AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

Karnataka 2nd PUC Result 2026: ದ್ವಿತೀಯ ಪಿಯುಸಿ ಫಲಿತಾಂಶ ಪ್ರಕಟಕ್ಕೆ ಇಂದೇ ಮುಹೂರ್ತ ನಿಗದಿ

ಕರ್ನಾಟಕ ದ್ವಿತೀಯ ಪಿಯುಸಿ ಫಲಿತಾಂಶ 2026: ದ್ವಿತೀಯ ಪಿಯುಸಿ ಫಲಿತಾಂಶ ಪ್ರಕಟಣೆ ವಿಚಾರವಾಗಿ ಮಹತ್ವದ ಮಾಹಿತಿ ಲಭಿಸಿದೆ. ಏಪ್ರಿಲ್​​ 7 ರಿಸಲ್ಟ್​​ ಬರಬಹುದೆಂಬ ನಿರೀಕ್ಷೆ ಇತ್ತಾದರೂ ಕೆಲ ಕಾರಣಗಳಿಂದ ಫಲಿತಾಂಶ ವಿಳಂಬವಾಗಿದೆ. ಆದರೆ ಕರ್ನಾಟಕ ಶಾಲಾ ಪರೀಕ್ಷೆ ಮತ್ತು ಮೌಲ್ಯನಿರ್ಣಯ ಮಂಡಳಿ (KSEAB) ಅಧಿಕಾರಿಗಳ ಪ್ರಕಾರ ಇಂದೇ ಫಲಿತಾಂಶ ಪ್ರಕಟವಾಗಲಿದೆ.

Karnataka 2nd PUC Result 2026: ದ್ವಿತೀಯ ಪಿಯುಸಿ ಫಲಿತಾಂಶ ಪ್ರಕಟಕ್ಕೆ ಇಂದೇ ಮುಹೂರ್ತ ನಿಗದಿ
ಸಾಂದರ್ಭಿಕ ಚಿತ್ರImage Credit source: Tv9 Kannada
ಪ್ರಸನ್ನ ಹೆಗಡೆ
| Edited By: |

Updated on:Apr 09, 2026 | 6:27 AM

Share

ಬೆಂಗಳೂರು, ಏಪ್ರಿಲ್​​ 07: 2026ನೇ ಸಾಲಿನ ದ್ವಿತೀಯ ಪಿಯುಸಿ ಪರೀಕ್ಷೆಯ ಫಲಿತಾಂಶ ಏಪ್ರಿಲ್​​ 07 ರಂದು ಪ್ರಕಟವಾಗಬಹುದೆಂದು ನಿರೀಕ್ಷಿಸಲಾಗಿತ್ತು. ಆದರೆ ಕರ್ನಾಟಕ ಶಾಲಾ ಪರೀಕ್ಷೆ ಮತ್ತು ಮೌಲ್ಯನಿರ್ಣಯ ಮಂಡಳಿ (KSEAB) ಫಲಿತಾಂಶ ಪ್ರಕಟಿಸಲು ಸಿದ್ಧತೆ ಮಾಡಿಕೊಂಡಿದ್ದರೂ, ತಾಂತ್ರಿಕ ಕಾರಣಗಳಿಂದಾಗಿ ಪ್ರಕಟಣೆಯನ್ನು ಮುಂದೂಡಲಾಗಿರುವ ಬಗ್ಗೆ ಮಾಹಿತಿ ಸಿಕ್ಕ ಕಾರಣ, ಫಲಿತಾಂಶದ ನಿರೀಕ್ಷೆಯಲ್ಲಿದ್ದ ಲಕ್ಷಾಂತರ ವಿದ್ಯಾರ್ಥಿಗಳು ನಿರಾಸೆಗೊಂಡಿದ್ದರು. ಈ ನಡುವೆ ಮಹತ್ವದ ಮಾಹಿತಿ ಲಭ್ಯವಾಗಿದ್ದು, ಏಪ್ರಿಲ್ 9ರಂದು ದ್ವಿತೀಯ ಪಿಯಸಿ ಪರೀಕ್ಷೆ ಫಲಿತಾಂಶ ಪ್ರಕಟವಾಗಲಿದೆ.

ಫೆಬ್ರವರಿ 28 ರಿಂದ ಮಾರ್ಚ್ 17ರ ವರೆಗೆ ದ್ವಿತೀಯ ಪಿಯುಸಿ ಪರೀಕ್ಷೆ ರಾಜ್ಯದಲ್ಲಿ ನಡೆದಿದ್ದು, 7,10,363ಕ್ಕೂ ಹೆಚ್ಚು ವಿದ್ಯಾರ್ಥಿಗಳು ಎಕ್ಸಾಂ ಬರೆದಿದ್ದಾರೆ. ಇಲ್ಲಿಯವರೆಗೆ ಇದ್ದ ಮಾಹಿತಿಯ ಪ್ರಕಾರ ಏಪ್ರಿಲ್ 7ರಂದು ಅಂದರೆ ಇಂದೇ ದ್ವಿತೀಯ ಪಿಯುಸಿ ಫಲಿತಾಂಶ ಪ್ರಕಟವಾಗುವ ಸಾಧ್ಯತೆ ಇದೆ ಎಂದು ಹೇಳಲಾಗುತ್ತಿತ್ತು. ಆದರೆ ಅಧಿಕೃತ ಪ್ರಕಟಣೆ ಹೊರಬಾರದ ಕಾರಣ ಅನಿಶ್ಚಿತತೆ ಉಂಟಾದ ಪರಿಣಾಮ ವಿದ್ಯಾರ್ಥಿಗಳಲ್ಲಿಯೂ ಗೊಂದಲ ಮೂಡಿತ್ತು. ಇನ್ನು ಪ್ರಕಟವಾಗಲಿರುವ ಫಲಿತಾಂಶ ಆನ್‌ಲೈನ್‌ನಲ್ಲಿ ಲಭ್ಯವಾಗಲಿದ್ದು, ವಿದ್ಯಾರ್ಥಿಗಳು ತಮ್ಮ ನೋಂದಣಿ ಸಂಖ್ಯೆ (Registration Number) ಮತ್ತು ಜನ್ಮ ದಿನಾಂಕ (Date of Birth) ನಮೂದಿಸಿ ಮಾರ್ಕ್ಸ್ ಅನ್ನು ಪರಿಶೀಲಿಸಬಹುದಾಗಿದೆ.

ಇದನ್ನೂ ಓದಿ: ಕರ್ನಾಟಕ ದ್ವಿತೀಯ ಪಿಯುಸಿ ಫಲಿತಾಂಶ ವಿಳಂಬ ಯಾಕೆ ಗೊತ್ತೇ? ಅಸಲಿ ಕಾರಣ ಬಹಿರಂಗ!

ರಾಜ್ಯದಲ್ಲಿ ದಾವಣಗೆರೆ ದಕ್ಷಿಣ ಮತ್ತು ಬಾಗಲಕೋಟೆ ವಿಧಾನಸಭಾ ಕ್ಷೇತ್ರಗಳ ಉಪಚುನಾವಣೆ ನಡೆಯುತ್ತಿದ್ದು, ಏಪ್ರಿಲ್ 9ರಂದು ಮತದಾನ ನಿಗದಿಯಾಗಿದೆ. ಈ ಹಿನ್ನೆಲೆಯಲ್ಲಿ ರಾಜ್ಯದ ಕೆಲವು ಭಾಗಗಳಲ್ಲಿ ಚುನಾವಣಾ ನೀತಿ ಸಂಹಿತೆ ಜಾರಿಯಲ್ಲಿರುವ ಕಾರಣ ಫಲಿತಾಂಶವನ್ನು ಶಿಕ್ಷಣ ಸಚಿವರ ಉಪಸ್ಥಿತಿಯಲ್ಲಿ ಸುದ್ದಿಗೋಷ್ಠಿ ನಡೆಸಿ ಪ್ರಕಟಿಸಲು ಕೆಲ ಅಡ್ಡಿಗಳಿವೆ. ನೀತಿ ಸಂಹಿತೆ ಇರುವುದರಿಂದ ಸಚಿವರು ಅಧಿಕೃತವಾಗಿ ಫಲಿತಾಂಶ ಪ್ರಕಟಿಸಲು ಚುನಾವಣಾ ಆಯೋಗದಿಂದ ಅನುಮತಿ ಪಡೆಯಬೇಕಿರುವ ಕಾರಣ ಫಲಿತಾಂಶ ಪ್ರಕಟ ವಿಳಂಬವಾಗಿದೆ.

ಮತ್ತಷ್ಟು ಸುದ್ದಿ ಓದಲು ಇಲ್ಲಿ ಕ್ಲಿಕ್​​ ಮಾಡಿ.

Published On - 12:36 pm, Tue, 7 April 26

Follow Us
ಮೇ 4ಕ್ಕೆ ಪ್ರಮಾಣವಚನಕ್ಕೆ ಬರುವೆ, ಬಂಗಾಳದಲ್ಲಿ ಮೋದಿ ವಿಜಯಘೋಷ
ಮೇ 4ಕ್ಕೆ ಪ್ರಮಾಣವಚನಕ್ಕೆ ಬರುವೆ, ಬಂಗಾಳದಲ್ಲಿ ಮೋದಿ ವಿಜಯಘೋಷ
ರಕ್ಷಿತಾ-ಧ್ರುವಂತ್ ಮಧ್ಯೆ ಎಷ್ಟು ಒಳ್ಳೆಯ ಬಾಂಧವ್ಯ ಇದೆ ನೋಡಿ
ರಕ್ಷಿತಾ-ಧ್ರುವಂತ್ ಮಧ್ಯೆ ಎಷ್ಟು ಒಳ್ಳೆಯ ಬಾಂಧವ್ಯ ಇದೆ ನೋಡಿ
ರಾಜಕುಮಾರ್ ಸ್ಮಾರಕದ ಬಳಿ ಫ್ಲೆಕ್ಸ್ ಗೋಡೌನ್‌ನಲ್ಲಿ ಭೀಕರ ಅಗ್ನಿ ಅವಘಡ
ರಾಜಕುಮಾರ್ ಸ್ಮಾರಕದ ಬಳಿ ಫ್ಲೆಕ್ಸ್ ಗೋಡೌನ್‌ನಲ್ಲಿ ಭೀಕರ ಅಗ್ನಿ ಅವಘಡ
ಅಕ್ರಮದ ವಿರುದ್ಧ ಲೋಕಾಯುಕ್ತಕ್ಕೆ ದೂರು ನೀಡಿದ್ದ ಮಹಿಳೆಗೇ ಬಿಗ್ ಶಾಕ್!
ಅಕ್ರಮದ ವಿರುದ್ಧ ಲೋಕಾಯುಕ್ತಕ್ಕೆ ದೂರು ನೀಡಿದ್ದ ಮಹಿಳೆಗೇ ಬಿಗ್ ಶಾಕ್!
ಜರ್ಮನ್ ಒಪೆರಾ ಹಾಡಿದ ಸರೆಗಮಪ ಸ್ಪರ್ಧಿ; ಜಡ್ಜ್​​ಗಳೇ ಶಾಕ್ 
ಜರ್ಮನ್ ಒಪೆರಾ ಹಾಡಿದ ಸರೆಗಮಪ ಸ್ಪರ್ಧಿ; ಜಡ್ಜ್​​ಗಳೇ ಶಾಕ್ 
SSLC ಫಲಿತಾಂಶದ ವೇಳೆ ಯಡವಟ್ಟು: 92ರ ಬದಲು ವಿದ್ಯಾರ್ಥಿಗೆ ಬಂದಿದ್ದು 48 ಅಂಕ
SSLC ಫಲಿತಾಂಶದ ವೇಳೆ ಯಡವಟ್ಟು: 92ರ ಬದಲು ವಿದ್ಯಾರ್ಥಿಗೆ ಬಂದಿದ್ದು 48 ಅಂಕ
ಬ್ಲಡ್ ಬ್ಯಾಂಕ್​ಗಳಿಗೂ ತಟ್ಟಿದ ಬಿಸಿಲಿನ ಬೇಗೆ: ರಕ್ತ ಸಿಗದೇ ರೋಗಿಗಳ ಪರದಾಟ
ಬ್ಲಡ್ ಬ್ಯಾಂಕ್​ಗಳಿಗೂ ತಟ್ಟಿದ ಬಿಸಿಲಿನ ಬೇಗೆ: ರಕ್ತ ಸಿಗದೇ ರೋಗಿಗಳ ಪರದಾಟ
ಕೊಪ್ಪಳದಲ್ಲಿ ನಿಲ್ಲದ ಅನ್ನಭಾಗ್ಯ ಅಕ್ಕಿ ಅಕ್ರಮ ಸಾಗಾಟ ದಂಧೆ
ಕೊಪ್ಪಳದಲ್ಲಿ ನಿಲ್ಲದ ಅನ್ನಭಾಗ್ಯ ಅಕ್ಕಿ ಅಕ್ರಮ ಸಾಗಾಟ ದಂಧೆ
ಬೆಳ್ಳಂಬೆಳಗ್ಗೆ ಸಫಾರಿ ತೆರಳಿದವರಿಗೆ ದರ್ಶನ ಕೊಟ್ಟ ಅಪರೂಪದ ಕರಿಚಿರತೆ!
ಬೆಳ್ಳಂಬೆಳಗ್ಗೆ ಸಫಾರಿ ತೆರಳಿದವರಿಗೆ ದರ್ಶನ ಕೊಟ್ಟ ಅಪರೂಪದ ಕರಿಚಿರತೆ!
ಡೋಲು ಬಾರಿಸುತ್ತಾ ಭರ್ಜರಿ ಡ್ಯಾನ್ಸ್ ಮಾಡಿದ ಶಾಸಕ ಶಿವಲಿಂಗೇಗೌಡ
ಡೋಲು ಬಾರಿಸುತ್ತಾ ಭರ್ಜರಿ ಡ್ಯಾನ್ಸ್ ಮಾಡಿದ ಶಾಸಕ ಶಿವಲಿಂಗೇಗೌಡ