋಡಿ..
ಭಲೇ ಆನೆ: ಪೊಲೀಸರಂತೆ ವಾಹನ ತಪಾಸಣೆ ಮಾಡಿದ ಕಾಡಾನೆ, ವಿಡಿಯೋ ನೋಡಿ
ಭಲೇ ಆನೆ: ಪೊಲೀಸರಂತೆ ವಾಹನ ತಪಾಸಣೆ ಮಾಡಿದ ಕಾಡಾನೆ, ವಿಡಿಯೋ ನೋಡಿ
ತಲ್ವಾರ್ ಹಿಡಿದು ಡ್ಯಾನ್ಸ್ ಮಾಡಿ ಫೇಸ್​ಬುಕ್ ಪೋಸ್ಟ್: ಇಬ್ಬರ ಬಂಧನ
ತಲ್ವಾರ್ ಹಿಡಿದು ಡ್ಯಾನ್ಸ್ ಮಾಡಿ ಫೇಸ್​ಬುಕ್ ಪೋಸ್ಟ್: ಇಬ್ಬರ ಬಂಧನ
ಜಾಗದ ವಿಚಾರಕ್ಕೆ ಸಮುದಾಯಗಳ ನಡುವೆ ಗಲಾಟೆ: ಅಷ್ಟಕ್ಕೂ ಆಗಿದ್ದೇನು?
ಜಾಗದ ವಿಚಾರಕ್ಕೆ ಸಮುದಾಯಗಳ ನಡುವೆ ಗಲಾಟೆ: ಅಷ್ಟಕ್ಕೂ ಆಗಿದ್ದೇನು?
ರಾಹುಲ್ ಗಾಂಧಿಯ ದಿಮಾಗ್ ಚೋರಿಯಾಗಿದೆ ಎಂದ ಪ್ರಲ್ಹಾದ್ ಜೋಶಿ
ರಾಹುಲ್ ಗಾಂಧಿಯ ದಿಮಾಗ್ ಚೋರಿಯಾಗಿದೆ ಎಂದ ಪ್ರಲ್ಹಾದ್ ಜೋಶಿ
ಬಳ್ಳಾರಿ: ಹೊತ್ತಿ ಉರಿದ ಲಾರಿ, 40 ಯಮಹಾ ಬೈಕ್​ಗಳು ಭಸ್ಮ
ಬಳ್ಳಾರಿ: ಹೊತ್ತಿ ಉರಿದ ಲಾರಿ, 40 ಯಮಹಾ ಬೈಕ್​ಗಳು ಭಸ್ಮ
ಶಿವರಾಜಕುಮಾರ್ ಹಾಡಿಗೆ ಹೆಜ್ಜೆ ಹಾಕಿದ ಶಾಸಕ ಹೆಚ್.ಸಿ.ಬಾಲಕೃಷ್ಣ
ಶಿವರಾಜಕುಮಾರ್ ಹಾಡಿಗೆ ಹೆಜ್ಜೆ ಹಾಕಿದ ಶಾಸಕ ಹೆಚ್.ಸಿ.ಬಾಲಕೃಷ್ಣ
ಶಾಮನೂರು ಶಿವಶಂಕರಪ್ಪ ಅಂತ್ಯಸಂಸ್ಕಾರ ಹೇಗೆ ನಡೆಯಲಿದೆ? ಇಲ್ಲಿದೆ ಮಾಹಿತಿ
ಶಾಮನೂರು ಶಿವಶಂಕರಪ್ಪ ಅಂತ್ಯಸಂಸ್ಕಾರ ಹೇಗೆ ನಡೆಯಲಿದೆ? ಇಲ್ಲಿದೆ ಮಾಹಿತಿ