2017ರ ಪ್ರಕರಣದಲ್ಲೂ ಕರವೇ ಅಧ್ಯಕ್ಷ ನಾರಾಯಣಗೌಡಗೆ ಜಾಮೀನು ನೀಡಿದ ಕೋರ್ಟ್

| Updated By: ರಮೇಶ್ ಬಿ. ಜವಳಗೇರಾ

Updated on: Jan 10, 2024 | 3:35 PM

2017ರಲ್ಲಿ ಸಾರ್ವಜನಿಕ ಆಸ್ತಿ-ಪಾಸ್ತಿಗೆ ಹಾನಿ ಉಂಟು ಮಾಡಿದ ಪ್ರಕರಣದಲ್ಲಿ ನಾರಾಯಣಗೌಡಗೆ ಕೋರ್ಟ್ ಬಿಗ್ ರಿಲೀಫ್ ನೀಡಿದೆ. ಬೆಂಗಳೂರಿನ 30ನೇ ಎಸಿಎಂಎಂ ನ್ಯಾಯಾಲಯ ನಾರಾಯಣಗೌಡಗೆ ಜಾಮೀನು ನೀಡಿ ಆದೇಶ ಹೊರಡಿಸಿದೆ.

2017ರ ಪ್ರಕರಣದಲ್ಲೂ ಕರವೇ  ಅಧ್ಯಕ್ಷ ನಾರಾಯಣಗೌಡಗೆ ಜಾಮೀನು ನೀಡಿದ ಕೋರ್ಟ್
ಕರವೇ ನಾರಾಯಣಗೌಡ
Follow us on

ಬೆಂಗಳೂರು, (ಜನವರಿ, 10): 2017 ರಲ್ಲಿ ಸಾರ್ವಜನಿಕ ಆಸ್ತಿ ಪಾಸ್ತಿಗೆ ಹಾನಿ ಉಂಟು ಮಾಡಿದ ಪ್ರಕರಣ ಸಂಬಂಧ ಬಂಧನಕ್ಕೊಳಗಾಗಿರುವ ಕರವೇ (KaRaVe) ಅಧ್ಯಕ್ಷ ನಾರಾಯಣಗೌಡ (Narayana Gowda) ಅವರಿಗೆ ಜಾಮೀನು ಸಿಕ್ಕಿದೆ. ಬೆಂಗಳೂರಿನ 30ನೇ ಎಸಿಎಂಎಂ ನ್ಯಾಯಾಲಯ ಇಂದು(ಜನವರಿ 10)​ ಷರತ್ತು ಬದ್ಧ ಜಾಮೀನು ನೀಡಿ ಆದೇಶ ಹೊರಡಿಸಿದೆ. ಇಬ್ಬರು ವ್ಯಕ್ತಿಗಳ ಶ್ಯೂರಿಟಿ, ಪೊಲೀಸ್ ತನಿಖೆಗೆ ಸಹಕರಿಸಬೇಕು. ನ್ಯಾಯಾಲಯದ ವಿಚಾರಣೆಗೆ ಹಾಜರಾಗಬೇಕು ಎಂದು ಷರತ್ತು ವಿಧಿಸಿ ಜಾಮೀನು ನೀಡಿದೆ.

ಇತ್ತೀಚೆಗೆ ನಾಮಫಲಕ ಧ್ವಂಸ ಪ್ರಕರಣದಲ್ಲಿ ಜೈಲು ಸೇರಿದ್ದ ನಾರಾಯಣಗೌಡ ಅವರು ಜಾಮೀನಿನ ಮೇಲೆ ಜೈಲಿನಿಂದ ಬಿಡುಗಡೆಯಾಗುತ್ತಿದ್ದಂತೆ 2017ರ ಹಳೇ ಕೇಸ್​ ಮೇಲೆ ಬಂಧಿಸಿದ್ದರು. 2017 ರಲ್ಲಿ ಸಾರ್ವಜನಿಕ ಆಸ್ತಿ ಪಾಸ್ತಿಗೆ ಹಾನಿ ಉಂಟು ಮಾಡಿದ ಪ್ರಕರಣ ಸಂಬಂಧ ನಾರಾಯಣಗೌಡ ಅವರನ್ನು ನಿನ್ನೆ(ಜನವರಿ 09) ಕುಮಾರಸ್ವಾಮಿ ಲೇಔಟ್ ಪೊಲೀಸರು ಬಂಧಿಸಿದ್ದರು. ಇನ್ನು ನಾರಾಯಣಗೌಡ ಅವರ ಜಾಮೀನು ಅರ್ಜಿಯನ್ನು ವಿಚಾರಣೆ ನಡೆಸಿದ್ದ ಬೆಂಗಳೂರಿನ 30ನೇ ಎಸಿಎಂಎಂ ನ್ಯಾಯಾಲಯ ಇಂದಿಗೆ ತೀರ್ಪು ಕಾಯ್ದಿರಿಸಿತ್ತು.

ಇದನ್ನೂ ಓದಿ: ಬೆಳಗ್ಗೆ ಬಿಡುಗಡೆ ಸಂಜೆ ಹೊತ್ತಿಗೆ ಮತ್ತೆ ಪರಪ್ಪನ ಅಗ್ರಹಾರ ಜೈಲು ಪಾಲಾದ ನಾರಾಯಣಗೌಡ

ಪ್ರಕರಣದ ಹಿನ್ನೆಲೆ

2017ರಲ್ಲಿ ಸಾರ್ವಜನಿಕ ಆಸ್ತಿಪಾಸ್ತಿಗಳಿಗೆ ಹಾನಿ ಮಾಡಿದ ಹಿನ್ನೆಲೆಯಲ್ಲಿ ಕುಮಾರಸ್ವಾಮಿ‌ ಲೇಔಟ್ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿತ್ತು.  ಪ್ರಕರಣಕ್ಕೆ ವಿಚಾರಣಗೆ ನ್ಯಾಯಾಲಯಕ್ಕೆ ಹಾಜರಾಗದ ಹಿನ್ನೆಲೆ ವಾರಂಟ್ ಜಾರಿಯಾಗಿತ್ತು. ಹೀಗಾಗಿ ಕುಮಾರಸ್ವಾಮಿ‌ ಲೇಔಟ್ ಪೊಲೀಸ್ ಠಾಣೆ ಪೊಲೀಸರು ಬಂಧಿಸಿದ್ದರು.

ರಾಜ್ಯದ ಮತ್ತಷ್ಟು ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

Published On - 3:17 pm, Wed, 10 January 24