ರಾಮನಗರ: ಅಡಿಗೆ ಅನಿಲ ಸೋರಕೆಯಿಂದ ಅಗ್ನಿ ಅವಗಢ; ಗಂಭೀರಗೊಂಡಿದ್ದ ಮೂವರ ಸಾವು!

ಕನಕಪುರದಲ್ಲಿ ಜನವರಿ 26 ರಂದು ಅಡುಗೆ ಮಾಡುವಾಗ ಆದ ಅನಿಲ ಸೋರಿಕೆ ಮನೆಯಲ್ಲಿ ಬೆಂಕಿ ಹತ್ತಿತ್ತು. ಹೀಗೆ ಸಂಭವಿಸಿದ ಈ ಅಗ್ನಿ ಅವಘಡದಲ್ಲಿ ಒಂದೇ ಕುಟುಂಬದ ಮೂವರು ಗಂಭೀರವಾಗಿ ಗಾಯಗೊಂಡಿದ್ದರು. ಗಾಯಾಳುಗಳನ್ನು ತಕ್ಷಣವೇ ವಿಕ್ಟೋರಿಯಾ ಆಸ್ಪತ್ರೆಗೆ ದಾಖಲಿಸಲಾಗಿತ್ತು. ಇದೀಗ ಚಿಕಿತ್ಸೆ ಫಲಕಾರಿಯಾಗದೆ ಈ ಮೂವರೂ ಕೊನೆಯುಸಿರೆಳೆದಿದ್ದಾರೆ.

ರಾಮನಗರ: ಅಡಿಗೆ ಅನಿಲ ಸೋರಕೆಯಿಂದ ಅಗ್ನಿ ಅವಗಢ; ಗಂಭೀರಗೊಂಡಿದ್ದ ಮೂವರ ಸಾವು!
ಅಡಿಗೆ ಅನಿಲ ಸೋರಕೆಯಿಂದ ಅಗ್ನಿ ಅವಗಢ; ಗಂಭೀರಗೊಂಡಿದ್ದ ಮೂವರ ಸಾವು!
Edited By:

Updated on: Feb 02, 2026 | 11:43 AM

ರಾಮನಗರ, ಫೆಬ್ರುವರಿ 02: ಕನಕಪುರದ (Ramanagar) ಅಮರನಾರಾಯಣ ಬ್ಲಾಕ್‌ನಲ್ಲಿ ಜನವರಿ 26ರಂದು ಅಡಿಗೆ ಅನಿಲ ಸೋರಿಕೆಯಾಗಿ ಅಗ್ನಿ ಅವಗಢ ಸಂಭವಿಸಿತ್ತು. ಈ ವೇಳೆ ಒಂದೇ ಕುಟುಂಬದ ಮೂವರು ಗಂಭೀರವಾಗಿ ಗಾಯಗೊಂಡಿದ್ದು, ಚಿಕಿತ್ಸೆ ಫಲಕಾರಿಯಾಯದೇ ಸಾವನ್ನಪಿದ್ದಾರೆಂದು ತಡವಾಗಿ ಬೆಳಕಿಗೆ ಬಂದಿದೆ.

ಒಂದು ವಾರ ಸಾವು ಬದುಕಿನ ನಡುವೆ ಹೋರಾಡಿದ್ದ ಕುಟುಂಬ

ಸೋಮವಾರ (ಜ.26) ಅಡಿಗೆ ಅನಿಲ ಸೋರಿಕೆಯಿಂದ ಸಂಭವಿಸಿದ ಅಗ್ನಿ ದುರಂತದಲ್ಲಿ ಮನೆ ಮಂದಿಯೆಲ್ಲಾ ಗಂಭೀರವಾಗಿ ಗಾಯಗೊಂಡಿದ್ದರು.  ಈ ವೇಳೆ ಸಿದ್ದರಾಜು (55), ಅವರ ಪತ್ನಿ ಚಂದ್ರಮ್ಮ (50) ಹಾಗೂ ಪುತ್ರ ಪ್ರಶಾಂತ್ (22) ಎಂಬ ಒಂದೇ ಕುಟುಂಬದ ಮೂವರು ಚಿಕಿತ್ಸೆ ಫಲಕಾರಿಯಾಗದೆ ಸಾವನ್ನದ್ದಾರೆ.

ಮನೆಯೊಳಗೆ ತಿಂಡಿ ತಯಾರಿಸುವ ವೇಳೆ ಅಡಿಗೆ ಅನಿಲ ಸೋರಿಕೆಯಾಗಿದ್ದು, ಏಕಾಏಕಿ ಬೆಂಕಿ ಹೊತ್ತಿಕೊಂಡಿತ್ತು. ಈ ದುರಂತದಲ್ಲಿ ಮೂವರಿಗೂ ತೀವ್ರ ಸುಟ್ಟ ಗಾಯಗಳಾಗಿದ್ದು, ತಕ್ಷಣವೇ ಹೆಚ್ಚಿನ ಚಿಕಿತ್ಸೆಗೆ ಅವರನ್ನು ಬೆಂಗಳೂರಿನ ವಿಕ್ಟೋರಿಯಾ ಆಸ್ಪತ್ರೆಗೆ ದಾಖಲಿಸಲಾಗಿತ್ತು. ಆಸ್ಪತ್ರೆಯಲ್ಲಿ ಕಳೆದ ಕೆಲ ದಿನಗಳಿಂದ ತೀವ್ರ ನಿಗಾ ಘಟಕದಲ್ಲಿ (ICU) ಚಿಕಿತ್ಸೆ ನೀಡಲಾಗುತ್ತಿದ್ದರೂ, ಮೂವರೂ ಚಿಕಿತ್ಸೆ ಫಲಕಾರಿಯಾಗದೆ ಸಾವನ್ನಪ್ಪಿದ್ದಾರೆ ಎಂದು ವೈದ್ಯರು ತಿಳಿಸಿದ್ದಾರೆ. ಈ ಘಟನೆ ಕನಕಪುರ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ನಡೆದಿದ್ದು, ಪ್ರಕರಣ ದಾಖಲಿಸಿಕೊಂಡಿರುವ ಪೊಲೀಸರು ತನಿಖೆ ಮುಂದುವರಿಸಿದ್ದಾರೆ.

ಕರ್ನಾಟಕದ ಮತ್ತಷ್ಟು ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ.