AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ನೂತನ ರೈಲಿಗೆ ಚಾಲನೆ ಕಾರ್ಯಕ್ರಮದಲ್ಲಿ ಕನ್ನಡ ಮಂಗಮಾಯ: ಸಚಿವ ವಿ. ಸೋಮಣ್ಣ ಹೇಳಿದ್ದೇನು?

ಬೆಂಗಳೂರು-ಮುಂಬೈ ಹೊಸ ಎಕ್ಸ್‌ಪ್ರೆಸ್ ರೈಲಿಗೆ ಚಾಲನೆ ಸಮಾರಂಭದಲ್ಲಿ ಕನ್ನಡ ಭಾಷೆ ಕಡೆಗಣಿಸಿದ್ದು ತೀವ್ರ ಆಕ್ರೋಶಕ್ಕೆ ಕಾರಣವಾಗಿದೆ. ಬೈಯ್ಯಪ್ಪನಹಳ್ಳಿ ಎಸ್ಎಂವಿಟಿ ನಿಲ್ದಾಣದಲ್ಲಿ ನಡೆದ ಕಾರ್ಯಕ್ರಮದ ವೇದಿಕೆಯಲ್ಲಿ ಇಂಗ್ಲಿಷ್ ಭಾಷೆಯಲ್ಲಿ ಮಾತ್ರ ಫ್ಲೆಕ್ಸ್​​ಗಳು ಇದ್ದವು. ಕರ್ನಾಟಕದ ಸಂಸದರೂ, ರೈಲ್ವೆ ರಾಜ್ಯ ಖಾತೆ ಸಚಿವರೂ ಆದ ವಿ. ಸೋಮಣ್ಣ ಈ ಬಗ್ಗೆ ಪ್ರತಿಕ್ರಿಯಿಸಿದ್ದು ಮುಂದಿನ ದಿನಗಳಲ್ಲಿ ಇಂತಹ ಘಟನೆಗಳು ಮರುಕಳಿಸದಂತೆ ನೋಡಿಕೊಳ್ಳುವ ಭರವಸೆ ನೀಡಿದ್ದಾರೆ.

ನೂತನ ರೈಲಿಗೆ ಚಾಲನೆ ಕಾರ್ಯಕ್ರಮದಲ್ಲಿ ಕನ್ನಡ ಮಂಗಮಾಯ: ಸಚಿವ ವಿ. ಸೋಮಣ್ಣ ಹೇಳಿದ್ದೇನು?
ನೂತನ ರೈಲಿಗೆ ಚಾಲನೆ ಕಾರ್ಯಕ್ರಮದಲ್ಲಿ ಕನ್ನಡ ಮಂಗಮಾಯImage Credit source: Tv9 Kannada
ಕಿರಣ್​ ಸೂರ್ಯ
| Edited By: |

Updated on: May 17, 2026 | 12:08 PM

Share

ಬೆಂಗಳೂರು, ಮೇ 17: ಬೆಂಗಳೂರು-ಮುಂಬೈ ನಡುವೆ ಸಂಚಾರ ಮಾಡಲಿರುವ ಹೊಸ ಎಕ್ಸ್ಪ್ರೆಸ್ ರೈಲಿಗೆ ಬೈಯ್ಯಪ್ಪನಹಳ್ಳಿ ಬಳಿಯ ಎಸ್ಎಂವಿಟಿ ರೈಲ್ವೇ ನಿಲ್ದಾಣದಲ್ಲಿ ಇಂದು (ಮೇ 17) ಚಾಲನೆ ನೀಡಲಾಗಿದೆ. ದುರ್ದೈವ ಅಂದ್ರೆ ರೈಲ್ವೇ ಇಲಾಖೆಯ ಈ ಕಾರ್ಯಕ್ರಮದಲ್ಲಿ ಕನ್ನಡ ಮಂಗಮಾಯವಾಗಿತ್ತು. ಮುಖ್ಯ ವೇದಿಕೆಯಲ್ಲಿ ಹಾಕಿರುವ ಫ್ಲೆಕ್ಸ್​​ನಲ್ಲಿಇಂಗ್ಲಿಷ್​​ನಲ್ಲಿ ಮಾತ್ರ ನಾಮ ಫಲಕ ಹಾಕಲಾಗಿದ್ದು, ಕರ್ನಾಟಕದ ಸಂಸದ ವಿ.ಸೋಮಣ್ಣ ಅವರೇ ರೈಲ್ವೇ ಇಲಾಖೆಯ ರಾಜ್ಯ ಖಾತೆ ಸಚಿವರಾಗಿದ್ದರೂ ಕನ್ನಡದ ಬಗ್ಗೆ ಇಷ್ಟು ನಿರ್ಲಕ್ಷ್ಯ ಯಾಕೆ ಎಂಬ ಪ್ರಶ್ನೆ ಸಾರ್ವಜನಿಕ ವಲಯದಿಂದ ಕೇಳಿಬಂದಿದೆ.

ಮುಖ್ಯಾಂಶಗಳು

  • ಬೆಂಗಳೂರು-ಮುಂಬೈ ನಡುವೆ ಹೊಸ ಎಕ್ಸ್​​ಪ್ರೆಸ್​ ರೈಲಿಗೆ ಚಾಲನೆ
  • ರೈಲ್ವೇ ಇಲಾಖೆಯ ಈ ಕಾರ್ಯಕ್ರಮದಲ್ಲಿ ಕನ್ನಡ ಮಂಗಮಾಯ
  • ಬೇಕಂತಲೇ ಕನ್ನಡವನ್ನು ನಿರ್ಲಕ್ಷಿಸಿದರಾ ಹಿರಿಯ ಅಧಿಕಾರಿಗಳು?

ಕನ್ನಡ ಫೆಕ್ಸ್ ಹಾಕಲು ಹಿರಿಯ ಅಧಿಕಾರಿಗಳ ಅಡ್ಡಿ?

ಇನ್ನು ಕಾರ್ಯಕ್ರಮ ಸಂಬಂಧ ಕನ್ನಡದಲ್ಲಿ ಫ್ಲೆಕ್ಸ್​​ ಹಾಕಲು ಅಡ್ಡಿಪಡಿಸಿರೋದು ಇಲಾಖೆಯ ಹಿರಿಯ ಅಧಿಕಾರಿಗಳು ಎಂಬ ಮಾತುಗಳೂ ಕೇಳಿಬಂದಿವೆ. ರಾಜ್ಯದ ರೈಲ್ವೆ ಅಧಿಕಾರಿಗಳು ಸ್ಥಳೀಯ ಭಾಷೆಯಾದ ಕನ್ನಡದಲ್ಲಿಯೇ ಫ್ಲೆಕ್ಸ್​ ಹಾಕಲು ಮುಂದಾಗಿದ್ದರು. ಆದರೆ ಹಿರಿಯ ರೈಲ್ವೇ ಅಧಿಕಾರಿಗಳು ಈ ಫ್ಲೆಕ್ಸ್​​ ಅಳವಡಿಸಲು ಅವಕಾಶ ನೀಡಿಲ್ಲವಂತೆ. ಹೀಗಾಗಿ ಕನ್ನಡದಲ್ಲಿ ಪ್ರಿಂಟ್​​ ಆಗಿದ್ದ ಫ್ಲೆಕ್ಸ್​​ಗಳನ್ನು ವೇದಿಕೆಯ ಹಿಂಭಾಗದಲ್ಲಿ ಇಟ್ಟಿರುವುದು ಕಂಡುಬಂದಿದೆ.

ಇದನ್ನೂ ಓದಿ: ರೈಲ್ವೇ ಪ್ರಯಾಣಿಕರಿಗೆ ಗುಡ್​​ನ್ಯೂಸ್​​; ಬೆಂಗಳೂರು, ಮುಂಬೈ ಎಕ್ಸ್​​ಪ್ರೆಸ್​​ ಟ್ರೈನ್​​ಗೆ ಹಸಿರು ನಿಶಾನೆ

ಸಚಿವ ಸೋಮಣ್ಣ ಏನಂದ್ರು?

ಇನ್ನು ಕಾರ್ಯಕ್ರಮದ ಫ್ಲೆಕ್ಸ್​​ನಲ್ಲಿ ಕನ್ನಡದಲ್ಲಿ ಒಂದೇ ಒಂದು ಪದ ಇಲ್ಲದಿರುವ ಬಗ್ಗೆ ಸಚಿವ ವಿ. ಸೋಮಣ್ಣ ಪ್ರತಿಕ್ರಿಯೆ ನೀಡಿದ್ದಾರೆ. ಕಾರ್ಯಕ್ರಮದಲ್ಲಿ ಕನ್ನಡ ಕಡೆಗಣನೆ ವಿಚಾರ ನನ್ನ ಗಮನಕ್ಕೆ ಬಂದಿಲ್ಲ. ಇದು ದಿಢೀರ್​​ ಕಾರ್ಯಕ್ರಮ. ನಿನ್ನೆ ನಾನು ಬೇರೆ ಕಾರ್ಯಕ್ರಮದಲ್ಲಿ ಇದ್ದೆ. ನಾನು ಸಚಿವನಾದ ಮೇಲೆ ಕನ್ನಡಕ್ಕೆ ಆದ್ಯತೆ ಕೊಟ್ಟಿದ್ದೇನೆಯೋ ಇಲ್ಲವೋ ನೀವೇ ಹೇಳಿ. ಮುಂದೆ ಈ ರೀತಿಯ ಘಟನೆಗಳು ಆಗದಂತೆ ನೋಡಿಕೊಳ್ಳುತ್ತೇನೆ ಎಂದು ಅವರು ಭರವಸೆ ನೀಡಿದ್ದಾರೆ.

ಮತ್ತಷ್ಟು ಸುದ್ದಿ ಓದಲು ಇಲ್ಲಿ ಕ್ಲಿಕ್​​ ಮಾಡಿ.

Follow Us
ಸಂಸತ್ ಆವರಣದಲ್ಲಿ ಡ್ರಾಮಾ; ಸನ್ಯಾಸಿಯ ವೇಷ ಧರಿಸಿ ಪಪ್ಪು ಯಾದವ್ ಪ್ರತಿಭಟನೆ
ಸಂಸತ್ ಆವರಣದಲ್ಲಿ ಡ್ರಾಮಾ; ಸನ್ಯಾಸಿಯ ವೇಷ ಧರಿಸಿ ಪಪ್ಪು ಯಾದವ್ ಪ್ರತಿಭಟನೆ
ಜೈಲಿನಲ್ಲಿ ದರ್ಶನ್ ಜೊತೆ 1 ಗಂಟೆಗೂ ಹೆಚ್ಚು ಕಾಲ ವಿಜಯಲಕ್ಷ್ಮಿ ಸಮಾಲೋಚನೆ
ಜೈಲಿನಲ್ಲಿ ದರ್ಶನ್ ಜೊತೆ 1 ಗಂಟೆಗೂ ಹೆಚ್ಚು ಕಾಲ ವಿಜಯಲಕ್ಷ್ಮಿ ಸಮಾಲೋಚನೆ
ಪೊಲೀಸ್ ನೇಮಕಾತಿ ಪರೀಕ್ಷೆ: ಸುಳ್ಳು ಪೋಸ್ಟ್ ಹಾಕಿದ್ರೆ ಕೇಸ್ ಬುಕ್; ಕೆಇಎ ಎಚ
ಪೊಲೀಸ್ ನೇಮಕಾತಿ ಪರೀಕ್ಷೆ: ಸುಳ್ಳು ಪೋಸ್ಟ್ ಹಾಕಿದ್ರೆ ಕೇಸ್ ಬುಕ್; ಕೆಇಎ ಎಚ
ಊರ್ವಶಿ ಚಿತ್ರಮಂದಿರದಿಂದ ‘ಜನ ನಾಯಗನ್’ ಎತ್ತಂಗಡಿ: ವಿಡಿಯೋ ನೋಡಿ
ಊರ್ವಶಿ ಚಿತ್ರಮಂದಿರದಿಂದ ‘ಜನ ನಾಯಗನ್’ ಎತ್ತಂಗಡಿ: ವಿಡಿಯೋ ನೋಡಿ
ರೈತ ದಂಪತಿ ಸಾವು: ಕುಟುಂಬಕ್ಕೆ ಹೆಚ್.ಡಿ. ಕುಮಾರಸ್ವಾಮಿ ಸಾಂತ್ವನ
ರೈತ ದಂಪತಿ ಸಾವು: ಕುಟುಂಬಕ್ಕೆ ಹೆಚ್.ಡಿ. ಕುಮಾರಸ್ವಾಮಿ ಸಾಂತ್ವನ
ಹಿಂಗಾರು ಮಳೆ ಬಗ್ಗೆ ಬಿಗ್ ಅಪ್ಡೇಟ್ ಕೊಟ್ಟ ಹವಾಮಾನ ಇಲಾಖೆ ನಿರ್ದೇಶಕ
ಹಿಂಗಾರು ಮಳೆ ಬಗ್ಗೆ ಬಿಗ್ ಅಪ್ಡೇಟ್ ಕೊಟ್ಟ ಹವಾಮಾನ ಇಲಾಖೆ ನಿರ್ದೇಶಕ
ಆ.13ರಂದು ಕರ್ನಾಟಕ ಬಂದ್​​ ಬಗ್ಗೆ ಹೋಟೆಲ್ ಮಾಲೀಕರ ಸಂಘ ಹೇಳಿದ್ದೇನು?
ಆ.13ರಂದು ಕರ್ನಾಟಕ ಬಂದ್​​ ಬಗ್ಗೆ ಹೋಟೆಲ್ ಮಾಲೀಕರ ಸಂಘ ಹೇಳಿದ್ದೇನು?
ತಮಿಳುನಾಡು ಸಿಎಂ ಬೆಂಗಳೂರಿಗೆ ಬರುವುದು ಬೇಡ ಎಂದ ಡಿಕೆಶಿ, ಕಾರಣ?
ತಮಿಳುನಾಡು ಸಿಎಂ ಬೆಂಗಳೂರಿಗೆ ಬರುವುದು ಬೇಡ ಎಂದ ಡಿಕೆಶಿ, ಕಾರಣ?
ಕಾವೇರಿ ನೀರು ವಿವಾದ: ಡಿಕೆಶಿ ಸರ್ಕಾರಕ್ಕೆ ಕುಮಾರಸ್ವಾಮಿ ಕೊಟ್ಟ ಸಲಹೆ ಏನು?
ಕಾವೇರಿ ನೀರು ವಿವಾದ: ಡಿಕೆಶಿ ಸರ್ಕಾರಕ್ಕೆ ಕುಮಾರಸ್ವಾಮಿ ಕೊಟ್ಟ ಸಲಹೆ ಏನು?
ಗೋಮಾತೆಗೆ ಅದ್ಧೂರಿ ಸೀಮಂತ ಮಾಡಿ ಹೋಳಿಗೆ ಊಟ ಹಾಕಿಸಿದ ರೈತ!
ಗೋಮಾತೆಗೆ ಅದ್ಧೂರಿ ಸೀಮಂತ ಮಾಡಿ ಹೋಳಿಗೆ ಊಟ ಹಾಕಿಸಿದ ರೈತ!