AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ವಿಧಾನಸಭೆಯಲ್ಲಿ ಕನ್ನಡ ಭಾಷಾ ಸಮಗ್ರ ಅಭಿವೃದ್ಧಿ ವಿಧೇಯಕ ಅಂಗೀಕಾರ

ವಿಧಾನಸಭೆ ಕಲಾಪದಲ್ಲಿ ಕನ್ನಡ ಭಾಷಾ ಸಮಗ್ರ ಅಭಿವೃದ್ಧಿ (ತಿದ್ದುಪಡಿ) ವಿಧೇಯಕ ಅಂಗೀಕಾರವಾಗಿದೆ. ಸುಗ್ರೀವಾಜ್ಞೆಯನ್ನು ರಾಜ್ಯಪಾಲರು ವಾಪಸಾತಿ ಮಾಡಿ ಸದನದಲ್ಲಿ ವಿಧೇಯಕ ಮಂಡಿಸುವಂತೆ ಸೂಚಿಸಿದ್ದ ಹಿನ್ನೆಲೆಯಲ್ಲಿ ವಿಧೇಯಕ ಮಂಡಿಸಿ ಸರ್ಕಾರ ಅಂಗೀಕಾರ ಪಡೆದಿದೆ.

ವಿಧಾನಸಭೆಯಲ್ಲಿ ಕನ್ನಡ ಭಾಷಾ ಸಮಗ್ರ ಅಭಿವೃದ್ಧಿ ವಿಧೇಯಕ ಅಂಗೀಕಾರ
ವಿಧಾನಸೌಧ
ಕಿರಣ್​ ಹನಿಯಡ್ಕ
| Edited By: |

Updated on:Feb 15, 2024 | 1:21 PM

Share

ಬೆಂಗಳೂರು, ಫೆ.15: ವಿಧಾನಮಂಡಲ ಬಜೆಟ್ ಅಧಿವೇಶನದ ಐದನೇ ದಿನವಾದ ಇಂದೂ ಕೂಡ ಸದನದಲ್ಲಿ ಕಲಾಪ ಮುಂದುವರೆದಿದೆ. ಹಲವು ವಿಚಾರಗಳ ಬಗ್ಗೆ ವಿಪಕ್ಷ ಹಾಗೂ ಪ್ರತಿಪಕ್ಷ ನಡುವೆ ಆರೋಪ ಪ್ರತ್ಯಾರೋಪಕ್ಕೆ ಸದನ ಸಾಕ್ಷಿಯಾಗಿದೆ. ಸದ್ಯ ವಿಧಾನಸಭೆ ಕಲಾಪದಲ್ಲಿ ಕನ್ನಡ ಭಾಷಾ ಸಮಗ್ರ ಅಭಿವೃದ್ಧಿ (ತಿದ್ದುಪಡಿ) ವಿಧೇಯಕ ಅಂಗೀಕಾರವಾಗಿದೆ. ಸುಗ್ರೀವಾಜ್ಞೆಯನ್ನು (Kannada signage ordinance) ರಾಜ್ಯಪಾಲರು ವಾಪಸಾತಿ ಮಾಡಿ ಸದನದಲ್ಲಿ ವಿಧೇಯಕ ಮಂಡಿಸುವಂತೆ ಸೂಚಿಸಿದ್ದ ಹಿನ್ನೆಲೆಯಲ್ಲಿ ವಿಧೇಯಕ ಮಂಡಿಸಿ ಸರ್ಕಾರ ಅಂಗೀಕಾರ ಪಡೆದಿದೆ.

ಅಂಗಡಿ-ಮುಂಗಟ್ಟುಗಳ ಮುಂದೆ ಸೂಚನಾ ಫಲಕಗಳಲ್ಲಿ ಶೇ 60 ರಷ್ಟು ಕನ್ನಡ ಕಡ್ಡಾಯಗೊಳಿಸಿ ರಾಜ್ಯ ಸರ್ಕಾರ ಸಿದ್ಧಪಡಿಸಿದ್ದ ಸುಗ್ರೀವಾಜ್ಞೆಯನ್ನು ರಾಜ್ಯಪಾಲ ಥಾವರಚಂದ್ ಗೆಹ್ಲೋಟ್ ವಾಪಸ್ ಕಳುಹಿಸಿದ್ದರು. ಅಧಿವೇಶನ ನಿಗದಿಯಾದ ಹಿನ್ನೆಲೆ ಸರ್ಕಾರಕ್ಕೆ ವಾಪಸ್ ಕಳಿಸಿದ್ದರು. ವಿಧೇಯಕ ಮಂಡಿಸಿ ಅನುಮೋದನೆ ಪಡೆಯುವಂತೆ ಸೂಚನೆ ನೀಡಿದ್ದರು. ಅದರಂತೆಯೇ ಈಗ ವಿಧಾನಸಭೆ ಕಲಾಪದಲ್ಲಿ ಕನ್ನಡ ಭಾಷಾ ಸಮಗ್ರ ಅಭಿವೃದ್ಧಿ (ತಿದ್ದುಪಡಿ) ವಿಧೇಯಕ ಮಂಡಿಸಿ ಸರ್ಕಾರ ಅಂಗೀಕಾರ ಪಡೆದಿದೆ.

ಇದನ್ನೂ ಓದಿ: ನಾಮಫಲಕಗಳಲ್ಲಿ ಕನ್ನಡ ಕಡ್ಡಾಯ ಸುಗ್ರೀವಾಜ್ಞೆ ವಾಪಸ್ ಕಳುಹಿಸಿದ ರಾಜ್ಯಪಾಲರು: ವಿಧೇಯಕ ಮಂಡನೆಗೆ ಸೂಚನೆ

ಇನ್ನು ನಿನ್ನೆ (ಫೆ.14) ನಾಮಫಲಕಗಳಲ್ಲಿ ಶೇ.60ರಷ್ಟು ಕನ್ನಡ ಭಾಷೆ ಬಳಕೆಯನ್ನು ಕಡ್ಡಾಯಗೊಳಿಸುವ ‘ಕನ್ನಡ ಭಾಷಾ ಸಮಗ್ರ ಅಭಿವೃದ್ಧಿ ತಿದ್ದುಪಡಿ ವಿಧೇಯಕ’ವನ್ನು ವಿಧಾನಸಭೆಯಲ್ಲಿ ಮಂಡಿಸಲಾಗಿತ್ತು. ವಿಧಾನಸಭೆ ಅಧಿವೇಶನದಲ್ಲಿ ಕನ್ನಡ ಮತ್ತು ಸಂಸ್ಕೃತಿ ಖಾತೆ ಸಚಿವ ಶಿವರಾಜ ತಂಗಡಗಿ ಅವರ ಪರವಾಗಿ ಗೃಹ ಸಚಿವ ಡಾ.ಜಿ.ಪರಮೇಶ್ವರ್ ವಿಧೇಯಕವನ್ನು ಮಂಡಿಸಿದ್ದರು. ವಾಣಿಜ್ಯ, ಕೈಗಾರಿಕೆ ಮತ್ತು ವ್ಯವಹಾರ ಉದ್ಯಮಗಳು, ಟ್ರಸ್ಟ್ ಗಳು, ಸಮಾಲೋಚನಾ ಕೇಂದ್ರಗಳು, ಆಸ್ಪತ್ರೆಗಳು, ಪ್ರಯೋಗಾಲಯಗಳು, ಮನೋರಂಜನಾ ಕೇಂದ್ರಗಳು, ಹೋಟೆಲ್‍ಗಳ ನಾಮಫಲಕಗಳಲ್ಲಿ ಕನ್ನಡ ಭಾಷೆಯನ್ನು ಶೇ.60ರಷ್ಟು ಪ್ರಮಾಣದಲ್ಲಿ ಪ್ರದರ್ಶಿಸುವುದನ್ನು ವಿಧೇಯಕದಲ್ಲಿ ಕಡ್ಡಾಯಗೊಳಿಸಲಾಗಿದೆ.

ಜನವರಿ 5 ರಂದು ನಡೆದ ಸಚಿವ ಸಂಪುಟ ಸಭೆಯಲ್ಲಿ, ವ್ಯಾಪಾರ ಸಂಸ್ಥೆಗಳಲ್ಲಿ ಸೂಚನಾ ಫಲಕಗಳಲ್ಲಿ ಶೇ 60 ರಷ್ಟು ಕನ್ನಡ ಭಾಷೆಯನ್ನು ಕಡ್ಡಾಯಗೊಳಿಸುವ ‘ಕನ್ನಡ ಭಾಷಾ ಸಮಗ್ರ ಅಭಿವೃದ್ಧಿ ಕಾಯ್ದೆ’ಗೆ ತಿದ್ದುಪಡಿ ತರಲು ಸುಗ್ರೀವಾಜ್ಞೆಗೆ ಅನುಮೋದನೆ ನೀಡಲಾಗಿತ್ತು.

ರಾಜ್ಯದ ಪ್ರಮುಖ ಸುದ್ದಿಗಳನ್ನು ಓದಲು ಇದರ ಮೇಲೆ ಕ್ಲಿಕ್ ಮಾಡಿ

Published On - 1:08 pm, Thu, 15 February 24