AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಕರ್ನಾಟಕ ವಾಯು ಗುಣಮಟ್ಟ ವರದಿ: ಬೆಂಗಳೂರಿನಲ್ಲಿ ಹೆಚ್ಚಿದ ವಾಯು ಮಾಲಿನ್ಯ!

ಇಂದು ಕರ್ನಾಟಕದಾದ್ಯಂತ ವಾಯು ಗುಣಮಟ್ಟ ಸೂಚ್ಯಂಕ (AQI) ದಾಖಲಾಗಿದ್ದು, ರಾಜಧಾನಿ ಬೆಂಗಳೂರಿನಲ್ಲಿ ಹೆಚ್ಚುತ್ತಿರುವ ವಾಹನ ದಟ್ಟಣೆಯಿಂದಾಗಿ ಗಾಳಿಯ ಗುಣಮಟ್ಟ 'ಕಳಪೆ' ಮಟ್ಟ ತಲುಪಿದೆ. ಅದೇ ವೇಳೆ ಮಡಿಕೇರಿ, ಹುಬ್ಬಳ್ಳಿ, ಮೈಸೂರು ಹಾಗೂ ಮಂಗಳೂರು ನಗರಗಳಲ್ಲಿ ವಾಯು ಗುಣಮಟ್ಟ ಉತ್ತಮದಿಂದ ಸಾಧಾರಣ ಮಟ್ಟದಲ್ಲಿದೆ. ಮುನ್ನೆಚ್ಚರಿಕೆಯಾಗಿ ಬೆಂಗಳೂರಿನಲ್ಲಿ ಬೆಳಗಿನ ಜಾವ ಮಾಸ್ಕ್ ಧರಿಸುವುದು ಸೂಕ್ತ.

ಕರ್ನಾಟಕ ವಾಯು ಗುಣಮಟ್ಟ ವರದಿ: ಬೆಂಗಳೂರಿನಲ್ಲಿ ಹೆಚ್ಚಿದ ವಾಯು ಮಾಲಿನ್ಯ!
ಬೆಂಗಳೂರಿನಲ್ಲಿ ಹೆಚ್ಚಿದ ವಾಯು ಮಾಲಿನ್ಯ!
ಭಾವನಾ ಹೆಗಡೆ
|

Updated on: Oct 02, 2026 | 6:34 AM

Share

ಮುಖ್ಯಾಂಶಗಳು

  • ಬೆಂಗಳೂರಿನ ಎಕ್ಯೂಐ 120-135 ತಲುಪಿ ಕಳಪೆ ಮಟ್ಟಕ್ಕೆ ಕುಸಿದಿದೆ.
  • ಮಡಿಕೇರಿಯಲ್ಲಿ ಎಕ್ಯೂಐ 25 ದಾಟಿ ಅತ್ಯಂತ ಶುದ್ಧ ಗಾಳಿ ದಾಖಲಾಗಿದೆ.
  • ಹುಬ್ಬಳ್ಳಿ, ಮೈಸೂರು ಹಾಗೂ ಮಂಗಳೂರಿನಲ್ಲಿ ವಾಯು ಗುಣಮಟ್ಟ ಸಾಧಾರಣವಾಗಿದೆ.

ಬೆಂಗಳೂರು, ಅಕ್ಟೋಬರ್ 02: ಇಂದು ಕರ್ನಾಟಕದ ಪ್ರಮುಖ ನಗರಗಳಲ್ಲಿ ವಾಯು ಗುಣಮಟ್ಟ ಸೂಚ್ಯಂಕ ದಾಖಲಾಗಿದ್ದು, ಬೆಂಗಳೂರು ಸೇರಿದಂತೆ ವಿವಿಧ ಪ್ರದೇಶಗಳಲ್ಲಿ ಗಾಳಿಯ ಗುಣಮಟ್ಟದಲ್ಲಿ ಏರಿಳಿತ ಕಂಡುಬಂದಿದೆ. ಬೆಂಗಳೂರಿನಲ್ಲಿ ಇಂದು ಸರಾಸರಿ ಎಕ್ಯೂಐ 120 ರಿಂದ 135 ರ ವ್ಯಾಪ್ತಿಯಲ್ಲಿ ದಾಖಲಾಗಿದ್ದು, ಇದು ಕಳಪೆ ವಿಭಾಗಕ್ಕೆ ಸೇರುತ್ತದೆ. ನಗರದ ವಾಹನ ಸಂಚಾರ ದಟ್ಟಣೆ ಹಾಗೂ ರಸ್ತೆ ಧೂಳು ಇದಕ್ಕೆ ಮುಖ್ಯ ಕಾರಣವಾಗಿದೆ.

ಬೆಂಗಳೂರಿನ ವಿವಿಧ ಪ್ರದೇಶಗಳ ಎಕ್ಯೂಐ

  • ಬಿಟಿಎಂ ಲೇಔಟ್ : ನಗರದ ಅತ್ಯಂತ ಹೆಚ್ಚು ಮಾಲಿನ್ಯ ಹೊಂದಿದ ಪ್ರದೇಶವಾಗಿ ದಾಖಲಾಗಿದ್ದು, ಇಲ್ಲಿ ಎಕ್ಯೂಐ 130ಕ್ಕೂ ಹೆಚ್ಚು ತಲುಪಿದೆ.
  • BWSSB ಪ್ರದೇಶ ಮತ್ತು ಪೀಣ್ಯ: ಇಲ್ಲಿ ಎಕ್ಯೂಐ 65 ರಿಂದ 85 ರ ಆಜುಬಾಜಿನಲ್ಲಿದ್ದು, ‘ಸಾಧಾರಣ’ ಮಟ್ಟದಲ್ಲಿದೆ.

ಸೂಕ್ಷ್ಮ ಕಣಗಳಾದ PM2.5 ಮತ್ತು PM10 ಪ್ರಮಾಣ ಹೆಚ್ಚಿರುವುದರಿಂದ ವೃದ್ಧರು, ಮಕ್ಕಳು ಹಾಗೂ ಉಸಿರಾಟದ ತೊಂದರೆ ಇರುವವರು ಹೊರಗಡೆ ಸಂಚರಿಸುವಾಗ ಮುನ್ನೆಚ್ಚರಿಕೆ ವಹಿಸುವುದು ಸೂಕ್ತ.

ರಾಜ್ಯದ ಇತರೆ ನಗರಗಳ ಗಾಳಿಯ ಗುಣಮಟ್ಟ ಹೇಗಿದೆ?

ಬೆಂಗಳೂರಿಗೆ ಹೋಲಿಸಿದರೆ ರಾಜ್ಯದ ಮಲೆನಾಡು ಹಾಗೂ ಉತ್ತರ ಕರ್ನಾಟಕದ ಕೆಲವು ಭಾಗಗಳಲ್ಲಿ ವಾಯು ಗುಣಮಟ್ಟ ಉತ್ತಮವಾಗಿದೆ.

  • ಮಡಿಕೇರಿ : ಅತ್ಯಂತ ಶುದ್ಧ ಗಾಳಿ ಹೊಂದಿದ್ದು, ಎಕ್ಯೂಐ 25 – 35 ದಾಖಲಾಗಿದೆ
  • ಗದಗ ಮತ್ತು ಹುಬ್ಬಳ್ಳಿ: ಎಕ್ಯೂಐ 36 – 60ರಷ್ಟಿದ್ದು, ‘ಉತ್ತಮದಿಂದ ಸಾಧಾರಣ’ ಮಟ್ಟದಲ್ಲಿದೆ.
  • ಮೈಸೂರು ಹಾಗೂ ಮಂಗಳೂರು : ಎಕ್ಯೂಐ 50 – 75 ರ ನಡುವೆ ದಾಖಲಾಗಿದ್ದು, ವಾಯು ಗುಣಮಟ್ಟ ಸ್ಥಿರವಾಗಿದೆ.

ಬೆಂಗಳೂರಿನಂತಹ ಕಳಪೆ ವಾಯು ಗುಣಮಟ್ಟವಿರುವ ಪ್ರದೇಶಗಳಲ್ಲಿ ಬೆಳಗಿನ ಜಾವ ವಾಯುವಿಹಾರಕ್ಕೆ ತೆರಳುವಾಗ ಮಾಸ್ಕ್ ಧರಿಸುವುದು ಹಾಗೂ ತೆರೆದ ಸ್ಥಳಗಳಲ್ಲಿ ದೀರ್ಘಕಾಲ ಇರುವುದನ್ನು ಕಮ್ಮಿ ಮಾಡುವುದು ಆರೋಗ್ಯಕ್ಕೆ ಒಳ್ಳೆಯದು.

ಕರ್ನಾಟಕದ ಇನ್ನಷ್ಟು ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

Follow Us
ಭಾವನಾ ಹೆಗಡೆ
ಭಾವನಾ ಹೆಗಡೆ

ಭಾವನಾ ಹೆಗಡೆ ಉತ್ತರ ಕನ್ನಡ ಜಿಲ್ಲೆಯ ಸಿದ್ದಾಪುರ ತಾಲೂಕಿನವರು. ಬಿಎಸ್ಸಿ ಪದವಿ ಮುಗಿಸಿ ಪತ್ರಿಕೋದ್ಯಮ ಮತ್ತು ಸಮೂಹ ಸಂವಹನದಲ್ಲಿ ಡಿಪ್ಲೊಮಾ ಮಾಡಿದ್ದಾರೆ ಪತ್ರಿಕೋದ್ಯಮ ಇವರು ಇಷ್ಟ ಪಟ್ಟು ಆಯ್ದುಕೊಂಡ ಕ್ಷೇತ್ರ. ಟಿವಿ9 ಡಿಜಿಟಲ್​ನಲ್ಲಿ ವೃತ್ತಿ ಜೀವನ ಆರಂಭಿಸಿದ್ದಾರೆ. ರಾಜ್ಯ, ರಾಷ್ಟ್ರಕ್ಕೆ ಸಂಬಂಧಿಸಿದ ಕ್ಷಣಕ್ಷಣದ ಮಾಹಿತಿಗಳನ್ನು ಓದುಗರಿಗೆ ಒದಗಿಸುವ ಆಶಯ ಹೊಂದಿದ್ದಾರೆ.

Read More
ದಸರಾದಲ್ಲಿ ಭಾಗವಹಿಸಲು ಕನ್ನಡ ಚಿತ್ರರಂಗಕ್ಕೆ ಸಿಎಂ ವಿಶೇಷ ಆಹ್ವಾನ
ದಸರಾದಲ್ಲಿ ಭಾಗವಹಿಸಲು ಕನ್ನಡ ಚಿತ್ರರಂಗಕ್ಕೆ ಸಿಎಂ ವಿಶೇಷ ಆಹ್ವಾನ
ಸ್ಮಿತ್ ದೀರ್ಘಾಯುಷ್ಯಕ್ಕಾಗಿ ಸೋಮನಾಥ ದೇವಸ್ಥಾನದಲ್ಲಿ ಮಹಾಮೃತ್ಯುಂಜಯ ಜಪ
ಸ್ಮಿತ್ ದೀರ್ಘಾಯುಷ್ಯಕ್ಕಾಗಿ ಸೋಮನಾಥ ದೇವಸ್ಥಾನದಲ್ಲಿ ಮಹಾಮೃತ್ಯುಂಜಯ ಜಪ
ವಿಶೇಷಚೇತನರ ಪ್ರತಿಭಟನೆ: ಮಳೆಯಲ್ಲೇ ಸಮಸ್ಯೆ ಆಲಿಸಿದ ಆರ್​ ಅಶೋಕ್​​
ವಿಶೇಷಚೇತನರ ಪ್ರತಿಭಟನೆ: ಮಳೆಯಲ್ಲೇ ಸಮಸ್ಯೆ ಆಲಿಸಿದ ಆರ್​ ಅಶೋಕ್​​
ಸ್ಮಿತ್ ಮಚ್ಛಾರ್ ಚೇತರಿಕೆಗೆ ಕಾಶಿ ವಿಶ್ವನಾಥ ದೇವಸ್ಥಾನದಲ್ಲಿ ವಿಶೇಷ ಪೂಜೆ
ಸ್ಮಿತ್ ಮಚ್ಛಾರ್ ಚೇತರಿಕೆಗೆ ಕಾಶಿ ವಿಶ್ವನಾಥ ದೇವಸ್ಥಾನದಲ್ಲಿ ವಿಶೇಷ ಪೂಜೆ
ಸೆಷನ್ಸ್ ಕೋರ್ಟ್‌ಗೆ ಮರು ಅರ್ಜಿ ಸಲ್ಲಿಸಲು ಪ್ರಿಯಾಂಕ್, ನಲಪಾಡ್‌ಗೆ ಸೂಚನೆ
ಸೆಷನ್ಸ್ ಕೋರ್ಟ್‌ಗೆ ಮರು ಅರ್ಜಿ ಸಲ್ಲಿಸಲು ಪ್ರಿಯಾಂಕ್, ನಲಪಾಡ್‌ಗೆ ಸೂಚನೆ
ಯೋಗೇಶ್​​ ಗೌಡ ಕೊಲೆ ಕೇಸ್​​: ವಿನಯ್​​ ಕುಲಕರ್ಣಿಗೆ 'ಸುಪ್ರೀಂ' ಸಂಕಷ್ಟ?
ಯೋಗೇಶ್​​ ಗೌಡ ಕೊಲೆ ಕೇಸ್​​: ವಿನಯ್​​ ಕುಲಕರ್ಣಿಗೆ 'ಸುಪ್ರೀಂ' ಸಂಕಷ್ಟ?
ಪ್ರಶಾಂತ್, ಗಗನ್ ತಮಾಷೆ ಮಾತಿಗೆ ಬಿದ್ದು ಬಿದ್ದು ನಕ್ಕ ಸೋನಿಕಾ ಗೌಡ
ಪ್ರಶಾಂತ್, ಗಗನ್ ತಮಾಷೆ ಮಾತಿಗೆ ಬಿದ್ದು ಬಿದ್ದು ನಕ್ಕ ಸೋನಿಕಾ ಗೌಡ
ಬೋಗಸ್ ಫಾರ್ಮ್ ನೀಡಿ ಮತದಾರರ ಹೆಸರು ಡಿಲೀಟ್ ಆರೋಪ:  25 ಜನರ ವಿರುದ್ಧ FIR
ಬೋಗಸ್ ಫಾರ್ಮ್ ನೀಡಿ ಮತದಾರರ ಹೆಸರು ಡಿಲೀಟ್ ಆರೋಪ:  25 ಜನರ ವಿರುದ್ಧ FIR
ಉತ್ತರಾಖಂಡದಲ್ಲಿ ಭಾರೀ ಭೂಕುಸಿತ; ಗುಡ್ಡ ಕುಸಿಯುವ ಭಯಾನಕ ವಿಡಿಯೋ ವೈರಲ್
ಉತ್ತರಾಖಂಡದಲ್ಲಿ ಭಾರೀ ಭೂಕುಸಿತ; ಗುಡ್ಡ ಕುಸಿಯುವ ಭಯಾನಕ ವಿಡಿಯೋ ವೈರಲ್
ಸೌಜನ್ಯ ಕೇಸ್​ ತನಿಖೆಗೆ ಮಂಗಳೂರಲ್ಲಿ ಎಸ್​ಐಟಿ ಕಚೇರಿ ಓಪನ್: ಮೊದಲ ಸಭೆ
ಸೌಜನ್ಯ ಕೇಸ್​ ತನಿಖೆಗೆ ಮಂಗಳೂರಲ್ಲಿ ಎಸ್​ಐಟಿ ಕಚೇರಿ ಓಪನ್: ಮೊದಲ ಸಭೆ