ಪೊಲೀಸರು ರಾಜಕೀಯ ಒತ್ತಡಕ್ಕೆ ಮಣಿದು ಯಾರನ್ನೂ ಬಿಡುವುದಿಲ್ಲ; ಸುದ್ದಿಗೋಷ್ಠಿ ವೇಳೆ ಕಮಲ್ ಪಂತ್ ಹೇಳಿಕೆ

ದೇಶಿ ಪ್ರಜೆ ವಿಚಾರಣೆ ವೇಳೆ ಪೊಲೀಸರಿಗೆ ಸಿಕ್ಕಿದ ಮಾಹಿತಿ ಪ್ರಕಾರ ಆರೋಪಿಯ ಸಂಪರ್ಕದಲ್ಲಿದ್ದವರ ಮೇಲೆ ಇಂದು ದಾಳಿ ನಡೆದಿದೆ. ಈ ವೇಳೆ ಮೂವರನ್ನು ವಶಕ್ಕೆ ಪಡೆಯಲಾಗಿದೆ. ಪ್ರಕರಣ ಸಂಬಂಧ ವಿಚಾರಣೆ ನಡೆಯುತ್ತಿದೆ. ಮುಂದಿನ ದಿನದಲ್ಲಿ ಉಳಿದ ಮಾಹಿತಿ ಗೊತ್ತಾಗಲಿದೆ.

ಪೊಲೀಸರು ರಾಜಕೀಯ ಒತ್ತಡಕ್ಕೆ ಮಣಿದು ಯಾರನ್ನೂ ಬಿಡುವುದಿಲ್ಲ; ಸುದ್ದಿಗೋಷ್ಠಿ ವೇಳೆ ಕಮಲ್ ಪಂತ್ ಹೇಳಿಕೆ
ಬೆಂಗಳೂರು ನಗರ ಪೊಲೀಸ್ ಆಯುಕ್ತ ಕಮಲ್ ಪಂತ್
Follow us
TV9 Web
| Updated By: ಆಯೇಷಾ ಬಾನು

Updated on:Aug 30, 2021 | 1:53 PM

ಬೆಂಗಳೂರು: ಡ್ರಗ್ಸ್ ಕೇಸ್ ಸಂಬಂಧ ಬೆಂಗಳೂರು ನಗರ ಪೊಲೀಸ್ ಆಯುಕ್ತ ಕಮಲ್ ಪಂತ್ ಸುದ್ದಿಗೋಷ್ಠಿ ನಡೆಸಿದ್ದು ಪೂರ್ವ ವಿಭಾಗದಲ್ಲಿ ಓರ್ವ ವಿದೇಶಿ ಪ್ರಜೆ ಅರೆಸ್ಟ್ ಆಗಿದ್ದಾನೆ. ಬಂಧಿತನಿಂದ 403 ಗ್ರಾಂ ಡ್ರಗ್ಸ್, 200 ಗ್ರಾಂ ಕೊಕೇನ್ ಜಪ್ತಿ ಮಾಡಲಾಗಿದೆ ಎಂದು ತಿಳಿಸಿದ್ದಾರೆ.

ವಿದೇಶಿ ಪ್ರಜೆ ವಿಚಾರಣೆ ವೇಳೆ ಪೊಲೀಸರಿಗೆ ಸಿಕ್ಕಿದ ಮಾಹಿತಿ ಪ್ರಕಾರ ಆರೋಪಿಯ ಸಂಪರ್ಕದಲ್ಲಿದ್ದವರ ಮೇಲೆ ಇಂದು ದಾಳಿ ನಡೆದಿದೆ. ಈ ವೇಳೆ ಮೂವರನ್ನು ವಶಕ್ಕೆ ಪಡೆಯಲಾಗಿದೆ. ಪ್ರಕರಣ ಸಂಬಂಧ ವಿಚಾರಣೆ ನಡೆಯುತ್ತಿದೆ. ಮುಂದಿನ ದಿನದಲ್ಲಿ ಉಳಿದ ಮಾಹಿತಿ ಗೊತ್ತಾಗಲಿದೆ.

ಪೊಲೀಸರು ಯಾವುದೇ ರಾಜಕೀಯ ಒತ್ತಡಕ್ಕೆ ಮಣಿಯಲ್ಲ. ರಾಜಕೀಯ ಒತ್ತಡಕ್ಕೆ ಮಣಿದು ಯಾರನ್ನೂ ಬಿಡುವುದಿಲ್ಲ. ಪೊಲೀಸರು ಯಾವುದೇ ಪ್ರಭಾವಕ್ಕೆ ಒಳಗಾಗುವುದಿಲ್ಲ. ಏನು ಇರುತ್ತೋ ಅದರಂತೆ ನಾವು ಪ್ರಕರಣ ದಾಖಲಿಸುತ್ತೇವೆ. ಪ್ರಕರಣ ದಾಖಲಿಸಿಕೊಂಡು ಪೊಲೀಸರು ತನಿಖೆ ಮಾಡುತ್ತಾರೆ ಎಂದು ಆಯುಕ್ತ ಕಮಲ್ ಪಂತ್ ಹೇಳಿದ್ದಾರೆ.

ಚಿತ್ರರಂಗದ ಜೊತೆ ನಂಟು ಹೊಂದಿರುವ ಡ್ರಗ್ಸ್​ ದಂಧೆಯ ಜಾಲ ದೊಡ್ಡದಾಗಿದೆ. ತನಿಖೆ ನಡೆಸಿದಂತೆಲ್ಲ ಹೊಸ ಹೊಸ ಸೆಲೆಬ್ರಿಟಿಗಳ ಹೆಸರುಗಳು ಹೊರಬರುತ್ತಿವೆ. ಸೋಮವಾರ (ಆ.30) ಬೆಳ್ಳಂಬೆಳಗ್ಗೆಯೇ ಬೆಂಗಳೂರಿನಲ್ಲಿ ಸೆಲೆಬ್ರಿಟಿಗಳ ಮನೆ ಮೇಲೆ ಪೊಲೀಸರು ದಾಳಿ ನಡೆಸಿದ್ದಾರೆ. ಗೋವಿಂದಪುರ ಡ್ರಗ್ಸ್​ ಕೇಸ್​ ಪ್ರಕರಣಕ್ಕೆ ಸಂಬಂಧಿಸಿದಂತೆ ಈ ದಾಳಿ ಮಾಡಲಾಗಿದೆ. ಸೋನಿಯಾ​, ಡಿಜೆ ವಚನ್​ ಚಿನ್ನಪ್ಪ, ಉದ್ಯಮಿ ಭರತ್​ ಮುಂತಾದವರ ಮನೆಯ ಮೇಲೆ ಬೆಂಗಳೂರು ಪೂರ್ವ ವಿಭಾಗದ ಪೊಲೀಸರು ದಾಳಿ ನಡೆಸಿದ್ದು ಮೂವರನ್ನೂ ವಶಕ್ಕೆ ಪಡೆಯಲಾಗಿದೆ.

ಡ್ರಗ್ ಪೆಡ್ಲರ್ ಥಾಮಸ್ ಈ ಹಿಂದೆ ನೀಡಿದ್ದ ಮಾಹಿತಿಯನ್ನು ಆಧರಿಸಿ ಪೊಲೀಸರು ಕಾರ್ಯಾಚರಣೆ ಮಾಡುತ್ತಿದ್ದಾರೆ. ರಾಜಾಜಿನಗರ, ಪದ್ಮನಾಭನಗರ, ಬೆನ್ಸೆನ್ ಟೌನ್ ಮುಂತಾದ ಕಡೆ ಇರುವ ಸೆಲೆಬ್ರಿಟಿಗಳ ಮನೆಯಲ್ಲಿ ಶೋಧ ಕಾರ್ಯ ನಡೆಸಲಾಗಿದೆ. ಕಾರ್ಯಾಚರಣೆ ವೇಳೆ ಮಾದಕ ವಸ್ತುಗಳು ಪತ್ತೆ ಆಗಿದ್ದು, ಹಲವರಿಗೆ ಬಂಧನ ಭೀತಿ ಎದುರಾಗಿದೆ.

ಇದನ್ನೂ ಓದಿ: ತರಕಾರಿ ಮಾರುವವರ ಮೈಕ್ ಬಳಕೆಯಿಂದ ಆನ್​ಲೈನ್ ಕ್ಲಾಸ್​ಗೆ ತೊಂದರೆ: ಕಮಲ್ ಪಂತ್ ಫೇಸ್ಬುಕ್ ಲೈವ್​ನಲ್ಲಿ ಸಾರ್ವಜನಿಕರ ಅಳಲು

ಡ್ರಗ್ಸ್ ಕೇಸ್: ಸೆಲೆಬ್ರಿಟಿಗಳ ಮನೆ ಮೇಲೆ ಪೊಲೀಸ್ ದಾಳಿ; ಡಿಜೆ ವಚನ್​ ಚಿನ್ನಪ್ಪ, ಮಾಡೆಲ್​ ಸೋನಿಯಾ, ಉಧ್ಯಮಿ ಭರತ್​ ವಶಕ್ಕೆ

Published On - 1:44 pm, Mon, 30 August 21

ಸಿಟಿ ರವಿ ಬಂಧನ ಕೇಸ್: ಸಿಪಿಐನ ಅಮಾನತು ಮಾಡಿದ್ಯಾಕೆ? ಕಾರಣ ಕೊಟ್ಟ ಸಿಎಂ
ಸಿಟಿ ರವಿ ಬಂಧನ ಕೇಸ್: ಸಿಪಿಐನ ಅಮಾನತು ಮಾಡಿದ್ಯಾಕೆ? ಕಾರಣ ಕೊಟ್ಟ ಸಿಎಂ
ಡಿ 31ರಿಂದ ಬಸ್​ಗಳು ಸಂಚರಿಸುವುದಿಲ್ಲ: ಪ್ರಯಾಣಿಕರಿಗೆ ಕರಪತ್ರ ಹಂಚಿಕೆ
ಡಿ 31ರಿಂದ ಬಸ್​ಗಳು ಸಂಚರಿಸುವುದಿಲ್ಲ: ಪ್ರಯಾಣಿಕರಿಗೆ ಕರಪತ್ರ ಹಂಚಿಕೆ
‘ಮ್ಯಾಕ್ಸ್’ ಸಿನಿಮಾ ನೋಡಿದ್ರೆ ನಾಲ್ಕು ಕ್ವಾಟ್ರು ಹೊಡೆದ ಕಿಕ್ಕು’
‘ಮ್ಯಾಕ್ಸ್’ ಸಿನಿಮಾ ನೋಡಿದ್ರೆ ನಾಲ್ಕು ಕ್ವಾಟ್ರು ಹೊಡೆದ ಕಿಕ್ಕು’
ಮುನಿರತ್ನ ಘಟನೆ ಬಗ್ಗೆ ಸ್ಫೋಟಕ ಮಾಹಿತಿ ಬಿಚ್ಚಿಟ್ಟ ಡಾ ಮಂಜುನಾಥ್
ಮುನಿರತ್ನ ಘಟನೆ ಬಗ್ಗೆ ಸ್ಫೋಟಕ ಮಾಹಿತಿ ಬಿಚ್ಚಿಟ್ಟ ಡಾ ಮಂಜುನಾಥ್
ಇಡೀ ಬಿಗ್ ಬಾಸ್ ಮನೆಯಲ್ಲಿ ರಂಪಾಟ ಶುರು ಮಾಡಿದ ರಜತ್
ಇಡೀ ಬಿಗ್ ಬಾಸ್ ಮನೆಯಲ್ಲಿ ರಂಪಾಟ ಶುರು ಮಾಡಿದ ರಜತ್
ಕುಡಿದ ಅಮಲಿನಲ್ಲಿ ಬೈಕ್​ಗೆ ಟ್ರಕ್ ಡಿಕ್ಕಿ;3 ವರ್ಷದ ಮಗು ಸೇರಿ ಇಬ್ಬರು ಸಾವು
ಕುಡಿದ ಅಮಲಿನಲ್ಲಿ ಬೈಕ್​ಗೆ ಟ್ರಕ್ ಡಿಕ್ಕಿ;3 ವರ್ಷದ ಮಗು ಸೇರಿ ಇಬ್ಬರು ಸಾವು
ಬಿಜೆಪಿ ಶಾಸಕ ಮುನಿರತ್ನಗೆ ಬಿತ್ತು ಮೊಟ್ಟೆ ಏಟು: ಇಲ್ಲಿದೆ ನೋಡಿ ವಿಡಿಯೋ
ಬಿಜೆಪಿ ಶಾಸಕ ಮುನಿರತ್ನಗೆ ಬಿತ್ತು ಮೊಟ್ಟೆ ಏಟು: ಇಲ್ಲಿದೆ ನೋಡಿ ವಿಡಿಯೋ
ಕೆನ್-ಬೇತ್ವಾ ನದಿ ಜೋಡಣೆ ಯೋಜನೆಗೆ ಮೋದಿ ಶಂಕುಸ್ಥಾಪನೆ
ಕೆನ್-ಬೇತ್ವಾ ನದಿ ಜೋಡಣೆ ಯೋಜನೆಗೆ ಮೋದಿ ಶಂಕುಸ್ಥಾಪನೆ
Video: ಕಜಾಕಿಸ್ತಾನದಲ್ಲಿ 110 ಮಂದಿ ಪ್ರಯಾಣಿಕರಿದ್ದ ವಿಮಾನ ಪತನ
Video: ಕಜಾಕಿಸ್ತಾನದಲ್ಲಿ 110 ಮಂದಿ ಪ್ರಯಾಣಿಕರಿದ್ದ ವಿಮಾನ ಪತನ
ಮ್ಯಾಕ್ಸ್ ಸಿನಿಮಾ ಬಗ್ಗೆ ಪ್ರಾಮಾಣಿಕ ವಿಮರ್ಶೆ ತಿಳಿಸಿದ ಯಶ್ ಅಭಿಮಾನಿಗಳು
ಮ್ಯಾಕ್ಸ್ ಸಿನಿಮಾ ಬಗ್ಗೆ ಪ್ರಾಮಾಣಿಕ ವಿಮರ್ಶೆ ತಿಳಿಸಿದ ಯಶ್ ಅಭಿಮಾನಿಗಳು