ಗ್ಯಾಸ್ ಏಜೆನ್ಸಿ ಸಮೀಪದ ಗುಜರಿ ಗೋಡೌನಲ್ಲಿ ಅಗ್ನಿ ಅವಘಡ: ಮೂರು ಬಸ್ಗಳು ಬೆಂಕಿಗಾಹುತಿ
ಗ್ಯಾಸ್ ಏಜೆನ್ಸಿ ಸಮೀಪದ ಸ್ಕ್ರಾಪ್ ಗೋಡೌನಲ್ಲಿ ಅಗ್ನಿ ಅವಘಡ ಸಂಭವಿಸಿದ್ದು, ಗೋಡೌನ್ ನಲ್ಲಿದ್ದ ಮೂರು ಬಸ್ಗಳು ಬೆಂಕಿಗಾಹುತಿ ಆಗಿರುವಂತಹ ಘಟನೆ ಆರ್ಆರ್ ನಗರದ ಐಟಿಐ ಲೇಔಟ್ನ ಇಂಡೆನ್ ಗ್ಯಾಸ್ ಏಜೆನ್ಸಿ ಸಮೀಪ ನಡೆದಿದೆ.
ಬೆಂಗಳೂರು: ಗ್ಯಾಸ್ ಏಜೆನ್ಸಿ ಸಮೀಪದ ಸ್ಕ್ರಾಪ್ ಗೋಡೌನಲ್ಲಿ ಅಗ್ನಿ ಅವಘಡ (Fire breaks out) ಸಂಭವಿಸಿದ್ದು, ಗೋಡೌನ್ ನಲ್ಲಿದ್ದ ಮೂರು ಬಸ್ಗಳು ಬೆಂಕಿಗಾಹುತಿ ಆಗಿರುವಂತಹ ಘಟನೆ ಆರ್ಆರ್ ನಗರದ ಐಟಿಐ ಲೇಔಟ್ನ ಇಂಡೆನ್ ಗ್ಯಾಸ್ ಏಜೆನ್ಸಿ ಸಮೀಪ ನಡೆದಿದೆ. ಅದೃಷ್ಟವಶಾತ್ ಯಾವುದೇ ಪ್ರಾಣಹಾನಿ ಸಂಭವಿಸಿಲ್ಲ. ಬೆಂಕಿ ಅವಘಡಕ್ಕೆ ಕಾರಣ ತಿಳಿದುಬಂದಿಲ್ಲ. ಬೆಂಕಿ ತಗುಲಿ ಇಡೀ ಗೋಡೌನ್ ಧಗ-ಧಗನೆ ಹೊತ್ತಿ ಉರಿದಿದ್ದು, ಅಪಾರ ಮೌಲ್ಯದ ವಸ್ತುಗಳು ಬೆಂಕಿಗಾಹುತಿ ಆಗಿದೆ ಎನ್ನಲಾಗುತ್ತಿದೆ. ಬೆಂಕಿ ಜ್ವಾಲೆ ವ್ಯಾಪಿಸದಂತೆ ಅಗ್ನಿಶಾಮಕ ಸಿಬ್ಬಂದಿಯಿಂದ ಕಾರ್ಯಚರಣೆ ಮಾಡಿ ಬೆಂಕಿ ನಂದಿಸುವಲ್ಲಿ ಯಶಸ್ವಿಯಾಗಿದ್ದಾರೆ.
ಖಾಸಗಿ ಬಸ್ ಬೆಂಕಿಗೆ ಆಹುತಿ, ತಪ್ಪಿದ ದುರಂತ
ಮಂಗಳೂರು: ಕಟೀಲು ದುರ್ಗಾಪರಮೇಶ್ವರಿ ದೇವಸ್ಥಾನದ ಬಳಿ ಒಎಂಪಿಎಲ್ ಸಂಸ್ಥೆಗೆ ಸೇರಿದ ಬಸ್ಸೊಂದು ಬೆಂಕಿ ಹೊತ್ತಿಕೊಂಡು ಕೆಲವೇ ಕ್ಷಣಗಳಲ್ಲಿ ಉರಿದುಹೋದ ಘಟನೆ ಬುಧವಾರ ನಡೆದಿತ್ತು. ಅದೃಷ್ಟವಶಾತ್ ಸಾವು-ನೋವು ಸಂಭವಿಸಿಲ್ಲ. ಮಂಗಳೂರು – ಕಟೀಲು ಮಾರ್ಗದಲ್ಲಿ ಕಾರ್ಯನಿರ್ವಹಿಸುತ್ತಿದ್ದ ಬಸ್ಗೆ ಶಾರ್ಟ್ಸರ್ಕ್ಯೂಟ್ನಿಂದ ಬೆಂಕಿ ಹೊತ್ತಿಕೊಂಡಿತ್ತು. ಇದಾದ ಕೆಲವೇ ಕ್ಷಣಗಳಲ್ಲಿ ಬಸ್ ಸಂಪೂರ್ಣ ಭಸ್ಮವಾಗಿತ್ತು.
ಇದನ್ನೂ ಓದಿ: ಬೆಂಗಳೂರಲ್ಲಿ ಮೊತ್ತೊಂದು ಅಗ್ನಿ ಅವಘಡ: ಐದಾರು ಗುಜರಿ ಗೋಡೌನ್‌ಗಳಿಗೆ ಹೊತ್ತಿಕೊಂಡ ಬೆಂಕಿ
ಮಂಗಳೂರು – ಕಟೀಲು ಮಾರ್ಗದಲ್ಲಿ ಕಾರ್ಯನಿರ್ವಹಿಸುತ್ತಿದ್ದ ಬಸ್ ಕಟೀಲು ದೇಗುಲದ ಬಳಿ ನೌಕರರನ್ನು ಇಳಿಸಿ ವಾಪಸ್ ತೆರಳುತ್ತಿದ್ದಾಗ ಈ ಘಟನೆ ಸಂಭವಿಸಿತ್ತು. ಅದೇ ರಸ್ತೆಯಲ್ಲಿ ಹೋಗುತ್ತಿದ್ದ ಟ್ಯಾಂಕರ್ನಿಂದ ನೀರು ಹಾಕಿ ಬೆಂಕಿ ನಂದಿಸಲು ಯತ್ನಿಸಲಾಯಿತದಾರೂ ಪ್ರಯೋಜನವಾಗಲಿಲ್ಲ.
ಬೆಂಕಿ ಹೊತ್ತಿಕೊಂಡ ಸಮಯದಲ್ಲಿ ಬಸ್ ಚಾಲಕ ಮತ್ತು ಇತರ ಇಬ್ಬರು ವ್ಯಕ್ತಿಗಳು ಮಾತ್ರ ಬಸ್ಸಿನೊಳಗೆ ಇದ್ದರು. ಅದೃಷ್ಟವಶಾತ್ ಅವರೆಲ್ಲರೂ ಯಾವುದೇ ಗಾಯಗಳಿಲ್ಲದೆ ಪಾರಾಗಿದ್ದಾರೆ ಎಂದು ಮೂಲಗಳು ತಿಳಿಸಿವೆ.
ಗೋಧಿ ಜಮೀನಿಗೆ ಬೆಂಕಿ: ಅಪಾರ ಹಾನಿ
ಗದಗ: ಗೋಧಿ ಜಮೀನಿಗೆ ಬೆಂಕಿ ಬಿದ್ದ ಪರಿಣಾಮ ಕಟಾವಿಗೆ ಬಂದಿದ್ದ 3 ಎಕರೆ ಗೋಧಿ ಭಸ್ಮವಾಗಿರುವ ಘಟನೆ ಜಿಲ್ಲೆಯ ನರಗುಂದ ತಾಲೂಕಿನ ರಡ್ಡೆರನಾಗನೂರ ಗ್ರಾಮದಲ್ಲಿ ಇತ್ತೀಚೆಗೆ ನಡೆದಿತ್ತು. ರೈತ ವೆಂಕನಗೌಡ್ರ ಗದ್ದಿಗೌಡ್ರ ಎಂಬುವರಿಗೆ ಸೇರಿದ 3 ಎಕರೆ ಜಮೀನಿಗೆ ವಿದ್ಯುತ್ ಶಾಟ್ ಸರ್ಕಿಟ್ನಿಂದ ಬೆಂಕಿ ತಗುಲಿರುವ ಆರೋಪ ಕೇಳಿ ಬಂದಿತ್ತು.
ಇದನ್ನೂ ಓದಿ: Vijayapura: ಟ್ರ್ಯಾಕ್ಟರ್ ಹಾಗೂ ಕ್ರೂಸರ್ ಮುಖಾಮುಖಿ ಡಿಕ್ಕಿ: ಇಬ್ಬರ ಸಾವು, ಇತರರಿಗೆ ಗಾಯ
ಬೆಂಕಿ ನಂದಿಸಲು ಎಷ್ಟೇ ಪ್ರಯತ್ನ ಪಟ್ಟರು ಪ್ರಯೋಜನವಾಗಲಿಲ್ಲ. ಇದರಿಂದ ಸುಮಾರು 1.50 ಲಕ್ಷ ರೂ. ಮೌಲ್ಯದ 40 ಕ್ವಿಂಟಾಲ್ ನಷ್ಟು ಗೋಧಿ ಸುಟ್ಟು ಹೋಗಿತ್ತು. ರೈತ ಕಂಗಾಲಾಗಿದ್ದು, ಪರಿಹಾರಕ್ಕಾಗಿ ಸರ್ಕಾರಕ್ಕೆ ಒತ್ತಾಯಿಸಲಾಗಿದೆ. ನರಗುಂದ ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿ ಘಟನೆ ನಡೆದಿತ್ತು.
ರಾಜ್ಯದ ಮತ್ತಷ್ಟು ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ.
Published On - 7:13 am, Fri, 19 May 23