Leelavathi Death: ರವೀಂದ್ರ ಕಲಾಕ್ಷೇತ್ರದಲ್ಲಿ ಕನ್ನಡ & ಸಂಸ್ಕೃತಿ ಇಲಾಖೆ ಆಯೋಜಿಸಿದ್ದ ನಮ್ಮ ಜಾತ್ರೆ ಮುಂದೂಡಿಕೆ
ಹಿರಿಯ ನಟಿ ಲೀಲಾವತಿ(85) ಅವರು ವಿಧಿವಶರಾಗಿದ್ದಾರೆ. ಈ ಹಿನ್ನೆಲೆಯಲ್ಲಿ ಕನ್ನಡ & ಸಂಸ್ಕೃತಿ ಇಲಾಖೆ ಆಯೋಜಿಸಿದ್ದ ನಮ್ಮ ಜಾತ್ರೆ ಮುಂದೂಡಲಾಗಿದೆ. ಕರ್ನಾಟಕ ಸಂಭ್ರಮ-50ರ ಅಂಗವಾಗಿ ‘ಅನ್ ಬಾಕ್ಸಿಂಗ್ ಬೆಂಗಳೂರು’ ಭಾಗವಾಗಿ ನಮ್ಮ ಜಾತ್ರೆ ಜನಪದ ಸಂಭ್ರಮ ಎಂಬ ಕಾರ್ಯಕ್ರಮವನ್ನು ಇಂದು ನಿಗದಿ ಮಾಡಲಾಗಿತ್ತು.

ಬೆಂಗಳೂರು, ಡಿ.09: ಕನ್ನಡ ಚಿತ್ರರಂಗದ ಹಿರಿಯ ನಟಿ ಲೀಲಾವತಿ(85) ಅವರು ವಿಧಿವಶರಾಗಿದ್ದಾರೆ. ಈ ಹಿನ್ನೆಲೆಯಲ್ಲಿ ಕನ್ನಡ & ಸಂಸ್ಕೃತಿ ಇಲಾಖೆ ಆಯೋಜಿಸಿದ್ದ ನಮ್ಮ ಜಾತ್ರೆ (Namma Jatre) ಮುಂದೂಡಲಾಗಿದೆ. ಬೆಂಗಳೂರಿನ ರವೀಂದ್ರ ಕಲಾಕ್ಷೇತ್ರದಲ್ಲಿ (Ravindra Kalakshetra) ಇಂದು ನಡೆಯಬೇಕಿದ್ದ ನಮ್ಮ ಜಾತ್ರೆ ಕಾರ್ಯಕ್ರಮವನ್ನು ಭಾನುವಾರಕ್ಕೆ ಮುಂದೂಡಲಾಗಿದೆ. ಕರ್ನಾಟಕ ಸಂಭ್ರಮ-50ರ ಅಂಗವಾಗಿ ‘ಅನ್ ಬಾಕ್ಸಿಂಗ್ ಬೆಂಗಳೂರು’ ಭಾಗವಾಗಿ ನಮ್ಮ ಜಾತ್ರೆ ಜನಪದ ಸಂಭ್ರಮ ಎಂಬ ಕಾರ್ಯಕ್ರಮವನ್ನು ಇಂದು ನಿಗದಿ ಮಾಡಲಾಗಿತ್ತು. ಸದ್ಯ ಕಾರ್ಯಕ್ರಮವನ್ನು ಭಾನುವಾರಕ್ಕೆ ಮುಂದೂಡಲಾಗಿದೆ.
ಕನ್ನಡ ಚಿತ್ರರಂಗದ ಹಿರಿಯ ನಟಿ ಚಂದನವನದ ಲೀಲಮ್ಮ ಇಹ ಲೋಕ ತ್ಯೆಜಿಸಿದ್ದಾರೆ. ವಯೋ ಸಹಜ ಅನಾರೋಗ್ಯದಿಂದ ಬಳಲುತ್ತಿದ್ದ ಲೀಲಾವತಿ ಅವರು ಹಾಸಿಗೆ ಹಿಡಿದಿದ್ರು. ಇತ್ತೀಚೆಗೆ ಅವರ ಆರೋಗ್ಯ ದಿನೇ ದಿನೇ ಕ್ಷೀಣಿಸ್ತಾ ಇತ್ತು. ಉಸಿರಾಟ ಸಮಸ್ಯೆ ಎದುರಾಗಿತ್ತು. ಲೀಲಾವತಿ ಅವ್ರ ಆರೋಗ್ಯ ತೀರ ಕ್ಷೀಣಿಸಿ ನೆಲಮಂಗಲದ ಖಾಸಗಿ ಆಸ್ಪತ್ರೆಗೆ ದಾಖಲಿಸಲಾಗಿತ್ತು. ಆದರೆ ಅವರ ಆರೋಗ್ಯ ಸುಧಾರಣೆಗಾಗಿ ಕನ್ನಡಿಗರು ಮಾಡಿದ ಪ್ರಾರ್ಥನೆ ಫಲಿಸಲೇ ಇಲ್ಲ. ನಿನ್ನೆ(ಡಿ.08) ಸಂಜೆ 5 ಗಂಟೆ 30 ನಿಮಿಷದ ಸುಮಾರಿಗೆ ಲೀಲಾವತಿ ಅವರು ಉಸಿರು ನಿಲ್ಲಿಸಿದ್ದಾರೆ. ಇಂದು ಪಾರ್ಥೀವ ಶರೀರ ದರ್ಶನ ನಡೆಯುತ್ತಿದೆ. ಹಿರಿಯ ನಟಿ ಲೀಲಾವತಿ ಅವರು ಅಗಲಿಕೆ ಹಿನ್ನೆಲೆ ನಮ್ಮ ಜಾತ್ರೆ ಜನಪದ ಸಂಭ್ರಮ ಕಾರ್ಯಕ್ರಮವನ್ನು ಮುಂದೂಡಲಾಗಿದೆ.
ಇಂದು ಬೆಳಗ್ಗೆ 10.45ರಿಂದ ಇಂದು ಮಧ್ಯಾಹ್ನ 2.15ರ ವರೆಗೆ ರವೀಂದ್ರ ಕಲಾಕ್ಷೇತ್ರದಲ್ಲಿ ಲೀಲಾವತಿ ಅವರ ಪಾರ್ಥಿವ ಶರೀರದ ಅಂತಿಮ ದರ್ಶನಕ್ಕೆ ವ್ಯವಸ್ಥೆ ಮಾಡಲಾಗಿದೆ. ಇಂದು ಮಧ್ಯಾಹ್ನ 3.30ರ ನಂತರ ಬಂಟರ ಸಂಪ್ರದಾಯದಂತೆ ಸಕಲ ಸರ್ಕಾರಿ ಗೌರವದೊಂದಿಗೆ ಸೋಲದೇವನಹಳ್ಳಿಯ ತೋಟದಲ್ಲಿ ಅಂತ್ಯಕ್ರಿಯೆ ನೆರವೇರಲಿದೆ.
ಇದನ್ನೂ ಓದಿ: ಬೆಂಗಳೂರಿನಲ್ಲೂ ಲೀಲಾವತಿಯವರ ಅಂತಿಮ ದರ್ಶನಕ್ಕೆ ವ್ಯವಸ್ಥೆ: ಎಲ್ಲಿ?
ಕನ್ನಡ ಮತ್ತು ಸಂಸ್ಕೃತಿ ಇಲಾಖೆ, ಪ್ರದರ್ಶಕ ಹಾಗೂ ಲಲಿತಕಲೆಗಳ ಗುಂಪು ಕಾದಂಬರಿ ಜಂಟಿಯಾಗಿ ಡಿ.9 ಮತ್ತು 10ರಂದು ರವೀಂದ್ರ ಕಲಾಕ್ಷೇತ್ರದಲ್ಲಿ ನಮ್ಮ ಜಾತ್ರೆ ಹಮ್ಮಿಕೊಂಡಿತ್ತು. ಆದರೆ ಈಗ ಅದನ್ನು ನಾಳೆಗೆ ಮುಂದೂಡಲಾಗಿದೆ. ನಮ್ಮ ಜಾತ್ರೆ ಅಂಗವಾಗಿ ವಿಧಾನಸೌಧದಿಂದ ರವೀಂದ್ರ ಕಲಾಕ್ಷೇತ್ರದವರೆಗೆ ಕಲಾ ತಂಡಗಳ ಮೆರವಣಿಗೆ ನಡೆಸಲು ತಯಾರಿ ನಡೆದಿತ್ತು. ಆನೆ, ರಥ, ಹೂವಿನ ಪಲ್ಲಕ್ಕಿ ಹಾಗೂ ಎತ್ತಿನಗಾಡಿಗಳು ಮೆರವಣಿಗೆಯಲ್ಲಿ ಪಾಲ್ಗೊಳ್ಳಲಿದ್ದವು.
ಸಂಜೆ ಸಂಸ ಬಯಲು ರಂಗಮಂದಿರದಲ್ಲಿ ಬೊಂಬೆಯಾಟ, ತೊಗಲು ಗೊಂಬೆಯಾಟ, ಸೂತ್ರದ ಗೊಂಬೆಯಾಟ ಪ್ರದರ್ಶನಗಳು ನಡೆಯಲಿದ್ದವು. ಇದೆಲ್ಲವೂ ನಾಳೆಗೆ ಮುಂದೂಡಲಾಗಿದೆ.
ರಾಜ್ಯದ ಪ್ರಮುಖ ಸುದ್ದಿಗಳನ್ನು ಓದಲು ಇದರ ಮೇಲೆ ಕ್ಲಿಕ್ ಮಾಡಿ
Published On - 6:59 am, Sat, 9 December 23