ಬೆಂಗಳೂರು: ಜಮ್ಮು ಕಾಶ್ಮೀರದ ಕಾರ್ಗಿಲ್ನಲ್ಲಿ ನಡೆದ ಯುದ್ದದಲ್ಲಿ ಪಾಕಿಸ್ತಾನವನ್ನು ಭಾರತದ ವೀರ ಯೋಧರು ಸದೆ ಬಡಿದು, ಅವರು ಆಕ್ರಮಿಸಿಕೊಂಡಿದ್ದ ಜಾಗವನ್ನು ವಶಕ್ಕೆ ಪಡೆಯುವಲ್ಲಿ ಯಶಸ್ವಿಯಾದ ದಿನವೇ ಕಾರ್ಗಿಲ್ ವಿಜಯ ದಿವಸ(Kargil Vijay Diwas). ಭಾರತೀಯರ ಪಾಲಿಗೆ ಅವಿಸ್ಮರಣೀಯ ದಿನ. ಕಾರ್ಗಿಲ್ ಯುದ್ಧದಲ್ಲಿ ಭಾರತ ವಿಜಯ ಪತಾಕೆಯನ್ನು ಹಾರಿಸಿ 22 ವರ್ಷ (22 Years) ತುಂಬುತ್ತಿದೆ. ಈ ಹಿನ್ನೆಲೆಯಲ್ಲಿ ಬೆಂಗಳೂರಿನ ಸೈನಿಕ ಸ್ಮಾರಕ ಭವನದಲ್ಲಿ ಕಾರ್ಯಕ್ರಮ ಆಯೋಜನೆ ಮಾಡಲಾಗಿದೆ.
ಕಾರ್ಯಕ್ರಮದಲ್ಲಿ ಸಿಎಂ ಬಿ.ಎಸ್.ಯಡಿಯೂರಪ್ಪ ಸೈನಿಕ ಸ್ಮಾರಕಕ್ಕೆ ಪುಷ್ಪ ನಮನ ಸಲ್ಲಿಸಿ. ಹುತಾತ್ಮ ಯೋಧರಿಗೆ ಗೌರವ ಸಮರ್ಪಿಸಿದರು. ಸಿಎಂ ಬಿಎಸ್‌ವೈ ಜೊತೆ ಗೃಹ ಸಚಿವ ಬಸವರಾಜ ಬೊಮ್ಮಾಯಿ, ವಿಧಾನ ಪರಿಷತ್ ಸದಸ್ಯ ಲೆಹರ್ ಸಿಂಗ್, ಬಿಜೆಪಿ ರಾಜ್ಯ ಮುಖ್ಯ ವಕ್ತಾರ ಕ್ಯಾ. ಗಣೇಶ್ ಕಾರ್ಣಿಕ್ ಸೇರಿದಂತೆ ಹಲವರು ಭಾಗಿಯಾಗಿದ್ದರು.
ಕಾರ್ಯಕ್ರಮದಲ್ಲಿ ಮಾತನಾಡಿದ ಬಿ.ಎಸ್.ಯಡಿಯೂರಪ್ಪ, 22ನೇ ಕಾರ್ಗಿಲ್ ವಿಜಯ್ ದಿನದಲ್ಲಿ ಭಾಗಿಯಾಗಿದ್ದಕ್ಕೆ ಖುಷಿಯಾಗಿದೆ. ಯುದ್ಧದಲ್ಲಿ ನಮ್ಮ ಯೋಧರು ದಿಟ್ಟ ಪ್ರತ್ಯುತ್ತರ ನೀಡಿದ್ದರು. ಹುತಾತ್ಮ ಯೋಧರನ್ನು ಸ್ಮರಿಸುವುದು ನಮ್ಮ ಕರ್ತವ್ಯ. ಕೊರೆಯುವ ಚಳಿಯಲ್ಲೂ ಶತ್ರುಸೇನೆ ಹಿಮ್ಮೆಟ್ಟಿಸಿದ್ದರು. ಯೋಧರ ಜೊತೆಗೆ ನಾವು ಎಂದೆಂದಿಗೂ ಇರುತ್ತೇವೆ ಎಂದು ಬೆಂಗಳೂರಿನಲ್ಲಿ ಸಿಎಂ ಬಿ.ಎಸ್.ಯಡಿಯೂರಪ್ಪ ಹೇಳಿದರು.
ಜೊತೆಗೆ ದಿ ಸಗಾ ಆಫ್ ಏ ಬ್ರೇವ್ ಹಾರ್ಟ್ ಪುಸ್ತಕ ಬಿಡುಗಡೆ ಮಾಡಿದರು. ಶಕುಂತಲಾ ಭಂಡಾರ್ಕರ್ ಬರೆದಿರುವ ಲೆ. ಕರ್ನಲ್ ಅಜಿತ್ ವಿ.ಭಂಡಾರ್ಕರ್ ಜೀವನ ಚರಿತ್ರೆ ಪುಸ್ತಕ ಇದಾಗಿದೆ.
ಇದನ್ನೂ ಓದಿ: Kargil Vijay Diwas: ಕಾರ್ಗಿಲ್ ಯುದ್ಧದ ಗೆಲುವಿಗೆ 22 ವರ್ಷ; ಭಾರತದ ಧೀರ ಯೋಧರ ಸಾಹಸಗಾಥೆಯ ಕಿರು ಪರಿಚಯ ಇಲ್ಲಿದೆ