ಕನ್ನಡ ಭಾಷಾ ಸಮಗ್ರ ಅಭಿವೃದ್ಧಿ ವಿಧೇಯಕ-2022ಕ್ಕೆ ಸರ್ವಾನುಮತದಿಂದ ಅಂಗೀಕಾರ

ಕನ್ನಡ ಭಾಷೆಯ ಸಮಗ್ರ ಅಭಿವೃದ್ಧಿಗಾಗಿ 2022ನೇ ಸಾಲಿನ ಕನ್ನಡ ಭಾಷಾ ಸಮಗ್ರ ಅಭಿವೃದ್ಧಿ ವಿಧೇಯಕವನ್ನು ಗುರುವಾರ (ಫೆ. 23) ವಿಧಾನಸಭೆಯಲ್ಲಿ ಅಂಗೀಕರಿಸಲಾಗಿದೆ.

ಕನ್ನಡ ಭಾಷಾ ಸಮಗ್ರ ಅಭಿವೃದ್ಧಿ ವಿಧೇಯಕ-2022ಕ್ಕೆ ಸರ್ವಾನುಮತದಿಂದ ಅಂಗೀಕಾರ
ವಿಧಾನಸೌಧ
Follow us
ಗಂಗಾಧರ​ ಬ. ಸಾಬೋಜಿ
|

Updated on:Feb 25, 2023 | 11:18 PM

ಬೆಂಗಳೂರು: ಕನ್ನಡ ಭಾಷೆಯ ಸಮಗ್ರ ಅಭಿವೃದ್ಧಿಗಾಗಿ ಮತ್ತು ಕನ್ನಡಿಗರಿಗೆ ಶಿಕ್ಷಣ ಮತ್ತು ಉದ್ಯೋಗದಲ್ಲಿ ಉತ್ತಮ ಅವಕಾಶಗಳನ್ನು ಒದಗಿಸುವ ಉದ್ದೇಶದಿಂದ 2022ನೇ ಸಾಲಿನ ಕನ್ನಡ ಭಾಷಾ ಸಮಗ್ರ ಅಭಿವೃದ್ಧಿ ವಿಧೇಯಕವನ್ನು ಗುರುವಾರ (ಫೆ. 23) ವಿಧಾನಸಭೆಯಲ್ಲಿ (Karnataka Legislative Assembly) ಅಂಗೀಕರಿಸಲಾಗಿದೆ. ಕನ್ನಡ ಭಾಷೆ ಕಡ್ಡಾಯವನ್ನು ಉಲ್ಲಂಘಿಸಿದರೆ ಶಿಸ್ತು ಕ್ರಮಕ್ಕೆ ಸಚಿವರ ನೇತೃತ್ವದಲ್ಲಿ ಸಮಿತಿ ರಚನೆ ಮಾಡಿ ಕ್ರಮ ಕೈಗೊಳ್ಳುವ ಅಧಿಕಾರ ನೀಡುವ ವಿಧೇಯಕ ಇದಾಗಿದೆ. ಕನ್ನಡ ಭಾಷಾ ಸಮಗ್ರ ಅಭಿವೃದ್ಧಿ ವಿಧೇಯಕ ಪರ್ಯಾಲೋಚನೆ ವೇಳೆ ಶಾಸಕ ಸಾ.ರಾ.ಮಹೇಶ್​ ಮಾತನಾಡಿ, ತಾಲೂಕು ಸಮಿತಿಗೆ ಅಧಿಕಾರಿಗಳ ಬದಲು ಶಾಸಕರನ್ನೇ ಅಧ್ಯಕ್ಷರನ್ನಾಗಿಸಿ, ಯಾಕೆ ಅಧಿಕಾರಿಗಳನ್ನು ಹಾಕುತ್ತೀರಿ? ಈಗ ಅಧಿಕಾರಿಗಳು ನಡೆದುಕೊಳ್ಳುತ್ತಿರುವ ರೀತಿ ಸಾಲದಾ? ಅಧಿಕಾರಿಗಳನ್ನು ತೆಗೆದು ಶಾಸಕರನ್ನು ಹಾಕಿ ಎಂದು ಒತ್ತಾಯಿಸಿದರು.

ಕನ್ನಡ ಮತ್ತು ಸಂಸ್ಕೃತಿ ಇಲಾಖೆ ಸಚಿವ ವಿ. ಸುನೀಲ್ ಕುಮಾರ್​ ಮಾತನಾಡಿ, ಕನ್ನಡ ಭಾಷೆಯ ಪ್ರಸಾರ ಮತ್ತು ಪ್ರಚಾರಕ್ಕಾಗಿ ಕನ್ನಡವನ್ನು ಅಧಿಕೃತ ಭಾಷೆಯಾಗಿ ಅನುಷ್ಠಾನಗೊಳಿಸುವಲ್ಲಿ ಸೂಕ್ತ ಕ್ರಮಗಳನ್ನು ಮತ್ತು ಚಟುವಟಿಕೆಗಳನ್ನು ಸಂಯೋಜಿಸಲು ಸಮರ್ಪಕವಾದ ಕಾನೂನಿನ ಅಗತ್ಯವಿದೆ ಎಂದು ಹೇಳಿದರು.

ಇದನ್ನೂ ಓದಿ: ಕನ್ನಡ ಭಾಷಾ ಸಮಗ್ರ ಅಭಿವೃದ್ಧಿ ವಿಧೇಯಕ ಸೇರಿ ವಿಧಾನಸಭೆಯಲ್ಲಿ ವಿವಿಧ ವಿಧೇಯಕಗಳು ಅಂಗೀಕಾರ

ಪ್ರಸ್ತಾವಿತ ಶಾಸನದ ಪ್ರಮುಖ ಅಂಶಗಳು ಹೀಗಿವೆ

  • ಉನ್ನತ, ತಾಂತ್ರಿಕ, ವೃತ್ತಿ ಶಿಕ್ಷಣದಲ್ಲಿ ಕನ್ನಡವನ್ನು ಒಂದು ಭಾಷೆಯನ್ನಾಗಿ ಪರಿಚಯ.
  • ಕನ್ನಡ ಮಾಧ್ಯಮದಲ್ಲಿ ಓದಿದ ಎಲ್ಲರಿಗೂ ಮೀಸಲಾತಿ.
  • ರಾಜ್ಯ ಸರ್ಕಾರದ ಎಲ್ಲಾ ವಲಯಗಳಲ್ಲಿ ನೇಮಕಾತಿ ಮಾಡುವ ಸಂದರ್ಭದಲ್ಲಿ ಕನ್ನಡ ಭಾಷಾ ಜ್ಞಾನ ಕಡ್ಡಾಯ.
  • ನ್ಯಾಯಾಲಯಗಳಲ್ಲಿ ಮತ್ತು ನ್ಯಾಯಮಂಡಳಿಗಳಲ್ಲಿ ಕನ್ನಡ ಭಾಷೆ ಬಳಕೆ.
  • ಕನ್ನಡ ಭಾಷೆಯ ವಿಸ್ತಾರವಾದ ಬಳಕೆ ಮತ್ತು ಪ್ರಚಾರಕ್ಕಾಗಿ ವಿಸ್ತೃತ ಕ್ರಮ.
  • ಮಾಹಿತಿ ತಂತ್ರಜ್ಞಾನ ಮತ್ತು ತಂತ್ರಾಂಶಗಳಲ್ಲಿ ಕನ್ನಡದ ಬಳಕೆಗಾಗಿ ಕ್ರಮ.
  • ಈ ರಾಜ್ಯದಲ್ಲಿನ ಕೈಗಾರಿಕೆಗಳು ತೆರಿಗೆ ರಿಯಾಯಿತಿ ಹಾಗೂ ಇನ್ನಿತರ ಸೌಲಭ್ಯಗಳನ್ನು ಪಡೆಯಲು ಕನ್ನಡಿಗರಿಗೆ ಮೀಸಲಾತಿ ನೀಡಬೇಕೆಂಬ ಷರತ್ತು.
  • ಉದ್ಯೋಗ ಪೋರ್ಟಲ್ ಸ್ಥಾಪನೆ.
  • ಅನುಷ್ಠಾನದ ಮೇಲುಸ್ತುವಾರಿಗಾಗಿ, ಕಾರ್ಯವ್ಯವಸ್ಥೆ ಸ್ಥಾಪನೆ.
  • ಸದರಿ ಅಧಿನಿಯಮದ ನಿಬಂಧನೆಗಳನ್ನು ಉಲ್ಲಂಘಿಸಿದಲ್ಲಿ ದಂಡ ವಿಧಿಸಲು ಕ್ರಮ.

ಇದನ್ನೂ ಓದಿ: ವಿಧಾನಸಭೆಯಲ್ಲಿ ಕಿಷ್ಕಿಂದ, ಸಪ್ತಗಿರಿ ಸೇರಿ ಆರು ಖಾಸಗಿ ವಿವಿಗಳ ವಿಧೇಯಕ ಅಂಗೀಕಾರ

ವಕೀಲರ ಮೇಲಿನ ಹಿಂಸಾಚಾರ ನಿಷೇಧ ವಿಧೇಯಕ ಮಂಡನೆ

ವಕೀಲರ ಮೇಲಿನ ಹಿಂಸಾಚಾರ ನಿಷೇಧಕ್ಕೆ ಕಾನೂನು ಜಾರಿ ಮಾಡುವಂತೆ ವಕೀಲರ ಸಂಘ ಭಾರೀ ಪ್ರತಿಭಟನೆ ನಡೆಸಿದ್ದರು. ಇದೀಗ ವಿಧಾನಸಭೆಯಲ್ಲಿ ವೃತ್ತಿಗಳ, ಕಸುಬುಗಳ ಮತ್ತು ಉದ್ಯೋಗಗಳ ಮೇಲಿನ ತೆರಿಗೆ (ತಿದ್ದುಪಡಿ) ವಿಧೇಯಕ ಮಂಡನೆಯಾಗಿದೆ. ಯಾವುದೇ ವ್ಯಕ್ತಿ ವಕೀಲರ ಮೇಲೆ ಹಲ್ಲೆ ನಡೆಸುವಂತಿಲ್ಲ. ಹಲ್ಲೆ ಮಾಡಿದರೆ 6 ತಿಂಗಳಿಂದ 3 ವರ್ಷಗಳವರೆಗೆ ಜೈಲುಶಿಕ್ಷೆ ಹಾಗೂ ಒಂದು ಲಕ್ಷ ರೂಪಾಯಿವರೆಗೆ ದಂಡಕ್ಕೆ ಅವಕಾಶ ನೀಡುವ ವಿಧೇಯಕ ಇದಾಗಿದೆ. ಅಪರಾಧ ಸಂಬಂಧ ವಕೀಲರನ್ನು ಪೊಲೀಸರು ಬಂಧಿಸಿದ್ದಲ್ಲಿ ಲಾಯರ್ ಅಸೋಸಿಯೇಷನ್‌ಗೆ ಪೊಲೀಸರು ಮಾಹಿತಿ ನೀಡಬೇಕು ಎಂಬುದು ಇದರಲ್ಲಿದೆ.

ರಾಜ್ಯದ ಮತ್ತಷ್ಟು ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ.

Published On - 11:18 pm, Sat, 25 February 23

ಹೆಚ್ಎಂಪಿವಿ 2001ರಿಂದ ಭಾರತದಲ್ಲಿದೆ, ನಿಶ್ಶಕ್ತರು ಇದರ ಟಾರ್ಗೆಟ್: ದಿನೇಶ್
ಹೆಚ್ಎಂಪಿವಿ 2001ರಿಂದ ಭಾರತದಲ್ಲಿದೆ, ನಿಶ್ಶಕ್ತರು ಇದರ ಟಾರ್ಗೆಟ್: ದಿನೇಶ್
ಹೆಚ್ಎಂಪಿ ವೈರಸ್ ಯಾವ ವೇರಿಯಂಟ್ ಅಂತ ನಾನು ಹೇಳಲಾಗಲ್ಲ: ಅಶ್ವಥ್ ನಾರಾಯಣ
ಹೆಚ್ಎಂಪಿ ವೈರಸ್ ಯಾವ ವೇರಿಯಂಟ್ ಅಂತ ನಾನು ಹೇಳಲಾಗಲ್ಲ: ಅಶ್ವಥ್ ನಾರಾಯಣ
ಸಂತೋಷ್ ಲಾಡ್ ತಮ್ಮ ಪಟಾಲಂನೊಂದಿಗೆ ಅಸ್ಪತ್ರೆಗೆ ಬಂದಿದ್ದು ಸರಿಯಲ್ಲ
ಸಂತೋಷ್ ಲಾಡ್ ತಮ್ಮ ಪಟಾಲಂನೊಂದಿಗೆ ಅಸ್ಪತ್ರೆಗೆ ಬಂದಿದ್ದು ಸರಿಯಲ್ಲ
ಎನ್ಕೌಂಟರ್ ನಡೆದ ಬಳಿಕ ಸಾಕಷ್ಟು ಬದಲಾವಣೆ ಆಗಿದೆ: ನಕ್ಸಲ್ ಸುಂದರಿಯ ಸಂಬಂಧಿ
ಎನ್ಕೌಂಟರ್ ನಡೆದ ಬಳಿಕ ಸಾಕಷ್ಟು ಬದಲಾವಣೆ ಆಗಿದೆ: ನಕ್ಸಲ್ ಸುಂದರಿಯ ಸಂಬಂಧಿ
ನಿಯಂತ್ರಣ ಕಳೆದುಕೊಂಡು ರಸ್ತೆಯ ಬದಿಯಲ್ಲಿ ಕುಳಿತ ಐವರ ಮೇಲೆ ಹರಿದ ಕಾರು
ನಿಯಂತ್ರಣ ಕಳೆದುಕೊಂಡು ರಸ್ತೆಯ ಬದಿಯಲ್ಲಿ ಕುಳಿತ ಐವರ ಮೇಲೆ ಹರಿದ ಕಾರು
ಆನೇಕಲ್: ಸಿಲಿಂಡರ್ ಸ್ಫೋಟ ತೀವ್ರತೆಗೆ ಮನೆ ಗೋಡೆ ಕಿಟಕಿ ಛಿದ್ರ, ಇಬ್ಬಗೆ ಗಾಯ
ಆನೇಕಲ್: ಸಿಲಿಂಡರ್ ಸ್ಫೋಟ ತೀವ್ರತೆಗೆ ಮನೆ ಗೋಡೆ ಕಿಟಕಿ ಛಿದ್ರ, ಇಬ್ಬಗೆ ಗಾಯ
ನಾ ಡಿಸೋಜ ಅಂತಿಮ ದರ್ಶನ, ಅಂತ್ಯಕ್ರಿಯೆ ಬಗ್ಗೆ ಪುತ್ರ ನವೀನ್ ಮಾಹಿತಿ
ನಾ ಡಿಸೋಜ ಅಂತಿಮ ದರ್ಶನ, ಅಂತ್ಯಕ್ರಿಯೆ ಬಗ್ಗೆ ಪುತ್ರ ನವೀನ್ ಮಾಹಿತಿ
ನಡುರಸ್ತೆಯಲ್ಲಿ ವಿದ್ಯಾರ್ಥಿನಿಯ ಕತ್ತು ಹಿಸುಕಿ ಕೊಲೆ ಮಾಡಲು ಯತ್ನಿಸಿದ ಯುವಕ
ನಡುರಸ್ತೆಯಲ್ಲಿ ವಿದ್ಯಾರ್ಥಿನಿಯ ಕತ್ತು ಹಿಸುಕಿ ಕೊಲೆ ಮಾಡಲು ಯತ್ನಿಸಿದ ಯುವಕ
ಕುದುರೆಮುಖ ಅರಣ್ಯದಲ್ಲಿ ನಕ್ಸಲ್​ ನಾಯಕಿ ಸುಂದರಿ ವಾಸ
ಕುದುರೆಮುಖ ಅರಣ್ಯದಲ್ಲಿ ನಕ್ಸಲ್​ ನಾಯಕಿ ಸುಂದರಿ ವಾಸ
ಆಸ್ಟ್ರೇಲಿಯಾದಲ್ಲಿ RCB ದಾಂಡಿಗನ ಸಿಡಿಲಬ್ಬರ: ಸ್ಪೋಟಕ ಅರ್ಧಶತಕ
ಆಸ್ಟ್ರೇಲಿಯಾದಲ್ಲಿ RCB ದಾಂಡಿಗನ ಸಿಡಿಲಬ್ಬರ: ಸ್ಪೋಟಕ ಅರ್ಧಶತಕ