ಕಾವೇರಿ ಕಿಚ್ಚು.. ಅನ್ನದಾತರ ಸಿಟ್ಟು: ಸರ್ವಪಕ್ಷ ಸಭೆ ಬಳಿಕ ವಿರೋಧ ಪಕ್ಷಗಳ ನಾಯಕರು ಹೇಳಿದ್ದೇನು?

Cauvery Water Dispute: ಕಾವೇರಿ ಕಿಚ್ಚು ಹೆಚ್ಚಾಗುತ್ತಿದ್ದಂತೆ ಪ್ರಕರಣ ಸುಪ್ರೀಂಕೋರ್ಟ್ ಅಂಗಳಕ್ಕೆ ತಲುಪಿದ್ದು ಹೊಸ ಪೀಠ ರಚಿಸುವುದಾಗಿ ಸುಪ್ರೀಂಕೋರ್ಟ್ ತಿಳಿಸಿದೆ. ಮತ್ತೊಂದೆಡೆ ಇಂದು ಸಿಎಂ ಸಿದ್ದರಾಮಯ್ಯ ಸರ್ವಪಕ್ಷ ಸಭೆ ಕರೆದು ಚರ್ಚೆ ನಡೆಸಿದ್ದಾರೆ. ಸಭೆಯಲ್ಲಿ ವಿಪಕ್ಷ ನಾಯಕರು ಸಿಎಂಗೆ ಸಲಹೆಗಳನ್ನು ನೀಡಿದ್ದಾರೆ. ಇನ್ನು ವಿಪಕ್ಷ ನಾಯಕರು ಸಭೆ ಬಳಿಕ ಏನು ಹೇಳಿದರು ಎಂಬ ಮಾಹಿತಿ ಇಲ್ಲಿದೆ.

ಕಾವೇರಿ ಕಿಚ್ಚು.. ಅನ್ನದಾತರ ಸಿಟ್ಟು: ಸರ್ವಪಕ್ಷ ಸಭೆ ಬಳಿಕ ವಿರೋಧ ಪಕ್ಷಗಳ ನಾಯಕರು ಹೇಳಿದ್ದೇನು?
ಸರ್ವಪಕ್ಷ ಸಭೆ
Follow us
ಪ್ರಸನ್ನ ಗಾಂವ್ಕರ್​
| Updated By: ವಿವೇಕ ಬಿರಾದಾರ

Updated on:Aug 23, 2023 | 3:12 PM

ಬೆಂಗಳೂರು, ಆ.23: ಕಾವೇರಿ ನದಿಯಿಂದ ತಮಿಳುನಾಡಿಗೆ ನೀರು ಬಿಡುಗಡೆ ಮಾಡಿರುವುದು ರಾಜ್ಯದಲ್ಲಿ ಆಕ್ರೋಶಕ್ಕೆ ಕಾರಣವಾಗಿದೆ(Cauvery Water Dispute). ಮುಂಗಾರು ಮಳೆ ಕೈಕೊಟ್ಟು ರಾಜ್ಯದ ಜಲಾಶಯಗಳ ನೀರಿನ ಮಟ್ಟ ಕುಸಿದಿದ್ದು ಈಗ ತಮಿಳುನಾಡಿಗೆ ನೀರು ಬಿಟ್ಟ ಬಗ್ಗೆ ವಿಪಕ್ಷಗಳು ಕಿಡಿಕಾರಿದ್ದವು(Opposition Party). ಮತ್ತೊಂದೆಡೆ ಮಂಡ್ಯದಲ್ಲಿ ರೈತರು ನಿರಂತರವಾಗಿ ಸರ್ಕಾರದ ವಿರುದ್ಧ ಪ್ರತಿಭಟನೆಗಳನ್ನು ಹಮ್ಮಿಕೊಳ್ಳುತ್ತಿದ್ದಾರೆ. ಇನ್ನು ಕಾವೇರಿ ಕಿಚ್ಚು ಹೆಚ್ಚಾಗುತ್ತಿದ್ದಂತೆ ಪ್ರಕರಣ ಸುಪ್ರೀಂಕೋರ್ಟ್ ಅಂಗಳಕ್ಕೆ ತಲುಪಿದ್ದು ಹೊಸ ಪೀಠ ರಚಿಸುವುದಾಗಿ ಸುಪ್ರೀಂಕೋರ್ಟ್ ತಿಳಿಸಿದೆ. ಮತ್ತೊಂದೆಡೆ ಇಂದು ಸಿಎಂ ಸಿದ್ದರಾಮಯ್ಯ(Siddaramaiah) ಸರ್ವಪಕ್ಷ ಸಭೆ ಕರೆದು ಚರ್ಚೆ ನಡೆಸಿದ್ದಾರೆ. ಸಭೆಯಲ್ಲಿ ವಿಪಕ್ಷ ನಾಯಕರು ಸಿಎಂಗೆ ಸಲಹೆಗಳನ್ನು ನೀಡಿದ್ದಾರೆ. ಇನ್ನು ವಿಪಕ್ಷ ನಾಯಕರು ಸಭೆ ಬಳಿಕ ಏನು ಹೇಳಿದರು ಎಂಬ ಮಾಹಿತಿ ಇಲ್ಲಿದೆ.

ನಾವು ರೈತರ ಪರವಾಗಿ ನಿಲ್ಲಬೇಕು -ಹೆಚ್​.ಡಿ.ಕುಮಾರಸ್ವಾಮಿ

ವಿಧಾನಸೌಧದಲ್ಲಿ ಸಿಎಂ ಸಿದ್ದರಾಮಯ್ಯ ನೇತೃತ್ವದಲ್ಲಿ ನಡೆದ ಸರ್ವಪಕ್ಷ ಸಭೆಯಲ್ಲಿ ಮಾತನಾಡಿದ ಹೆಚ್​ಡಿ ಕುಮಾರಸ್ವಾಮಿ, ಸರ್ಕಾರ ಸರ್ವಪಕ್ಷಗಳ ಸಭೆ ಕರೆದಿರುವುದು ಸಂತಸ ತಂದಿದೆ. ರಾಜ್ಯ ಸರ್ಕಾರ ನಮ್ಮ ರೈತರ ಹಿತರಕ್ಷಣೆ ಮಾಡಬೇಕು. ಇದರಲ್ಲಿ ನಾವು ರಾಜಕೀಯ ಮಾಡುವುದಿಲ್ಲ. ನೀರಾವರಿ ಮಂತ್ರಿಗಳು ರೈತರು ಅರ್ಜಿ ಹಾಕಲಿ ಎಂದಿದ್ದಾರೆ. ಈ ರೀತಿ ಮಾತನಾಡಿರುವುದು ಸರಿಯಲ್ಲ. ಈಗಾಗಲೇ ಸುಪ್ರೀಂಕೋರ್ಟ್​ಗೆ ಸರ್ಕಾರ ಅರ್ಜಿ ಸಲ್ಲಿಸಿದೆ. ನಾವು ಯಾವ ರೀತಿ ವಾದ ಮಂಡಿಸಬೇಕೆಂಬ ಬಗ್ಗೆ ಚರ್ಚಿಸಿ. ನಾವು ರೈತರ ಪರವಾಗಿ ನಿಲ್ಲಬೇಕು ಎಂದರು.

ಇನ್ನು ಸಭೆ ಬಳಿಕ ಮಾತನಾಡಿದ ಹೆಚ್​ಡಿಕೆ, ಸರ್ವಪಕ್ಷ ಸಭೆಯಲ್ಲಿ ಸರ್ಕಾರಕ್ಕೆ ಹಲವು ಸಲಹೆಗಳನ್ನು ಕೊಟ್ಟಿದ್ದೇವೆ. ಸುಪ್ರೀಂಕೋರ್ಟ್​​ನಲ್ಲಿ ಪ್ರಬಲ ವಾದ ಮಂಡನೆಗೆ ಸಲಹೆ ಕೊಡಲಾಗಿದೆ. ಸರ್ಕಾರ ರಾಜ್ಯದ ಜನರ ಹಿತ ಕಾಪಾಡುವ ಭರವಸೆ ನೀಡಿದೆ. ಜನರ ಹಿತಕ್ಕಾಗಿ ತೆಗೆದುಕೊಳ್ಳುವ ನಿರ್ಧಾರಕ್ಕೆ ಬೆಂಬಲ ಕೊಡುತ್ತೇವೆ ಎಂದರು.

ಸುಪ್ರೀಂಕೋರ್ಟ್, ಪ್ರಾಧಿಕಾರದ ಮುಂದೆ ಸರಿಯಾಗಿ ವಾದ ಮಾಡಬೇಕಿತ್ತು: ಬಿಎಸ್​ ಯಡಿಯೂರಪ್ಪ

ಈ ಸಭೆಯನ್ನು ಮೊದಲೇ ಕರೆಯಬೇಕಿತ್ತು. ಆದರೆ ನೀವು ನೀರು ಬಿಟ್ಟ ಮೇಲೆ ಸಭೆ ಕರೆದಿದ್ದೀರಿ. ಸುಪ್ರೀಂಕೋರ್ಟ್ ಹಾಗೂ ಪ್ರಾಧಿಕಾರದ ಮುಂದೆ ಸರಿಯಾದ ವಾದ ಮಂಡಿಸಬೇಕಿತ್ತು. ರಾಜ್ಯದಲ್ಲಿ ಮುಂಗಾರು ಅವಧಿ ಮುಗಿಯುತ್ತಿದೆ. ಆದರೆ ತಮಿಳುನಾಡಿನಲ್ಲಿ ಮುಂಗಾರು ಅವಧಿ ಇನ್ನೂ ಇದೆ. ನಮ್ಮಲ್ಲಿ ಮಳೆ ಕೊರತೆಯೂ ಆಗಿದೆ. ಹೀಗಾಗಿ ಕೋರ್ಟ್ ಮುಂದೆ ಎಲ್ಲಾ ವಿಚಾರ ತಿಳಿಸಬೇಕು. ಸಭೆಯಲ್ಲಿ ಹೇಳಿದ ಮಾಜಿ ಸಿಎಂ ಬಿ.ಎಸ್. ಯಡಿಯೂರಪ್ಪ

ತಮಿಳುನಾಡು ಸರ್ಕಾರದ ವಿರುದ್ಧ ಪ್ರಬಲ ವಾದ ಮಂಡಿಸಬೇಕಾಗಿದೆ -ಬಸವರಾಜ ಬೊಮ್ಮಾಯಿ

ಸರ್ವಪಕ್ಷ ಸಭೆ ಬಳಿಕ ಮಾಜಿ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಪ್ರತಿಕ್ರಿಯೆ ನೀಡಿದ್ದು, ಮೊದಲ ಹಂತದಲ್ಲಿ ಸರ್ಕಾರ ಕೆಲವು ಕಡೆ ಎಡವಿದೆ. ಅದನ್ನು ಹೇಳಿದ್ದೇವೆ, ಆದರೆ ಅದನ್ನು ಅವರು ಒಪ್ಪಿಲ್ಲ. ಆದರೂ 10 ಸಾವಿರ ಕ್ಯೂಸೆಕ್ಸ್ ನೀರು ಬಿಟ್ಟಿದ್ದು ತಪ್ಪು. ಸುಪ್ರೀಂಕೋರ್ಟ್ ನಲ್ಲಿ ಮನವರಿಕೆ ಮಾಡಿಕೊಡಲು ತಿಳಿಸಿದ್ದೇವೆ. ಇರುವ ಸ್ಥಿತಿಯನ್ನು ಪ್ರಬಲವಾಗಿ ವಾದ ಮಾಡಬೇಕು ಅಂತ ನಮ್ಮ ವಕೀಲರಿಗೆ ಹೇಳಿದ್ದೇವೆ. ನೆಲ, ಜಲ ವಿಚಾರವಾಗಿ ನಾವು ರಾಜಕೀಯ ಬಿಟ್ಟು ಸಲಹೆ ಕೊಟ್ಟಿದ್ದೇವೆ. ಅದನ್ನು ಸರ್ಕಾರ ಸ್ವೀಕಾರ ಮಾಡಿ ಕೆಲಸ ಮಾಡುವಂತೆ ಹೇಳಿದ್ದೇವೆ. ಮಹದಾಯಿ ಮತ್ತು ಮೇಕೆದಾಟು ವಿಚಾರವಾಗಿ ಹೆಚ್ಚು ಚರ್ಚೆ ಆಗಿಲ್ಲ. ಕೊನೆಯಲ್ಲಿ ಸಿಎಂ ಇದರ ಬಗ್ಗೆ ಚರ್ಚೆ ಮಾಡಿದರು. ಪ್ರಧಾನಿ ಬಳಿ ನಿಯೋಗ ಹೋಗೋಣ ಅಂದರು. ಆದರೆ ನಾವು ಎರಡು ಪ್ರಕರಣ ಕೋರ್ಟ್​ನಲ್ಲಿ ಇದೆ, ಕೋರ್ಟ್​ನಲ್ಲಿ ಇರುವಾಗ ನಿಯೋಗ ಹೋಗುವುದು ಸರಿಯಲ್ಲ ಅಂತ ಹೇಳಿದ್ದೇವೆ. ಕೋರ್ಟ್​ನಲ್ಲಿ ಸರಿಯಾಗಿ ಇದರ ಬಗ್ಗೆ ಪ್ರಕ್ರಿಯೆ ನಡೆಸಿ ಅಂತ ಸಲಹೆ ಕೊಟ್ಟಿದ್ದೇವೆ ಎಂದು ಬೊಮ್ಮಾಯಿ ಮಾಧ್ಯಮಗಳಿಗೆ ಸಭೆಯಲ್ಲಿ ಕೊಟ್ಟ ಸಲಹೆ ಬಗ್ಗೆ ತಿಳಿಸಿದರು.

ಇದನ್ನು ಓದಿ: ಕರ್ನಾಟಕದ ನೀರಾವರಿ ಸಮಸ್ಯೆ: ಕೇಂದ್ರದ ಬಳಿಗೆ ಸರ್ವಪಕ್ಷ ನಿಯೋಗ ಕರೆದೊಯ್ಯಲು ನಿರ್ಧಾರ- ಸಿದ್ದರಾಮಯ್ಯ

ಮಳೆ ಕೈಕೊಟ್ಟಾಗ ತಮಿಳುನಾಡು ಅನವಶ್ಯಕ ವಿವಾದ ಸೃಷ್ಟಿಸ್ತಿದೆ -ಡಿ.ವಿ.ಸದಾನಂದಗೌಡ

ಮಳೆ ಕೈಕೊಟ್ಟಾಗೆಲ್ಲ ತಮಿಳುನಾಡು ಅನವಶ್ಯಕವಾಗಿ ವಿವಾದದ ಸೃಷ್ಟಿಸುತ್ತಿದೆ. ಇವತ್ತು ಕರ್ನಾಟಕದ ಎಲ್ಲಾ ರಾಜಕೀಯ ಪಕ್ಷಗಳು ಮತ್ತು ನೀರಾವರಿ ತಜ್ಞರು ಸೇರಿ ಹೇಗೆ ಪರಿಸ್ಥಿತಿ ಬಗೆಹರಿಸಬೇಕು ಎಂಬುದರ ಬಗ್ಗೆ ಚರ್ಚೆ ಮಾಡಿದ್ದೇವೆ. ಸರ್ವಪಕ್ಷ ಸಭೆಯಲ್ಲಿ ನಾನು ಎರಡು ವಿಚಾರ ಬಗ್ಗೆ ಸಲಹೆ ಕೊಟ್ಟೆ ಎಂದು ವಿಧಾನಸೌಧದಲ್ಲಿ ಮಾಜಿ ಸಿಎಂ ಡಿ.ವಿ.ಸದಾನಂದಗೌಡ ಮಾಧ್ಯಮಗಳಿಗೆ ತಿಳಿಸಿದರು.

ಕರ್ನಾಟಕದಲ್ಲಿ ನೀರಿನ ಸಮಸ್ಯೆ ಬಹಳಷ್ಟಿದೆ. ನಮ್ಮ ರಾಜ್ಯದ ಜನರಿಗೆ ಪ್ರಾಮುಖ್ಯತೆ ಕೊಡಬೇಕು. ನಾನು ಸಭೆಯಲ್ಲಿ ಎರಡು ವಿಚಾರ ಬಗ್ಗೆ ಸಲಹೆ ಕೊಟ್ಟೆ. ಬೆಂಗಳೂರಿನಲ್ಲಿ ಕುಡಿಯುವ ನೀರಿನ ಸಮಸ್ಯೆ ಇರುವುದರಿಂದ ಅದಕ್ಕೆ ಹೆಚ್ಚು ಆಧ್ಯತೆ ಕೊಡಬೇಕು. ತಮಿಳುನಾಡಿನ ಜಲಾಶಯದಲ್ಲಿ ನೀರು ಹೆಚ್ಚಾಗಿಯೇ ಇದೆ. ಅಲ್ಲಿಯ ಜಲಾಶಯದ ಹೆಚ್ಚುವರಿ ನೀರಿನ ಸಂಗ್ರಹದ ಬಗ್ಗೆ ಸುಪ್ರೀಂ ಕೋರ್ಟ್ ಗಮನಕ್ಕೆ ತರಬೇಕು. ಮಳೆ ನೀರಿನ ಕೊರತೆಯಾದಗ ಜಲಾಶಯದಲ್ಲಿ ಶೇಖರಣೆಯಾದ ಹೆಚ್ಚವರಿ ನೀರನ್ನ ಬಳಕೆ‌ ಮಾಡಿಕೊಳ್ಳಬಹುದು. ಕೊರತೆ ವರ್ಷದಲ್ಲಿ ಏನ್ ಮಾಡಬೇಕು ಅನ್ನೋದ್ರ ಬಗ್ಗೆ ಸುಪ್ರೀಂ ಕೋರ್ಟ್ ಇದುವರೆಗೂ ಹೇಳಿಲ್ಲ. ಕಾವೇರಿ ಪ್ರಾಧಿಕಾರ ಮತ್ತು ಲಿಗಲ್ ಟೀಂ ಇದರ ಬಗ್ಗೆ ಹೆಚ್ಚು ಗಮನ ಹರಿಸಿಲ್ಲ. ಈ ಎರಡನ್ನೂ ಡಿಫೆಂಡ್ ಮಾಡಿದ್ರೆ ಎಷ್ಟು ನೀರು ಬಿಡಬೇಕು ಅಂತ ಹೇಳಬಹುದು. ಬರೀ ಮ್ಯಾಥಮೆಟಿಕಲ್ ಕ್ಯಾಲ್ಕ್ಯುಲೇಟ್ ಮಾಡಲು ಆಗೋದಿಲ್ಲ. ಯಾಕೆಂದರೆ ಸುಪ್ರೀಂ ಕೋರ್ಟ್ ಆದೇಶಗಳು ನಮ್ಮ ಅವಾರ್ಡ್ ಗಳು ಈಗಾಗಲೇ ಉರ್ಜಿತದಲ್ಲಿದ್ದೆ. ಈ ಹಂತದಲ್ಲಿ ಮ್ಯಾಥಮೆಟಿಕಲ್ ಕ್ಯಾಲ್ಕ್ಯುಲೇಟ್ ಬರೋದಿಲ್ಲ. ಈ ಅಂಶಗಳ ಬಗ್ಗೆ ಸಭೆಯಲ್ಲಿ ಗಮನಕ್ಕೆ ತಂದಿದ್ದೇನೆ‌ ಎಂದರು.

ರಾಜ್ಯದ ಪ್ರಮುಖ ಸುದ್ದಿಗಳ ಬಗ್ಗೆ ಮತ್ತಷ್ಟು ಸುದ್ದಿಗಳನ್ನು ಓದಲು ಇದರ ಮೇಲೆ ಕ್ಲಿಕ್ ಮಾಡಿ

Published On - 2:48 pm, Wed, 23 August 23

ರಾಜ್ಯ ಬಿಜೆಪಿ ನಾಯಕರನ್ನು ಪ್ರಧಾನಿ ಮೋದಿಯವರೇ ಸರಿಮಾಡಬೇಕು: ಕಾರ್ಯಕರ್ತ
ರಾಜ್ಯ ಬಿಜೆಪಿ ನಾಯಕರನ್ನು ಪ್ರಧಾನಿ ಮೋದಿಯವರೇ ಸರಿಮಾಡಬೇಕು: ಕಾರ್ಯಕರ್ತ
‘ಹೊರಗೆ ಕಳಿಸುತ್ತೇನೆ’ ನಗುತ್ತಲೇ ರಜತ್​ಗೆ ಎಚ್ಚರಿಕೆ ಕೊಟ್ಟ ಕಿಚ್ಚ
‘ಹೊರಗೆ ಕಳಿಸುತ್ತೇನೆ’ ನಗುತ್ತಲೇ ರಜತ್​ಗೆ ಎಚ್ಚರಿಕೆ ಕೊಟ್ಟ ಕಿಚ್ಚ
ಮೂರನೇ ಸೋಲಿನಿಂದ ನಿಖಿಲ್ ಕುಮಾರಸ್ವಾಮಿ ಎದೆಗುಂದಬಾರದು: ಜಿಟಿ ದೇವೇಗೌಡ
ಮೂರನೇ ಸೋಲಿನಿಂದ ನಿಖಿಲ್ ಕುಮಾರಸ್ವಾಮಿ ಎದೆಗುಂದಬಾರದು: ಜಿಟಿ ದೇವೇಗೌಡ
ಬೈ ಎಲೆಕ್ಷನ್ ಸೋಲು: TV ಎಸೆದು ನಾಯಕರ ವಿರುದ್ಧ ಬಿಜೆಪಿ ಕಾರ್ಯಕರ್ತ ಆಕ್ರೋಶ
ಬೈ ಎಲೆಕ್ಷನ್ ಸೋಲು: TV ಎಸೆದು ನಾಯಕರ ವಿರುದ್ಧ ಬಿಜೆಪಿ ಕಾರ್ಯಕರ್ತ ಆಕ್ರೋಶ
ಯಡಿಯೂರಪ್ಪ ಒಂದೇ ಕಲ್ಲಿಂದ ಎರಡು ಹಕ್ಕಿ ಹೊಡೆದುರುಳಿಸಿದ್ದಾರೆ: ಯೋಗೇಶ್ವರ್
ಯಡಿಯೂರಪ್ಪ ಒಂದೇ ಕಲ್ಲಿಂದ ಎರಡು ಹಕ್ಕಿ ಹೊಡೆದುರುಳಿಸಿದ್ದಾರೆ: ಯೋಗೇಶ್ವರ್
ಬಿಜೆಪಿ ಹೀನಾಯ ಸೋಲಿಗೆ ಪೂಜ್ಯ ತಂದೆ, ಮಗ ಕಾರಣ: ಗುಡುಗಿದ ಯತ್ನಾಳ್
ಬಿಜೆಪಿ ಹೀನಾಯ ಸೋಲಿಗೆ ಪೂಜ್ಯ ತಂದೆ, ಮಗ ಕಾರಣ: ಗುಡುಗಿದ ಯತ್ನಾಳ್
‘ಬಾಯಲ್ಲಿ ಬರುವ ಮಾತು ವ್ಯಕ್ತಿತ್ವದ ವರ್ಚಸ್ಸು’ ಎಂದ ಸುದೀಪ್
‘ಬಾಯಲ್ಲಿ ಬರುವ ಮಾತು ವ್ಯಕ್ತಿತ್ವದ ವರ್ಚಸ್ಸು’ ಎಂದ ಸುದೀಪ್
ಉಪ ಚುನಾವಣೆಯಲ್ಲಿ ಇಬ್ಬರೂ ಮಾಜಿ ಮುಖ್ಯಮಂತ್ರಿಗಳ ಮಕ್ಕಳಿಗೆ ಸೋಲು
ಉಪ ಚುನಾವಣೆಯಲ್ಲಿ ಇಬ್ಬರೂ ಮಾಜಿ ಮುಖ್ಯಮಂತ್ರಿಗಳ ಮಕ್ಕಳಿಗೆ ಸೋಲು
ಉಪ ಚುನಾವಣೆ ಫಲಿತಾಂಶ 2028ರ ವಿಧಾನಸಭೆ ಚುನಾವಣೆಗೆ ದಿಕ್ಸೂಚಿ: ಡಿಕೆಶಿ
ಉಪ ಚುನಾವಣೆ ಫಲಿತಾಂಶ 2028ರ ವಿಧಾನಸಭೆ ಚುನಾವಣೆಗೆ ದಿಕ್ಸೂಚಿ: ಡಿಕೆಶಿ
ಡಿಕೆ ಶಿವಕುಮಾರ್ ಒಕ್ಕಲಿಗ ಸಮುದಾಯದ ಪರಮೋಚ್ಛ ನಾಯಕ: ಪ್ರದೀಪ್ ಈಶ್ವರ್
ಡಿಕೆ ಶಿವಕುಮಾರ್ ಒಕ್ಕಲಿಗ ಸಮುದಾಯದ ಪರಮೋಚ್ಛ ನಾಯಕ: ಪ್ರದೀಪ್ ಈಶ್ವರ್