ಬೆಂಗಳೂರು: ರಾಜ್ಯದ ಬಹುತೇಕ ಜಿಲ್ಲೆಗಳಲ್ಲಿ ಬಿಸಿಲಿನ ತಾಪ ಹೆಚ್ಚಾಗುತ್ತಿದೆ. ಕಲಬುರ್ಗಿ ಜಿಲ್ಲೆಯಲ್ಲಿ ಗರಿಷ್ಠ 40.9 ಡಿಗ್ರಿ ಸೆಲ್ಸಿಯಸ್ ಉಷ್ಣಾಂಶ ದಾಖಲಾಗಿದೆ ಎಂದು ಭಾರತೀಯ ಹವಾಮಾನ ಇಲಾಖೆ (IMD) ತಿಳಿಸಿದೆ. ಜೊತೆಗೆ ರಾಜ್ಯದಲ್ಲಿ ಒಣಹವೆ ಇದೆ ಎಂದು ಹವಾಮಾನ ಇಲಾಖೆ ಮಾಹಿತಿ ನೀಡಿದೆ. ಬಿಸಿ ಮತ್ತು ಒಣಹವೆ ಹವಾಮಾನಕ್ಕೆ ಸಾಕ್ಷಿಯಾಗಿರುವ ಬೆಂಗಳೂರಿನಲ್ಲಿ ಬುಧವಾರ ಮತ್ತು ಗುರುವಾರ ಕ್ರಮವಾಗಿ 35.6 ಡಿಗ್ರಿ ಸೆಲ್ಸಿಯಸ್ ಮತ್ತು 20 ಡಿಗ್ರಿ ಸೆಲ್ಸಿಯಸ್ ಗರಿಷ್ಠ ಮತ್ತು ಕನಿಷ್ಠ ತಾಪಮಾನ ದಾಖಲಾಗಿದೆ ಎಂದು ಐಎಂಡಿ ಗುರುವಾರ ತಿಳಿಸಿದೆ. ಮುಂದಿನ 24 ಗಂಟೆಗಳಲ್ಲಿ ಗರಿಷ್ಠ ಮತ್ತು ಕನಿಷ್ಠ ತಾಪಮಾನವು ಕ್ರಮವಾಗಿ 35 ಮತ್ತು 21 ಡಿಗ್ರಿ ಸೆಲ್ಸಿಯಸ್ ಮತ್ತು ಮುಂದಿನ 48 ಗಂಟೆಗಳಲ್ಲಿ ಕ್ರಮವಾಗಿ 35 ಮತ್ತು 22 ಡಿಗ್ರಿ ಸೆಲ್ಸಿಯಸ್ ಹೆಚ್ಚಾಗುವ ಆಗುವ ಸಾಧ್ಯತೆಯಿದೆ. ಬೇಸಿಗೆ ತಾಪಮಾನವನ್ನು ತಡೆಗಟ್ಟಲು ನಗರದಲ್ಲಿ ಯಾವುದೇ ಕ್ರಮಕೈಗೊಂಡಿಲ್ಲ ಎಂದು ಬೆಂಗಳೂರಿನ ಐಎಂಡಿ ವಿಜ್ಞಾನಿ ಎ. ಪ್ರಸಾದ್ ಹೇಳಿದ್ದಾರೆ.
ಏಪ್ರಿಲ್ 19, 20 ಮತ್ತು 21 ರಂದು, ಬೆಂಗಳೂರು ನಗರ ಮತ್ತು ಗ್ರಾಮಾಂತರ ಜಿಲ್ಲೆಗಳ ಪ್ರತ್ಯೇಕ ಭಾಗಗಳಲ್ಲಿ ಸಾಧಾರಣ ಮಳೆಯಾಗುವ ಸಾಧ್ಯತೆಯಿದೆ ಎಂದು ಪ್ರಸಾದ್ ನ್ಯೂಸ್ 9 ಗೆ ತಿಳಿಸಿದ್ದಾರೆ.
ಇದನ್ನೂ ಓದಿ: Heatwave Alert: ಈ ರಾಜ್ಯಗಳಲ್ಲಿ ಮುಂದಿನ 3 ದಿನಗಳಲ್ಲಿ ತಾಪಮಾನ 4 ಡಿಗ್ರಿಗಳಷ್ಟು ಹೆಚ್ಚುವ ಸಾಧ್ಯತೆ
ಮುಂದಿನ 24 ಗಂಟೆಗಳಲ್ಲಿ ಕರ್ನಾಟಕದ ಕರಾವಳಿಯ ಕೆಲ ಜಿಲ್ಲೆಗಳಲ್ಲಿ ಗುಡುಗು ಸಹಿತ ಭಾರಿ ಮಳೆಯಾಗುವ ಸಾಧ್ಯತೆಯಿದೆ ಎಂದು ಐಎಂಡಿ ತಿಳಿಸಿದೆ. ಮುಂದಿನ 48 ಗಂಟೆಗಳಲ್ಲಿ ಉತ್ತರ ಒಳನಾಡಿನ ಬೆಳಗಾವಿ, ಗದಗ, ಹಾವೇರಿ, ಕಲಬುರಗಿ, ಧಾರವಾಡ, ಬಾಗಲಕೋಟೆ, ವಿಜಯಪುರ ಜಿಲ್ಲೆಗಳು, ದಕ್ಷಿಣ ಒಳನಾಡಿನ ಬಳ್ಳಾರಿ, ಚಿತ್ರದುರ್ಗ, ದಾವಣಗೆರೆ, ಚಿಕ್ಕಮಗಳೂರು, ಹಾಸನ, ಕೊಡಗು ಜಿಲ್ಲೆಗಳಲ್ಲಿ ಗುಡುಗು ಸಹಿತ ಮಳೆಯಾಗಲಿದೆ. ಜೊತೆಗೆ ಕರ್ನಾಟಕದ ಒಳನಾಡಿನ ಉಳಿದ ಜಿಲ್ಲೆಗಳಲ್ಲಿ ಒಣ ಹವಾಮಾನ ಹೆಚ್ಚಾಗುವ ಸಾಧ್ಯತೆಯಿದೆ ಎನ್ನಲಾಗುತ್ತಿದೆ.
ಇದನ್ನೂ ಓದಿ: Karnataka Rain: ಮುಂದಿನ ಒಂದೆರಡು ದಿನ ರಾಜ್ಯದ ಈ ಜಿಲ್ಲೆಗಳಲ್ಲಿ ಮಳೆ ಸಾಧ್ಯತೆ
ದೇಶದ ವಿವಿಧ ರಾಜ್ಯಗಳು ಮಧ್ಯೆ ಮಧ್ಯೆ ಮಳೆ ಕಂಡರೂ ಕೂಡ, ತಾಪಮಾನದಲ್ಲಿ ತುಂಬಾ ವ್ಯತ್ಯಾಸವನ್ನು ಅನುಭವಿಸಿಲ್ಲ. ಕೆಲವು ರಾಜ್ಯಗಳಲ್ಲಿ ಮುಂದಿನ 3 ದಿನಗಳಲ್ಲಿ ಗರಿಷ್ಠ ಉಷ್ಣಾಂಶ 4 ಡಿಗ್ರಿಗಳಷ್ಟು ಹೆಚ್ಚಾಗುವ ಸಾಧ್ಯತೆ ಇದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ. ಪಶ್ಚಿಮ ಬಂಗಾಳ ಹಾಗೂ ಒಡಿಶಾದಲ್ಲಿ ಶಾಖದ ಅಲೆ ವಿಪರೀತವಾಗಲಿದೆ. ಮಧ್ಯಪ್ರದೇಶ, ಗುಜರಾತ್, ಮಹಾರಾಷ್ಟ್ರ, ತೆಲಂಗಾಣದಲ್ಲಿ ಗರಿಷ್ಠ ಉಷ್ಣಾಂಶವು 40-42 ಡಿಗ್ರಿ ಸೆಲ್ಸಿಯಸ್ನಷ್ಟಿದೆ. ಜಮ್ಮು ಕಾಶ್ಮೀರ ಸೇರಿದಂತೆ ಕೆಲವು ಪ್ರದೇಶಗಳಲ್ಲಿ 40 ಡಿಗ್ರಿಗಿಂತ ಕಡಿಮೆ ತಾಪಮಾನವಿದೆ.
ರಾಜ್ಯದ ಮತ್ತಷ್ಟು ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ.
Published On - 5:30 pm, Thu, 13 April 23