AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಕರ್ನಾಟಕದ ವಾಯು ಗುಣಮಟ್ಟ: ಇಂದು ಬೆಂಗಳೂರಿನಲ್ಲಿ AQI ಎಷ್ಟಿದೆ? ಮೈಸೂರು, ಮಂಗಳೂರು ಸೇರಿದಂತೆ ವಿವಿಧ ನಗರಗಳ ಮಾಹಿತಿ ಇಲ್ಲಿದೆ!

ಇಂದು ಕರ್ನಾಟಕದ ವಿವಿಧ ನಗರಗಳ ವಾಯು ಗುಣಮಟ್ಟ ಹೇಗಿದೆ? ಬೆಂಗಳೂರಿನಲ್ಲಿ AQI 112 ದಾಖಲಾಗಿದ್ದರೆ, ಮೈಸೂರಿನಲ್ಲಿ 147, ಕೋಲಾರದಲ್ಲಿ 155 ಹಾಗೂ ರಾಬರ್ಟ್ಸ್‌ಪೇಟೆಯಲ್ಲಿ 159 ದಾಖಲಾಗಿದೆ. ಮಂಗಳೂರು, ಉಡುಪಿ, ಹುಬ್ಬಳ್ಳಿ ಸೇರಿದಂತೆ ವಿವಿಧ ನಗರಗಳ ಇಂದಿನ AQI ವರದಿ ಇಲ್ಲಿದೆ. ಯಾವ ನಗರದಲ್ಲಿ ಗಾಳಿಯ ಗುಣಮಟ್ಟ ಉತ್ತಮವಾಗಿದೆ ಮತ್ತು ಎಲ್ಲಿ ಮಾಲಿನ್ಯದ ಪ್ರಮಾಣ ಹೆಚ್ಚಿದೆ ಎಂಬ ಸಂಪೂರ್ಣ ಮಾಹಿತಿ ತಿಳಿಯಿರಿ.

ಕರ್ನಾಟಕದ ವಾಯು ಗುಣಮಟ್ಟ: ಇಂದು ಬೆಂಗಳೂರಿನಲ್ಲಿ AQI ಎಷ್ಟಿದೆ? ಮೈಸೂರು, ಮಂಗಳೂರು ಸೇರಿದಂತೆ ವಿವಿಧ ನಗರಗಳ ಮಾಹಿತಿ ಇಲ್ಲಿದೆ!
ಸಾಂಸರ್ಭಿಕ ಚಿತ್ರ
ಭಾವನಾ ಹೆಗಡೆ
|

Updated on: Nov 13, 2026 | 7:35 AM

Share

ಮುಖ್ಯಾಂಶಗಳು

  • ಬೆಂಗಳೂರಿನಲ್ಲಿ AQI 112 ದಾಖಲು, ಸಾಧಾರಣ ಮಟ್ಟದಲ್ಲಿ ಮುಂದುವರಿದ ವಾಯುಮಾಲಿನ್ಯ.
  • ಮೈಸೂರು 147, ಕೋಲಾರ 155, ರಾಬರ್ಟ್ಸ್‌ಪೇಟೆಯಲ್ಲಿ 159 AQI ದಾಖಲು.
  • ಹಾಸನ, ಚಿಕ್ಕಮಗಳೂರು, ದಾವಣಗೆರೆಯಲ್ಲಿ ತುಲನಾತ್ಮಕವಾಗಿ ಉತ್ತಮ ಗಾಳಿಯ ಗುಣಮಟ್ಟ ದಾಖಲು.

ಬೆಂಗಳೂರು, ನವೆಂಬರ್ 13: ಬೆಂಗಳೂರು ಸೇರಿದಂತೆ ಕರ್ನಾಟಕದ ವಿವಿಧ ನಗರಗಳಲ್ಲಿ ವಾಯು ಗುಣಮಟ್ಟದಲ್ಲಿ ಏರಿಳಿತ ಮುಂದುವರಿದಿದೆ. ಇಂದಿನ ವಾಯು ಗುಣಮಟ್ಟ ಸೂಚ್ಯಂಕ ವರದಿಯ ಪ್ರಕಾರ, ರಾಜ್ಯದ ಕೆಲವು ನಗರಗಳಲ್ಲಿ ಗಾಳಿಯ ಗುಣಮಟ್ಟ ಸಾಧಾರಣವಾಗಿದ್ದರೆ, ಇನ್ನು ಕೆಲವು ನಗರಗಳಲ್ಲಿ ಮಾಲಿನ್ಯದ ಪ್ರಮಾಣ ಹೆಚ್ಚಾಗಿದೆ. ವಿಶೇಷವಾಗಿ ಬೆಂಗಳೂರು, ಮೈಸೂರು, ಮಂಗಳೂರು, ತುಮಕೂರು ಮತ್ತು ಮಂಡ್ಯ ನಗರಗಳ ವಾಯು ಗುಣಮಟ್ಟದ ಬಗ್ಗೆ ಗಮನಹರಿಸುವ ಅಗತ್ಯವಿದೆ. ವಾಹನಗಳ ಸಂಚಾರ, ನಿರ್ಮಾಣ ಚಟುವಟಿಕೆಗಳು ಮತ್ತು ಧೂಳಿನ ಕಣಗಳು ವಾಯುಮಾಲಿನ್ಯಕ್ಕೆ ಪ್ರಮುಖ ಕಾರಣಗಳಾಗಿವೆ. ಹಾಗಾದರೆ ಇಂದು ಕರ್ನಾಟಕದ ಯಾವ ನಗರದಲ್ಲಿ ಗಾಳಿಯ ಗುಣಮಟ್ಟ ಉತ್ತಮವಾಗಿದೆ? ಬೆಂಗಳೂರಿನ ಪರಿಸ್ಥಿತಿ ಹೇಗಿದೆ?

ಮೈಸೂರಿನಲ್ಲಿ ಮಾಲಿನ್ಯ ಪ್ರಮಾಣ ಹೆಚ್ಚು!

ನವೆಂಬರ್ 13ರ ಲಭ್ಯವಿರುವ ನಗರವಾರು ವಾಯು ಗುಣಮಟ್ಟದ ಅಂದಾಜಿನ ಪ್ರಕಾರ, ಬೆಂಗಳೂರಿನ AQI 112 ದಾಖಲಾಗಿದೆ. ಇದು ಸೂಕ್ಷ್ಮ ಆರೋಗ್ಯ ಸಮಸ್ಯೆ ಇರುವವರಿಗೆ ಎಚ್ಚರಿಕೆ ವಹಿಸುವ ಅಗತ್ಯವಿರುವ ಮಟ್ಟವಾಗಿದೆ. ಬೆಂಗಳೂರಿನ ಯಲಹಂಕದಲ್ಲಿ AQI 99 ದಾಖಲಾಗಿದ್ದು, ನಗರದ ವಿವಿಧ ಪ್ರದೇಶಗಳಲ್ಲಿ ವಾಯು ಗುಣಮಟ್ಟದಲ್ಲಿ ವ್ಯತ್ಯಾಸ ಕಂಡುಬಂದಿದೆ.

ಇನ್ನು ಮೈಸೂರು ನಗರದಲ್ಲಿ AQI 147 ದಾಖಲಾಗಿದ್ದು, ಕರ್ನಾಟಕದ ನಗರಗಳ ಪೈಕಿ ಹೆಚ್ಚಿನ ಮಾಲಿನ್ಯ ಹೊಂದಿರುವ ನಗರಗಳಲ್ಲಿ ಒಂದಾಗಿದೆ. ಮಂಡ್ಯದಲ್ಲಿ 139, ತುಮಕೂರಿನಲ್ಲಿ 119 ಮತ್ತು ಗದಗ-ಬೆಟಗೇರಿಯಲ್ಲಿ 121 AQI ದಾಖಲಾಗಿದೆ. ಕೋಲಾರದಲ್ಲಿ 155 ಹಾಗೂ ರಾಬರ್ಟ್ಸ್‌ಪೇಟೆಯಲ್ಲಿ 159 ದಾಖಲಾಗಿದ್ದು, ಈ ಪ್ರದೇಶಗಳಲ್ಲಿ ವಾಯುಮಾಲಿನ್ಯದ ಪ್ರಮಾಣ ಹೆಚ್ಚಾಗಿದೆ.

ಮಂಗಳೂರು, ಹುಬ್ಬಳ್ಳಿ ಸೇರಿದಂತೆ ಯಾವ ನಗರದಲ್ಲಿ ಗಾಳಿ ಉತ್ತಮವಾಗಿದೆ?

ಕರ್ನಾಟಕದ ಕರಾವಳಿ ಮತ್ತು ಉತ್ತರ ಒಳನಾಡಿನ ಕೆಲವು ನಗರಗಳಲ್ಲಿ ತುಲನಾತ್ಮಕವಾಗಿ ಉತ್ತಮ ಗಾಳಿಯ ಗುಣಮಟ್ಟ ಕಂಡುಬಂದಿದೆ. ಮಂಗಳೂರಿನಲ್ಲಿ AQI 108, ಉಡುಪಿಯಲ್ಲಿ 80 ದಾಖಲಾಗಿದೆ. ಹುಬ್ಬಳ್ಳಿಯಲ್ಲಿ 87, ಬೆಳಗಾವಿಯಲ್ಲಿ 89, ಶಿವಮೊಗ್ಗದಲ್ಲಿ 71 ಹಾಗೂ ಹಾಸನದಲ್ಲಿ 58 AQI ದಾಖಲಾಗಿದೆ.

ಇನ್ನು ದಾವಣಗೆರೆಯಲ್ಲಿ 66, ಚಿಕ್ಕಮಗಳೂರಿನಲ್ಲಿ 63, ವಿಜಯಪುರದಲ್ಲಿ 83, ಕಲಬುರಗಿಯಲ್ಲಿ 83 ಮತ್ತು ಬಳ್ಳಾರಿಯಲ್ಲಿ 99 AQI ದಾಖಲಾಗಿದೆ. ಈ ನಗರಗಳಲ್ಲಿ ಗಾಳಿಯ ಗುಣಮಟ್ಟ ಸಾಧಾರಣ ಮಟ್ಟದಲ್ಲಿದೆ.

AQI ಹೆಚ್ಚಿದ್ದರೆ ಆರೋಗ್ಯದ ಮೇಲೆ ಏನು ಪರಿಣಾಮ?

AQI ಪ್ರಮಾಣ ಹೆಚ್ಚಾದಂತೆ ಗಾಳಿಯಲ್ಲಿರುವ ಧೂಳಿನ ಕಣಗಳು ಮತ್ತು ಮಾಲಿನ್ಯಕಾರಕಗಳಿಂದ ಉಸಿರಾಟದ ಸಮಸ್ಯೆ ಉಂಟಾಗಬಹುದು. ಮಕ್ಕಳು, ವೃದ್ಧರು, ಗರ್ಭಿಣಿಯರು ಹಾಗೂ ಉಸಿರಾಟದ ತೊಂದರೆ ಇರುವವರು ಹೆಚ್ಚಿನ ಎಚ್ಚರಿಕೆ ವಹಿಸಬೇಕು. ಮಾಲಿನ್ಯ ಹೆಚ್ಚಿರುವ ಪ್ರದೇಶಗಳಲ್ಲಿ ದೀರ್ಘಕಾಲ ಹೊರಾಂಗಣ ವ್ಯಾಯಾಮ ಮಾಡುವುದನ್ನು ಕಡಿಮೆ ಮಾಡುವುದು ಉತ್ತಮ.

ಕರ್ನಾಟಕದ ಇನ್ನಷ್ಟು ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

Follow Us
ಭಾವನಾ ಹೆಗಡೆ
ಭಾವನಾ ಹೆಗಡೆ

ಭಾವನಾ ಹೆಗಡೆ ಉತ್ತರ ಕನ್ನಡ ಜಿಲ್ಲೆಯ ಸಿದ್ದಾಪುರ ತಾಲೂಕಿನವರು. ಬಿಎಸ್ಸಿ ಪದವಿ ಮುಗಿಸಿ ಪತ್ರಿಕೋದ್ಯಮ ಮತ್ತು ಸಮೂಹ ಸಂವಹನದಲ್ಲಿ ಡಿಪ್ಲೊಮಾ ಮಾಡಿದ್ದಾರೆ ಪತ್ರಿಕೋದ್ಯಮ ಇವರು ಇಷ್ಟ ಪಟ್ಟು ಆಯ್ದುಕೊಂಡ ಕ್ಷೇತ್ರ. ಟಿವಿ9 ಡಿಜಿಟಲ್​ನಲ್ಲಿ ವೃತ್ತಿ ಜೀವನ ಆರಂಭಿಸಿದ್ದಾರೆ. ರಾಜ್ಯ, ರಾಷ್ಟ್ರಕ್ಕೆ ಸಂಬಂಧಿಸಿದ ಕ್ಷಣಕ್ಷಣದ ಮಾಹಿತಿಗಳನ್ನು ಓದುಗರಿಗೆ ಒದಗಿಸುವ ಆಶಯ ಹೊಂದಿದ್ದಾರೆ.

Read More
ಸರ್ಕಾರಿ ಶಾಲಾ ಮಕ್ಕಳಿಗೆ ಇನ್ಮುಂದೆ ಹೊಸ ವಿನ್ಯಾಸದ ಸಮವಸ್ತ್ರ?
ಸರ್ಕಾರಿ ಶಾಲಾ ಮಕ್ಕಳಿಗೆ ಇನ್ಮುಂದೆ ಹೊಸ ವಿನ್ಯಾಸದ ಸಮವಸ್ತ್ರ?
ಶಿವರಾಜ್ ಕೆಆರ್ ಪೇಟೆ ಹೊಸ ಸಿನಿಮಾ ‘ಹವಾಮಾನ ವರದಿ’ ಶುರುವಾಗಿದ್ದು ಹೀಗೆ..
ಶಿವರಾಜ್ ಕೆಆರ್ ಪೇಟೆ ಹೊಸ ಸಿನಿಮಾ ‘ಹವಾಮಾನ ವರದಿ’ ಶುರುವಾಗಿದ್ದು ಹೀಗೆ..
ಬೆಂಗಳೂರಿನ ಮನಮೋಹಕ ತಾಣ ನಲ್ಲಿಗುಡ್ಡೆ ಅಭಿವೃದ್ಧಿಗೆ ಸರ್ಕಾರದ ಒತ್ತು
ಬೆಂಗಳೂರಿನ ಮನಮೋಹಕ ತಾಣ ನಲ್ಲಿಗುಡ್ಡೆ ಅಭಿವೃದ್ಧಿಗೆ ಸರ್ಕಾರದ ಒತ್ತು
‘ಹವಾಮಾನ ವರದಿ’ ಸಿನಿಮಾ ಬಗ್ಗೆ ನಾಯಕಿ ನಿರೀಕ್ಷಾ ರಾವ್ ಮಾತು: ವಿಡಿಯೋ
‘ಹವಾಮಾನ ವರದಿ’ ಸಿನಿಮಾ ಬಗ್ಗೆ ನಾಯಕಿ ನಿರೀಕ್ಷಾ ರಾವ್ ಮಾತು: ವಿಡಿಯೋ
'ಮೈಲೇಜ್ ಕುಸಿತಕ್ಕೆ ಎಥೆನಾಲ್ ಅಲ್ಲ, ಗುಂಡಿ ಬಿದ್ದ ರಸ್ತೆಗಳೇ ಕಾರಣ': ಅಶೋಕ್
'ಮೈಲೇಜ್ ಕುಸಿತಕ್ಕೆ ಎಥೆನಾಲ್ ಅಲ್ಲ, ಗುಂಡಿ ಬಿದ್ದ ರಸ್ತೆಗಳೇ ಕಾರಣ': ಅಶೋಕ್
ವಾಯುವ್ಯ ಕರ್ನಾಟಕ ಸಾರಿಗೆ ಹೆಸರು ಬದಲಾವಣೆಗೆ ಸರ್ಕಾರ ಆದೇಶ
ವಾಯುವ್ಯ ಕರ್ನಾಟಕ ಸಾರಿಗೆ ಹೆಸರು ಬದಲಾವಣೆಗೆ ಸರ್ಕಾರ ಆದೇಶ
‘ವರ್ಷ 70 ಆದರೂ ನಾನು ತಾಯಿ ರೀತಿ ಕಾಣಲ್ಲ’; ಅನು ಪ್ರಭಾಕರ್
‘ವರ್ಷ 70 ಆದರೂ ನಾನು ತಾಯಿ ರೀತಿ ಕಾಣಲ್ಲ’; ಅನು ಪ್ರಭಾಕರ್
ಯಶಸ್ ವಿರುದ್ಧ ತಿರುಗಿ ಬಿದ್ದ ಆಸಿಯಾ: ಸ್ನೇಹ ಅಂತ್ಯ, ಪೈಪೋಟಿ ಶುರು
ಯಶಸ್ ವಿರುದ್ಧ ತಿರುಗಿ ಬಿದ್ದ ಆಸಿಯಾ: ಸ್ನೇಹ ಅಂತ್ಯ, ಪೈಪೋಟಿ ಶುರು
ಸಚಿವರ ಭಾಷಣಕ್ಕೆ ಕೋಕ್​​: ಕೃಷ್ಣ ಭೈರೇಗೌಡ ಅಸಮಾಧಾನ
ಸಚಿವರ ಭಾಷಣಕ್ಕೆ ಕೋಕ್​​: ಕೃಷ್ಣ ಭೈರೇಗೌಡ ಅಸಮಾಧಾನ
ನಾಳೆ ಪಿಎಂ ಮೋದಿ ಉದ್ಘಾಟಿಸಲಿರೋ ಟಿಲ್ಟೆಡ್ ಎಲ್​ಇಡಿ ಡೋಮ್ ತಾರಾಲಯ ಹೇಗಿದೆ
ನಾಳೆ ಪಿಎಂ ಮೋದಿ ಉದ್ಘಾಟಿಸಲಿರೋ ಟಿಲ್ಟೆಡ್ ಎಲ್​ಇಡಿ ಡೋಮ್ ತಾರಾಲಯ ಹೇಗಿದೆ