ಬೆಂಗಳೂರಿನಲ್ಲಿ ಅನಗತ್ಯವಾಗಿ ಹೊರಗೆ ಬಂದ್ರೆ ಕಠಿಣ ಕ್ರಮ; ಕಮಲ್ ಪಂತ್ ವಾರ್ನಿಂಗ್

| Updated By: sandhya thejappa

Updated on: Aug 07, 2021 | 11:42 AM

ನೈಟ್ ಕರ್ಪ್ಯೂ ಯಾರು ಉಲ್ಲಂಘನೆ ಮಾಡುತ್ತಾರೆ ಅವರ ವಾಹನ ಜಪ್ತಿ ಮಾಡುತ್ತೇವೆ. ಈಗಾಗಲೇ ಚೆಕ್ ಪೋಸ್ಟ್​ಗಳಲ್ಲಿ ತಪಾಸಣೆ ನಡೆಯುತ್ತಿದೆ. ಅದನ್ನ ಮತ್ತಷ್ಟು ಬಿಗಿಗೊಳಿಸುತ್ತೇವೆ. ಬಾರ್ ಆ್ಯಂಡ್ ರೆಸ್ಟೋರೆಂಟ್ 9 ಗಂಟೆ ಒಳಗೆ ಮುಚ್ಚಬೇಕು.

ಬೆಂಗಳೂರಿನಲ್ಲಿ ಅನಗತ್ಯವಾಗಿ ಹೊರಗೆ ಬಂದ್ರೆ ಕಠಿಣ ಕ್ರಮ; ಕಮಲ್ ಪಂತ್ ವಾರ್ನಿಂಗ್
ಬೆಂಗಳೂರು ಪೊಲೀಸ್ ಆಯುಕ್ತ ಕಮಲ್ ಪಂತ್
Follow us on

ಬೆಂಗಳೂರು: ರಾಜ್ಯದಲ್ಲಿ ಕೊರೊನಾ (Coronavirus) ಸೋಂಕು ಹೆಚ್ಚಾಗುತ್ತಿದೆ. ಸೋಂಕು ನಿಯಂತ್ರಿಸಲು ಕೆಲ ಜಿಲ್ಲೆಗಳಲ್ಲಿ ಇಂದಿನಿಂದ (ಆಗಸ್ಟ್ 7) ವೀಕೆಂಡ್ ಕರ್ಫ್ಯೂ (Weekend Curfew) ಜಾರಿಯಾಗಿದೆ. ಬೆಂಗಳೂರಿನಲ್ಲಿ ರಾತ್ರಿ 9ರಿಂದ ಬೆಳಗ್ಗೆ 5ರವರೆಗೆ ನೈಟ್ ಕರ್ಫ್ಯೂ ಜಾರಿಯಾಗಲಿದೆ. ಹೀಗಾಗಿ ಅನಗತ್ಯವಾಗಿ ಹೊರಗೆ ಓಡಾಡಿದರೆ ಕಠಿಣ ಕ್ರಮ ಕೈಗೊಳ್ಳುವುದಾಗಿ ಬೆಂಗಳೂರು ಪೊಲೀಸ್ ಆಯುಕ್ತ ಕಮಲ್ ಪಂತ್ ಎಚ್ಚರಿಕೆ ನೀಡಿದ್ದಾರೆ. ನೈಟ್ ಕರ್ಫ್ಯೂ (Night Curfew) ವೇಳೆ ಅನಗತ್ಯವಾಗಿ ಹೊರಗೆ ಓಡಾಡಬಾರದು. ಸೂಕ್ತ ಕಾರಣ ಇಲ್ಲದೆ ಅನಗತ್ಯವಾಗಿ ಯಾರು ಹೊರಗಡೆ ಬರುತ್ತಾರೋ ಅವರ ವಿರುದ್ಧ ಕ್ರಿಮಿನಲ್ ಕೇಸ್ ದಾಖಲು ಮಾಡುತ್ತೇವೆ ಎಂದು ಕಮಲ್ ಪಂತ್ (Kamal Pant) ತಿಳಿಸಿದ್ದಾರೆ.

ನೈಟ್ ಕರ್ಪ್ಯೂ ಯಾರು ಉಲ್ಲಂಘನೆ ಮಾಡುತ್ತಾರೆ ಅವರ ವಾಹನ ಜಪ್ತಿ ಮಾಡುತ್ತೇವೆ. ಈಗಾಗಲೇ ಚೆಕ್ ಪೋಸ್ಟ್​ಗಳಲ್ಲಿ ತಪಾಸಣೆ ನಡೆಯುತ್ತಿದೆ. ಅದನ್ನ ಮತ್ತಷ್ಟು ಬಿಗಿಗೊಳಿಸುತ್ತೇವೆ. ಬಾರ್ ಆ್ಯಂಡ್ ರೆಸ್ಟೋರೆಂಟ್ 9 ಗಂಟೆ ಒಳಗೆ ಮುಚ್ಚಬೇಕು. ಇಲ್ಲವಾದರೆ ಬಾರ್ ಆ್ಯಂಡ್ ರೆಸ್ಟೋರೆಂಟ್​ಗಳಿಗೆ ಬಿಬಿಎಂಪಿ ಮೂಲಕ ಜಪ್ತಿ ಮಾಡಿಸಲಾಗುತ್ತದೆ.

ರೈಲು, ವಿಮಾನ ಪ್ರಯಾಣಿಕರು ಟಿಕೆಟ್ ತೋರಿಸಿ ಪ್ರಯಾಣ ಮಾಡಬೇಕು. ಅನಗತ್ಯವಾಗಿ ಜನರು ಹೊರಗಡೆ ಬಂದರೆ ಎನ್​ಡಿಎಮ್ಎ (NDMA) ಹಾಗೂ IPC ಸೆಕ್ಷನ್ 188ರ ಅಡಿಯಲ್ಲಿ ಕ್ರಮ ತೆಗೆದುಕೊಳ್ಳುತ್ತೇವೆ ಎಂದು ಕಮಲ್ ಪಂತ್ ಎಚ್ಚರಿಕೆ ನೀಡಿದ್ದಾರೆ.

ಮಾರ್ಗಸೂಚಿ ಎಲ್ಲಿಯವರೆಗೆ?
ಇಂದಿನಿಂದ (ಆಗಸ್ಟ್ 7) ಆಗಸ್ಟ್ 16ರವರೆಗೂ ಹೊಸ ಮಾರ್ಗಸೂಚಿ ಅನ್ವಯ ಆಗಲಿದೆ. ರಾತ್ರಿ 9 ಗಂಟೆಯಿಂದ ಮುಂಜಾನೆ 5ರವರೆಗೆ ನೈಟ್ ಕರ್ಫ್ಯೂ ಇರಲಿದೆ. ಮಹಾರಾಷ್ಟ್ರ, ಕೇರಳ ಗಡಿ ಜಿಲ್ಲೆಗಳಲ್ಲಿ ವೀಕೆಂಡ್ ಕರ್ಫ್ಯೂ ಇರಲಿದೆ.  ಕೇರಳ ಗಡಿ ಜಿಲ್ಲೆಗಳಾದ ಮೈಸೂರು, ಚಾಮರಾಜನಗರ, ಕೊಡಗು, ದಕ್ಷಿಣ ಕನ್ನಡ ಜಿಲ್ಲೆಗಳಲ್ಲಿ ವೀಕೆಂಡ್ ಕರ್ಫ್ಯೂ ಇರಲಿದೆ. ಮಹಾರಾಷ್ಟ್ರ ಗಡಿ ಜಿಲ್ಲೆಗಳಾದ ಬೆಳಗಾವಿ, ವಿಜಯಪುರ, ಕಲಬುರಗಿ, ಬೀದರ್ ಜಿಲ್ಲೆಗಳಲ್ಲಿ ವೀಕೆಂಡ್ ಕರ್ಫ್ಯೂ ಇರಲಿದೆ. ರಾಜ್ಯದಲ್ಲಿ ರಾತ್ರಿ 9ರಿಂದ ಮುಂಜಾನೆ 5 ಗಂಟೆ ವರೆಗೆ ನೈಟ್ ಕರ್ಫ್ಯೂ ಜಾರಿ ಆಗಲಿದೆ. ನೈಟ್ ಕರ್ಫ್ಯೂ ಕಟ್ಟುನಿಟ್ಟಾಗಿ ಪಾಲಿಸಬೇಕೆಂದು ಸಿಎಂ ಬಸವರಾಜ ಬೊಮ್ಮಾಯಿ ತಿಳಿಸಿದ್ದಾರೆ.

ಇದನ್ನೂ ಓದಿ

ಕೊಡಗಿನಲ್ಲಿ ಸಿಎಂ ಆದೇಶಕ್ಕೆ ಡೋಂಟ್ ಕೇರ್; ವೀಕೆಂಡ್ ಕರ್ಫ್ಯೂ ನಡುವೆ ಬೆಳಗಾವಿಯಲ್ಲಿ ನಾಟಿ ಕೋಳಿಗೆ ಮುಗಿಬಿದ್ದ ಜನ

ಆಗಸ್ಟ್ 23 ರಿಂದ ಹೈಸ್ಕೂಲ್ ತೆರೆಯಲು ತಯಾರಿ; ಸೋಂಕಿನ ಪ್ರಮಾಣ ಏರಿಕೆಯಾದರೆ ಶಾಲೆ ಮತ್ತೆ ಬಂದ್

(Kamal Pant warned that if unnecessary walk in Bangalore we will take strict action)

Published On - 11:26 am, Sat, 7 August 21