ಶೀಘ್ರದಲ್ಲೇ ಬಿಜೆಪಿ ಅಭ್ಯರ್ಥಿಗಳ 3ನೇ ಪಟ್ಟಿ ಬಿಡುಗಡೆ ಆಗಲಿದೆ; ಇದರಿಂದ ಕಾಂಗ್ರೆಸ್​​ನಲ್ಲಿ ತಳಮಳ ಶುರುವಾಗುತ್ತೆ -ಅರುಣ್ ಸಿಂಗ್

3ನೇ ಪಟ್ಟಿ ಬಿಡುಗಡೆ ಬಳಿಕ ಕಾಂಗ್ರೆಸ್​​ನಲ್ಲಿ ತಳಮಳ ಶುರುವಾಗುತ್ತೆ. ಟಿಕೆಟ್ ಸಿಗಲಿಲ್ಲವೆಂದು ಕೆಲವರಿಗೆ ಮನಸ್ಸಿಗೆ ನೋವಾಗಿದೆ ನಿಜ. -ರಾಜ್ಯ ಬಿಜೆಪಿ ಉಸ್ತುವಾರಿ ಅರುಣ್ ಸಿಂಗ್

ಶೀಘ್ರದಲ್ಲೇ ಬಿಜೆಪಿ ಅಭ್ಯರ್ಥಿಗಳ 3ನೇ ಪಟ್ಟಿ ಬಿಡುಗಡೆ ಆಗಲಿದೆ; ಇದರಿಂದ ಕಾಂಗ್ರೆಸ್​​ನಲ್ಲಿ ತಳಮಳ ಶುರುವಾಗುತ್ತೆ -ಅರುಣ್ ಸಿಂಗ್
ಅರುಣ್ ಸಿಂಗ್
Follow us
ಆಯೇಷಾ ಬಾನು
|

Updated on: Apr 13, 2023 | 1:26 PM

ಬೆಂಗಳೂರು: ಕರ್ನಾಟಕ ವಿಧಾನಸಭಾ ಚುನಾವಣೆಗೆ(Karnataka Assembly Elections 2023) ದಿನಗಳು ಸಮೀಪಿಸುತ್ತಿದ್ದು ರಾಜಕೀಯ ಪಕ್ಷಗಳು ಭರ್ಜರಿ ತಯಾರಿಯಲ್ಲಿದ್ದಾರೆ. ಬಿಜೆಪಿಯು ಅಳೆದು ತೂಗಿ ಅಭ್ಯರ್ಥಿಗಳ ಮೊದಲ ಪಟ್ಟಿಯನ್ನು ಮಂಗಳವಾರ ರಾತ್ರಿ ಬಿಡುಗಡೆ ಮಾಡಿತ್ತು. ಬಳಿಕ ಎರಡನೇ ಪಟ್ಟಿಯನ್ನು ಬುಧವಾರ ರಾತ್ರಿ 11 ಗಂಟೆಗೆ ಬಿಡುಗಡೆ ಮಾಡಿತ್ತು. ಸದ್ಯ ಶೀಘ್ರದಲ್ಲೇ ಬಿಜೆಪಿ ಅಭ್ಯರ್ಥಿಗಳ 3ನೇ ಪಟ್ಟಿ ಬಿಡುಗಡೆ ಆಗಲಿದೆ ಎಂದು ಬೆಂಗಳೂರಿನಲ್ಲಿ ರಾಜ್ಯ ಬಿಜೆಪಿ ಉಸ್ತುವಾರಿ ಅರುಣ್ ಸಿಂಗ್(Arun Singh) ತಿಳಿಸಿದ್ದಾರೆ.

3ನೇ ಪಟ್ಟಿ ಬಿಡುಗಡೆ ಬಳಿಕ ಕಾಂಗ್ರೆಸ್​​ನಲ್ಲಿ ತಳಮಳ ಶುರುವಾಗುತ್ತೆ. ಟಿಕೆಟ್ ಸಿಗಲಿಲ್ಲವೆಂದು ಕೆಲವರಿಗೆ ಮನಸ್ಸಿಗೆ ನೋವಾಗಿದೆ ನಿಜ. ಅಸಮಾಧಾನಗೊಂಡ ನಾಯಕರ ಮನವೊಲಿಕೆ ಮಾಡುತ್ತೇವೆ. ಬಿಜೆಪಿಯ ವಿಚಾರದಿಂದ ಅವರು ದೂರ ಉಳಿಯಲು ಸಾಧ್ಯವಿಲ್ಲ. ಅವರು ಪಕ್ಷಕ್ಕೆ ಮಾಡಿರುವ ಸೇವೆಯನ್ನು ಪಕ್ಷ ಯಾವತ್ತು ಮರೆಯುವುದಿಲ್ಲ ಎಂದು ರಾಜ್ಯ ಬಿಜೆಪಿ ಉಸ್ತುವಾರಿ ಅರುಣ್ ಸಿಂಗ್ ಹೇಳಿದರು.

ಇದನ್ನೂ ಓದಿ: BJP’s First Candidate List: ಬಿಜೆಪಿ ಅಭ್ಯರ್ಥಿಗಳ ಮೊದಲ ಪಟ್ಟಿ ಬಿಡುಗಡೆ; 189 ಮಂದಿಗೆ ಟಿಕೆಟ್, 52 ಮಂದಿ ಹೊಸಬರಿಗೆ ಮಣೆ

ಬಿಜೆಪಿ ತನ್ನ ಮೊದಲ ಪಟ್ಟಿಯಲ್ಲಿ 189 ಮಂದಿಗೆ ಟಿಕೆಟ್ ಘೋಷಿಸಿತ್ತು. ಎರಡನೇ ಪಟ್ಟಿಯಲ್ಲಿ 23 ಮಂದಿಗೆ ಟಿಕೆಟ್ ಸಿಕ್ಕಿದೆ. ಇನ್ನು ಉಳಿದ ಕೊನೆಯ ಹಾಗೂ ಮೂರನೇ ಪಟ್ಟಿಯಲ್ಲಿ 12 ಮಂದಿಗೆ ಟಿಕೆಟ್ ಸಿಗಲಿದೆ. 3ನೇ ಪಟ್ಟಿ ಬಿಡುಗಡೆ ಬಳಿಕ ಕಾಂಗ್ರೆಸ್​​ನಲ್ಲಿ ತಳಮಳ ಶುರುವಾಗುತ್ತೆ ಎಂದು ರಾಜ್ಯ ಬಿಜೆಪಿ ಉಸ್ತುವಾರಿ ಅರುಣ್ ಸಿಂಗ್ ಟಂಗ್ ಕೊಟ್ಟಿದ್ದಾರೆ. ಆದ್ರೆ ಟಿಕೆಟ್ ಘೋಷಣೆಯಾಗುತ್ತಿದ್ದಂತೆ ಅಕಾಂಕ್ಷಿಗಳು ಅಸಮಾಧಾನಗೊಂಡಿದ್ದು ಅನೇಕರು ರಾಜೀನಾಮೆ ನೀಡುತ್ತಿದ್ದಾರೆ.

ವಯಸ್ಸಿನ ಕಾರಣಕ್ಕೆ 7 ಹಾಲಿ ಶಾಸಕರಿಗಿಲ್ಲ ಟಿಕೆಟ್

ಎರಡನೇ ಪಟ್ಟಿಯಲ್ಲಿ 7 ಹಾಲಿ ಶಾಸಕರಿಗೆ ಟಿಕೆಟ್ ನೀಡಲಾಗಿಲ್ಲ. ಎರಡನೇ ಪಟ್ಟಿಯಲ್ಲೂ ಜಗದೀಶ್ ಶೆಟ್ಟರ್ ಹೆಸರು ಕಂಡುಬಂದಿಲ್ಲ. ಶೆಟ್ಟರ್ ಕ್ಷೇತ್ರದ ಅಭ್ಯರ್ಥಿ ಬಾಕಿ ಇರಿಸಲಾಗಿದೆ. ಕಲಘಟಗಿ ಹಾಲಿ ಶಾಸಕ ನಿಂಬಣ್ಣವರಿಗೆ ಟಿಕೆಟ್ ಮಿಸ್ ಆಗಿದೆ. ಸಚಿವ ಸೋಮಣ್ಣ ಪುತ್ರ ಅರುಣ್ ಸೋಮಣ್ಣಗೆ ಟಿಕೆಟ್‌ ಘೊಷಣೆಯಾಗಿಲ್ಲ. ಅವರು ಗುಬ್ಬಿ ಕ್ಷೇತ್ರದ ಟಿಕೆಟ್ ಆಕಾಂಕ್ಷಿಯಾಗಿದ್ದರು. ಆ ಕ್ಷೇತ್ರಕ್ಕೆ ಎಸ್​ಡಿ ದಿಲೀಪ್ ಕುಮಾರ್ ಅವರಿಗೆ ಟಿಕೆಟ್ ನೀಡಲಾಗಿದೆ. ಬೈಂದೂರು ಹಾಲಿ ಶಾಸಕ ಸುಕುಮಾರ್ ಶೆಟ್ಟಿಗೆ ಟಿಕೆಟ್ ನೀಡಿಲ್ಲ. ಬಿಎಸ್‌ವೈ ಸಂಬಂಧಿ ಎನ್‌.ಆರ್‌.ಸಂತೋಷ್‌ ಅವರಿಗೂ ಟಿಕೆಟ್ ನೀಡಿಲ್ಲ. ಇವರು ಅರಸೀಕೆರೆ ಕ್ಷೇತ್ರದ ಟಿಕೆಟ್ ಆಕಾಂಕ್ಷಿಯಾಗಿದ್ದರು.

ರಾಜ್ಯ ವಿಧಾನಸಭಾ ಚುನಾವಣೆಗೆ ಸಂಬಂಧಿಸಿದಂತೆ ಮತ್ತಷ್ಟು ಸುದ್ದಿಗಳನ್ನು ಓದಲು ಇದರ ಮೇಲೆ ಕ್ಲಿಕ್ ಮಾಡಿ

ಎನ್ಕೌಂಟರ್ ನಡೆದ ಬಳಿಕ ಸಾಕಷ್ಟು ಬದಲಾವಣೆ ಆಗಿದೆ: ನಕ್ಸಲ್ ಸುಂದರಿಯ ಸಂಬಂಧಿ
ಎನ್ಕೌಂಟರ್ ನಡೆದ ಬಳಿಕ ಸಾಕಷ್ಟು ಬದಲಾವಣೆ ಆಗಿದೆ: ನಕ್ಸಲ್ ಸುಂದರಿಯ ಸಂಬಂಧಿ
ನಿಯಂತ್ರಣ ಕಳೆದುಕೊಂಡು ರಸ್ತೆಯ ಬದಿಯಲ್ಲಿ ಕುಳಿತ ಐವರ ಮೇಲೆ ಹರಿದ ಕಾರು
ನಿಯಂತ್ರಣ ಕಳೆದುಕೊಂಡು ರಸ್ತೆಯ ಬದಿಯಲ್ಲಿ ಕುಳಿತ ಐವರ ಮೇಲೆ ಹರಿದ ಕಾರು
ಆನೇಕಲ್: ಸಿಲಿಂಡರ್ ಸ್ಫೋಟ ತೀವ್ರತೆಗೆ ಮನೆ ಗೋಡೆ ಕಿಟಕಿ ಛಿದ್ರ, ಇಬ್ಬಗೆ ಗಾಯ
ಆನೇಕಲ್: ಸಿಲಿಂಡರ್ ಸ್ಫೋಟ ತೀವ್ರತೆಗೆ ಮನೆ ಗೋಡೆ ಕಿಟಕಿ ಛಿದ್ರ, ಇಬ್ಬಗೆ ಗಾಯ
ನಾ ಡಿಸೋಜ ಅಂತಿಮ ದರ್ಶನ, ಅಂತ್ಯಕ್ರಿಯೆ ಬಗ್ಗೆ ಪುತ್ರ ನವೀನ್ ಮಾಹಿತಿ
ನಾ ಡಿಸೋಜ ಅಂತಿಮ ದರ್ಶನ, ಅಂತ್ಯಕ್ರಿಯೆ ಬಗ್ಗೆ ಪುತ್ರ ನವೀನ್ ಮಾಹಿತಿ
ನಡುರಸ್ತೆಯಲ್ಲಿ ವಿದ್ಯಾರ್ಥಿನಿಯ ಕತ್ತು ಹಿಸುಕಿ ಕೊಲೆ ಮಾಡಲು ಯತ್ನಿಸಿದ ಯುವಕ
ನಡುರಸ್ತೆಯಲ್ಲಿ ವಿದ್ಯಾರ್ಥಿನಿಯ ಕತ್ತು ಹಿಸುಕಿ ಕೊಲೆ ಮಾಡಲು ಯತ್ನಿಸಿದ ಯುವಕ
ಕುದುರೆಮುಖ ಅರಣ್ಯದಲ್ಲಿ ನಕ್ಸಲ್​ ನಾಯಕಿ ಸುಂದರಿ ವಾಸ
ಕುದುರೆಮುಖ ಅರಣ್ಯದಲ್ಲಿ ನಕ್ಸಲ್​ ನಾಯಕಿ ಸುಂದರಿ ವಾಸ
ಆಸ್ಟ್ರೇಲಿಯಾದಲ್ಲಿ RCB ದಾಂಡಿಗನ ಸಿಡಿಲಬ್ಬರ: ಸ್ಪೋಟಕ ಅರ್ಧಶತಕ
ಆಸ್ಟ್ರೇಲಿಯಾದಲ್ಲಿ RCB ದಾಂಡಿಗನ ಸಿಡಿಲಬ್ಬರ: ಸ್ಪೋಟಕ ಅರ್ಧಶತಕ
ಆಮರಣಾಂತ ಉಪವಾಸ ಸತ್ಯಾಗ್ರಹ, ಪ್ರಶಾಂತ್ ಕಿಶೋರ್ ಬಂಧನ
ಆಮರಣಾಂತ ಉಪವಾಸ ಸತ್ಯಾಗ್ರಹ, ಪ್ರಶಾಂತ್ ಕಿಶೋರ್ ಬಂಧನ
ಈ ವಾರದ ಟಾಸ್ಕ್​ ಗೆದ್ದರೆ ಸಿಗಲಿದೆ ಡೈರೆಕ್ಟ್​ ಫಿನಾಲೆಗೆ ಏರುವ ಟಿಕೆಟ್
ಈ ವಾರದ ಟಾಸ್ಕ್​ ಗೆದ್ದರೆ ಸಿಗಲಿದೆ ಡೈರೆಕ್ಟ್​ ಫಿನಾಲೆಗೆ ಏರುವ ಟಿಕೆಟ್
Daily Devotional: ಪಚ್ಚ ಕರ್ಪೂರದ ಮಹತ್ವ ಮತ್ತು ಉಪಯೋಗ ತಿಳಿಯಿರಿ
Daily Devotional: ಪಚ್ಚ ಕರ್ಪೂರದ ಮಹತ್ವ ಮತ್ತು ಉಪಯೋಗ ತಿಳಿಯಿರಿ