Govt Employees Strike: ನಾಳೆ ಸರ್ಕಾರಿ ನೌಕರರ ಮುಷ್ಕರ; ಇಂದು ರಾತ್ರಿ ತುರ್ತು ಸಭೆ ಕರೆದ ಸಿಎಂ ಬೊಮ್ಮಾಯಿ

7ನೇ ವೇತನ ಆಯೋಗದ ವರದಿ ಜಾರಿಗೆ ಸರ್ಕಾರಿ ನೌಕರರು ಪಟ್ಟು ಹಿಡಿದಿದ್ದು, ಯಾವುದೇ ಕಾರಣಕ್ಕೂ ಪ್ರತಿಭಟನೆ ಹಿಂಪಡೆಯುವುದಿಲ್ಲ ಎಂದು ನೌಕರರ ಸಂಘ ಹೇಳಿದೆ. ನಾಳೆ ರಾಜ್ಯಾದ್ಯಂತ ಮುಷ್ಕರ ನಡೆಸಲಿದ್ದಾರೆ. ಹೀಗಾಗಿ ಇಂದು ರಾತ್ರಿ ಮುಖ್ಯಮಂತ್ರಿ ಬೊಮ್ಮಾಯಿ ಅವರು ಅಧಿಕಾರಿಗಳ ತುರ್ತು ಸಭೆ ಕರೆದಿದ್ದಾರೆ.

Govt Employees Strike: ನಾಳೆ ಸರ್ಕಾರಿ ನೌಕರರ ಮುಷ್ಕರ; ಇಂದು ರಾತ್ರಿ ತುರ್ತು ಸಭೆ ಕರೆದ ಸಿಎಂ ಬೊಮ್ಮಾಯಿ
ಬಸವರಾಜ ಬೊಮ್ಮಾಯಿ
Follow us
Rakesh Nayak Manchi
|

Updated on:Feb 28, 2023 | 6:17 PM

ಬೆಂಗಳೂರು: 7ನೇ ವೇತನ ಆಯೋಗದ (7th Pay Commission) ವರದಿ ಜಾರಿಗೆ ಸರ್ಕಾರಿ ನೌಕರರು ಪಟ್ಟು ಹಿಡಿದಿದ್ದು, ಯಾವುದೇ ಕಾರಣಕ್ಕೂ ಪ್ರತಿಭಟನೆ ಹಿಂಪಡೆಯುವುದಿಲ್ಲ ಎಂದು ನೌಕರ ಸಂಘ ಹೇಳಿದೆ. ಅದರಂತೆ ನಾಳೆ (ಮಾರ್ಚ್ 1) ರಾಜ್ಯಾದ್ಯಂತ ಮುಷ್ಕರ ನಡೆಸಲಿದ್ದಾರೆ. ಹೀಗಾಗಿ ಇಂದು ರಾತ್ರಿ ಮುಖ್ಯಮಂತ್ರಿ ಬೊಮ್ಮಾಯಿ (Basavaraj Bommai) ಅವರು ಅಧಿಕಾರಿಗಳ ತುರ್ತು ಸಭೆ ಕರೆದಿದ್ದಾರೆ. ಗೃಹ ಕಚೇರಿ ಕೃಷ್ಣಾದಲ್ಲಿ ರಾತ್ರಿ 9.30ಕ್ಕೆ ಅಧಿಕಾರಿಗಳು ಹಾಗೂ ನೌಕರರ ಸಂಘದ ಪದಾಧಿಕಾರಿಗಳ ಸಭೆ ಕರೆಯಲಾಗಿದೆ.

ಬೇಡಿಕೆಗಳ ಈಡೇರಿಕೆಗೆ ಆಗ್ರಹಿಸಿ ಮುಷ್ಕರ ನಡೆಸಿಯೇ ಸಿದ್ಧ ಎಂದು ಪಟ್ಟು ಹಿಡಿದಿರುವ ಸರ್ಕಾರಿ ನೌಕರರ ಮನವೊಲಿಸಲು ರಾಜ್ಯ ಸರ್ಕಾರ ಕಸರತ್ತು ನಡೆಸುತ್ತಿದೆ. ರಾಜ್ಯ ಸರ್ಕಾರಿ ನೌಕರರ ಸಂಘದ ಅಧ್ಯಕ್ಷ ಸಿಎಸ್​ ಷಡಕ್ಷರಿ, ಬಿಬಿಎಂಪಿ ನೌಕರರ ಸಂಘದ ಅಧ್ಯಕ್ಷ ಅಮೃತ್ ರಾಜ್ ಸೇರಿದಂತೆ ಹಲವು ನೌಕರ ಮುಖಂಡರ ಜತೆ ಮುಖ್ಯ ಕಾರ್ಯದರ್ಶಿ ವಂದಿತಾ ಶರ್ಮಾ ಇಂದು ಮಧ್ಯಾಹ್ನ ನಡೆಸಿದ್ದ ಸಭೆ ವಿಫಲವಾಗಿದೆ. ಇದರ ಬೆನ್ನಲ್ಲೇ ಸಂಜೆ ಮತ್ತೊಂದು ಸುತ್ತಿನ ಸಭೆ ನಡೆಸಲು ಸರ್ಕಾರ ಮುಂದಾಗಿದೆ. ಸಿಎಸ್​ ಷಡಕ್ಷರಿ ಜತೆ ವಂದಿತಾ ಶರ್ಮಾ ಅವರು ಸಂಜೆ ಸಭೆ ನಡೆಸಲಿದ್ದಾರೆ.

ಇದನ್ನೂ ಓದಿ: ಸರ್ಕಾರಿ ನೌಕರರ ಮನವೊಲಿಸಲು ಸರ್ಕಾರದ ಕಸರತ್ತು; ಸಂಜೆ ಮತ್ತೆ ಸಭೆ

ನಾಳೆ (ಮಾರ್ಚ್ 1) ರಾಜ್ಯಾದ್ಯಂತ ವಿವಿಧ ಜಿಲ್ಲೆಗಳ ಸರ್ಕಾರಿ ನೌಕರರು ಕಚೇರಿಗಳಿಗೆ ತೆರಳದೆ ಮುಷ್ಕರ ನಡೆಸಲಿದ್ದಾರೆ. ಮುಷ್ಕರದಿಂದ ಹಿಂಪಡೆಯುವ ಪ್ರಶ್ನೆಯೇ ಇಲ್ಲ. ಸರ್ಕಾರ ಯಾವಾಗ ಸಭೆಗೆ ಕರೆದರೂ ಭಾಗವಹಿಸುತ್ತೇವೆ ಎಂದು ರಾಜ್ಯ ಸರ್ಕಾರಿ ನೌಕರರ ಸಂಘದ ಅಧ್ಯಕ್ಷ ಸಿಎಸ್​ ಷಡಕ್ಷರಿ ಹೇಳಿದ್ದಾರೆ.

ಇದನ್ನೂ ಮುನ್ನ, ಮುಷ್ಕರಕ್ಕೆ ಕರೆ ನೀಡಿರುವ ವಿಚಾರವಾಗಿ ಉತ್ತರ ಕನ್ನಡ ಜಿಲ್ಲೆಯ ಸಿದ್ದಾಪುರದಲ್ಲಿ ಮಾತನಾಡಿದ್ದ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ, ಮಧ್ಯಂತರ ವರದಿ ತರಿಸಿಕೊಂಡು ವೇತನ ಪರಿಷ್ಕರಣೆ ಮಾಡಲಾಗುವುದು ಎಂದು ಭರವಸೆ ನೀಡಿದ್ದಾರೆ.  ವೇತನ ಪರಿಷ್ಕರಣೆ ವಿಚಾರವಾಗಿ ಸಂಜೆ ಅಧಿಕಾರಿಗಳ ಜೊತೆ ಚರ್ಚೆ ಮಾಡುತ್ತೇನೆ. ಕೂಡಲೇ ಮಧ್ಯಂತರ ವರದಿ ನೀಡುವಂತೆ ಈಗಾಗಲೇ ಸೂಚಿಸಿದ್ದೇನೆ. ಬಜೆಟ್​ ಮಂಡನೆ ವೇಳೆಯೇ ಈ ವಿಚಾರ ತಿಳಿಸಿದ್ದೆ ಎಂದೂ ಅವರು ಹೇಳಿದ್ದರು.

ರಾಜ್ಯದ ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

Published On - 5:36 pm, Tue, 28 February 23

ರಾಹುಲ್- ಜೈಸ್ವಾಲ್ ಜೊತೆಯಾಟಕ್ಕೆ ರನ್ ಸಾಮ್ರಾಟನೇ ಫುಲ್ ಫಿದಾ
ರಾಹುಲ್- ಜೈಸ್ವಾಲ್ ಜೊತೆಯಾಟಕ್ಕೆ ರನ್ ಸಾಮ್ರಾಟನೇ ಫುಲ್ ಫಿದಾ
ಕಾರು ಅಪಘಾತದಲ್ಲಿ ಜೀವ ಉಳಿಸಿದವರ ಮರೆಯದ ರಿಷಬ್ ಪಂತ್
ಕಾರು ಅಪಘಾತದಲ್ಲಿ ಜೀವ ಉಳಿಸಿದವರ ಮರೆಯದ ರಿಷಬ್ ಪಂತ್
ಕ್ಷೇತ್ರದ ಸಮಗ್ರ ಅಭಿವೃದ್ಧಿ ಕಡೆ ಯೋಗೇಶ್ವರ್ ಗಮನ ಹರಿಸಲಿದ್ದಾರೆ: ಶೀಲಾ
ಕ್ಷೇತ್ರದ ಸಮಗ್ರ ಅಭಿವೃದ್ಧಿ ಕಡೆ ಯೋಗೇಶ್ವರ್ ಗಮನ ಹರಿಸಲಿದ್ದಾರೆ: ಶೀಲಾ
ಗ್ಯಾರಂಟಿ ಯೋಜನೆಗಳು ರಾಜ್ಯ ಉಪ ಚುನಾವಣೆಗಳಲ್ಲಿ ನಮ್ಮ ಕೈ ಹಿಡಿದಿವೆ: ಸಿಎಂ
ಗ್ಯಾರಂಟಿ ಯೋಜನೆಗಳು ರಾಜ್ಯ ಉಪ ಚುನಾವಣೆಗಳಲ್ಲಿ ನಮ್ಮ ಕೈ ಹಿಡಿದಿವೆ: ಸಿಎಂ
ರಾಜ್ಯ ಬಿಜೆಪಿ ನಾಯಕರನ್ನು ಪ್ರಧಾನಿ ಮೋದಿಯವರೇ ಸರಿಮಾಡಬೇಕು: ಕಾರ್ಯಕರ್ತ
ರಾಜ್ಯ ಬಿಜೆಪಿ ನಾಯಕರನ್ನು ಪ್ರಧಾನಿ ಮೋದಿಯವರೇ ಸರಿಮಾಡಬೇಕು: ಕಾರ್ಯಕರ್ತ
‘ಹೊರಗೆ ಕಳಿಸುತ್ತೇನೆ’ ನಗುತ್ತಲೇ ರಜತ್​ಗೆ ಎಚ್ಚರಿಕೆ ಕೊಟ್ಟ ಕಿಚ್ಚ
‘ಹೊರಗೆ ಕಳಿಸುತ್ತೇನೆ’ ನಗುತ್ತಲೇ ರಜತ್​ಗೆ ಎಚ್ಚರಿಕೆ ಕೊಟ್ಟ ಕಿಚ್ಚ
ಮೂರನೇ ಸೋಲಿನಿಂದ ನಿಖಿಲ್ ಕುಮಾರಸ್ವಾಮಿ ಎದೆಗುಂದಬಾರದು: ಜಿಟಿ ದೇವೇಗೌಡ
ಮೂರನೇ ಸೋಲಿನಿಂದ ನಿಖಿಲ್ ಕುಮಾರಸ್ವಾಮಿ ಎದೆಗುಂದಬಾರದು: ಜಿಟಿ ದೇವೇಗೌಡ
ಬೈ ಎಲೆಕ್ಷನ್ ಸೋಲು: TV ಎಸೆದು ನಾಯಕರ ವಿರುದ್ಧ ಬಿಜೆಪಿ ಕಾರ್ಯಕರ್ತ ಆಕ್ರೋಶ
ಬೈ ಎಲೆಕ್ಷನ್ ಸೋಲು: TV ಎಸೆದು ನಾಯಕರ ವಿರುದ್ಧ ಬಿಜೆಪಿ ಕಾರ್ಯಕರ್ತ ಆಕ್ರೋಶ
ಯಡಿಯೂರಪ್ಪ ಒಂದೇ ಕಲ್ಲಿಂದ ಎರಡು ಹಕ್ಕಿ ಹೊಡೆದುರುಳಿಸಿದ್ದಾರೆ: ಯೋಗೇಶ್ವರ್
ಯಡಿಯೂರಪ್ಪ ಒಂದೇ ಕಲ್ಲಿಂದ ಎರಡು ಹಕ್ಕಿ ಹೊಡೆದುರುಳಿಸಿದ್ದಾರೆ: ಯೋಗೇಶ್ವರ್
ಬಿಜೆಪಿ ಹೀನಾಯ ಸೋಲಿಗೆ ಪೂಜ್ಯ ತಂದೆ, ಮಗ ಕಾರಣ: ಗುಡುಗಿದ ಯತ್ನಾಳ್
ಬಿಜೆಪಿ ಹೀನಾಯ ಸೋಲಿಗೆ ಪೂಜ್ಯ ತಂದೆ, ಮಗ ಕಾರಣ: ಗುಡುಗಿದ ಯತ್ನಾಳ್