AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

29ನೇ ಆವೃತ್ತಿಯ ಬೆಂಗಳೂರು ಟೆಕ್ ಸಮಿಟ್​​ಗೆ ಸಿಎಂ ಡಿಕೆ ಶಿವಕುಮಾರ್​​ ಚಾಲನೆ: 75ಕ್ಕೂ ಹೆಚ್ಚು ದೇಶಗಳು ಭಾಗಿ

ಇಂದಿನಿಂದ 3 ದಿನಗಳ ಕಾಲ ಬೆಂಗಳೂರಿನ ಮಾದಾವರ ಬಳಿಯ ಬಿಐಇಸಿಯಲ್ಲಿ ನಡೆಯಲಿರುವ 29ನೇ ಆವೃತ್ತಿಯ ಬೆಂಗಳೂರು ಟೆಕ್ ಸಮಿಟ್​​ಗೆ ಸಿಎಂ ಡಿಕೆ ಶಿವಕುಮಾರ್​​ ಚಾಲನೆ ನೀಡಿದ್ದಾರೆ. ಎಐ, ಡೀಪ್ ಟೆಕ್ ಹಾಗೂ ಸೆಮಿಕಂಡಕ್ಟರ್ ಉತ್ಪಾದನೆಯಲ್ಲಿ ಕರ್ನಾಟಕವನ್ನು ಜಾಗತಿಕ ಕೇಂದ್ರವನ್ನಾಗಿ ರೂಪಿಸುವ ಗುರಿ ಹೊಂದಲಾಗಿದೆ ಎಂದವರು ಈ ವೇಳೆ ತಿಳಿಸಿದ್ದಾರೆ.

29ನೇ ಆವೃತ್ತಿಯ ಬೆಂಗಳೂರು ಟೆಕ್ ಸಮಿಟ್​​ಗೆ ಸಿಎಂ ಡಿಕೆ ಶಿವಕುಮಾರ್​​ ಚಾಲನೆ: 75ಕ್ಕೂ ಹೆಚ್ಚು ದೇಶಗಳು ಭಾಗಿ
29ನೇ ಆವೃತ್ತಿಯ ಬೆಂಗಳೂರು ಟೆಕ್ ಸಮಿಟ್​​ಗೆ ಚಾಲನೆ
ಪ್ರಸನ್ನ ಹೆಗಡೆ
|

Updated on: Nov 17, 2026 | 2:53 PM

Share

ಬೆಂಗಳೂರು, ನವೆಂಬರ್​​ 17: ಉದ್ಯಮಗಳ ಬೆಳವಣಿಗೆಗೆ ಪೂರಕವಾದ ನೀತಿಗಳು, ಬಲಿಷ್ಠ ಸಂಶೋಧನಾ ಕೇಂದ್ರಗಳು, ಸಮೃದ್ಧವಾಗ ನವೋದ್ಯಮ ಪರಿಸರ ವ್ಯವಸ್ಥೆ, ಕೌಶಲ್ಯಯುತ ಮಾನವ ಸಂಪನ್ಮೂಲದೊಂದಿಗೆ ಕರ್ನಾಟಕ ರಾಜ್ಯವು ಎಐ, ಡೀಪ್ ಟೆಕ್ ಮತ್ತು ಸೆಮಿಕಂಡಕ್ಟರ್ ಉತ್ಪಾದನೆಯಲ್ಲಿ ಜಾಗತಿಕ ಕೇಂದ್ರವಾಗುವ ಗುರಿ ಹೊಂದಿದೆ ಎಂದು ಕರ್ನಾಟಕ ಸಿಎಂ ಡಿಕೆ ಶಿವಕುಮಾರ್ ಹೇಳಿದ್ದಾರೆ.

ಇಂದಿನಿಂದ 3 ದಿನಗಳ ಕಾಲ ಮಾದಾವರ ಬಳಿಯ ಬಿಐಇಸಿಯಲ್ಲಿ ನಡೆಯಲಿರುವ 29ನೇ ಆವೃತ್ತಿಯ ಬೆಂಗಳೂರು ಟೆಕ್ ಸಮಿಟ್‌ ಉದ್ಘಾಟಿಸಿ ಮಾತನಾಡಿದ ಅವರು, ಬೆಂಗಳೂರು ವಿಶ್ವದ ಅತಿ ದೊಡ್ಡ ತಂತ್ರಜ್ಞಾನದ ಕ್ಲಸ್ಟರ್​​ಗಳಲ್ಲಿ ಒಂದಾಗಿದೆ. ಅತ್ಯುತ್ತಮ ಸಂಸ್ಥೆಗಳನ್ನು ಸ್ಥಾಪಿಸುವ ಮೂಲಕ ಆಧುನಿಕ ಕೈಗಾರಿಕೆ ಹಾಗೂ ತಂತ್ರಜ್ಞಾನಕ್ಕೆ ಕರ್ನಾಟಕ ಬುನಾದಿ ಹಾಕಿದೆ. ಜಾಗತಿಕ ಸಂಸ್ಥೆಗಳು ನಮ್ಮ ಮೇಲೆ ಅಪಾರ ವಿಶ್ವಾಸವನ್ನು ಸಾಫ್ಟ್‌ವೇರ್ ಮತ್ತು ಸೇವೆಗಳ ರಫ್ತಿನ ಮೂಲಕ ಭಾರತ ಗಳಿಸುವ ಪ್ರತಿ ಐದು ಡಾಲರ್‌ಗಳಲ್ಲಿ ಎರಡು ಡಾಲರ್ ಕರ್ನಾಟಕದಿಂದಲೇ ಬರುತ್ತಿದ್ದು, ಕಳೆದ ವರ್ಷ ಇದು ಅಂದಾಜು 173 ಬಿಲಿಯನ್ ಅಮೆರಿಕನ್ ಡಾಲರ್‌ಗಳಷ್ಟಿತ್ತು. ಇದು ಅನೇಕ ರಾಷ್ಟ್ರಗಳ ಆರ್ಥಿಕತೆಗಿಂತ ಹೆಚ್ಚಾಗಿದೆ. ಕರ್ನಾಟಕ ಇತ್ತೀಚಿನ ದಿನಗಳಲ್ಲಿ ವಿದೇಶಿ ಬಂಡವಾಳ ಹೂಡಿಕೆಯಲ್ಲಿ ಮುಂಚೂಣಿಯಲ್ಲಿದೆ ಎಂದವರು ತಿಳಿಸಿದ್ದಾರೆ.

ಇದನ್ನೂ ಓದಿ: ಸಿಎಂ ಗ್ರಾಮೀಣಾಭಿವೃದ್ಧಿ ಯೋಜನೆಯಡಿ ರಸ್ತೆ, ಚರಂಡಿ ಅಭಿವೃದ್ಧಿಗೆ ₹6,000 ಕೋಟಿ: 15 ತಿಂಗಳಲ್ಲಿ ಕಾಮಗಾರಿ ಪೂರ್ಣಗೊಳಿಸಲು ಸೂಚನೆ

ಸಾವಿರಕ್ಕೂ ಹೆಚ್ಚು ಜಿಸಿಸಿಗಳಿಗೆ ಬೆಂಗಳೂರು ನೆಲೆ

2025-26ನೇ ಹಣಕಾಸು ವರ್ಷದ ಮೊದಲಾರ್ಧದಲ್ಲಿ ಕರ್ನಾಟಕವು 9.4 ಬಿಲಿಯನ್ ಡಾಲರ್ ವಿದೇಶಿ ನೇರ ಹೂಡಿಕೆಯನ್ನು (FDI) ಪಡೆದಿದ್ದು, ಇದು ಆ ಅವಧಿಯಲ್ಲಿ ಭಾರತದ ಒಟ್ಟು ಒಳಹರಿವಿನ ಶೇ. 26.7ರಷ್ಟಿದೆ. 1,000ಕ್ಕೂ ಹೆಚ್ಚು ಜಾಗತಿಕ ಸಾಮರ್ಥ್ಯ ಕೇಂದ್ರಗಳು (GCC) ಬೆಂಗಳೂರನ್ನು ತಮ್ಮ ನೆಲೆಯನ್ನಾಗಿ ಆಯ್ಕೆ ಮಾಡಿಕೊಂಡಿದ್ದು, 2025ರ ಒಂದೇ ವರ್ಷದಲ್ಲಿ 30ಕ್ಕೂ ಹೆಚ್ಚು ಹೊಸ ಜಿಸಿಸಿಗಳು ರಾಜ್ಯಕ್ಕೆ 1 ಬಿಲಿಯನ್ ಡಾಲರ್‌ಗೂ ಅಧಿಕ ಹೂಡಿಕೆಯನ್ನು ತಂದಿವೆ ಎಂದು ಅವರು ಹೇಳಿದ್ದಾರೆ.

ಕರ್ನಾಟಕದಲ್ಲಿ 24,000 ನವೋದ್ಯಮಗಳು

ತಂತ್ರಜ್ಞಾನದಲ್ಲಿ ಯಾರು ಮೊದಲು ಹೆಜ್ಜೆ ಇಡುತ್ತಾರೋ ಅವರು ಮುನ್ನಡೆ ಸಾಧಿಸುತ್ತಾರೆ. ಕರ್ನಾಟಕ ಸದಾ ಈ ವಿಚಾರದಲ್ಲಿ ಮುಂದಿದೆ. ನಮ್ಮ ರಾಜ್ಯ ದೇಶದಲ್ಲೇ ಮೊದಲ ಐಟಿ ನೀತಿಯನ್ನು 1997ರಲ್ಲೇ ರಚಿಸಿತು. 2001ರಲ್ಲಿ ಎಸ್. ಎಂ. ಕೃಷ್ಣ ಅವರ ಕಾಲದಲ್ಲಿ ಜೈವಿಕ ತಂತ್ರಜ್ಞಾನ ನೀತಿ ರಚಿಸಲಾಯಿತು. 2024ರಲ್ಲಿ ಜಾಗತಿಕ ಕೇಂದ್ರವನ್ನು ಸ್ಥಾಪಿಸಲಾಯಿತು. ಇದರೊಂದಿಗೆ ಕರ್ನಾಟಕ ಜಾಗತಿಕ ನಾಯಕತ್ವ ವಹಿಸಿದೆ. ಕರ್ನಾಟಕವು 24,000 ಅಧಿಕೃತ ನವೋದ್ಯಮಗಳ ನೆಲೆಯಾಗಿದ್ದು, ಪ್ರತಿ 5 ಭಾರತೀಯ ಪ್ರಮುಖ ಕಂಪನಿಗಳಲ್ಲಿ 2 ಕಂಪನಿಗಳು ಬೆಂಗಳೂರಿನಲ್ಲಿ ಆರಂಭವಾಗಿವೆ. ಜಾಗತಿಕ ನವೋದ್ಯಮ ವ್ಯವಸ್ಥೆಯಲ್ಲಿ ಕರ್ನಾಟಕ 8ನೇ ಸ್ಥಾನ ಹಾಗೂ ಏಷ್ಯಾದಲ್ಲಿ 2ನೇ ಸ್ಥಾನ ಪಡೆದಿದೆ. ಬೆಂಗಳೂರು 4.4 ಬಿಲಿಯನ್ ಡಾಲರ್ ತಂತ್ರಜ್ಞಾನ ಹೂಡಿಕೆಯನ್ನು ಆಕರ್ಷಿಸಿದೆ. ಕರ್ನಾಟಕದ ಸ್ಟಾರ್ಟ್‌ಅಪ್‌ಗಳು ಒಟ್ಟಾರೆಯಾಗಿ ಸುಮಾರು 79 ಬಿಲಿಯನ್ ಡಾಲರ್ ಬಂಡವಾಳವನ್ನು ಸಂಗ್ರಹಿಸಿದ್ದು, ಬೆಂಗಳೂರಿನ ಮಹಿಳಾ ಸಂಸ್ಥಾಪಕರು 13.4 ಬಿಲಿಯನ್ ಡಾಲರ್ ಹೂಡಿಕೆಯನ್ನು ಪಡೆದುಕೊಂಡಿದ್ದಾರೆ ಎಂದು ಸಿಎಂ ವಿವರಿಸಿದ್ದಾರೆ.

ಐಐಐಟಿ ರಾಯಚೂರಿನಲ್ಲಿ ಸ್ಥಾಪಿಸಲಾಗುವ ಹೆಚ್ಚುವರಿ ಉತ್ಕೃಷ್ಟತಾ ಕೇಂದ್ರವು (Centre of Excellence) ಕೃಷಿ, ಆರೋಗ್ಯ, ಶಿಕ್ಷಣ ಮತ್ತು ಸಣ್ಣ ಉದ್ಯಮಗಳಿಗೆ ಪೂರಕವಾದ ಎಐ ಅನ್ವಯಿಕೆಗಳನ್ನು ಉತ್ತರ ಕರ್ನಾಟಕದ 13 ಜಿಲ್ಲೆಗಳಿಗೆ ವಿಸ್ತರಿಸಲಿದೆ. 300 ಕೋಟಿ ರೂ. ವೆಚ್ಚದ ‘ನಿಪುಣ ಕರ್ನಾಟಕ’ ಕೌಶಲ್ಯ ಮರುತರಬೇತಿ ಅಭಿಯಾನದ ಅಡಿಯಲ್ಲಿ, ಸರ್ಕಾರವು ರಾಜ್ಯದ ಉದ್ಯೋಗಿಗಳನ್ನು ಉದಯೋನ್ಮುಖ ತಂತ್ರಜ್ಞಾನದ ಅಗತ್ಯಗಳಿಗೆ ಸಜ್ಜುಗೊಳಿಸುತ್ತಿದೆ. ಪ್ರಮುಖ ಜಾಗತಿಕ ತಂತ್ರಜ್ಞಾನ ಕಂಪನಿಗಳ ಸಹಭಾಗಿತ್ವದ ಮೂಲಕ, ವೃತ್ತಿಜೀವನದ ವಿರಾಮದ ನಂತರ ಮತ್ತೆ ಕೆಲಸಕ್ಕೆ ಮರಳುತ್ತಿರುವ ಮಹಿಳೆಯರು ಸೇರಿದಂತೆ 33,000ಕ್ಕೂ ಹೆಚ್ಚು ಜನರು ಈಗಾಗಲೇ ಉದ್ಯಮಕ್ಕೆ ಸಿದ್ಧರಾಗಿದ್ದಾರೆ.

ಕರ್ನಾಟಕವು 100ಕ್ಕೂ ಹೆಚ್ಚು ಫ್ಯಾಬ್‌ಲೆಸ್ ಚಿಪ್ ಕಂಪನಿಗಳಿಗೆ ನೆಲೆಯಾಗಿದ್ದು, ಭಾರತದ ಸೆಮಿಕಂಡಕ್ಟರ್ ಸಾಮರ್ಥ್ಯ ಕೇಂದ್ರಗಳಲ್ಲಿ ಕೆಲಸ ಮಾಡುವ ಪ್ರತಿ ಐದು ಎಂಜಿನಿಯರ್‌ಗಳಲ್ಲಿ ಮೂವರು ಬೆಂಗಳೂರಿನಲ್ಲಿದ್ದಾರೆ. ಭಾರತದ ಎಲೆಕ್ಟ್ರಾನಿಕ್ಸ್ ರಫ್ತಿನಲ್ಲಿ ರಾಜ್ಯವು ಐದನೇ ಒಂದು ಭಾಗದಷ್ಟು ಪಾಲನ್ನು ಹೊಂದಿದೆ. ಬೆಂಗಳೂರು ಮತ್ತು ಮೈಸೂರಿನಲ್ಲಿರುವ ಸೆಮಿಕಂಡಕ್ಟರ್ ಸಂಶೋಧನೆ ಮತ್ತು ಉತ್ಪಾದನಾ ಘಟಕಗಳಲ್ಲಿ ಜಾಗತಿಕ ಕಂಪನಿಗಳು 23,000 ಕೋಟಿ ರೂ.ಗೂ ಅಧಿಕ ಹೂಡಿಕೆ ಮಾಡುತ್ತಿವೆ. ಇಂತಹ ಮಹತ್ವದ ತೀರ್ಮಾನ ಕೈಗೊಂಡಿರುವ ಎಲ್ಲರಿಗೂ ಅಭಿನಂದನೆ ಸಲ್ಲಿಸುವುದಾಗಿ ಡಿಕೆಶಿ ಹೇಳಿದ್ದಾರೆ.

ಕಳೆದ ವರ್ಷ ಬೆಂಗಳೂರು ಟೆಕ್ ಸಮಿಟ್ ನಲ್ಲಿ 67 ದೇಶಗಳು ಭಾಗಿಯಾಗಿದ್ದು, ಈ ವರ್ಷ 75ಕ್ಕೂ ಹೆಚ್ಚು ದೇಶಗಳು ಭಾಗವಹಿಸಿವೆ. 1500 ಎಕ್ಸಿಬಿಟರ್​​ಗಳು, 150 ಸೆಷನ್ ಗಳಲ್ಲಿ 500ಕ್ಕೂ ಹೆಚ್ಚು ಜನ ಚರ್ಚೆ ಮಾಡಲಿದ್ದಾರೆ. 50,000 ಉದ್ಯಮಿಗಳು ಭಾಗವಹಿಸಲಿದ್ದಾರೆ. ನಾವು ನಿಮ್ಮೊಂದಿಗಿದ್ದು, ಬಂಡವಾಳ ಹೂಡಿಕೆದಾರರು, ಸಂಶೋಧಕರೊಂದಿಗೆ ಜತೆ ಕೆಲಸ ಮಾಡಲು ಉತ್ಸುಕರಾಗಿದ್ದೇವೆ. ಜತೆಗೂಡುವುದು ಆರಂಭ, ಜತೆಗೂಡಿ ಚರ್ಚೆಸುವುದು ಪ್ರಗತಿ, ಜತೆಗೂಡಿ ಕೆಲಸ ಮಾಡುವುದು ಯಶಸ್ಸು ಎಂದು ನಾನು ಹೇಳುತ್ತೇನೆ. ನಾವೆಲ್ಲರೂ ಒಟ್ಟಾಗಿ ಕೆಲಸ ಮಾಡೋಣ, ಆಮೂಲಕ ತಂತ್ರಜ್ಞಾನದ ಮೂಲಕ ಭಾರತ ಹಾಗೂ ವಿಶ್ವದ ಸೇವೆ ಮಾಡೋಣ ಎಂದು ಸಿಎಂ ಡಿಕೆ ಶಿವಕುಮಾರ್​​ ಕರೆನೀಡಿದ್ದಾರೆ. ಕಾರ್ಯಕ್ರಮದಲ್ಲಿ ಡಿಸಿಎಂ ಪರಮೇಶ್ವರ್‌, ಸಚಿವರಾದ ಪ್ರಿಯಾಂಕ್, ಅಜಯ್ ಸಿಂಗ್‌, ಬಯೋಕಾನ್‌ ಸಂಸ್ಥೆಯ ಮುಖ್ಯಸ್ಥೆ ಕಿರಣ್ ಮಜುಂದಾರ್ ಷಾ, ಇಸ್ರೋ ಮಾಜಿ ಅಧ್ಯಕ್ಷ ಕಿರಣ್ ಕುಮಾರ್ ಸೇರಿ ಹಲವರು ಉಪಸ್ಥಿತರಿದ್ದರು.

ಮತ್ತಷ್ಟು ಸುದ್ದಿ ಓದಲು ಇಲ್ಲಿ ಕ್ಲಿಕ್​​ ಮಾಡಿ.

Follow Us
ಪ್ರಸನ್ನ ಹೆಗಡೆ
ಪ್ರಸನ್ನ ಹೆಗಡೆ

ಪ್ರಸನ್ನ ಹೆಗಡೆ ಹುಟ್ಟಿದ್ದು ಉತ್ತರ ಕನ್ನಡ ಜಿಲ್ಲೆಯ ಕುಮಟಾ ತಾಲೂಕು. 9 ವರ್ಷಗಳಿಂದ ಪತ್ರಕರ್ತರಾಗಿ ಕೆಲಸ ಮಾಡಿರುವ ಅನುಭವವಿದೆ. ಮುದ್ರಣ, ಟಿವಿ ಮತ್ತು ಡಿಜಿಟಲ್​ ಮಾಧ್ಯಮಗಳಲ್ಲಿ ವಿವಿಧ ಜವಾಬ್ದಾರಿ ನಿಭಾಯಿಸಿದ್ದಾರೆ. ರಾಜಕೀಯ, ಸಿನಿಮಾ ವಿಷಯಗಳಲ್ಲಿ ಹೆಚ್ಚಿನ ಆಸಕ್ತಿ ಇದೆ. ಕವನಗಳ ರಚನೆ, ಪುಸ್ತಕಗಳನ್ನ ಓದುವುದು ನೆಚ್ಚಿನ ಹವ್ಯಾಸಗಳು.

Read More
ಬೆಂಗಳೂರಿನಲ್ಲಿ ಆಶಾ ಕಾರ್ಯಕರ್ತೆಯರ ಬೃಹತ್ ಪ್ರತಿಭಟನೆ
ಬೆಂಗಳೂರಿನಲ್ಲಿ ಆಶಾ ಕಾರ್ಯಕರ್ತೆಯರ ಬೃಹತ್ ಪ್ರತಿಭಟನೆ
ಸೌಜನ್ಯ ಪ್ರಕರಣ: ತನಿಖೆಗಾಗಿ ಎಸ್​ಐಟಿಯಿಂದ ಮೆಡಿಕಲ್ ಬೋರ್ಡ್ ರಚನೆ
ಸೌಜನ್ಯ ಪ್ರಕರಣ: ತನಿಖೆಗಾಗಿ ಎಸ್​ಐಟಿಯಿಂದ ಮೆಡಿಕಲ್ ಬೋರ್ಡ್ ರಚನೆ
ದೆಹಲಿಯಲ್ಲಿ ತಮಿಳುನಾಡು ಸಿಎಂ ವಿಜಯ್​ ಜೊತೆ ಸಿಎಂ ಡಿಕೆಶಿ ಚರ್ಚಿಸಿದ್ದೇನು?
ದೆಹಲಿಯಲ್ಲಿ ತಮಿಳುನಾಡು ಸಿಎಂ ವಿಜಯ್​ ಜೊತೆ ಸಿಎಂ ಡಿಕೆಶಿ ಚರ್ಚಿಸಿದ್ದೇನು?
ಬೇಲೂರಿನ ಕೋಗಿಲಮನೆ ಬಳಿ 30ಕ್ಕೂ ಹೆಚ್ಚು ಕಾಡಾನೆಗಳು ಪ್ರತ್ಯಕ್ಷ
ಬೇಲೂರಿನ ಕೋಗಿಲಮನೆ ಬಳಿ 30ಕ್ಕೂ ಹೆಚ್ಚು ಕಾಡಾನೆಗಳು ಪ್ರತ್ಯಕ್ಷ
19 ವರ್ಷದ ಇಬ್ಬರು ವಿದ್ಯಾರ್ಥಿನಿಯರು ರಸ್ತೆ ಅಪಘಾತದಲ್ಲಿ ಬಲಿ
19 ವರ್ಷದ ಇಬ್ಬರು ವಿದ್ಯಾರ್ಥಿನಿಯರು ರಸ್ತೆ ಅಪಘಾತದಲ್ಲಿ ಬಲಿ
ಚಳ್ಳಕೆರೆ ಬಳಿ ಡಿವೈಡರ್‌ಗೆ ಡಿಕ್ಕಿ ಹೊಡೆದ ಸಾರಿಗೆ ಬಸ್: 42 ಮಂದಿ ಪಾರು
ಚಳ್ಳಕೆರೆ ಬಳಿ ಡಿವೈಡರ್‌ಗೆ ಡಿಕ್ಕಿ ಹೊಡೆದ ಸಾರಿಗೆ ಬಸ್: 42 ಮಂದಿ ಪಾರು
ಸ್ಟಿಂಗ್ ಪ್ರಕರಣ: ಪೊಲೀಸರಿಗೆ ಮೊಬೈಲ್ ನೀಡಲು ಕೃಪಾ ಆಳ್ವ ನಿರಾಕರಣೆ!
ಸ್ಟಿಂಗ್ ಪ್ರಕರಣ: ಪೊಲೀಸರಿಗೆ ಮೊಬೈಲ್ ನೀಡಲು ಕೃಪಾ ಆಳ್ವ ನಿರಾಕರಣೆ!
ಪ್ರಧಾನಿ ಮೋದಿ ಆಡಳಿತದ ಯಶೋಗಾಥೆ, ಯೋಜನೆಗಳ ಅಧ್ಯಯನ
ಪ್ರಧಾನಿ ಮೋದಿ ಆಡಳಿತದ ಯಶೋಗಾಥೆ, ಯೋಜನೆಗಳ ಅಧ್ಯಯನ
ವೀರಾಂಜನೇಯ ವಿಗ್ರಹಕ್ಕೆ ಲೇಪಿಸಿದ ಬೆಣ್ಣೆ 17 ದಿನ ಕಳೆದರೂ ಕರಗಿಲ್ಲ
ವೀರಾಂಜನೇಯ ವಿಗ್ರಹಕ್ಕೆ ಲೇಪಿಸಿದ ಬೆಣ್ಣೆ 17 ದಿನ ಕಳೆದರೂ ಕರಗಿಲ್ಲ
‘ಮಾಡಿರೋದೇ ಒಂದು ಸಿನಿಮಾ, ಗಂಡಸರ ಹಾಗೆ ನಡೆದುಕೋ; ಜಗ್ಗುಗೆ ಮಂಜು ಅವಾಜ್
‘ಮಾಡಿರೋದೇ ಒಂದು ಸಿನಿಮಾ, ಗಂಡಸರ ಹಾಗೆ ನಡೆದುಕೋ; ಜಗ್ಗುಗೆ ಮಂಜು ಅವಾಜ್