AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಕರ್ನಾಟಕದ ವಾಯು ಗುಣಮಟ್ಟ: ಬೆಂಗಳೂರು, ಮೈಸೂರು ಸೇರಿ ಹಲವೆಡೆ ಸಾಧಾರಣ ಗಾಳಿಯ ಗುಣಮಟ್ಟ

ನವೆಂಬರ್ 8ರಂದು ಕರ್ನಾಟಕದ ಪ್ರಮುಖ ನಗರಗಳ ವಾಯು ಗುಣಮಟ್ಟ ಹೇಗಿದೆ? ಬೆಂಗಳೂರಿನ AQI ಎಷ್ಟು? ಮೈಸೂರು, ಮಂಗಳೂರು, ಹುಬ್ಬಳ್ಳಿ, ಬಳ್ಳಾರಿ ಸೇರಿದಂತೆ ವಿವಿಧ ನಗರಗಳ ಇಂದಿನ AQI ವರದಿ ಹಾಗೂ ವಾಯುಮಾಲಿನ್ಯದಿಂದ ಆರೋಗ್ಯ ಕಾಪಾಡಿಕೊಳ್ಳಲು ತೆಗೆದುಕೊಳ್ಳಬೇಕಾದ ಮುನ್ನೆಚ್ಚರಿಕೆಗಳ ಸಂಪೂರ್ಣ ಮಾಹಿತಿ ಇಲ್ಲಿದೆ.

ಕರ್ನಾಟಕದ ವಾಯು ಗುಣಮಟ್ಟ: ಬೆಂಗಳೂರು, ಮೈಸೂರು ಸೇರಿ ಹಲವೆಡೆ ಸಾಧಾರಣ ಗಾಳಿಯ ಗುಣಮಟ್ಟ
ಸಾಂದರ್ಭಿಕ ಚಿತ್ರ
ಭಾವನಾ ಹೆಗಡೆ
|

Updated on: Nov 08, 2026 | 7:10 AM

Share

ಬೆಂಗಳೂರು, ನವೆಂಬರ್ 08: ಬೆಂಗಳೂರು ಸೇರಿದಂತೆ ಕರ್ನಾಟಕದ ವಿವಿಧ ನಗರಗಳಲ್ಲಿ ನವೆಂಬರ್ 8ರಂದು ವಾಯು ಗುಣಮಟ್ಟದಲ್ಲಿ ನಗರದಿಂದ ನಗರಕ್ಕೆ ವ್ಯತ್ಯಾಸ ಕಂಡುಬಂದಿದೆ. ಕೆಲವು ನಗರಗಳಲ್ಲಿ ಗಾಳಿಯ ಗುಣಮಟ್ಟ ಉತ್ತಮವಾಗಿದ್ದರೆ, ಇನ್ನೂ ಕೆಲವು ನಗರಗಳಲ್ಲಿ ವಾಯುಮಾಲಿನ್ಯ ಮಧ್ಯಮ ಹಾಗೂ ಸೂಕ್ಷ್ಮ ವರ್ಗದ ಜನರಿಗೆ ಅನಾರೋಗ್ಯ ಉಂಟುಮಾಡುವ ಮಟ್ಟದಲ್ಲಿದೆ. ವಾಹನಗಳ ಹೊಗೆ, ರಸ್ತೆ ಧೂಳು, ನಿರ್ಮಾಣ ಕಾಮಗಾರಿಗಳು ಸೇರಿದಂತೆ ಹಲವು ಅಂಶಗಳು ವಾಯು ಗುಣಮಟ್ಟದ ಮೇಲೆ ಪರಿಣಾಮ ಬೀರುತ್ತಿವೆ. ಹಾಗಾದರೆ ರಾಜ್ಯದ ರಾಜಧಾನಿ ಬೆಂಗಳೂರು ಸೇರಿದಂತೆ ಮೈಸೂರು, ಮಂಗಳೂರು, ಹುಬ್ಬಳ್ಳಿ, ಬಳ್ಳಾರಿ ಹಾಗೂ ಇತರ ನಗರಗಳಲ್ಲಿ ಇಂದಿನ AQI ಎಷ್ಟಿದೆ? ಇಲ್ಲಿದೆ ಸಂಪೂರ್ಣ ಮಾಹಿತಿ.

ಬೆಂಗಳೂರಿನಲ್ಲಿ AQI 68: ಯಾವ ಪ್ರದೇಶದಲ್ಲಿ ಎಷ್ಟಿದೆ?

ನವೆಂಬರ್ 8ರ ಲಭ್ಯವಿರುವ ವಾಯು ಗುಣಮಟ್ಟದ ಮಾಹಿತಿಯ ಪ್ರಕಾರ, ಬೆಂಗಳೂರಿನಲ್ಲಿ AQI 68 ದಾಖಲಾಗಿದೆ. ಇದು ಮಧ್ಯಮ (Moderate) ವರ್ಗಕ್ಕೆ ಸೇರುತ್ತದೆ. ಭಾರತೀಯ ವಿಜ್ಞಾನ ಮತ್ತು ಹವಾಮಾನ ಇಲಾಖೆಯ ವಾಯು ಗುಣಮಟ್ಟ ಮುನ್ಸೂಚನಾ ವ್ಯವಸ್ಥೆಯ ಪ್ರಕಾರ, ಬೆಳಗಿನ 4 ಗಂಟೆಯ ವೇಳೆಗೆ ಬಿಟಿಎಂ ಲೇಔಟ್‌ನಲ್ಲಿ 62, ಬಾಪೂಜಿನಗರದಲ್ಲಿ 51, ಹೆಬ್ಬಾಳದಲ್ಲಿ 60, ಜಯನಗರ 5ನೇ ಬ್ಲಾಕ್‌ನಲ್ಲಿ 67, ಪೀಣ್ಯದಲ್ಲಿ 49 ಹಾಗೂ ಸಿಲ್ಕ್ ಬೋರ್ಡ್‌ನಲ್ಲಿ 70 AQI ದಾಖಲಾಗಿದೆ.

ಕರ್ನಾಟಕದ ಪ್ರಮುಖ ನಗರಗಳ ಇಂದಿನ AQI ವಿವರ

  • ಬೆಂಗಳೂರು : 68
  • ಮೈಸೂರು : 98
  • ಹುಬ್ಬಳ್ಳಿ : 87
  • ಮಂಗಳೂರು: 170
  • ಬೆಳಗಾವಿ: 85
  • ಕಲಬುರಗಿ : 82
  • ದಾವಣಗೆರೆ : 105
  • ಬಳ್ಳಾರಿ : 111
  • ವಿಜಯಪುರ :75
  • ಶಿವಮೊಗ್ಗ: 75
  • ತುಮಕೂರು : 102
  • ಚಿಕ್ಕಮಗಳೂರು: 39
  • ಉಡುಪಿ : 92
  • ರಾಯಚೂರು : 54

ಮಕ್ಕಳ, ವೃದ್ಧರ ಆರೋಗ್ಯದ ಬಗ್ಗೆ ಇರಲಿ ಎಚ್ಚರಿಕೆ

ವಾಯು ಗುಣಮಟ್ಟ ಮಧ್ಯಮ ಹಂತದಲ್ಲಿದ್ದರೂ ಉಸಿರಾಟದ ಸಮಸ್ಯೆ, ಅಸ್ತಮಾ ಮತ್ತು ಅಲರ್ಜಿ ಇರುವವರು ಹೆಚ್ಚು ಎಚ್ಚರಿಕೆ ವಹಿಸಬೇಕು. ವಿಶೇಷವಾಗಿ ದಾವಣಗೆರೆ, ಬಳ್ಳಾರಿ, ತುಮಕೂರು ಹಾಗೂ ಮಂಗಳೂರಿನಲ್ಲಿ ದಾಖಲಾಗಿರುವ ಹೆಚ್ಚಿನ AQI ಹಿನ್ನೆಲೆಯಲ್ಲಿ ಸೂಕ್ಷ್ಮ ವರ್ಗದ ಜನರು ದೀರ್ಘಕಾಲ ಹೊರಾಂಗಣದಲ್ಲಿ ವ್ಯಾಯಾಮ ಮಾಡುವುದನ್ನು ಮಿತಿಗೊಳಿಸುವುದು ಉತ್ತಮ.

ಕರ್ನಾಟಕದ ಇನ್ನಷ್ಟು ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

Follow Us
ಭಾವನಾ ಹೆಗಡೆ
ಭಾವನಾ ಹೆಗಡೆ

ಭಾವನಾ ಹೆಗಡೆ ಉತ್ತರ ಕನ್ನಡ ಜಿಲ್ಲೆಯ ಸಿದ್ದಾಪುರ ತಾಲೂಕಿನವರು. ಬಿಎಸ್ಸಿ ಪದವಿ ಮುಗಿಸಿ ಪತ್ರಿಕೋದ್ಯಮ ಮತ್ತು ಸಮೂಹ ಸಂವಹನದಲ್ಲಿ ಡಿಪ್ಲೊಮಾ ಮಾಡಿದ್ದಾರೆ ಪತ್ರಿಕೋದ್ಯಮ ಇವರು ಇಷ್ಟ ಪಟ್ಟು ಆಯ್ದುಕೊಂಡ ಕ್ಷೇತ್ರ. ಟಿವಿ9 ಡಿಜಿಟಲ್​ನಲ್ಲಿ ವೃತ್ತಿ ಜೀವನ ಆರಂಭಿಸಿದ್ದಾರೆ. ರಾಜ್ಯ, ರಾಷ್ಟ್ರಕ್ಕೆ ಸಂಬಂಧಿಸಿದ ಕ್ಷಣಕ್ಷಣದ ಮಾಹಿತಿಗಳನ್ನು ಓದುಗರಿಗೆ ಒದಗಿಸುವ ಆಶಯ ಹೊಂದಿದ್ದಾರೆ.

Read More
ಪೋಲೆಂಡ್‌ನ ಕ್ರಾಕೋವ್‌ನಲ್ಲಿ ಗುಂಡಿನ ದಾಳಿ; 5 ಜನ ಸಾವು
ಪೋಲೆಂಡ್‌ನ ಕ್ರಾಕೋವ್‌ನಲ್ಲಿ ಗುಂಡಿನ ದಾಳಿ; 5 ಜನ ಸಾವು
ಸ್ಟಿಂಗ್​​​ನಿಂದ ಕರ್ನಾಟಕ ತಲೆ ತಗ್ಗಿಸುವಂತಾಗಿದೆ ಎಂದ ಡಾ. ಕೆ. ಸುಧಾಕರ್
ಸ್ಟಿಂಗ್​​​ನಿಂದ ಕರ್ನಾಟಕ ತಲೆ ತಗ್ಗಿಸುವಂತಾಗಿದೆ ಎಂದ ಡಾ. ಕೆ. ಸುಧಾಕರ್
ವೈಷ್ಣವಿ ಸಾವಿಗೆ ಕಾರಣವಾಯ್ತಾ ಅರಮನೆ ರಸ್ತೆಯ ಪ್ರೀ-ವೆಡ್ಡಿಂಗ್ ಶೂಟಿಂಗ್?
ವೈಷ್ಣವಿ ಸಾವಿಗೆ ಕಾರಣವಾಯ್ತಾ ಅರಮನೆ ರಸ್ತೆಯ ಪ್ರೀ-ವೆಡ್ಡಿಂಗ್ ಶೂಟಿಂಗ್?
ದೀಪಾವಳಿಗೆ ದೀಪಾಲಂಕಾರಗಳಿಂದ ಕಂಗೊಳಿಸುತ್ತಿದೆ ಅಯೋಧ್ಯೆ ರಾಮ ಮಂದಿರ
ದೀಪಾವಳಿಗೆ ದೀಪಾಲಂಕಾರಗಳಿಂದ ಕಂಗೊಳಿಸುತ್ತಿದೆ ಅಯೋಧ್ಯೆ ರಾಮ ಮಂದಿರ
ಬೆಂಗಳೂರಲ್ಲಿ ಸರಣಿ ಕೊಲೆ ಕೇಸ್: ತಮಿಳುನಾಡಿನ ಸೇಲಂನಲ್ಲಿ ಎರಡು ಶವ ಪತ್ತೆ
ಬೆಂಗಳೂರಲ್ಲಿ ಸರಣಿ ಕೊಲೆ ಕೇಸ್: ತಮಿಳುನಾಡಿನ ಸೇಲಂನಲ್ಲಿ ಎರಡು ಶವ ಪತ್ತೆ
30 ಲಕ್ಷಕ್ಕೂ ಹೆಚ್ಚು ದೀಪಗಳು; ಸರಯೂ ದಡದಲ್ಲಿ ಮತ್ತೊಂದು ವಿಶ್ವದಾಖಲೆ
30 ಲಕ್ಷಕ್ಕೂ ಹೆಚ್ಚು ದೀಪಗಳು; ಸರಯೂ ದಡದಲ್ಲಿ ಮತ್ತೊಂದು ವಿಶ್ವದಾಖಲೆ
ಗಾನವಿ ಮಾಡಿದ ಡ್ರಾಮಾ ಬಯಲು ಮಾಡಿದ ಸುದೀಪ್: ವಿಡಿಯೋ ನೋಡಿ
ಗಾನವಿ ಮಾಡಿದ ಡ್ರಾಮಾ ಬಯಲು ಮಾಡಿದ ಸುದೀಪ್: ವಿಡಿಯೋ ನೋಡಿ
ಬೆಲೆ ಏರಿಕೆ ಭಾಗ್ಯದ ಸರ್ಕಾರವಲ್ಲ, ಗ್ಯಾರಂಟಿಗಳ ಸರ್ಕಾರ: ಡಿಕೆ ಸುರೇಶ್
ಬೆಲೆ ಏರಿಕೆ ಭಾಗ್ಯದ ಸರ್ಕಾರವಲ್ಲ, ಗ್ಯಾರಂಟಿಗಳ ಸರ್ಕಾರ: ಡಿಕೆ ಸುರೇಶ್
ಮಗನ ಸಿನಿಮಾದಿಂದ ಹೊರಹಾಕಿದ ಪ್ರಿಯಾಂಕಾ ಉಪೇಂದ್ರ: ಅಳಲು ತೋಡಿಕೊಂಡ ನಿರ್ದೇಶಕ
ಮಗನ ಸಿನಿಮಾದಿಂದ ಹೊರಹಾಕಿದ ಪ್ರಿಯಾಂಕಾ ಉಪೇಂದ್ರ: ಅಳಲು ತೋಡಿಕೊಂಡ ನಿರ್ದೇಶಕ
ಎಥೆನಾಲ್ ವಿಚಾರದಲ್ಲಿ ರಾಜ್ಯ ಸರ್ಕಾರ ಸುಳ್ಳು ಆರೋಪ ಮಾಡ್ತಿದೆ: ಜೋಶಿ
ಎಥೆನಾಲ್ ವಿಚಾರದಲ್ಲಿ ರಾಜ್ಯ ಸರ್ಕಾರ ಸುಳ್ಳು ಆರೋಪ ಮಾಡ್ತಿದೆ: ಜೋಶಿ