ಡಿ.31ರ ಬಂದ್ ಬಗ್ಗೆ ಯಾವುದೇ ಮನವಿ ಪತ್ರ ನೀಡಿಲ್ಲ; ಒತ್ತಾಯಪೂರ್ವಕವಾಗಿ ಬಂದ್ ನಡೆಸುವಂತಿಲ್ಲ: ಕಮಲ್ ಪಂತ್

ನ್ಯೂ ಇಯರ್ ಸೆಲೆಬ್ರೇಷನ್‌ಗೆ ನಿಯಮ ಪಾಲನೆ ಕಡ್ಡಾಯ ಇರಲಿದೆ. ಬ್ರಿಗೇಡ್‌ ರೋಡ್‌ನಲ್ಲಿ ಯಾವುದೇ ಜನರು ಸೇರುವಂತಿಲ್ಲ. ಜನಜೀವನ ನಾರ್ಮಲ್‌ ಆಗಿರಬೇಕು. ಹಿರಿಯ ಪೊಲೀಸ್ ಅಧಿಕಾರಿಗಳು ಸಭೆಯನ್ನು ನಡೆಸಿದ್ದಾರೆ ಎಂದು ಕಮಲ್ ಪಂತ್ ಹೇಳಿಕೆ ನೀಡಿದ್ದಾರೆ.

ಡಿ.31ರ ಬಂದ್ ಬಗ್ಗೆ ಯಾವುದೇ ಮನವಿ ಪತ್ರ ನೀಡಿಲ್ಲ; ಒತ್ತಾಯಪೂರ್ವಕವಾಗಿ ಬಂದ್ ನಡೆಸುವಂತಿಲ್ಲ: ಕಮಲ್ ಪಂತ್
ಕಮಲ್ ಪಂತ್ (ಸಂಗ್ರಹ ಚಿತ್ರ)
Follow us
TV9 Web
| Updated By: ganapathi bhat

Updated on:Dec 25, 2021 | 3:38 PM

ಬೆಂಗಳೂರು: ಡಿಸೆಂಬರ್ 31 ರಂದು ಬಂದ್‌ ನಡೆಸಲಿರುವ ಬಗ್ಗೆ ಯಾವುದೇ ಮನವಿ ಪತ್ರ ನೀಡಿಲ್ಲ. ಒತ್ತಾಯಪೂರ್ವಕವಾಗಿ ಯಾವುದೇ ಬಂದ್ ನಡೆಸುವಂತಿಲ್ಲ. ಸ್ವ ಇಚ್ಛೆಯಿಂದ ಬಂದ್ ಆಚರಿಸಿದರೆ ಯಾವುದೇ ಅಡ್ಡಿ ಇಲ್ಲ. ಬಲವಂತವಾಗಿ ಬಂದ್ ಮಾಡಿಸಿದ್ರೆ ಕ್ರಮ ಕೈಗೊಳ್ಳುತ್ತೇವೆ ಎಂದು ಬೆಂಗಳೂರು ಪೊಲೀಸ್ ಆಯುಕ್ತ ಕಮಲ್ ಪಂತ್ ಹೇಳಿಕೆ ನೀಡಿದ್ದಾರೆ. ಒತ್ತಾಯಪೂರ್ವಕವಾಗಿ ಬಂದ್ ಮಾಡಿಸಿದರೆ ಕಾನೂನು ರೀತಿ ಕ್ರಮ ಕೈಗೊಳ್ಳುವುದಾಗಿ ಬೆಂಗಳೂರು ಪೊಲೀಸ್ ಆಯುಕ್ತ ಕಮಲ್ ಪಂತ್ ಎಚ್ಚರಿಕೆ ನೀಡಿದ್ದಾರೆ.

ಬೆಂಗಳೂರು ನಗರದಲ್ಲಿ ನ್ಯೂ ಇಯರ್ ಸೆಲೆಬ್ರೇಷನ್ ವಿಚಾರವಾಗಿಯೂ ಅವರು ಪ್ರತಿಕ್ರಿಯೆ ನೀಡಿದ್ದಾರೆ. ಸರ್ಕಾರದ ಗೈಡ್‌ಲೈನ್ಸ್‌ನಂತೆ ಹೊಸ ವರ್ಷ ಆಚರಿಸಬೇಕು. ಹೋಟೆಲ್‌, ಪಬ್‌ ಎಲ್ಲಿಯೂ ವಿಶೇಷ ಕಾರ್ಯಕ್ರಮ ಇರಲ್ಲ. ಬುಕ್ಕಿಂಗ್‌ ಇದ್ದವರು ಮಾತ್ರ ಸೆಲೆಬ್ರೇಷನ್‌ಗೆ ತೆರಳಬೇಕು. ನ್ಯೂ ಇಯರ್ ಸೆಲೆಬ್ರೇಷನ್‌ಗೆ ನಿಯಮ ಪಾಲನೆ ಕಡ್ಡಾಯ ಇರಲಿದೆ. ಬ್ರಿಗೇಡ್‌ ರೋಡ್‌ನಲ್ಲಿ ಯಾವುದೇ ಜನರು ಸೇರುವಂತಿಲ್ಲ. ಜನಜೀವನ ನಾರ್ಮಲ್‌ ಆಗಿರಬೇಕು. ಹಿರಿಯ ಪೊಲೀಸ್ ಅಧಿಕಾರಿಗಳು ಸಭೆಯನ್ನು ನಡೆಸಿದ್ದಾರೆ ಎಂದು ಕಮಲ್ ಪಂತ್ ಹೇಳಿಕೆ ನೀಡಿದ್ದಾರೆ.

ಡಿಸೆಂಬರ್ 31ರಂದು ಎಂ.ಜಿ.ರಸ್ತೆ, ಬ್ರಿಗೇಡ್‌ ರಸ್ತೆ ಓಪನ್ ಇರುತ್ತೆ. ಎಂ.ಜಿ.ರಸ್ತೆ, ಬ್ರಿಗೇಡ್‌ ರಸ್ತೆಯಲ್ಲಿ ಜನ ಸಂಚಾರಕ್ಕೆ ಅವಕಾಶ ಇರಲಿದೆ. ಆದ್ರೆ ಸಾರ್ವಜನಿಕವಾಗಿ ಹೊಸವರ್ಷಾಚರಣೆ ಮಾಡುವಂತಿಲ್ಲ ಎಂದು ಬೆಂಗಳೂರು ಪೊಲೀಸ್ ಆಯುಕ್ತ ಕಮಲ್ ಪಂತ್ ಹೇಳಿದ್ದಾರೆ.

ಬೆಂಗಳೂರು ವೈಟ್ ಫೀಲ್ಡ್ ಪೊಲೀಸರಿಂದ ಒಳ್ಳೆಯ ಕಾರ್ಯಚರಣೆ ನಡೆದಿದೆ. ತಮಿಳುನಾಡಿನ ತಿರುಚಿಯ ರಾಂಜಿ ನಗರದಿಂದ ಅರೋಪಿಗಳು ಬಂದು ಅಟೆನ್ಷನ್ ಡೈವರ್ಷನ್ ಮಾಡಿ ಕಳ್ಳತನ ಮಾಡಿದ್ದವರನ್ನು ಅರೆಸ್ಟ್ ಮಾಡಲಾಗಿದೆ. ಬೆಂಗಳೂರು ಹಾಗು ಇತರೆಡೆ ನಡೆದಿದ್ದ ಒಟ್ಟು ನಲವತ್ತೆರಡು ಕೇಸ್ ಪತ್ತೆಯಾಗಿದೆ ಎಂದು ತಿಳಿಸಿದ್ದಾರೆ.

ಇದನ್ನೂ ಓದಿ: ಹೊಸ ವರ್ಷಾಚರಣೆಗೆ ರಾಜ್ಯ ಸರ್ಕಾರದಿಂದ ಬಿಗಿ ಕ್ರಮ; ಪಬ್, ಹೋಟೆಲ್​ಗಳಲ್ಲಿ ಶೇಕಡಾ 50ರಷ್ಟು ಜನರಿಗೆ ಅವಕಾಶ

ಇದನ್ನೂ ಓದಿ: ಕುಶಾಲನಗರ ಖಾಸಗಿ ಶಾಲೆಯ 26 ವಿದ್ಯಾರ್ಥಿಗಳಿಗೆ ಕೊರೊನಾ ದೃಢ; ಒಮಿಕ್ರಾನ್ ಆತಂಕ ಹಿನ್ನೆಲೆ ಭಾನುವಾರ ಸಿಎಂ ಸಭೆ

Published On - 3:22 pm, Sat, 25 December 21

ಕೊಟ್ಟ ಮಾತು ಉಳಿಸಿಕೊಂಡ ಸುರೇಶ್, ಧನರಾಜ್ ಮಗಳಿಗೆ ಉಡುಗೊರೆ
ಕೊಟ್ಟ ಮಾತು ಉಳಿಸಿಕೊಂಡ ಸುರೇಶ್, ಧನರಾಜ್ ಮಗಳಿಗೆ ಉಡುಗೊರೆ
ಬಿಗ್​ಬಾಸ್: ಫ್ಯಾಮಿಲಿ ವಿಸಿಟ್ ಬಳಿಕ ಗೆಳೆತನಗಳೆಲ್ಲ ಪೀಸ್-ಪೀಸ್
ಬಿಗ್​ಬಾಸ್: ಫ್ಯಾಮಿಲಿ ವಿಸಿಟ್ ಬಳಿಕ ಗೆಳೆತನಗಳೆಲ್ಲ ಪೀಸ್-ಪೀಸ್
ಕುಟುಂಬದ ಅರಣ್ಯರೋದನೆ; ಗೋಗರೆದರೂ ಕಿವಿಗೆ ಹಾಕಿಕೊಳ್ಳದ ಪೊಲೀಸರು
ಕುಟುಂಬದ ಅರಣ್ಯರೋದನೆ; ಗೋಗರೆದರೂ ಕಿವಿಗೆ ಹಾಕಿಕೊಳ್ಳದ ಪೊಲೀಸರು
ಹಿರಿಯ ನಾಯಕರನ್ನು ಪೊಲೀಸ್ ವಶಕ್ಕೆ ಪಡೆದರೂ ಎದೆಗುಂದದ ಕಾರ್ಯಕರ್ತರು
ಹಿರಿಯ ನಾಯಕರನ್ನು ಪೊಲೀಸ್ ವಶಕ್ಕೆ ಪಡೆದರೂ ಎದೆಗುಂದದ ಕಾರ್ಯಕರ್ತರು
ತನ್ನೂರಿನ ಸರ್ಕಾರಿ ಶಾಲೆಗೆ ಹೈಕೆಟ್ ಸ್ಪರ್ಷ ನೀಡುತ್ತಿರುವ ಡಾಲಿ: ವಿಡಿಯೋ
ತನ್ನೂರಿನ ಸರ್ಕಾರಿ ಶಾಲೆಗೆ ಹೈಕೆಟ್ ಸ್ಪರ್ಷ ನೀಡುತ್ತಿರುವ ಡಾಲಿ: ವಿಡಿಯೋ
29 ಎಸೆತಗಳಲ್ಲಿ ಅರ್ಧಶತಕ; 50 ವರ್ಷಗಳ ಹಳೆಯ ದಾಖಲೆ ಮುರಿದ ಪಂತ್
29 ಎಸೆತಗಳಲ್ಲಿ ಅರ್ಧಶತಕ; 50 ವರ್ಷಗಳ ಹಳೆಯ ದಾಖಲೆ ಮುರಿದ ಪಂತ್
ಮಧ್ಯಪ್ರದೇಶದ ಪಿತಾಂಪುರದಲ್ಲಿ ಪ್ರತಿಭಟನೆ ವೇಳೆ ಬೆಂಕಿ ಹಚ್ಚಿಕೊಂಡ ಇಬ್ಬರು
ಮಧ್ಯಪ್ರದೇಶದ ಪಿತಾಂಪುರದಲ್ಲಿ ಪ್ರತಿಭಟನೆ ವೇಳೆ ಬೆಂಕಿ ಹಚ್ಚಿಕೊಂಡ ಇಬ್ಬರು
ಶಾಸಕನ ಜಾತಿಯವರೇ ಕ್ಷೇತ್ರದ ಪದಾಧಿಕಾರಿಗಳಾಗಬಾರದು: KN ರಾಜಣ್ಣ
ಶಾಸಕನ ಜಾತಿಯವರೇ ಕ್ಷೇತ್ರದ ಪದಾಧಿಕಾರಿಗಳಾಗಬಾರದು: KN ರಾಜಣ್ಣ
ಖರ್ಗೆ ರಾಜೀನಾಮೆಗೆ ಆಗ್ರಹಿಸಿ ಬಿಜೆಪಿ ಪ್ರತಿಭಟನೆ: ಕಲಬುರಗಿಯಲ್ಲಿ ಜನಸಾಗರ
ಖರ್ಗೆ ರಾಜೀನಾಮೆಗೆ ಆಗ್ರಹಿಸಿ ಬಿಜೆಪಿ ಪ್ರತಿಭಟನೆ: ಕಲಬುರಗಿಯಲ್ಲಿ ಜನಸಾಗರ
ವಕ್ಫ್ ವಿರುದ್ಧ ಹೋರಾಟದ ರೂವಾರಿ ಯತ್ನಾಳ್ ಹೆಸರು ಪ್ರಸ್ತಾಪಿಸದ ವಿಜಯೇಂದ್ರ
ವಕ್ಫ್ ವಿರುದ್ಧ ಹೋರಾಟದ ರೂವಾರಿ ಯತ್ನಾಳ್ ಹೆಸರು ಪ್ರಸ್ತಾಪಿಸದ ವಿಜಯೇಂದ್ರ