AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ದ್ವಿತೀಯ ಪಿಯುಸಿ ಪರೀಕ್ಷೆ ಫಲಿತಾಂಶದಲ್ಲಿ ಮಹಾ ಎಡವಟ್ಟು! 600ಕ್ಕೆ 683 ಅಂಕ ನೀಡಿದ ಬೋರ್ಡ್​!

ಕರ್ನಾಟಕ ದ್ವಿತೀಯ ಪಿಯುಸಿ ಫಲಿತಾಂಶದಲ್ಲಿ ಗಂಭೀರ ಲೋಪ ಕಂಡುಬಂದಿದೆ. 600 ಅಂಕಗಳ ಪರೀಕ್ಷೆಗೆ ಕೆಲ ವಿದ್ಯಾರ್ಥಿಗಳಿಗೆ 683 ಅಂಕಗಳನ್ನು ನೀಡಲಾಗಿದೆ. ಅಧಿಕೃತ ವೆಬ್‌ಸೈಟ್‌ನಲ್ಲಿಯೇ ಈ ಎಡವಟ್ಟಾಗಿದ್ದು, ತಾಂತ್ರಿಕ ದೋಷವೇ ಇದಕ್ಕೆ ಕಾರಣವಾಗಿದೆ ಎನ್ನಲಾಗಿದೆ. ಬೋರ್ಡ್​ನ ಈ ಅಚಾತುರ್ಯದಿಂದ ವಿದ್ಯಾರ್ಥಿಗಳು ಮತ್ತು ಪಾಲಕರಲ್ಲಿ ಗೊಂದಲ ಸೃಷ್ಟಿಯಾಗಿದೆ.

ದ್ವಿತೀಯ ಪಿಯುಸಿ ಪರೀಕ್ಷೆ ಫಲಿತಾಂಶದಲ್ಲಿ ಮಹಾ ಎಡವಟ್ಟು! 600ಕ್ಕೆ 683 ಅಂಕ ನೀಡಿದ ಬೋರ್ಡ್​!
ದ್ವಿತೀಯ ಪಿಯುಸಿ ಪರೀಕ್ಷೆ ಫಲಿತಾಂಶದಲ್ಲಿ ಮಹಾ ಎಡವಟ್ಟು! 600ಕ್ಕೆ 683 ಅಂಕ ನೀಡಿದ ಬೋರ್ಡ್​! Image Credit source: google Gemini
Vinay Kashappanavar
| Edited By: |

Updated on:Apr 10, 2026 | 2:55 PM

Share

ಬೆಂಗಳೂರು, ಏಪ್ರಿಲ್ 10: ಗುರುವಾರ ದ್ವಿತೀಯ ಪಿಯುಸಿ ಪರೀಕ್ಷೆಯ ಫಲಿತಾಂಶ (2nd PUC result) ಪ್ರಕಟವಾಗಿದೆ. ಹಲವಾರು ವಿದ್ಯಾರ್ಥಿಗಳು ಉತ್ತಮ ಸಾಧನೆ ಮಾಡಿದ್ದಾರೆ. 600ಕ್ಕೆ 600 ಅಂಕವನ್ನೂ ಪಡೆದವರಿದ್ದಾರೆ. ಆದರೆ ಕರ್ನಾಟಕ ಸರ್ಕಾರದ ಅಧಿಕೃತ ಫಲಿತಾಂಶ ವೆಬ್‌ಸೈಟ್‌ನಲ್ಲಿ ಪ್ರಕಟವಾದ ಅಂಕಪಟ್ಟಿಯಲ್ಲಿಯೇ ಗಂಭೀರ ಲೋಪವೊಂದು ಕಂಡುಬಂದಿದೆ. 600 ಅಂಕಗಳ ಪರೀಕ್ಷೆಗೆ 683 ಅಂಕಗಳನ್ನು ನೀಡಿದ ಬೋರ್ಡ್​ನ ಎಡವಟ್ಟು ಬೆಳಕಿಗೆ ಬಂದಿದೆ.

ಆರೂ ವಿಷಯಗಳಲ್ಲೂ 100ಕ್ಕೂ ಹೆಚ್ಚು ಅಂಕ!

ಕಳೆದ ವರ್ಷದ ದ್ವಿತೀಯ ಪಿಯುಸಿ ಪರೀಕ್ಷೆಯಲ್ಲಿ ಅನುತ್ತೀರ್ಣರಾಗಿದ್ದ ಕೆಲ ವಿದ್ಯಾರ್ಥಿಗಳು ಈ ವರ್ಷ ಮರು ಪರೀಕ್ಷೆ ಬರೆದಿದ್ದರು. ಈ ವಿದ್ಯಾರ್ಥಿಗಳ ಫಲಿತಾಂಶವೂ ನಿನ್ನೆ ಪ್ರಕಟವಾಗಿದ್ದು, ಅಧಿಕೃತ ವೆಬ್‌ಸೈಟ್‌ನಲ್ಲಿಯೇ ಈ ರೀತಿಯ ಎಡವಟ್ಟು ನಡೆದಿರುವುದು ಮುಜುಗರ ತಂದಿದೆ. ಕೆಲ ವಿದ್ಯಾರ್ಥಿಗಳಿಗೆ ಆರು ವಿಷಯಗಳಲ್ಲೂ 100ಕ್ಕೂ ಹೆಚ್ಚು ಅಂಕಗಳನ್ನು ನೀಡಲಾಗಿದೆ ಎಂದು ತಿಳಿದುಬಂದಿದೆ.

ಇದನ್ನೂ ಓದಿ ತಾಯಿ ಸತ್ತ ನೋವಲ್ಲೂ ಪರೀಕ್ಷೆ ಬರೆದ ವಿದ್ಯಾರ್ಥಿ ಈಗ ಟಾಪರ್! ಸಾಧನೆಗೆ ಅಮ್ಮನ ಮಾತುಗಳೇ ಸ್ಪೂರ್ತಿಯಾಗಿದ್ದು ಹೇಗೆ?

ಡಿಜಿ ಲಾಕರ್​ನಲ್ಲಿ ಸರಿಯಾಗೇ ಇದೆ ರಿಸಲ್ಟ್!

Karresults.nic.in ವೆಬ್​ಸೈಟ್​ನಲ್ಲಿ ಪ್ರಕಟವಾದ ಫಲಿತಾಂಶದಲ್ಲಿ ಮಾತ್ರ ಈ ಲೋಪ ಕಾಣಿಸಿದೆ. ಆದರೆ ಡಿಜಿ ಲಾಕರ್‌ನಲ್ಲಿ ಲಭ್ಯವಿರುವ ಅದೇ ವಿದ್ಯಾರ್ಥಿಗಳ ಅಧಿಕೃತ ಅಂಕಪಟ್ಟಿಯಲ್ಲಿ ಅಂಕಗಳು ಸರಿಯಾಗಿರುವುದು ಗಮನಾರ್ಹವಾಗಿದೆ. ಇದರಿಂದ ವೆಬ್‌ಸೈಟ್ ಡೇಟಾ ಅಪ್‌ಲೋಡ್ ವೇಳೆ ತಾಂತ್ರಿಕ ದೋಷ ಸಂಭವಿಸಿರುವ ಸಾಧ್ಯತೆ ವ್ಯಕ್ತವಾಗಿದೆ. ಈ ಎಡವಟ್ಟಿನಿಂದ ವಿದ್ಯಾರ್ಥಿಗಳು ಮತ್ತು ಪೋಷಕರಲ್ಲಿ ಆತಂಕ ಮೂಡಿದ್ದು, ಫಲಿತಾಂಶದ ನಿಖರತೆ ಬಗ್ಗೆ ಅನುಮಾನಗಳು ವ್ಯಕ್ತವಾಗಿವೆ.

ಕರ್ನಾಟಕದ ಮತ್ತಷ್ಟು ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

Published On - 1:42 pm, Fri, 10 April 26

Follow Us
ರಾಜ್ಯಸಭಾ ಸದಸ್ಯರಾಗಿ ಪ್ರಮಾಣವಚನ ಸ್ವೀಕರಿಸಿದ ಬಿಹಾರ ಸಿಎಂ ನಿತೀಶ್ ಕುಮಾರ್
ರಾಜ್ಯಸಭಾ ಸದಸ್ಯರಾಗಿ ಪ್ರಮಾಣವಚನ ಸ್ವೀಕರಿಸಿದ ಬಿಹಾರ ಸಿಎಂ ನಿತೀಶ್ ಕುಮಾರ್
ಪಡಿಕ್ಕಲ್, ಕೊಹ್ಲಿ ಬಾಲ್ಯದಲ್ಲಿ ಹೇಗಿದ್ರು ನೋಡಿ
ಪಡಿಕ್ಕಲ್, ಕೊಹ್ಲಿ ಬಾಲ್ಯದಲ್ಲಿ ಹೇಗಿದ್ರು ನೋಡಿ
'ಝೋಂಬಿ ಡ್ರಗ್ಸ್​ ಎನ್ನುವುದು ಏನೂ ಇಲ್ಲ': ಗೃಹ ಸಚಿವ ಪರಮೇಶ್ವರ್
'ಝೋಂಬಿ ಡ್ರಗ್ಸ್​ ಎನ್ನುವುದು ಏನೂ ಇಲ್ಲ': ಗೃಹ ಸಚಿವ ಪರಮೇಶ್ವರ್
ನಾಪತ್ತೆಯಾದ ಬಾಲಕಿಯ ಕಿಡ್ನ್ಯಾಪ್ ಶಂಕೆ ವ್ಯಕ್ತಪಡಿಸಿದ ಜಿ. ಪರಮೇಶ್ವರ್!
ನಾಪತ್ತೆಯಾದ ಬಾಲಕಿಯ ಕಿಡ್ನ್ಯಾಪ್ ಶಂಕೆ ವ್ಯಕ್ತಪಡಿಸಿದ ಜಿ. ಪರಮೇಶ್ವರ್!
ದೇವರಿಗೆ ಕೈ ಮುಗಿದು, ಕುಂಕುಮ ಹಚ್ಚಿಕೊಂಡು ಹುಂಡಿ ಹಣ ಕದ್ದ ಕಳ್ಳ!
ದೇವರಿಗೆ ಕೈ ಮುಗಿದು, ಕುಂಕುಮ ಹಚ್ಚಿಕೊಂಡು ಹುಂಡಿ ಹಣ ಕದ್ದ ಕಳ್ಳ!
ಎಲೆಕ್ಟ್ರಾನಿಕ್ ಸಿಟಿಯ ನೀಲಾದ್ರಿ ರಸ್ತೆಯಲ್ಲಿ ಸಂಚರಿಸುವುದು ನರಕಯಾತನೆ
ಎಲೆಕ್ಟ್ರಾನಿಕ್ ಸಿಟಿಯ ನೀಲಾದ್ರಿ ರಸ್ತೆಯಲ್ಲಿ ಸಂಚರಿಸುವುದು ನರಕಯಾತನೆ
ಚಿಕ್ಕಮಗಳೂರಲ್ಲಿ ಬಾಲಕಿ ನಾಪತ್ತೆ ಕೇಸ್​: 3 ದಿನ ಕಳೆದರೂ ಸಿಕ್ಕಿಲ್ಲ ಸುಳಿವು
ಚಿಕ್ಕಮಗಳೂರಲ್ಲಿ ಬಾಲಕಿ ನಾಪತ್ತೆ ಕೇಸ್​: 3 ದಿನ ಕಳೆದರೂ ಸಿಕ್ಕಿಲ್ಲ ಸುಳಿವು
ಫಾಸ್ಟ್‌ಟ್ಯಾಗಲ್ಲಿ ಹಣವಿಲ್ಲದ್ದಕ್ಕೆ ಹಿಗ್ಗಾಮುಗ್ಗಾ ಥಳಿತ! ವಿಡಿಯೋ ವೈರಲ್
ಫಾಸ್ಟ್‌ಟ್ಯಾಗಲ್ಲಿ ಹಣವಿಲ್ಲದ್ದಕ್ಕೆ ಹಿಗ್ಗಾಮುಗ್ಗಾ ಥಳಿತ! ವಿಡಿಯೋ ವೈರಲ್
ಬೆಂಗಳೂರು: ಹಾಡಹಗಲೇ ಸುಜುಕಿ ಆಕ್ಸೆಸ್ ಹೊತ್ತೊಯ್ದ ಖದೀಮ!
ಬೆಂಗಳೂರು: ಹಾಡಹಗಲೇ ಸುಜುಕಿ ಆಕ್ಸೆಸ್ ಹೊತ್ತೊಯ್ದ ಖದೀಮ!
ಸಂಪರ್ಕ ಕ್ರಾಂತಿ ರೈಲಿನಲ್ಲಿ ಗಾಂಜಾ ಸೇವನೆ: ಯುವಕರ ದರ್ಬಾರ್ ವಿಡಿಯೋ ವೈರಲ್!
ಸಂಪರ್ಕ ಕ್ರಾಂತಿ ರೈಲಿನಲ್ಲಿ ಗಾಂಜಾ ಸೇವನೆ: ಯುವಕರ ದರ್ಬಾರ್ ವಿಡಿಯೋ ವೈರಲ್!