AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಕರ್ನಾಟಕದ ವಾಯು ಗುಣಮಟ್ಟ: ಬೆಂಗಳೂರು ಸೇರಿದಂತೆ ರಾಜ್ಯದ ಪ್ರಮುಖ ನಗರಗಳ ಇಂದಿನ ವಾಯು ಗುಣಮಟ್ಟ ಉತ್ತಮ

ರಾಜ್ಯದಲ್ಲಿ ಮುಂದುವರಿದಿರುವ ಮಳೆಯ ವಾತಾವರಣದಿಂದಾಗಿ ಬೆಂಗಳೂರು ಸೇರಿದಂತೆ ಕರ್ನಾಟಕದ ಪ್ರಮುಖ ನಗರಗಳಲ್ಲಿ ವಾಯು ಗುಣಮಟ್ಟ (AQI) ಅತ್ಯಂತ ಉತ್ತಮ ಹಾಗೂ ತೃಪ್ತಿದಾಯಕ ಹಂತದಲ್ಲಿದೆ. ಬೆಂಗಳೂರಿನಲ್ಲಿ ಸರಾಸರಿ ಎಕ್ಯೂಐ 76 ದಾಖಲಾಗಿದ್ದು, ಸಾರ್ವಜನಿಕರು ನಿರಾಳವಾಗಿ ಉಸಿರಾಡಬಹುದಾಗಿದೆ. ವಿವಿಧ ಜಿಲ್ಲೆಗಳ ಸಂಪೂರ್ಣ ವಾಯು ಮಾಲಿನ್ಯ ಮತ್ತು ಶುದ್ಧ ಗಾಳಿಯ ವರದಿ ಇಲ್ಲಿದೆ.

ಕರ್ನಾಟಕದ ವಾಯು ಗುಣಮಟ್ಟ: ಬೆಂಗಳೂರು ಸೇರಿದಂತೆ ರಾಜ್ಯದ ಪ್ರಮುಖ ನಗರಗಳ ಇಂದಿನ ವಾಯು ಗುಣಮಟ್ಟ ಉತ್ತಮ
ಕರ್ನಾಟಕದ ವಾಯು ಗುಣಮಟ್ಟ
ಭಾವನಾ ಹೆಗಡೆ
|

Updated on: Oct 19, 2026 | 7:33 AM

Share

ಮುಖ್ಯಾಂಶಗಳು

  • ಮಳೆಯ ಪ್ರಭಾವದಿಂದ ಕರ್ನಾಟಕದಾದ್ಯಂತ ಉತ್ತಮಗೊಂಡ ವಾಯು ಗುಣಮಟ್ಟ ಸೂಚ್ಯಂಕ.
  • ಬೆಂಗಳೂರಿನಲ್ಲಿ ಸರಾಸರಿ AQI 76 ದಾಖಲು, ನಿರಾಳವಾಗಿ ಉಸಿರಾಡಬಹುದು.
  • ಮಂಗಳೂರು, ಮೈಸೂರು ಸೇರಿದಂತೆ ರಾಜ್ಯದ ಪ್ರಮುಖ ನಗರಗಳಲ್ಲಿ ಶುದ್ಧ ಗಾಳಿ.

ಬೆಂಗಳೂರು, ಅಕ್ಟೋಬರ್ 19: ರಾಜ್ಯದಲ್ಲಿ ಮಳೆಯ ವಾತಾವರಣದ ನಡುವೆ ಇಂದು ಗಾಳಿಯ ಗುಣಮಟ್ಟವು ಬಹುತೇಕ ನಗರಗಳಲ್ಲಿ ಸಮಾಧಾನಕರ ಹಾಗೂ ಸಾಧಾರಣ ಮಟ್ಟದಲ್ಲಿದೆ. ಬೆಂಗಳೂರು ಸೇರಿದಂತೆ ರಾಜ್ಯದ ಪ್ರಮುಖ ನಗರಗಳಲ್ಲಿ ವಾಯು ಮಾಲಿನ್ಯ ಪ್ರಮಾಣ ನಿಯಂತ್ರಣದಲ್ಲಿದ್ದು, ಸಾರ್ವಜನಿಕರು ನಿರಾಳವಾಗಿ ಉಸಿರಾಡುವಂತಿದೆ. ಹವಾಮಾನ ವೈಪರೀತ್ಯ ಹಾಗೂ ಇತ್ತೀಚಿನ ಮಳೆಯಿಂದಾಗಿ ಧೂಳಿನ ಕಣಗಳ ಪ್ರಮಾಣ ಕಡಿಮೆಯಾಗಿರುವುದು ಇದಕ್ಕೆ ಮುಖ್ಯ ಕಾರಣವಾಗಿದೆ.

ಬೆಂಗಳೂರಿನ ಇಂದಿನ ಗಾಳಿಯ ಗುಣಮಟ್ಟ

ಬೆಂಗಳೂರಿನಲ್ಲಿ ಇಂದು ಸರಾಸರಿ ಎಕ್ಯೂಐ ಮಟ್ಟ 76 ದಾಖಲಾಗಿದೆ. ನಗರದ ಪ್ರಮುಖ ಗಾಳಿಯ ಕಲಿಷಿತ ಕಣಗಳಾದ PM2.5 (32 µg/m³) ಹಾಗೂ PM10 (71 µg/m³) ಪ್ರಮಾಣಗಳು ನಿಯಂತ್ರಿತ ಮಟ್ಟದಲ್ಲಿವೆ.

  • ಸಿಟಿ ಸೆಂಟರ್ / ಎಂ.ಜಿ. ರಸ್ತೆ: 72 – 76
  • ಸೀಮೆನ್ಸ್ ಹಾಗೂ ಐಟಿಪಿಎಲ್ (ವೈಟ್‌ಫೀಲ್ಡ್): 79
  • ಪೀಣ್ಯ ಹಾಗೂ ಕೈಗಾರಿಕಾ ಪ್ರದೇಶ: 82 – 88

ಸಾಮಾನ್ಯ ಆರೋಗ್ಯವಂತರಿಗೆ ಈ ವಾತಾವರಣದಲ್ಲಿ ಯಾವುದೇ ತೊಂದರೆಯಿಲ್ಲ. ಆದರೆ, ಉಸಿರಾಟದ ತೊಂದರೆ ಅಥವಾ ಶ್ವಾಸಕೋಶದ ಕಾಯಿಲೆ ಇರುವವರು ಹೊರಾಂಗಣ ಚಟುವಟಿಕೆಗಳ ಸಮಯದಲ್ಲಿ ಜಾಗರೂಕರಾಗಿರಲು ಸೂಚಿಸಲಾಗಿದೆ.

ಕರ್ನಾಟಕದ ಪ್ರಮುಖ ನಗರಗಳ ಸ್ಥಿತಿಗತಿ

ರಾಜ್ಯದ ಇತರೆ ಜಿಲ್ಲೆಗಳು ಹಾಗೂ ಪ್ರಮುಖ ನಗರಗಳಲ್ಲಿಯೂ ಗಾಳಿಯ ಗುಣಮಟ್ಟವು ಉತ್ತಮದಿಂದ ಸಾಧಾರಣ ಮಟ್ಟದಲ್ಲಿದೆ.

  • ಮೈಸೂರು ಹಾಗೂ ಮಂಗಳೂರು: ಮಂಗಳೂರು (57) ಮತ್ತು ಮೈಸೂರಿನಲ್ಲಿ ಗಾಳಿಯ ಗುಣಮಟ್ಟ ‘ಉತ್ತಮ’ ವಿಭಾಗದಲ್ಲಿದೆ.
  • ಕೋಲಾರ ಮತ್ತು ಚಿಕ್ಕಬಳ್ಳಾಪುರ: ಕೋಲಾರ (57) ಮತ್ತು ಚಿಕ್ಕಬಳ್ಳಾಪುರದಲ್ಲಿ (59 – 66) ಪರಿಶುದ್ಧ ಗಾಳಿ ದಾಖಲಾಗಿದೆ.
  • ಉತ್ತರ ಕರ್ನಾಟಕ ನಗರಗಳು: ಬೆಳಗಾವಿ (83), ಹುಬ್ಬಳ್ಳಿ (78) ಹಾಗೂ ಬೀದರ್ (87) ನಗರಗಳಲ್ಲಿ ಧೂಳಿನ ವಾತಾವರಣದಿಂದಾಗಿ ಸ್ವಲ್ಪ ಮಟ್ಟಿಗೆ ಹೆಚ್ಚಿನ ಎಕ್ಯೂಐ ಕಂಡುಬಂದಿದೆ.

ಕರ್ನಾಟಕದ ಇನ್ನಷ್ಟು ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

Follow Us
ಭಾವನಾ ಹೆಗಡೆ
ಭಾವನಾ ಹೆಗಡೆ

ಭಾವನಾ ಹೆಗಡೆ ಉತ್ತರ ಕನ್ನಡ ಜಿಲ್ಲೆಯ ಸಿದ್ದಾಪುರ ತಾಲೂಕಿನವರು. ಬಿಎಸ್ಸಿ ಪದವಿ ಮುಗಿಸಿ ಪತ್ರಿಕೋದ್ಯಮ ಮತ್ತು ಸಮೂಹ ಸಂವಹನದಲ್ಲಿ ಡಿಪ್ಲೊಮಾ ಮಾಡಿದ್ದಾರೆ. ಪತ್ರಿಕೋದ್ಯಮ ಇವರು ಇಷ್ಟಪಟ್ಟು ಆಯ್ದುಕೊಂಡ ಕ್ಷೇತ್ರ. ಟಿವಿ9 ಡಿಜಿಟಲ್‌ನಲ್ಲಿ ವೃತ್ತಿ ಜೀವನ ಆರಂಭಿಸಿರುವ ಇವರು, ಸಂಸ್ಥೆಯಲ್ಲಿ ಒಂದು ವರ್ಷದ ವೃತ್ತಿ ಅನುಭವ ಹೊಂದಿದ್ದಾರೆ. ರಾಜ್ಯ ಮತ್ತು ರಾಷ್ಟ್ರಕ್ಕೆ ಸಂಬಂಧಿಸಿದ ಕ್ಷಣಕ್ಷಣದ ಮಾಹಿತಿಗಳನ್ನು ಓದುಗರಿಗೆ ಒದಗಿಸುವ ಆಶಯ ಹೊಂದಿದ್ದಾರೆ.

Read More
ಆಶಾ ಕಾರ್ಯಕರ್ತೆಯರು ಮತ್ತು ಸರ್ಕಾರದ ನಡುವೆ ಕೊಂಡಿಯಾದವರು ಇವರೇ
ಆಶಾ ಕಾರ್ಯಕರ್ತೆಯರು ಮತ್ತು ಸರ್ಕಾರದ ನಡುವೆ ಕೊಂಡಿಯಾದವರು ಇವರೇ
ತಿರುಪ್ಪರಣಕುಂದ್ರಮ್ ಬೆಟ್ಟದಲ್ಲಿ ದೀಪ ಬೆಳಗುತ್ತಿದ್ದಂತೆ ಭಾವುಕರಾದ ಭಕ್ತರು
ತಿರುಪ್ಪರಣಕುಂದ್ರಮ್ ಬೆಟ್ಟದಲ್ಲಿ ದೀಪ ಬೆಳಗುತ್ತಿದ್ದಂತೆ ಭಾವುಕರಾದ ಭಕ್ತರು
ಕ್ಷೇತ್ರ ಮರುವಿಂಗಡಣೆ ವಿಧೇಯಕ​ ಕುರಿತು ರಾಹುಲ್ ಗಾಂಧಿ ಸುದ್ದಿಗೋಷ್ಠಿ
ಕ್ಷೇತ್ರ ಮರುವಿಂಗಡಣೆ ವಿಧೇಯಕ​ ಕುರಿತು ರಾಹುಲ್ ಗಾಂಧಿ ಸುದ್ದಿಗೋಷ್ಠಿ
ಆಶಾ ಕಾರ್ಯಕರ್ತೆಯರಿಗೆ ಗುಡ್‌ನ್ಯೂಸ್‌: ಸಿಎಂ ಸಂಧಾನ ಸಕ್ಸಸ್‌
ಆಶಾ ಕಾರ್ಯಕರ್ತೆಯರಿಗೆ ಗುಡ್‌ನ್ಯೂಸ್‌: ಸಿಎಂ ಸಂಧಾನ ಸಕ್ಸಸ್‌
ಬಿಗ್​​ಬಾಸ್ ಸ್ಪರ್ಧಿಯ ಅನುಕರಣೆ ಮಾಡಿದ ಕಿಚ್ಚ ಸುದೀಪ್: ವಿಡಿಯೋ ನೋಡಿ
ಬಿಗ್​​ಬಾಸ್ ಸ್ಪರ್ಧಿಯ ಅನುಕರಣೆ ಮಾಡಿದ ಕಿಚ್ಚ ಸುದೀಪ್: ವಿಡಿಯೋ ನೋಡಿ
ಧರ್ಮ ದಂಗಲ್: ಕಾರ್ಯಕ್ರಮದಿಂದ ಅರ್ಧಕ್ಕೆ ಎದ್ದು ಹೋದ ವಿಜಯೇಂದ್ರ
ಧರ್ಮ ದಂಗಲ್: ಕಾರ್ಯಕ್ರಮದಿಂದ ಅರ್ಧಕ್ಕೆ ಎದ್ದು ಹೋದ ವಿಜಯೇಂದ್ರ
ಬೆಂಗಳೂರು-ಮೈಸೂರು ಎಕ್ಸ್​ಪ್ರೆಸ್ ಹೆದ್ದಾರಿಯಲ್ಲಿ ಭೀಕರ ಅಪಘಾತ: ಮೂವರು ಸಾವು
ಬೆಂಗಳೂರು-ಮೈಸೂರು ಎಕ್ಸ್​ಪ್ರೆಸ್ ಹೆದ್ದಾರಿಯಲ್ಲಿ ಭೀಕರ ಅಪಘಾತ: ಮೂವರು ಸಾವು
ಯಶಸ್ ಚಾಣಾಕ್ಷತೆಗೆ ಮೆಚ್ಚಿದ ಸುದೀಪ್; ಕಿಚ್ಚನ ಚಪ್ಪಾಳೆ ಫಿಕ್ಸ್?
ಯಶಸ್ ಚಾಣಾಕ್ಷತೆಗೆ ಮೆಚ್ಚಿದ ಸುದೀಪ್; ಕಿಚ್ಚನ ಚಪ್ಪಾಳೆ ಫಿಕ್ಸ್?
ಕ್ಷೇತ್ರ ಪುನರ್ವಿಂಗಡಣೆ ವಿಚಾರದಲ್ಲಿ ನಮ್ಮ ಧ್ವನಿ ಅಡಗಿಸಲಾಗಲ್ಲ: ಡಿಕೆಶಿ
ಕ್ಷೇತ್ರ ಪುನರ್ವಿಂಗಡಣೆ ವಿಚಾರದಲ್ಲಿ ನಮ್ಮ ಧ್ವನಿ ಅಡಗಿಸಲಾಗಲ್ಲ: ಡಿಕೆಶಿ
ಸಿದ್ದರಾಮಯ್ಯ ಕುರಿತ ಸ್ಟಿಂಗ್​ ಆಪರೇಷನ್ ಪ್ರಕರಣಕ್ಕೆ ಕೇರಳ ನಂಟು
ಸಿದ್ದರಾಮಯ್ಯ ಕುರಿತ ಸ್ಟಿಂಗ್​ ಆಪರೇಷನ್ ಪ್ರಕರಣಕ್ಕೆ ಕೇರಳ ನಂಟು