
ಬೆಂಗಳೂರು, ನವೆಂಬರ್ 05: ನಗರದಲ್ಲಿ ಮತ್ತೊಂದು ಮೆಟ್ರೋ ನಿಲ್ದಾಣದ ಹೆಸರು ಬದಲಾವಣೆಗೆ ಕೂಗು ಕೇಳಿಬಂದಿದೆ. ಪಿಂಕ್ ಲೈನ್ ಮೆಟ್ರೋ ಮಾರ್ಗದಲ್ಲಿರುವ ಕಡುಗೊಂಡನಹಳ್ಳಿ ಮೆಟ್ರೋ ನಿಲ್ದಾಣದ ಹೆಸರನ್ನು ಅರೇಬಿಕ್ ಕಾಲೇಜು ಮೆಟ್ರೋ ನಿಲ್ದಾಣ ಎಂದು ಮರುನಾಮಕರಣ ಮಾಡುವಂತೆ ವಸತಿ ಸಚಿವ ಜಮೀರ್ ಅಹಮದ್ ಖಾನ್ ಬುಧವಾರ ಸಿಎಂ ಡಿಕೆ ಶಿವಕುಮಾರ್ಗೆ ಮನವಿ ಸಲ್ಲಿಸಿದ್ದಾರೆ.
ಈ ಕುರಿತಾಗಿ ಟ್ವೀಟ್ ಮಾಡಿರುವ ಸಚಿವ ಜಮೀರ್ ಅಹಮದ್ ಖಾನ್, ‘ನಮ್ಮ ಮೆಟ್ರೋದ ಪಿಂಕ್ ಲೈನ್‌ನಲ್ಲಿರುವ ಪ್ರಸ್ತಾವಿತ ಕಾಡುಗೊಂಡನಹಳ್ಳಿ ಮೆಟ್ರೋ ನಿಲ್ದಾಣಕ್ಕೆ ಬದಲಾಗಿ ‘ಅರೇಬಿಕ್ ಕಾಲೇಜು ಮೆಟ್ರೋ ನಿಲ್ದಾಣ’ ಎಂದು ಮರುನಾಮಕರಣ ಮಾಡುವಂತೆ ಕೋರಿ ಮಾನ್ಯ ಮುಖ್ಯಮಂತ್ರಿ ಡಿಕೆ ಶಿವಕುಮಾರ್ ಅವರಿಗೆ ಮನವಿ ಸಲ್ಲಿಸಲಾಯಿತು’ ಎಂದು ಮಾಹಿತಿ ಹಂಚಿಕೊಂಡಿದ್ದಾರೆ.
‘ಸ್ಥಳೀಯ ಪ್ರದೇಶದ ಐತಿಹಾಸಿಕ ಮತ್ತು ಭೌಗೋಳಿಕ ಗುರುತನ್ನು ಪ್ರತಿಬಿಂಬಿಸುವ ನಿಟ್ಟಿನಲ್ಲಿ ಈ ಹೆಸರನ್ನು ಪರಿಗಣಿಸುವಂತೆ ಮನವಿಯಲ್ಲಿ ಕೋರಲಾಯಿದೆ. ಇನ್ನು ಈ ಸಂದರ್ಭದಲ್ಲಿ ಮಾಜಿ ಸಚಿವ ಬಿ. ನಾಗೇಂದ್ರ ಹಾಗೂ ಹೆಸ್ಕಾಂ ಅಧ್ಯಕ್ಷ ಜನಾಬ್ ಅಜ್ಜಂಪೀರ್ ಖಾದ್ರಿ ಉಪಸ್ಥಿತರಿದ್ದರು’ ಎಂದು ಅವರು ಬರೆದುಕೊಂಡಿದ್ದಾರೆ.
ಇದನ್ನೂ ಓದಿ: ಪಿಂಕ್ಲೈನ್ ನಮ್ಮ ಮೆಟ್ರೋ ಮಾರ್ಗದ ಮತ್ತೊಂದು ನಿಲ್ದಾಣದ ಹೆಸರು ಬದಲಾವಣೆಗೆ ಆಗ್ರಹ: ಬನ್ನೇರುಘಟ್ಟ ರಸ್ತೆ ಬಂದ್ ಎಚ್ಚರಿಕೆ
ಇನ್ನು ಇದೇ ವಿಚಾರವಾಗಿ ಅರೇಬಿಕ್ ಕಾಲೇಜು ಪೋಸ್ಟ್ ಪ್ರದೇಶದಲ್ಲಿರುವ ಯುನೈಟೆಡ್ ಕರ್ನಾಟಕ ಚಾರಿಟೇಬಲ್ ಟ್ರಸ್ಟ್ ಕೂಡ ಬಿಎಂಆರ್‌ಸಿಎಲ್ ವ್ಯವಸ್ಥಾಪಕ ನಿರ್ದೇಶಕ ಪಿ.ಸಿ. ಜಾಫರ್ರನ್ನು ಭೇಟಿ ಮಾಡಿ, ನಿಲ್ದಾಣದ ಹೆಸರು ಬದಲಿಸುವಂತೆ ಮನವಿ ಸಲ್ಲಿಸಿದೆ. ಅರೇಬಿಕ್ ಕಾಲೇಜು ಮೆಟ್ರೋ ನಿಲ್ದಾಣದ ಎದುರಿನಲ್ಲೇ ಇದೆ. ಆದರೆ, ಕಡುಗೊಂಡನಹಳ್ಳಿ ಪ್ರದೇಶವು ಮೆಟ್ರೋ ನಿಲ್ದಾಣದಿಂದ ಸುಮಾರು ಒಂದು ಕಿ.ಮೀ ದೂರದಲ್ಲಿದೆ. ಹೀಗಾಗಿ ನಿಲ್ದಾಣಕ್ಕೆ ಕಡುಗೊಂಡನಹಳ್ಳಿ ಎಂದು ಹೆಸರಿಟ್ಟರೆ ಪ್ರಯಾಣಿಕರಲ್ಲಿ ಗೊಂದಲ ಉಂಟಾಗಬಹುದು ಎಂದು ಟ್ರಸ್ಟ್ ತಿಳಿಸಿರುವುದಾಗಿ ಡೆಕ್ಕನ್ ಹೆರಾಲ್ಡ್ ವರದಿ ಮಾಡಿದೆ.
ಕರ್ನಾಟಕದ ಮತ್ತಷ್ಟು ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ.