ಕನ್ನಡ ಮತ್ತು ಸಂಸ್ಕೃತಿ ಇಲಾಖೆಯಿಂದ ರಾಷ್ಟ್ರೀಯ-ರಾಜ್ಯ ಪ್ರಶಸ್ತಿ ಪ್ರಕಟ: ಇಲ್ಲಿದೆ ವಿವರ
ಕನ್ನಡ ಮತ್ತುಸಂಸೃತಿ ಇಲಾಖೆಯ ವಿವಿಧ ರಾಷ್ಟ್ರೀಯ ಹಾಗೂ ರಾಜ್ಯ ಪ್ರಶಸ್ತಿಗಳನ್ನು ಘೋಷಣೆ ಮಾಡಿದೆ. ಬಸವ, ಮಹಾವೀರ, ಚೌಡಯ್ಯ ಹಾಗೂ ಪಂಪ ಪ್ರಶಸ್ತಿ ಸೇರಿದಂತೆ ವಿವಿಧ ಪ್ರಶಸ್ತಿಗಳಿಗೆ ಆಯ್ಕೆ ಮಾಡಲಾಗಿದ್ದು, ಇದೇ ಜನವರಿ 31ರಂದು ಪ್ರಶಸ್ತಿ ಪ್ರಧಾನ ಮಾಡಲಾಗುತ್ತದೆ. ಹಾಗಾದ್ರೆ, ಯಾವ ಪ್ರಶಸ್ತಿಗೆ ಯಾರು ಆಯ್ಕೆಯಾಗಿದ್ದಾರೆ ಎನ್ನುವ ವಿವರ ಇಲ್ಲಿದೆ.
ಬೆಂಗಳೂರು, (ಜನವರಿ 25): ರಾಜ್ಯ ಕನ್ನಡ ಮತ್ತು ಸಂಸ್ಕೃತಿ ಇಲಾಖೆಯಿಂದ ಕೊಡಮಾಡುವ ವಿವಿಧ ರಾಷ್ಟ್ರೀಯ ಮತ್ತು ರಾಜ್ಯ ಪ್ರಶಸ್ತಿಗಳ ಪುರಸ್ಕೃತರನ್ನು ಆಯ್ಕೆ ಸಮಿತಿಗಳ ಮೂಲಕ ಆಯ್ಕೆ ಮಾಡಲಾಗಿದೆ. ಬಸವ ರಾಷ್ಟ್ರೀಯ ಪ್ರಶಸ್ತಿ, ಭಗವಾನ್ ಮಹಾವೀರ ಶಾಂತಿ ಪ್ರಶಸ್ತಿ, ಟಿ. ಚೌಡಯ್ಯ ಪ್ರಶಸ್ತಿ, ಪ್ರತಿಷ್ಠಿತ ಪಂಪ ಪ್ರಶಸ್ತಿ ಸೇರಿದಂತೆ ವಿವಿಧ ರಾಜ್ಯಮಟ್ಟದ ಪ್ರಶಸ್ತಿಗಳಿಗೆ ಪುರಸ್ಕೃತರನ್ನು ಆಯ್ಕೆ ಮಾಡಲಾಗಿದ್ದು, ಈ ಪ್ರಶಸ್ತಿಗಳನ್ನು ಇದೇ ಜನವರಿ 31ರಂದು ಬೆಂಗಳೂರಿನ ರವಿಂದ್ರ ಕಲಾಕ್ಷೇತ್ರದಲ್ಲಿ ಆಯೋಜಿಸಿರುವ ಕಾರ್ಯಕ್ರಮದಲ್ಲಿ ಪ್ರದಾನ ಮಾಡಲಾಗುವುದು ಎಂದು ಹಿಂದುಳಿದ ವರ್ಗಗಳ ಕಲ್ಯಾಣ ಹಾಗೂ ಕನ್ನಡ ಮತ್ತು ಸಂಸ್ಕೃತಿ ಸಚಿವ ಶಿವರಾಜ ತಂಗಡಗಿ ತಿಳಿಸಿದ್ದಾರೆ. ಹಾಗಾದ್ರೆ, ಯಾರನ್ನು ಯಾವ ಪ್ರಶಸ್ತಿಗೆ ಆಯ್ಕೆ ಮಾಡಲಾಗಿದೆ ಎನ್ನುವ ವಿವರ ಈ ಕೆಳಗಿನಂತಿದೆ.
ಯಾರಿಗೆ ಯಾವ ಪ್ರಶಸ್ತಿ
ಬಸವ ರಾಷ್ಟ್ರೀಯ ಪುರಸ್ಕಾರಕ್ಕೆ ಆನಂದ್ ತೆಲ್ತುಂಬಡೆ ಹಾಗೂ ಡಾ. ಎನ್.ಜಿ. ಮಹದೇವಪ್ಪ ಅವರನ್ನು ಆಯ್ಕೆ ಮಾಡಲಾಗಿದೆ. ಹಾಗೆಯೇ ಭಗವಾನ್ ಮಹಾವೀರ ಶಾಂತಿ ಪ್ರಶಸ್ತಿಗೆ ಜಿನದತ್ತ ದೇಸಾಯಿ ಹಾಗೂ ಗುಜರಾತಿನ ಗಾಂಧಿ ಸೇವಾಶ್ರಮ ಅವರನ್ನು ಆಯ್ಕೆ ಮಾಡಲಾಗಿದೆ. ಟಿ. ಚೌಡಯ್ಯ ಪ್ರಶಸ್ತಿಗಾಗಿ ನಿತ್ಯಾನಂದ ಹಳದಿಪುರ ಹಾಗೂ ಶ್ರೀರಾಮುಲು ಅವರನ್ನು ಆಯ್ಕೆ ಮಾಡಲಾಗಿದೆ.
ಇನ್ನು ಪ್ರತಿಷ್ಠಿತ ಪಂಪ ಪ್ರಶಸ್ತಿಯೂ ಸೇರಿದಂತೆ ವಿವಿಧ ರಾಜ್ಯಮಟ್ಟದ ಪ್ರಶಸ್ತಿಗಳಿಗೆ ಪುರಸ್ಕೃತರನ್ನು ಆಯ್ಕೆ ಮಾಡಲಾಗಿದ್ದು, ಈ ಪ್ರಶಸ್ತಿಗಳನ್ನು ಇದೇ ಜನವರಿ 31ರಂದು ಬೆಂಗಳೂರಿನ ರವಿಂದ್ರ ಕಲಾಕ್ಷೇತ್ರದಲ್ಲಿ ಆಯೋಜಿಸಿರುವ ಕಾರ್ಯಕ್ರಮದಲ್ಲಿ ಪ್ರದಾನ ಮಾಡಲಾಗುವುದು. ಮುಖ್ಯಮಂತ್ರಿ ಸಿದ್ದರಾಮಯ್ಯ ಈ ಪ್ರಶಸ್ತಿಗಳನ್ನು ವಿತರಣೆ ಮಾಡಲಿದ್ದಾರೆ ಎಂದು ಹಿಂದುಳಿದ ವರ್ಗಗಳ ಕಲ್ಯಾಣ ಹಾಗೂ ಕನ್ನಡ ಮತ್ತು ಸಂಸ್ಕೃತಿ ಸಚಿವ ಶಿವರಾಜ ತಂಗಡಗಿ ಹೇಳಿದ್ದಾರೆ.
Published On - 2:58 pm, Thu, 25 January 24