ಬೆಂಗಳೂರು: 2023ರ ವಿಧಾನಸಭೆ ಚುನಾವಣೆಗೆ ಕೇವಲ ಮೂರು-ನಾಲ್ಕು ತಿಂಗಳು ಮಾತ್ರ ಬಾಕಿ ಇದೆ. ಹೀಗಾಗಿ ಚುನಾವಣೆ ಎದುರಿಸಲು ರಾಜಕೀಯ ಪಕ್ಷಗಳು ತಮ್ಮದೇ ರೀತಿಯಲ್ಲಿ ಸಿದ್ಧತೆಗಳನ್ನು ಮಾಡಿಕೊಳ್ಳುತ್ತಿವೆ. ಬಿಜೆಪಿ ಕೂಡ ಮಾಸ್ಟರ್ ಪ್ಲ್ಯಾನ್ ರೂಪಿಸಿದೆ. ಡಬಲ್ ಇಂಜಿನ್ ಸರ್ಕಾರದ ಸಾಧನೆ ಕುರಿತಾಗಿ ಮನೆ ಮನೆ ಸಂಪರ್ಕ ಅಭಿಯಾನಕ್ಕೆ ರಾಜ್ಯ ಬಿಜೆಪಿ ಮುಂದಾಗಿದೆ.
ಜ.21ರಿಂದ ಜ.29ರವರೆಗೆ ರಾಜ್ಯದಲ್ಲಿ ಮನೆ ಮನೆಗೆ ಸಂಪರ್ಕ ಅಭಿಯಾನಕ್ಕೆ ಬಿಜೆಪಿ ಮುಂದಾಗಿದ್ದು ಅಭಿಯಾನದ ಸಂಚಾಲಕರಾಗಿ ಡಾ.ಅಶ್ವತ್ಥ್ ನಾರಾಯಣ ನೇಮಕಗೊಂಡಿದ್ದಾರೆ. ಅಭಿಯಾನದ ಹಿನ್ನೆಲೆಯಲ್ಲಿ ಬಿಜೆಪಿ ರಾಷ್ಟ್ರೀಯ ಪ್ರಧಾನ ಸಂಘಟನಾ ಕಾರ್ಯದರ್ಶಿ ಸಂತೋಷ್ ವಿಡಿಯೋ ಕಾನ್ಫರೆನ್ಸ್ ಮೂಲಕ ಸಭೆ ನಡೆಸಿದ್ದಾರೆ. ಸಭೆಯಲ್ಲಿ ರಾಜ್ಯ ಬಿಜೆಪಿ ಘಟಕದ ಅಧ್ಯಕ್ಷ ನಳಿನ್ ಕುಮಾರ್ ಕಟೀಲು, ರಾಜ್ಯ ಬಿಜೆಪಿ ಸಂಘಟನಾ ಪ್ರಧಾನ ಕಾರ್ಯದರ್ಶಿ ಜಿ.ವಿ.ರಾಜೇಶ್, ಸಚಿವ ಡಾ.ಅಶ್ವತ್ಥ್ ನಾರಾಯಣ, ಎಂಎಲ್ಸಿ ಡಿ.ಎಸ್.ಅರುಣ್, ತೇಜಸ್ವಿನಿ ಗೌಡ, ರಾಜ್ಯ ಪ್ರಧಾನ ಕಾರ್ಯದರ್ಶಿ ಸಿದ್ದರಾಜು ಭಾಗಿಯಾಗಿದ್ದರು.
2 ಕೋಟಿ ಮನೆಗಳ ಸಂಪರ್ಕ, 2 ಕೋಟಿ ವಾಹನಗಳ ಮೇಲೆ ಸ್ಟಿಕ್ಕರ್, ಜನವರಿಯಲ್ಲಿ 50 ಸಾವಿರ ಸ್ಥಳಗಳಲ್ಲಿ ಮನ್ ಕೀ ಬಾತ್ ಕಾರ್ಯಕ್ರಮ ಜೋಡಣೆಗೆ ಸಭೆಯಲ್ಲಿ ಸೂಚನೆ ನೀಡಲಾಗಿದೆ. ಬೂತ್ ಮಟ್ಟದಲ್ಲಿ ಸರ್ಕಾರಿ ಯೋಜನೆಗಳ ಫಲಾನುಭವಿಗಳ ಗುರುತಿಸಿ ಡಬಲ್ ಎಂಜಿನ್ ಸರ್ಕಾರದ ಯೋಜನೆಗಳನ್ನ ನಿರೂಪಿಸಲು ಸೂಚಿಸಲಾಗಿದೆ. ಜ.7, 8ರಂದು ಜಿಲ್ಲಾ ಕೇಂದ್ರ, ಜ.12, 13ರಂದು ಮಂಡಲ ಮಟ್ಟದಲ್ಲಿ, ಜನವರಿ 17, 18, 19ರಂದು ಬೂತ್ ಮಟ್ಟದಲ್ಲಿ ಪೂರ್ವ ಸಿದ್ಧತಾ ಸಭೆಗಳನ್ನು ನಡೆಸುವಂತೆ ಬಿಜೆಪಿ ರಾಷ್ಟ್ರೀಯ ಪ್ರಧಾನ ಸಂಘಟನಾ ಕಾರ್ಯದರ್ಶಿ ಸಂತೋಷ್ ಸೂಚಿಸಿದ್ದಾರೆ.
ಇದನ್ನೂ ಓದಿ: Covid Alert: ಚೀನಾದಿಂದ ಬರುವ ಪ್ರಯಾಣಿಕರಿಗೆ ಅಮೆರಿಕದಲ್ಲಿ ಕೊವಿಡ್ ಪರೀಕ್ಷೆ ಕಡ್ಡಾಯ
ಕೇಂದ್ರ ಸಚಿವ ಅಮಿತ್ ಶಾ ರಾಜ್ಯ ಪ್ರವಾಸ ವಿಚಾರಕ್ಕೆ ಸಂಬಂಧಿಸಿ ಡಿ.30ರಂದು ಬೆಂಗಳೂರಿನ ಅರಮನೆ ಮೈದಾನದಲ್ಲಿ ನಡೆಯಲಿರುವ ಸಹಕಾರ ವಲಯದ ಸಮಾವೇಶದಲ್ಲಿ ಭಾಗಿಯಾಗಲಿದ್ದಾರೆ. ಸಹಕಾರ ಕ್ಷೇತ್ರದಿಂದ 33 ಲಕ್ಷ ರೈತರಿಗೆ ಶೂನ್ಯ ಬಡ್ಡಿ ದರದಲ್ಲಿ 24 ಸಾವಿರ ಕೋಟಿ ರೂಪಾಯಿ ಸಾಲ ನೀಡುವ ಕಾರ್ಯಕ್ರಮ ಇದಾಗಿದ್ದು ಸಮಾವೇಶದಲ್ಲಿ ಯಶಸ್ವಿನಿ ಯೋಜನೆಗೆ ಅಮಿತ್ ಶಾ ಮರು ಚಾಲನೆ ನೀಡಲಿದ್ದಾರೆ. ಈಗಾಗಲೇ ಯಶಸ್ವಿನಿ ಯೋಜನೆಗೆ 20 ಲಕ್ಷ ಜನರು ನೋಂದಣಿ ಮಾಡಿಕೊಂಡಿದ್ದಾರೆ. ಸಕ್ಕರೆ ಕ್ಷೇತ್ರ ಬಲಿಷ್ಠಗೊಳಿಸುವಿಕೆ & ಸ್ತ್ರೀಶಕ್ತಿ ಗುಂಪುಗಳಿಗೆ ಸಾಲ ನೀಡುವ ಬಗ್ಗೆ ಭಾಷಣದಲ್ಲಿ ಅಮಿತ್ ಶಾ ಪ್ರಸ್ತಾಪ ಮಾಡುವ ಸಾಧ್ಯತೆ ಇದೆ.
ಸುಮಾರು 5,700 VSSಗಳಿಗೆ, ಕೃಷಿ ಪತ್ತಿನ ಸಹಕಾರ ಸಂಘಗಳಿಗೆ ಲಭಿಸಿದ ಪ್ರಯೋಜನವನ್ನು ಅಮಿತ್ ಶಾ ಪರಿಶೀಲಿಸಲಿದ್ದಾರೆ. ಡಿ.31ರಂದು ಮಲ್ಲೇಶ್ವರಂನ ಸೌಹಾರ್ದ ಫೇಡರೇಶನ್‍ಗೆ ಭೇಟಿ ನೀಡಿ ಸೌಹಾರ್ದ ಸಹಕಾರಿಗಳ ಸಭೆ ನಡೆಸಲಿದ್ದಾರೆ.
ಪ್ರಮುಖ ಸುದ್ದಿಗಳನ್ನು ಓದಲು ಇದರ ಮೇಲೆ ಕ್ಲಿಕ್ ಮಾಡಿ
Published On - 8:53 am, Thu, 29 December 22