AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ನಾರಾಯಣಗುರು, ಭಗತ್​ಸಿಂಗ್ ಪಾಠ ಕೈಬಿಟ್ಟಿಲ್ಲ, ಹೆಡಗೆವಾರ್ ವಿಚಾರ ಸೇರಿಸಿದರೆ ಏನು ತಪ್ಪು: ಸಚಿವ ಸುನಿಲ್​ ಕುಮಾರ್

ಆರ್​ಎಸ್​ಎಸ್​ ಸಂಸ್ಥಾಪಕ ಕೇಶವ ಬಲಿರಾಂ ಹೆಡಗೇವಾರ್ ಅವರ ವಿಚಾರವನ್ನು ಪಠ್ಯದಲ್ಲಿ ಸೇರಿಸಿರುವುದರಲ್ಲಿ ತಪ್ಪೇನಿದೆ ಎಂದು ಕನ್ನಡ ಮತ್ತು ಸಂಸ್ಕೃತಿ ಇಲಾಖೆ ಸಚಿವ ವಿ.ಸುನಿಲ್ ಕುಮಾರ್ ಕೇಳಿದರು.

ನಾರಾಯಣಗುರು, ಭಗತ್​ಸಿಂಗ್ ಪಾಠ ಕೈಬಿಟ್ಟಿಲ್ಲ, ಹೆಡಗೆವಾರ್ ವಿಚಾರ ಸೇರಿಸಿದರೆ ಏನು ತಪ್ಪು: ಸಚಿವ ಸುನಿಲ್​ ಕುಮಾರ್
ಸಚಿವ ಸುನೀಲ್ ಕುಮಾರ್
TV9 Web
| Updated By: Ghanashyam D M | ಡಿ.ಎಂ.ಘನಶ್ಯಾಮ|

Updated on:May 19, 2022 | 3:23 PM

Share

ಬೆಂಗಳೂರು: ಪಠ್ಯಪುಸ್ತಕ ಪರಿಷ್ಕರಣೆ ಸಂಬಂಧ ಶಿಕ್ಷಣ ಸಚಿವರು ಮತ್ತು ಸಂಬಂಧಿಸಿದ ಅಧಿಕಾರಿಗಳೊಂದಿಗೆ ಚರ್ಚೆ ನಡೆಸಿದ್ದೇನೆ. ಸಮಾಜದಲ್ಲಿದ್ದ ವಿಷಯವೊಂದನ್ನು ಕನ್ನಡಕ್ಕೆ ಸೇರಿಸಲಾಗಿದೆ. ನಾರಾಯಣಗುರು, ಭಗತ್ ಸಿಂಗ್ ವಿಚಾರವನ್ನು ಕೈಬಿಟ್ಟಿಲ್ಲ. ಆರ್​ಎಸ್​ಎಸ್​ ಸಂಸ್ಥಾಪಕ ಕೇಶವ ಬಲಿರಾಂ ಹೆಡಗೇವಾರ್ ಅವರ ವಿಚಾರವನ್ನು ಪಠ್ಯದಲ್ಲಿ ಸೇರಿಸಿರುವುದರಲ್ಲಿ ತಪ್ಪೇನಿದೆ ಎಂದು ಕನ್ನಡ ಮತ್ತು ಸಂಸ್ಕೃತಿ ಇಲಾಖೆ ಸಚಿವ ವಿ.ಸುನಿಲ್ ಕುಮಾರ್ ಕೇಳಿದರು.

ನಗರದಲ್ಲಿ ಗುರುವಾರ ಮಾಧ್ಯಮ ಪ್ರತಿನಿಧಿಗಳೊಂದಿಗೆ ಮಾತನಾಡಿದ ಅವರು, ಹೆಡಗೆವಾರ್ ಅವರ ವಿಷಯ ಸೇರಿಸಿವುದರಿಂದ ಏನೋ ತಪ್ಪಾಗಿದೆ ಎಂದು ನನಗೆ ಅನ್ನಿಸುವುದಿಲ್ಲ. ದೇಶದ ಸ್ವಾಭಿಮಾನ, ಶೌರ್ಯದ ಬಗ್ಗೆ ಹೇಳಬೇಕು ಎನ್ನುವ ಚಿಂತನೆ ಮೊದಲಿನಿಂದಲೂ ಇತ್ತು. ಮೆಕಾಲೆ ರೂಪಿಸಿದ ಶಿಕ್ಷಣ ಪದ್ಧತಿಯ ಹಿಡಿತದಿಂದ ನಾವು ಬಿಡಿಸಿಕೊಳ್ಳಬೇಕು. ಭಾರತೀಯ ಶಿಕ್ಷಣ ಪದ್ಧತಿ ಬರಬೇಕು. ಭಾರತದ ಮಕ್ಕಳಿಗೆ ಮೊಘಲರ ಶಿಕ್ಷಣ, ಟಿಪ್ಪುವಿನ ಶಿಕ್ಷಣ, ಔರಂಗಾಜೇಬನ ಶಿಕ್ಷಣ ಬೇಕು ಎಂಬುದು ನಮ್ಮ ವಾದವಲ್ಲ. ಭಾರತದ ಶಿಕ್ಷಣ ನಮಗೆ ಬೇಕಿದೆ. ಪಠ್ಯಪುಸ್ತಕ ಪರಿಷ್ಕರಣೆಗೆಂದು ರೂಪಿಸಿದ್ದ ತಜ್ಞರ ಸಮಿತಿ ಇದನ್ನು ಒಪ್ಪಿದೆ. ಹೀಗಾಗಿಯೇ ಪಠ್ಯ ಪುಸ್ತಕ ಪರಿಷ್ಕರಿಸಲಾಗಿದೆ ಎಂದು ಹೇಳಿದರು.

ಆರ್​ಎಸ್​ಎಸ್​ ಸಂಸ್ಥಾಪಕರಾದ ಕೇಶವ ಬಲಿರಾಂ ಹೆಡಗೆವಾರ್​ ಅವರ ಚಿಂತನೆಗಳಿಂದ ಪ್ರೇರಣೆ ಪಡೆದು ಕೋಟ್ಯಂತರ ಜನರು ದೇಶದ ಕೆಲಸ ಮಾಡುತ್ತಿದ್ದಾರೆ. ದೇಶದ ವಿಚಾರದಲ್ಲಿ ನಮಗೆ ಬದ್ಧತೆ ಇದೆ. ಚಕ್ರವರ್ತಿ ಸೂಲಿಬೆಲೆ ಅವರ ತಾಯಿಗೆ ವಂದಿಸುವೆ ಎನ್ನುವ ಲೇಖನ ಪಠ್ಯದಲ್ಲಿದೆ. ಅದನ್ನು ಸೂಲಿಬೆಲೆ ಅಥವಾ ಬೇರೆ ಯಾರಾದರೂ ಬರೆದಿರಲಿ. ಅದರ ವಿಚಾರ ಏನು? ತಾಯಿ ಭಾರತಿಯನ್ನು ವಂದಿಸುತ್ತೇನೆ ಎನ್ನುವುದು ಅವರ ವಿಚಾರ. ಅದನ್ನು ವಿರೋಧಿಸುವುದು ಏಕೆ ಎಂದು ಪ್ರಶ್ನಿಸಿದರು.

ತಾಯಿ ಭಾರತಿಯನ್ನು ವಿರೋಧಿಸುತ್ತೇನೆ ಎನ್ನುವುದು ನಿಮ್ಮ ನಿಲುವಾದರೆ ನೀವು ಯಾರನ್ನು ವಂದಿಸುತ್ತೀರಿ ಎಂದು ಪ್ರಶ್ನಿಸಬೇಕಾಗುತ್ತದೆ. ಯಾವ ವಿಷಯವನ್ನು ಆಧರಿಸಿ ನೀವು ಚರ್ಚೆ ಆರಂಭಿಸಿದ್ದೀರಿ ಎನ್ನುವ ಬಗ್ಗೆ ನಾವು ಚರ್ಚಿಸಬೇಕು. ವಿಷಯವನ್ನು ಗಮನಿಸಿದ ಮೇಲೆ ಬರೆದವರು ಯಾರು ಎಂದು ಯೋಚಿಸಬೇಕು. ಟೀಕೆ ಮಾಡುವವರ ಪರ ಕಾಂಗ್ರೆಸ್ ಒಲವು ತೋರುತ್ತಿದೆ ಎಂದು ಟೀಕಿಸಿದರು.

ನಮ್ಮ ದೇಶದಲ್ಲಿ ರಾಮಾಯಣ ಅಥವಾ ಮಹಾಭಾರತವನ್ನು ಯಾರೊಬ್ಬರೂ ಟೀಕಿಸಲು ಸಾಧ್ಯವಿಲ್ಲ. ಹೆಡಗೆವಾರ್ ಕಂಡರೆ ಕಾಂಗ್ರೆಸ್​ಗೆ ಭಯ ಯಾಕೆ? ಚಕ್ರವರ್ತಿ ಸೂಲಿಬೆಲೆ ದೇಶದ ಬಗ್ಗೆ ಆಳವಾಗಿ ಅಧ್ಯಯನ ಮಾಡಿಲ್ವಾ? ತಾಯಿ ಭಾರತಿ ಎಂಬ ವಿಚಾರವನ್ನೂ ವಿರೋಧಿಸುವುದು ಏಕೆ ಎಂದು ಪ್ರಶ್ನಿಸಿದರು.

ತಾಜಾ ಸುದ್ದಿಗೆ ಇಲ್ಲಿ ಕ್ಲಿಕ್ ಮಾಡಿ

Published On - 3:22 pm, Thu, 19 May 22

ಅಸ್ಥಿ ವಿಸರ್ಜನೆಗೂ ಪರದಾಟ: ಬೆಂಗಳೂರು ಏರ್​​ಪೋರ್ಟ್​​ನಲ್ಲಿ ಕುಟುಂಬ ಗೋಳಾಟ
ಅಸ್ಥಿ ವಿಸರ್ಜನೆಗೂ ಪರದಾಟ: ಬೆಂಗಳೂರು ಏರ್​​ಪೋರ್ಟ್​​ನಲ್ಲಿ ಕುಟುಂಬ ಗೋಳಾಟ
NHMನಲ್ಲಿ 30000 ಹುದ್ದೆಗಳ ಮರು ನೇಮಕಾತಿ ಬಗ್ಗೆ ಸಚಿವ ದಿನೇಶ್ ಹೇಳಿದ್ದೇನು?
NHMನಲ್ಲಿ 30000 ಹುದ್ದೆಗಳ ಮರು ನೇಮಕಾತಿ ಬಗ್ಗೆ ಸಚಿವ ದಿನೇಶ್ ಹೇಳಿದ್ದೇನು?
ರಷ್ಯಾ-ಉಕ್ರೇನ್ ಶಾಂತಿ ಹಾದಿಯಲ್ಲಿ ಸಾಗುತ್ತೆ ಎನ್ನುವ ನಂಬಿಕೆ ಇದೆ: ಮೋದಿ
ರಷ್ಯಾ-ಉಕ್ರೇನ್ ಶಾಂತಿ ಹಾದಿಯಲ್ಲಿ ಸಾಗುತ್ತೆ ಎನ್ನುವ ನಂಬಿಕೆ ಇದೆ: ಮೋದಿ
ಸಾಫ್ಟವೇರ್‌ ಹುಡ್ಗ ,ನಿಂತಿದ್ದವನು ಮೆಟ್ರೋ ಹಳಿಗೆ ಸಡನ್ ಜಿಗಿದ್ಬಿಟ್ಟ!
ಸಾಫ್ಟವೇರ್‌ ಹುಡ್ಗ ,ನಿಂತಿದ್ದವನು ಮೆಟ್ರೋ ಹಳಿಗೆ ಸಡನ್ ಜಿಗಿದ್ಬಿಟ್ಟ!
ಡಿಕೆಶಿ ನಿವಾಸಕ್ಕೆ ದೌಡಾಯಿಸಿ ಪ್ರಿಯಾಂಕ್ ಖರ್ಗೆ: ಒಂದು ತಾಸು ಮಾತುಕತೆ
ಡಿಕೆಶಿ ನಿವಾಸಕ್ಕೆ ದೌಡಾಯಿಸಿ ಪ್ರಿಯಾಂಕ್ ಖರ್ಗೆ: ಒಂದು ತಾಸು ಮಾತುಕತೆ
ಮಹಾತ್ಮ ಗಾಂಧಿ ಸ್ಮಾರಕಕ್ಕೆ ಗೌರವ ಸಲ್ಲಿಸಿದ ರಷ್ಯಾ ಅಧ್ಯಕ್ಷ ಪುಟಿನ್
ಮಹಾತ್ಮ ಗಾಂಧಿ ಸ್ಮಾರಕಕ್ಕೆ ಗೌರವ ಸಲ್ಲಿಸಿದ ರಷ್ಯಾ ಅಧ್ಯಕ್ಷ ಪುಟಿನ್
ವಧು-ವರರ ಆನ್​ಲೈನ್ ಆರತಕ್ಷತೆ! ವಧುವಿನ ತಂದೆ ಹೇಳಿದ್ದೇನು ನೋಡಿ
ವಧು-ವರರ ಆನ್​ಲೈನ್ ಆರತಕ್ಷತೆ! ವಧುವಿನ ತಂದೆ ಹೇಳಿದ್ದೇನು ನೋಡಿ
ದೇವಸ್ಥಾನಗಳಲ್ಲಿ ಮದುವೆ ಮಾಡಿಸಲು ಹಿಂದೇಟು; ಅರ್ಚಕರ ನಿರ್ಧಾರಕ್ಕೆ ಕಾರಣ ಏನು
ದೇವಸ್ಥಾನಗಳಲ್ಲಿ ಮದುವೆ ಮಾಡಿಸಲು ಹಿಂದೇಟು; ಅರ್ಚಕರ ನಿರ್ಧಾರಕ್ಕೆ ಕಾರಣ ಏನು
ಬೆಂಗಳೂರಿನ ಹಲವೆಡೆ ತುಂತುರು ಮಳೆ, ಚುಮು ಚುಮು ಚಳಿ
ಬೆಂಗಳೂರಿನ ಹಲವೆಡೆ ತುಂತುರು ಮಳೆ, ಚುಮು ಚುಮು ಚಳಿ
ತುಮಕೂರು: ಎಟಿಎಂ ಮಷಿನನ್ನೇ ಹೊತ್ತಯ್ದು ಕಸದ ಬುಟ್ಟಿ ಬಳಿ ಬಿಟ್ಟ ಕಳ್ಳರು!
ತುಮಕೂರು: ಎಟಿಎಂ ಮಷಿನನ್ನೇ ಹೊತ್ತಯ್ದು ಕಸದ ಬುಟ್ಟಿ ಬಳಿ ಬಿಟ್ಟ ಕಳ್ಳರು!