AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಮಾತೃಭಾಷೆ ಕಡೆಗಣಿಸುವ ನಾಡು ಶ್ರೀಮಂತವಾಗುವುದಿಲ್ಲ: ಬಸವರಾಜ ಬೊಮ್ಮಾಯಿ

ಎರಡು ವರ್ಷ ತಡವಾದರೂ ಸಾಧಕರಿಗೆ ಪ್ರಶಸ್ತಿಗಳನ್ನು ನೀಡಿ ಪುರಸ್ಕರಿಸಿರುವ ಸಂತಸ ತಂದಿದೆ ಎಂದು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಹೇಳಿದರು.

ಮಾತೃಭಾಷೆ ಕಡೆಗಣಿಸುವ ನಾಡು ಶ್ರೀಮಂತವಾಗುವುದಿಲ್ಲ: ಬಸವರಾಜ ಬೊಮ್ಮಾಯಿ
ಬೆಂಗಳೂರಿನ ರವೀಂದ್ರ ಕಲಾಕ್ಷೇತ್ರದಲ್ಲಿ ವಿವಿಧ ಕ್ಷೇತ್ರಗಳ ಸಾಧಕರಿಗೆ ಬುಧವಾರ ಪ್ರಶಸ್ತಿ ನೀಡಿ ಗೌರವಿಸಲಾಯಿತು.
TV9 Web
| Edited By: |

Updated on: Aug 18, 2021 | 9:57 PM

Share

ಬೆಂಗಳೂರು: ವಿವಿಧ ಕ್ಷೇತ್ರಗಳ ಸಾಧಕರಿಗೆ ನಗರದ ರವೀಂದ್ರ ಕಲಾಕ್ಷೇತ್ರದಲ್ಲಿ ಬುಧವಾರ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಪ್ರಶಸ್ತಿ ಪ್ರದಾನ ಮಾಡಿದರು. 2019-20ನೇ ಸಾಲಿನಲ್ಲಿ ವಿವಿಧ ಪ್ರಶಸ್ತಿಗಳಿಗೆ ಆಯ್ಕೆಯಾಗಿದ್ದ ಗಣ್ಯರನ್ನು ಪುರಸ್ಕರಿಸಲಾಯಿತು. ಸಮಾರಂಭದಲ್ಲಿ ಮಾತನಾಡಿದ ಬೊಮ್ಮಾಯಿ, ಮಾತೃಭಾಷೆ ಕಡೆಗಣಿಸುವ ನಾಡು ಶ್ರೀಮಂತವಾಗುವುದಿಲ್ಲ ಎಂದು ಹೇಳಿದರು.

ಎರಡು ವರ್ಷ ತಡವಾದರೂ ಸಾಧಕರಿಗೆ ಪ್ರಶಸ್ತಿಗಳನ್ನು ನೀಡಿ ಪುರಸ್ಕರಿಸಿರುವ ಸಂತಸ ತಂದಿದೆ. ಕನ್ನಡ ಮತ್ತು ಸಂಸ್ಕೃತಿಗೆ ಹೊಸ ಚೈತನ್ಯ ನೀಡಲಿ ಎಂದು ಇಲಾಖೆಯ ಸಚಿವರಿಗೆ ಹೇಳುತ್ತೇನೆ. ತಮ್ಮ ಕ್ಷೇತ್ರದಲ್ಲಿ ಸಾಧನೆ ಮಾಡಿರುವ ಗಣ್ಯರಿಗೆ ಪ್ರಶಸ್ತಿಗಳನ್ನು ನೀಡಿ ಗೌರವಿಸುವುದು ನನ್ನ ಪೂರ್ವಜನ್ಮದ ಪುಣ್ಯ ಎಂದು ಬೊಮ್ಮಾಯಿ ನುಡಿದರು. ಹಸಿವು ಇಲ್ಲದಿದ್ದರೆ ಮನುಷ್ಯ ಕಷ್ಟಪಟ್ಟು ದುಡಿಯುತ್ತಿರಲಿಲ್ಲ. ಹಸಿವು, ಅರಿವು, ಮರೆವು ಶಾಪವಲ್ಲ ಎಂದು ತಿಳಿಸಿದರು.

ಸಮಾರಂಭದಲ್ಲಿ ಮಾತನಾಡಿದ ಕನ್ನಡ ಮತ್ತು ಸಂಸ್ಕೃತಿ ಇಲಾಖೆಯ ಸಚಿವ ವಿ.ಸುನಿಲ್​ಕುಮಾರ್, ಮುಖ್ಯಮಂತ್ರಿಗೆ ಕನ್ನಡ ಮತ್ತು ಸಂಸ್ಕೃತಿ ಬಗ್ಗೆ ವಿಶೇಷ ಗಮನ ಇದೆ. ನಾನು ಜನರಿಗೆ ಹಾರ ಬೇಡ ಪುಸ್ತಕ ಕೊಡಿ ಎಂದೆ ಅಷ್ಟೇ. ಮುಖ್ಯಮಂತ್ರಿ ನನಗೆ ಕನ್ನಡ ಮತ್ತು ಸಂಸ್ಕೃತಿ ಇಲಾಖೆಯನ್ನೇ ಕೊಟ್ಟರು. ಲಾಕ್​ಡೌನ್, ಕೊರೊನಾದಿಂದ ಕಲಾವಿದರಿಗೆ ಸಂಕಷ್ಟ ಎದುರಾಗಿದೆ. ಕಲಾವಿದರು ಚಿಂತಿಸಬೇಕಿಲ್ಲ, ಸರ್ಕಾರ ನಿಮ್ಮೊಂದಿಗಿದೆ. 20 ಸಾವಿರ ಕಲಾವಿದರಿಗೆ ₹ 3,000 ನೀಡುವ ಐತಿಹಾಸಿಕ ನಿರ್ಧಾರವನ್ನು ಸರ್ಕಾರ ತೆಗೆದುಕೊಂಡಿದೆ. 2020-21ರ ಸಾಲಿನ ಪ್ರಶಸ್ತಿಗೆ 10 ದಿನದೊಳಗೆ ಆಯ್ಕೆ ಮಾಡುತ್ತೇವೆ ಎಂದು ಘೋಷಿಸಿದರು. ಧರ್ಮಸ್ಥಳದ ಧರ್ಮಾಧಿಕಾರಿ ಡಾ.ಡಿ.ವೀರೇಂದ್ರ ಹೆಗ್ಗಡೆ, ಶಾಸಕ ಉದಯ್ ಗರುಡಾಚಾರ್ ಸೇರಿ ಹಲವರು ಸಮಾರಂಭದಲ್ಲಿ ಪಾಲ್ಗೊಂಡಿದ್ದರು.

ಪ್ರಶಸ್ತಿ ಪುರಸ್ಕೃತರ ವಿವರ ಬಸವ ರಾಷ್ಟ್ರೀಯ ಪ್ರಶಸ್ತಿ- ಬಸವಲಿಂಗಪಟ್ಟದೇವರು, ಟಿ.ಚೌಡಯ್ಯ ರಾಷ್ಟ್ರೀಯ ಪ್ರಶಸ್ತಿ- ಡಾ.ಪಂ.ನರಸಿಂಹಲು ವಡವಾಟಿ, ಭಗವಾನ್ ಮಹಾವೀರ ರಾಷ್ಟ್ರೀಯ ಶಾಂತಿ ಪ್ರಶಸ್ತಿ- ಧರ್ಮಾಧಿಕಾರಿ ಡಾ.ವೀರೇಂದ್ರ ಹೆಗ್ಗಡೆ, ನಾಟ್ಯರಾಣಿ ಶಾಂತಲಾ ಪ್ರಶಸ್ತಿ- ಬಿ.ಕೆ.ವಸಂತಲಕ್ಷ್ಮಿ, ವರ್ಣಶಿಲ್ಪಿ ವೆಂಕಟಪ್ಪ ಪ್ರಶಸ್ತಿ- ಚಿ.ಸು.ಕೃಷ್ಣಶೆಟ್ಟಿ, ಜಕಣಾಚಾರಿ ಪ್ರಶಸ್ತಿ- ಬಿ.ಎಸ್.ಯೋಗಿರಾಜ, ಡಾ.ಗುಬ್ಬಿ ವೀರಣ್ಣ ಪ್ರಶಸ್ತಿ- ಮದಿರೆ ಮರಿಸ್ವಾಮಿ, ಜಾನಪದ ಪ್ರಶಸ್ತಿ- ಬಿ.ಟಾಕಪ್ಪ ಕಣ್ಣೂರು, ಸಂಗೊಳ್ಳಿ ರಾಯಣ್ಣ ಪ್ರಶಸ್ತಿ- ರಾ.ನಂ.ಚಂದ್ರಶೇಖರ, ದಾನ ಚಿಂತಾಮಣಿ ಅತ್ತಿಮಬ್ಬೆ ಪ್ರಶಸ್ತಿ- ಡಾ.ಚೂಡಾಮಣಿ ನಂದಗೋಪಾಲ್, ಪ್ರೊ.ಕೆ.ಜಿ.ಕುಂದಣಗಾರ ಗಡಿನಾಡ ಸಾಹಿತ್ಯ ಪ್ರಶಸ್ತಿ- ಪ್ರೊ.ಸಿದ್ದಣ್ಣ ಉತ್ಪಾಳ, ಅಕ್ಕಮಹಾದೇವಿ ಪ್ರಶಸ್ತಿ- ಡಾ.ಜಯಶ್ರೀ ದಂಡೆ, ನಿಜಗುಣ ಪುರಂದರ ಪ್ರಶಸ್ತಿ- ಗೌರಿ ಕುಪ್ಪುಸ್ವಾಮಿ, ಸಂತ ಶಿಶುನಾಳ ಷರೀಫ ಪ್ರಶಸ್ತಿ- ಪಂ.ವಾದಿರಾಜ ನಿಂಬರಗಿ, ಕುಮಾರವ್ಯಾಸ ಪ್ರಶಸ್ತಿ- ಗಂಗಮ್ಮ ಕೇಶವಮೂರ್ತಿ.

(Kannada and Culture Ministry Awards Distributed to Achievers)

ಇದನ್ನೂ ಓದಿ: ಕನ್ನಡವನ್ನು ಕೀಳಾಗಿ ಬಿಂಬಿಸಿದ ಗೂಗಲ್ ವಿರುದ್ಧ ಕಾನೂನು ಕ್ರಮ

ಇದನ್ನೂ ಓದಿ: ಕನ್ನಡ ಪುಸ್ತಕ ಕೊಡಿ ಎಂದ ನೂತನ ಸಚಿವ ಸುನಿಲ್ ಕುಮಾರ್ ಈಗ ಕಲಾವಿದರೊಂದಿಗೆ ಕಾಫಿ ಕುಡಿಯಲಿದ್ದಾರೆ!

Follow Us
ಅಂಬೇಡ್ಕರ್ ವಸತಿ ನಿಲಯದಲ್ಲಿ ಅವ್ಯವಸ್ಥೆ: ಊಟಕ್ಕೂ ವಿದ್ಯಾರ್ಥಿಗಳ ಪರದಾಟ
ಅಂಬೇಡ್ಕರ್ ವಸತಿ ನಿಲಯದಲ್ಲಿ ಅವ್ಯವಸ್ಥೆ: ಊಟಕ್ಕೂ ವಿದ್ಯಾರ್ಥಿಗಳ ಪರದಾಟ
ಹೊಸಕೋಟೆ ಮುಂಜಾನೆಯ ಬಿಸಿಬಿಸಿ ಬಿರಿಯಾನಿ ಪ್ರಿಯರಿಗೆ ಪೊಲೀಸರು ಬಿಗ್ ಶಾಕ್!
ಹೊಸಕೋಟೆ ಮುಂಜಾನೆಯ ಬಿಸಿಬಿಸಿ ಬಿರಿಯಾನಿ ಪ್ರಿಯರಿಗೆ ಪೊಲೀಸರು ಬಿಗ್ ಶಾಕ್!
ಬಾಹ್ಯಾಕಾಶ ಕ್ಷೇತ್ರದಲ್ಲಿ ಭಾರತದ ಮಾಸ್ಟರ್ ಪ್ಲಾನ್
ಬಾಹ್ಯಾಕಾಶ ಕ್ಷೇತ್ರದಲ್ಲಿ ಭಾರತದ ಮಾಸ್ಟರ್ ಪ್ಲಾನ್
ಚಾಮರಾಜನಗರ ಶೂಟೌಟ್: ಹೊಳೆ ದಟ್ಟಿ ಅರಣ್ಯದಿಂದ ಟಿವಿ9 ವಿಶೇಷ ತನಿಖಾ ವರದಿ
ಚಾಮರಾಜನಗರ ಶೂಟೌಟ್: ಹೊಳೆ ದಟ್ಟಿ ಅರಣ್ಯದಿಂದ ಟಿವಿ9 ವಿಶೇಷ ತನಿಖಾ ವರದಿ
ಆಗಸ್ಟ್ 24 ರಿಂದ 30 ರವರೆಗಿನ ದ್ವಾದಶ ರಾಶಿಗಳ ಫಲಾಫಲ ಇಲ್ಲಿದೆ
ಆಗಸ್ಟ್ 24 ರಿಂದ 30 ರವರೆಗಿನ ದ್ವಾದಶ ರಾಶಿಗಳ ಫಲಾಫಲ ಇಲ್ಲಿದೆ
ಇಂದು ಏಕಾದಶಿ; ಯಾವೆಲ್ಲಾ ರಾಶಿಗಳ ಅದೃಷ್ಟ ಹೇಗಿದೆ?
ಇಂದು ಏಕಾದಶಿ; ಯಾವೆಲ್ಲಾ ರಾಶಿಗಳ ಅದೃಷ್ಟ ಹೇಗಿದೆ?
ಹೈದರಾಬಾದ್​​ನಲ್ಲಿ ‘ಟಾಕ್ಸಿಕ್’ ಇವೆಂಟ್​​, ಯಶ್ ನೋಡಲು ಬಂದ ಜನಸಾಗರ
ಹೈದರಾಬಾದ್​​ನಲ್ಲಿ ‘ಟಾಕ್ಸಿಕ್’ ಇವೆಂಟ್​​, ಯಶ್ ನೋಡಲು ಬಂದ ಜನಸಾಗರ
ದೆಹಲಿಯಲ್ಲಿ ಬಿಜೆಪಿ ನೂತನ ಪದಾಧಿಕಾರಿಗಳ ಜೊತೆ ಪ್ರಧಾನಿ ಮೋದಿ ಸಂವಾದ
ದೆಹಲಿಯಲ್ಲಿ ಬಿಜೆಪಿ ನೂತನ ಪದಾಧಿಕಾರಿಗಳ ಜೊತೆ ಪ್ರಧಾನಿ ಮೋದಿ ಸಂವಾದ
ನಾಪತ್ತೆಯಾಗಿದ್ದ IAS ಅಧಿಕಾರಿಯ ಸುಳಿವು ಪತ್ತೆ: ಸ್ಥಳದ ಮಾಹಿತಿ ಲಭ್ಯ!
ನಾಪತ್ತೆಯಾಗಿದ್ದ IAS ಅಧಿಕಾರಿಯ ಸುಳಿವು ಪತ್ತೆ: ಸ್ಥಳದ ಮಾಹಿತಿ ಲಭ್ಯ!
ಬರ, ರೈತರ ಸಾಲಮನ್ನಾ ಬಗ್ಗೆ ಕೃಷಿ ಸಚಿವ ನರೇಂದ್ರಸ್ವಾಮಿ ಹೇಳಿದ್ದಿಷ್ಟು
ಬರ, ರೈತರ ಸಾಲಮನ್ನಾ ಬಗ್ಗೆ ಕೃಷಿ ಸಚಿವ ನರೇಂದ್ರಸ್ವಾಮಿ ಹೇಳಿದ್ದಿಷ್ಟು