AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಗೋವುಗಳನ್ನು ದತ್ತು ಪಡೆಯಲು ಸಚಿವರು, ಸಂಸದರು, ಶಾಸಕರಿಗೆ ಪ್ರಭು ಚವ್ಹಾಣ್ ಮನವಿ

ಕಳೆದ ಒಂದು ವರ್ಷದ ಹಿಂದೆಯೇ ನಾನು ಗೋವುಗಳನ್ನು ದತ್ತು ಪಡೆದು ಪೋಷಿಸುತ್ತಿದ್ದೇನೆ. ಔರಾಗ್ ಪಟ್ಟಣದ ಅಮರೇಶ್ವರ ಗೋ ಶಾಲೆಯಲ್ಲಿ 21 ಗೋವುಗಳನ್ನು ದತ್ತು ಪಡೆದು ಪೋಷಣೆ ಮಾಡುತ್ತಿದ್ದೇನೆ ಎಂದು ಸಚಿವ ಪ್ರಭು ಚವ್ಹಾಣ್ ಹೇಳಿದ್ದಾರೆ.

ಗೋವುಗಳನ್ನು ದತ್ತು ಪಡೆಯಲು ಸಚಿವರು, ಸಂಸದರು, ಶಾಸಕರಿಗೆ ಪ್ರಭು ಚವ್ಹಾಣ್ ಮನವಿ
ಸಚಿವ ಪ್ರಭು ಚೌಹಾಣ್
TV9 Web
| Edited By: |

Updated on:Mar 23, 2023 | 6:24 PM

Share

ಬೆಂಗಳೂರು: ಗೋವುಗಳನ್ನು ದತ್ತು ಪಡೆಯುವಂತೆ ಸಚಿವರು, ಸಂಸದರು, ಶಾಸಕರಿಗೆ ಪಶು ಸಂಗೋಪನೆ ಸಚಿವ ಪ್ರಭು ಚವ್ಹಾಣ್ ಪತ್ರ ಬರೆದಿದ್ದಾರೆ. ಕರ್ನಾಟಕದಲ್ಲಿ ಗೋವುಗಳನ್ನು ಸಂರಕ್ಷಿಸಲು ಸಚಿವರು, ಜನಪ್ರತಿನಿಧಿಗಳು, ಚಿತ್ರರಂಗದ ಕಲಾವಿದರು, ಉದ್ಯಮಿಗಳು, ಸಂಘ-ಸಂಸ್ಥೆಗಳು ಗೋವುಗಳನ್ನು ದತ್ತು ಪಡೆದು ಪೋಷಣೆಗೆ ಮುಂದಾಗಬೇಕು ಎಂದು ಪಶು ಸಂಗೋಪನಾ ಸಚಿವ ಪ್ರಭು ಚವ್ಹಾಣ್ (Prabhu Chauhan) ಮನವಿ ಮಾಡಿದ್ದಾರೆ. ಈಗಾಗಲೇ ಗೋವುಗಳನ್ನು ದತ್ತು ಪಡೆಯುವ ಅಭಿಯಾನವನ್ನು ಆರಂಭಿಸಲಾಗಿದೆ. ಈ ಅಭಿಯಾನದಲ್ಲಿ ಗೋ ಮಾತೆಯನ್ನು ರಕ್ಷಿಸಲು ಗೋ ಪ್ರೇಮಿಗಳಾದ ಎಲ್ಲರೂ ಗೋವುಗಳನ್ನು ದತ್ತು ಪಡೆದು, ಹಸುಗಳ ಪೋಷಣೆ ಮಾಡುವ ಮೂಲಕ ಅಭಿಯಾನವನ್ನು ಯಶಸ್ವಿಗೊಳಿಸುವಂತೆ ಪ್ರಭು ಚವ್ಹಾಣ್ ಪತ್ರ ಬರೆದಿದ್ದಾರೆ.

ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿರವರು ನಿನ್ನೆ ತಮ್ಮ ಜನ್ಮದಿನದ ಅಂಗವಾಗಿ ರಾಷ್ಟ್ರೋತ್ಥಾನ ಗೋ ಶಾಲೆಯ 11 ಗೋವುಗಳನ್ನು ದತ್ತು ಪಡೆಯುವ ಮೂಲಕ ಹುಟ್ಟುಹಬ್ಬವನ್ನು ಆಚರಿಸಿಕೊಂಡು ಗೋ ಸಂತತಿಯ ರಕ್ಷಣೆಗೆ ಕರೆ ನೀಡಿದ್ದಾರೆ. ಈ ಆದರ್ಶವನ್ನು ಎಲ್ಲ ಸಂಸದರು, ಶಾಸಕರು, ವಿವಿಧ ವಲಯಗಳ ಗಣ್ಯರು, ಉದ್ಯಮಿಗಳು ಪಾಲಿಸುವ ಮೂಲಕ ಗೋ ಸಂರಕ್ಷಣೆಗೆ ಮುಂದಾಗುವಂತೆ ಅವರು ಕರೆ ನೀಡಿದ್ದಾರೆ. ಕಳೆದ ಒಂದು ವರ್ಷದ ಹಿಂದೆಯೇ ನಾನು ಗೋವುಗಳನ್ನು ದತ್ತು ಪಡೆದು ಪೋಷಿಸುತ್ತಿದ್ದೇನೆ. ಔರಾಗ್ ಪಟ್ಟಣದ ಅಮರೇಶ್ವರ ಗೋ ಶಾಲೆಯಲ್ಲಿ 21 ಗೋವುಗಳನ್ನು ದತ್ತು ಪಡೆದು ಪೋಷಣೆ ಮಾಡುತ್ತಿದ್ದೇನೆ ಎಂದು ಸಚಿವ ಪ್ರಭು ಚವ್ಹಾಣ್ ಹೇಳಿದ್ದಾರೆ.

ಈ ನಡುವೆ, ಕರ್ನಾಟಕದಲ್ಲಿ ಸಾಕಷ್ಟು ದಿನಗಳಿಂದ ಪಶು ವೈದ್ಯರ ನೇಮಕಾತಿ ನೆನೆಗುದಿಗೆ ಬಿದ್ದಿತ್ತು. ಇದೀಗ 400 ವೈದ್ಯರ ನೇಮಕಕ್ಕೆ ಸಂಪುಟದ ಒಪ್ಪಿಗೆ ಸಿಕ್ಕಿದೆ. ದೇಶದ ಇತಿಹಾಸದಲ್ಲಿ ಕರ್ನಾಟಕದಲ್ಲಿ ಪ್ರಾಣಿ ಸಂಜೀವಿನಿ ವಾಹನ ಜಾರಿಗೆ ತರಲಾಗಿದೆ. ಈಗಾಗಲೇ 291 ಆಂಬುಲೆನ್ಸ್‌ಗಳಿಗೆ ಟೆಂಡರ್‌ ಆಗಿದೆ. ಫೆಬ್ರವರಿ ಅಂತ್ಯದ ವೇಳೆಗೆ ತಾಲೂಕುವಾರು ಒಂದೊಂದು ಆಂಬುಲ್ಯೆನ್ಸ್‌ ನೀಡಲಾಗುತ್ತದೆ. ನಾನು ಅಧಿಕಾರಕ್ಕೆ ಬಂದ ಮೇಲೆ ಗೋ ಹತ್ಯೆ ನಿಷೇಧ ಕಾಯ್ದೆಯನ್ನು ಪರಿಣಾಮಕಾರಿಯಾಗಿ ಜಾರಿಗೆ ತಂದಿದ್ದೇನೆ ಎಂದು ಅವರು ತಿಳಿಸಿದ್ದಾರೆ.

ಇದನ್ನೂ ಓದಿ: ಗೋ ಶಾಲಾ ಆಧರಿತ ಆರ್ಥಿಕತೆ ಅಭಿವೃದ್ದಿಗೆ ಪ್ಲ್ಯಾನ್; ಭಾರತದ ಗೋ ಶಾಲೆಗಳ ಸ್ಥಿತಿಗತಿ ಪರಿಶೀಲನೆ

PM Modi in Varanasi ಗೋವುಗಳ ಬಗ್ಗೆ ಗೇಲಿ ಮಾಡುವವರು ಕೋಟಿಗಟ್ಟಲೆ ಜನರ ಜೀವನೋಪಾಯವೇ ಅವು ಎಂಬುದನ್ನು ಮರೆಯುತ್ತಾರೆ: ಮೋದಿ

Published On - 5:39 pm, Sat, 29 January 22

Follow Us
ಜಪಾನ್ ವಾಯುಪಡೆ ಮುಖ್ಯಸ್ಥರಿಂದ ಭಾರತದ ತೇಜಸ್ ಯುದ್ಧವಿಮಾನ ಹಾರಾಟ
ಜಪಾನ್ ವಾಯುಪಡೆ ಮುಖ್ಯಸ್ಥರಿಂದ ಭಾರತದ ತೇಜಸ್ ಯುದ್ಧವಿಮಾನ ಹಾರಾಟ
ಎಲಿಮಿನೇಷನ್​​​ಗೆ ಮುನ್ನ ಬಿಗ್​​ಬಾಸ್ ಮನೆಯಲ್ಲಿ ನಗುವೋ ನಗು: ವಿಡಿಯೋ
ಎಲಿಮಿನೇಷನ್​​​ಗೆ ಮುನ್ನ ಬಿಗ್​​ಬಾಸ್ ಮನೆಯಲ್ಲಿ ನಗುವೋ ನಗು: ವಿಡಿಯೋ
‘ನೂರೇ ದಿನದಲ್ಲಿ ಭರವಸೆ ಮೂಡಿಸಿದ ನಾಯಕ ಡಿಕೆ ಶಿವಕುಮಾರ್‘​​: ಬಿಜೆಪಿ ನಾಯಕ
‘ನೂರೇ ದಿನದಲ್ಲಿ ಭರವಸೆ ಮೂಡಿಸಿದ ನಾಯಕ ಡಿಕೆ ಶಿವಕುಮಾರ್‘​​: ಬಿಜೆಪಿ ನಾಯಕ
ಕರ್ನಾಟಕದಲ್ಲಿ ಫೈಜರ್ ಕಂಪನಿ ಔಷಧ ಮಾರಾಟಕ್ಕೆ ತಾತ್ಕಾಲಿಕ ತಡೆ
ಕರ್ನಾಟಕದಲ್ಲಿ ಫೈಜರ್ ಕಂಪನಿ ಔಷಧ ಮಾರಾಟಕ್ಕೆ ತಾತ್ಕಾಲಿಕ ತಡೆ
ರಮಾನಾಥ ರೈ ಕಾರು ಅಪಘಾತ: ಕೂದಲೆಳೆ ಅಂತರದಲ್ಲಿ ಮಾಜಿ ಸಚಿವರು ಪಾರು
ರಮಾನಾಥ ರೈ ಕಾರು ಅಪಘಾತ: ಕೂದಲೆಳೆ ಅಂತರದಲ್ಲಿ ಮಾಜಿ ಸಚಿವರು ಪಾರು
ಬೀದರ್‌ನ ದಟ್ಟ ಅರಣ್ಯದಲ್ಲಿ ಪತ್ತೆಯಾಯ್ತು ಪುರಾತನ ವಿಷ್ಣು ದೇವಸ್ಥಾನ!
ಬೀದರ್‌ನ ದಟ್ಟ ಅರಣ್ಯದಲ್ಲಿ ಪತ್ತೆಯಾಯ್ತು ಪುರಾತನ ವಿಷ್ಣು ದೇವಸ್ಥಾನ!
ರಾತ್ರಿ ಸುರಿದ ಭಾರಿ ಮಳೆಗೆ ಆನೇಕಲ್ ತತ್ತರ: ಅಂಡರ್‌ಪಾಸ್​​ ಜಲಾವೃತ
ರಾತ್ರಿ ಸುರಿದ ಭಾರಿ ಮಳೆಗೆ ಆನೇಕಲ್ ತತ್ತರ: ಅಂಡರ್‌ಪಾಸ್​​ ಜಲಾವೃತ
ದೇವರ ಮೂರ್ತಿ ಎದುರಲ್ಲೇ ಕಿರಣ್ ಶಾಸ್ತ್ರಿ ಕಳ್ಳಾಟ; ಬಯಲು ಮಾಡಿದ ಸುದೀಪ್
ದೇವರ ಮೂರ್ತಿ ಎದುರಲ್ಲೇ ಕಿರಣ್ ಶಾಸ್ತ್ರಿ ಕಳ್ಳಾಟ; ಬಯಲು ಮಾಡಿದ ಸುದೀಪ್
ಹೆಚ್ಚುತ್ತಿರುವ ಕಸ್ತೂರಿ ರಂಗನ್ ಕಿಚ್ಚು ನಾಳೆ ಶೃಂಗೇರಿ ಬಂದ್​​ಗೆ ಕರೆ!
ಹೆಚ್ಚುತ್ತಿರುವ ಕಸ್ತೂರಿ ರಂಗನ್ ಕಿಚ್ಚು ನಾಳೆ ಶೃಂಗೇರಿ ಬಂದ್​​ಗೆ ಕರೆ!
ಇಸ್ಲಾಂಪೇಟೆಯಲ್ಲಿ ಮತ್ತೆ ಗಣಪತಿ ಮೆರವಣಿಗೆಗೆ ಶಾಸಕ ಕೃಷ್ಣಾನಾಯಕ್ ಚಾಲನೆ!
ಇಸ್ಲಾಂಪೇಟೆಯಲ್ಲಿ ಮತ್ತೆ ಗಣಪತಿ ಮೆರವಣಿಗೆಗೆ ಶಾಸಕ ಕೃಷ್ಣಾನಾಯಕ್ ಚಾಲನೆ!