ಸಿಆರ್‌ಪಿಎಫ್‌ ಪರೀಕ್ಷೆಯಲ್ಲಿ ಕನ್ನಡ ನಿರ್ಲಕ್ಷ್ಯ: ಸಿದ್ದರಾಮಯ್ಯ, ಕುಮಾರಸ್ವಾಮಿ ಆಕ್ರೋಶ: ಮರು ಪರೀಕ್ಷೆಗೆ ಆಗ್ರಹ

|

Updated on: Apr 10, 2023 | 2:57 PM

ಕೇಂದ್ರದ ನೇಮಕಾತಿ ಪರೀಕ್ಷೆಗಳಲ್ಲಿ ಭಾಷಾ ತಾರತಮ್ಯ ನಿವಾರಿಸುವಂತೆ ಆಗ್ರಹಿಸಿ ಸಿದ್ದರಾಮಯ್ಯ ಟ್ವೀಟ್​ ಮಾಡಿದ್ದಾರೆ.

ಸಿಆರ್‌ಪಿಎಫ್‌ ಪರೀಕ್ಷೆಯಲ್ಲಿ ಕನ್ನಡ ನಿರ್ಲಕ್ಷ್ಯ: ಸಿದ್ದರಾಮಯ್ಯ, ಕುಮಾರಸ್ವಾಮಿ ಆಕ್ರೋಶ: ಮರು ಪರೀಕ್ಷೆಗೆ ಆಗ್ರಹ
ಹೆಚ್.ಡಿ.ಕುಮಾರಸ್ವಾಮಿ ಮತ್ತು ಸಿದ್ದರಾಮಯ್ಯ
Follow us on

ಬೆಂಗಳೂರು: ಸಿಆರ್‌ಪಿಎಫ್‌ ಪರೀಕ್ಷೆಯಲ್ಲಿ(CRPF Exam) ಕನ್ನಡ ನಿರ್ಲಕ್ಷ್ಯ ಹಿನ್ನೆಲೆ ಮಾಜಿ ಸಿಎಂ ಸಿದ್ದರಾಮಯ್ಯ(Siddaramaiah), ಕುಮಾರಸ್ವಾಮಿ(HD Kumaraswamy) ಮರು ಪರೀಕ್ಷೆಗೆ ಆಗ್ರಹಿಸಿ ಆಕ್ರೋಶ ಹೊರ ಹಾಕಿದ್ದಾರೆ. ಕೇಂದ್ರದ ನೇಮಕಾತಿ ಪರೀಕ್ಷೆಗಳಲ್ಲಿ ಭಾಷಾ ತಾರತಮ್ಯ ನಿವಾರಿಸುವಂತೆ ಆಗ್ರಹಿಸಿ ಸಿದ್ದರಾಮಯ್ಯ ಟ್ವೀಟ್​ ಮಾಡಿದ್ದಾರೆ.

ಭಾಷೆಯೇ ಜ್ಞಾನ ಅಲ್ಲ, ಅದು ಜ್ಞಾನದ ಸಂವಹನ ಸಾಧನ ಅಷ್ಟೆ. ಕನ್ನಡ ಭಾಷೆಯಲ್ಲಿ ಓದಿರುವ ನಮ್ಮ ಯುವಕರಲ್ಲಿ ಉತ್ತಮ ಜ್ಞಾನವಿದೆ. ಭಾಷೆಯ ಸಮಸ್ಯೆಯಿಂದ ಕೇಂದ್ರದ ಪರೀಕ್ಷೆಯಲ್ಲಿ ಫೇಲ್​ ಆಗ್ತಿದ್ದಾರೆ. ಇದರಿಂದ ನಮ್ಮ ಕನ್ನಡಿಗರಿಗೆ ತುಂಬಾ ಅನ್ಯಾಯ ಆಗುತ್ತಿದೆ. ಕೇಂದ್ರೀಯ ಮೀಸಲು ಪೊಲೀಸ್ ಪಡೆಯ ನೇಮಕಾತಿ ಪರೀಕ್ಷೆ ಹಿಂದಿ, ಇಂಗ್ಲಿಷ್​​​​​ ಭಾಷೆಯಲ್ಲಿ ಪರೀಕ್ಷೆ ಬರೆಯುವುದು ಕಡ್ಡಾಯ. ಇದನ್ನ ಸಡಿಲಿಸಿ, ಕನ್ನಡ ಭಾಷೆಯಲ್ಲಿ ಪರೀಕ್ಷೆ ಬರೆಯಲು ಅವಕಾಶ ನೀಡಿ. ಈ ಅನ್ಯಾಯವನ್ನು ಸರಿಪಡಿಸಬೇಕೆಂದು ಪ್ರಧಾನಿ ಮೋದಿಗೆ ಆಗ್ರಹಿಸಿ ತಕ್ಷಣ ಪ್ರಧಾನಿ ಮೋದಿ ಮಧ್ಯಪ್ರವೇಶಿಸಿ ಸಿಆರ್‌ಪಿಎಫ್ ಪರೀಕ್ಷೆಗಳನ್ನು ಕನ್ನಡ ಸೇರಿ ರಾಜ್ಯ ಭಾಷೆಗಳಲ್ಲಿ ಬರೆಯಲು ಅನುಕೂಲ ಮಾಡಿಕೊಡಬೇಕು. ಈ ಬಗ್ಗೆ ಸಿಎಂ ಬೊಮ್ಮಾಯಿ, ರಾಜ್ಯ ಸಂಸದರು ಮೋದಿಗೆ ಒತ್ತಾಯಿಸಬೇಕು ಎಂದು ಟ್ವಿಟರ್​ ಮೂಲಕ ಪ್ರಧಾನಿ ಮೋದಿಗೆ ಮಾಜಿ ಸಿಎಂ ಸಿದ್ದರಾಮಯ್ಯ ಆಗ್ರಹಿಸಿದ್ದಾರೆ.

ಇದನ್ನೂ ಓದಿ: ಕೋಲಾರ: ಚುನಾವಣಾ ಅಧಿಕಾರಿಗಳಿಂದ ಹೆಚ್​ ಡಿ ಕುಮಾರಸ್ವಾಮಿ ಹೆಲಿಕಾಪ್ಟರ್ ತಪಾಸಣೆ

ಕೇಂದ್ರ ಸರಕಾರ ಮತ್ತೆ ಕನ್ನಡಿಗರಿಗೆ ಉಂಡೆನಾಮ ಹಾಕಿದೆ. ಭಾನುವಾರ ನಡೆದ ಕೇಂದ್ರೀಯ ಮೀಸಲು ಪಡೆ (ಸಿಆರ್‌ಪಿಎಫ್‌) ನೇಮಕದ ಕಂಪ್ಯೂಟರ್ ಪರೀಕ್ಷೆಯಲ್ಲಿ ಕನ್ನಡಕ್ಕೆ ಅವಕಾಶವನ್ನೇ ಕೊಟ್ಟಿಲ್ಲ. ಹಿಂದಿ, ಇಂಗ್ಲಿಷ್ ಭಾಷೆಯಲ್ಲಷ್ಟೇ ಪರೀಕ್ಷೆಗೆ ಅವಕಾಶ ಕೊಡಲಾಗಿದೆ. ಇದು ಖಂಡನೀಯ ಎಂದು ಹೆಚ್​ಡಿ ಕುಮಾರಸ್ವಾಮಿ ಕೂಡ ಟ್ವೀಟ್ ಮೂಲಕ ಆಕ್ರೋಶ ಹೊರ ಹಾಕಿದ್ದಾರೆ.

ಮತ್ತಷ್ಟು ಜಿಲ್ಲಾ ಸುದ್ದಿಗಳನ್ನು ಓದಲು ಇದರ ಮೇಲೆ ಕ್ಲಿಕ್ ಮಾಡಿ

Published On - 2:57 pm, Mon, 10 April 23