Fever: ವಿಪಕ್ಷ ನಾಯಕ ಸಿದ್ದರಾಮಯ್ಯಗೆ ಜ್ವರ; ವಿಧಾನಸಭೆ ಕಲಾಪದಿಂದ ಮನೆಗೆ ವಾಪಸ್

siddaramaiah: ಜ್ವರದಿಂದ ಬಳಲುತ್ತಿರುವ ಸಿದ್ದರಾಮಯ್ಯ ಅವರು ಮನೆಯಲ್ಲಿ ವಿಶ್ರಾಂತಿ ಪಡೆಯುತ್ತಿದ್ದಾರೆ. ವಿಪಕ್ಷ ನಾಯಕರ ಅನುಪಸ್ಥಿತಿಯಲ್ಲಿ ಬಜೆಟ್ ಚರ್ಚೆಗೆ ಸಿಎಂ ಬೊಮ್ಮಾಯಿ ಸುದೀರ್ಘ ಉತ್ತರ ನೀಡುತ್ತಿದ್ದಾರೆ.

Fever: ವಿಪಕ್ಷ ನಾಯಕ ಸಿದ್ದರಾಮಯ್ಯಗೆ ಜ್ವರ; ವಿಧಾನಸಭೆ ಕಲಾಪದಿಂದ ಮನೆಗೆ ವಾಪಸ್
ಸಿದ್ದರಾಮಯ್ಯ, ವಿರೋದ ಪಕ್ಷದ ನಾಯಕ
Follow us
TV9 Web
| Updated By: ಸಾಧು ಶ್ರೀನಾಥ್​

Updated on:Mar 16, 2022 | 1:36 PM

ಬೆಂಗಳೂರು: ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ತಾವು ಮಂಡಿಸಿದ್ದ ಚೊಚ್ಚಲ ಬಜೆಟ್​ ಮೇಲೆ ವಿಧಾನಮಂಡಲದಲ್ಲಿ ನಡೆದಿದ್ದ ಚರ್ಚಗೆ ವಿಧಾನಸಭೆಯಲ್ಲಿ ಉತ್ತರ ನೀಡುತ್ತಿದ್ದಾರೆ. ಈ ಮಧ್ಯೆ ಅನಾರೋಗ್ಯ ಕಾಡಿದ ಕಾರಣ ವಿಪಕ್ಷ ನಾಯಕ ಸಿದ್ದರಾಮಯ್ಯಗೆ ಮನೆಯಲ್ಲಿ ವಿಶ್ರಾಂತಿ ಪಡೆದಕೊಳ್ಳುವಂತೆ ವೈದ್ಯರು ಸಲಹೆ ನೀಡಿದ್ದಾರೆ. ಹೀಗಾಗಿ ಸದನಕ್ಕೆ ಬಂದಿದ್ದ ಸಿದ್ದರಾಮಯ್ಯ ಅವರು ಇದೀಗ ಮನೆಗೆ ವಾಪಸ್ ತೆರಳಿದ್ದಾರೆ. ಹಾಗಾಗಿ ಬಜೆಟ್ ಮೇಲಿನ ಚರ್ಚೆಗೆ ರಾಜ್ಯ ಸರ್ಕಾರದ ಉತ್ತರದ ವೇಳೆ ವಿಪಕ್ಷ ನಾಯಕ ಸಿದ್ದರಾಮಯ್ಯ (leader of opposition siddaramaiah) ಅನುಪಸ್ಥಿತಿ ಎದ್ದುಕಾಣುತ್ತಿದೆ.

ಆದರೆ ಜ್ವರದಿಂದ (fever) ಬಳಲುತ್ತಿರುವ ಸಿದ್ದರಾಮಯ್ಯ ಅವರು ಮನೆಯಲ್ಲಿ ವಿಶ್ರಾಂತಿ ಪಡೆಯುತ್ತಿದ್ದಾರೆ. ವಿಪಕ್ಷ ನಾಯಕರ ಅನುಪಸ್ಥಿತಿಯಲ್ಲಿ ಬಜೆಟ್ ಚರ್ಚೆಗೆ ಸಿಎಂ ಬೊಮ್ಮಾಯಿ ಸುದೀರ್ಘ ಉತ್ತರ ನೀಡುತ್ತಿದ್ದಾರೆ.

ಬಜೆಟ್ ಮೇಲಿನ ಚರ್ಚೆಗೆ ಬೊಮ್ಮಾಯಿ ಉತ್ತರ: ಬೆಂಗಳೂರು: ಹಣಕಾಸು ಇಲಾಖೆಯನ್ನೂ ತಮ್ಮ ಬಳಿಯೇ ಇರಿಸಿಕೊಂಡಿರುವ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ (Basavaraj Bommai) ಬುಧವಾರ ಬಜೆಟ್ ಮೇಲಿನ ಚರ್ಚೆಗೆ, ಪ್ರತಿಪಕ್ಷಗಳು ವ್ಯಕ್ತಪಡಿಸಿರುವ ಆಕ್ಷೇಪಕ್ಕೆ ಸರ್ಕಾರದ ಪರವಾಗಿ ಉತ್ತರಿಸಿದರು. ಕರ್ನಾಟಕದ ಕಿರು ಉದ್ಯಮಿಗಳಿಗೆ ₹ 75 ಕೋಟಿ ನೆರವು ಒದಗಿಸಿದ್ದೇವೆ. ಬೆಂಗಳೂರು ನಗರ ಅಭಿವೃದ್ಧಿಗೆ 6,000 ಕೋಟಿ ಮೀಸಲಿಡಲಾಗಿದೆ. ಬಜೆಟ್​ಗೆ ಮೊದಲೇ ಗ್ರಾಮೀಣ ಭಾಗದ ಮೂಲಸೌಕರ್ಯಕ್ಕೂ ಅನುದಾನ ನೀಡಿದ್ದೇವೆ. ಬಜೆಟ್ ಬಗ್ಗೆ ಸಲಹೆ, ಟೀಕೆ ಎಲ್ಲವೂ ಬಂದಿವೆ. ಎಲ್ಲವನ್ನೂ ಸಕಾರಾತ್ಮಕವಾಗಿ ಸ್ವೀಕರಿಸಿದ್ದೇನೆ. ಎಲ್ಲಿ ನ್ಯೂನತೆಯಾಗಿದೆ ಅಲ್ಲಿ ಸರಿಪಡಿಸಿಕೊಳ್ಳುತ್ತೇವೆ ಎಂದು ಮುಖ್ಯಮಂತ್ರಿ ಹೇಳಿದರು.

ಕರ್ನಾಟಕದಲ್ಲಿ ಇದೀಗ ಗ್ರಾಮ ಒನ್ ಯೋಜನೆ ಆರಂಭಿಸಲಾಗಿದೆ. ರೈತರಿಗಾಗಿ ರೈತ ಶಕ್ತಿ ಯೋಜನೆ ತಂದಿದ್ದೆವು. ಈ ಯೋಜನೆಯಿಂದ ರೈತರಿಗೆ, ದುಡಿಯುವ ವರ್ಗಕ್ಕೆ ಸಾಕಷ್ಟು ಅನುಕೂಲಗಳಾಗಿವೆ. ಆರ್ಥಿಕತೆ ಎನ್ನುವುದು ಒಟ್ಟಾರೆ ದುಡಿಮೆಯ ಫಲಶ್ರುತಿ. ನಮ್ಮ ಆದ್ಯತೆ ಜನ ಕೇಂದ್ರೀಕೃತವಾಗಿರಬೇಕು ಎನ್ನುವುದನ್ನು ನಾನು ದೃಢವಾಗಿ ನಂಬಿದ್ದೇನೆ. ಬಜೆಟ್​ ರೂಪಿಸುವಾಗಲೂ ಇದೇ ಅಂಶವನ್ನು ಮುಖ್ಯವಾಗಿ ಇರಿಸಿಕೊಂಡಿದ್ದೆ ಎಂದರು.

ಯಶಸ್ವಿನಿ ಯೋಜನೆಯನ್ನು ಮತ್ತೆ ಆರಂಭಿಸುವ ಪ್ರಸ್ತಾವ ಮಂಡಿಸಿದ್ದೇನೆ. ಆಯುಷ್ಮಾನ್ ಭಾರತ್, ಆರೋಗ್ಯ ಕರ್ನಾಟಕ ಯೋಜನೆಗಳಿದ್ದರೂ ಗ್ರಾಮೀಣ ಪ್ರದೇಶಗಳ ಜನರಿಗೆ ಇವುಗಳ ಲಾಭ ಸಿಗುತ್ತಿಲ್ಲ. ರೈತರು ನನ್ನನ್ನು ಭೇಟಿಯಾದಾಗಲೆಲ್ಲಾ ಯಶಸ್ವಿನಿ ಮತ್ತೆ ಆರಂಭಿಸುವಂತೆ ಮನವಿ ಮಾಡುತ್ತಿದ್ದರು. ರೈತರ ಬೇಡಿಕೆಯ ಮೇರೆಗೆ ಯಶಸ್ವಿನಿ ಯೋಜನೆ ತಂದಿದ್ದೇವೆ ಎಂದು ಹೇಳಿದರು. ಉತ್ತರ ಕರ್ನಾಟಕದ ಅಭಿವೃದ್ಧಿಗಾಗಿ 371 ಜೆ ಹಾಗೂ ನಂಜುಂಡಪ್ಪ ವರದಿಗಳು ಮಂಡನೆಯಾಗಿವೆ.

ಆದರೂ ಕೆಲವು ತಾಲ್ಲೂಕುಗಳು ಹಿಂದುಳಿದಿವೆ. ಆರೋಗ್ಯ, ಶಿಕ್ಷಣ ಮತ್ತು ಪೌಷ್ಟಿಕಾಂಶದ ಕೊರತೆ ಇದೆ. ಮೊದಲು‌ ಜಿಲ್ಲಾವಾರು ಪ್ಲಾನ್ ಮಾಡುತ್ತಿದ್ದೆವು. ಅದರಿಂದ ಹೆಚ್ಚು ಅನುಕೂಲವಾಗಲಿಲ್ಲ. ಹೀಗಾಗಿ ಸೆಕ್ಟರ್​ವಾರು ಯೋಜನೆ ಜಾರಿ ಮಾಡುತ್ತಿದ್ದೇವೆ. ಶಿಕ್ಷಣ ಮತ್ತು ಆರೋಗ್ಯ ಕ್ಷೇತ್ರಕ್ಕೆ ಒತ್ತು ಕೊಟ್ಟಿದ್ದೇವೆ. 93 ತಾಲೂಕುಗಳು ಶಿಕ್ಷಣದಲ್ಲಿ ಹಿಂದುಳಿದಿವೆ. 102 ತಾಲೂಕುಗಳಲ್ಲಿ ಅಪೌಷ್ಟಿಕತೆ ಹೆಚ್ಚಾಗಿದೆ. ಇದ್ದ ಸಂಪನ್ಮೂಲಗಳನ್ನು ಜನಕಲ್ಯಾಣಕ್ಕೆ ಬಳಸಿದ್ದೇವೆ. ಮಕ್ಕಳ ಶಿಕ್ಷಣ, ಪೌಷ್ಟಿಕತೆ ಕೊರತೆ ಸರಿಪಡಿಸಲು ಪ್ರಯತ್ನಿಸಿದ್ದೇವೆ. ಅಂಬೇಡ್ಕರ್ ವಸತಿ ನಿಲಯಕ್ಕೆ ಒತ್ತು ಕೊಟ್ಟಿದ್ದೇವೆ ಎಂದು ಹೇಳಿದರು.

ಬಜೆಟ್​ ಮೇಲಿನ ಚರ್ಚೆಯಲ್ಲಿ 19 ಸದಸ್ಯರು ಭಾಗಿಯಾಗಿದ್ದರು. 23 ಗಂಟೆ 39 ನಿಮಿಷಗಳ ಅವಧಿಯಲ್ಲಿ ಚರ್ಚೆ ನಡೆಯಿತು. ಕೊರೊನಾ ಸಂಕಷ್ಟದ ನಡುವೆಯೂ ಕಳೆದ ಐದಾರು ತಿಂಗಳಿನಿಂದ ರಾಜ್ಯದ ಆರ್ಥಿಕತೆ ಉತ್ತಮವಾಗಿದೆ. ಇದಕ್ಕೆ ದುಡಿಯುವ ವರ್ಗ, ವ್ಯಾಪಾರಸ್ಥರು, ರೈತರು, ಕಾರ್ಮಿಕರು ಕಾರಣ ಎಂದು ಬೊಮ್ಮಾಯಿ ಶ್ಲಾಘಿಸಿದರು.

ಇದನ್ನೂ ಓದಿ: ತನ್ನನ್ನು ವಿವಾಹವಾಗು ಎಂದು ಅಖಂಡ ಬ್ರಹ್ಮಚಾರಿ ಗಣೇಶನಿಗೆ ದುಂಬಾಲುಬಿದ್ದ ತುಳಸಿ, ಗಣಪನಿಂದ ಪಡೆದ ಶಾಪ ಎಂತಹುದು ಗೊತ್ತಾ!?

Published On - 1:28 pm, Wed, 16 March 22

ಆಟವೆಲ್ಲ ರಂಪಾಟವಾದಾಗ; ಹದ್ದುಮೀರಿ ನಡೆದುಕೊಂಡ ಸ್ಪರ್ಧಿಗಳು
ಆಟವೆಲ್ಲ ರಂಪಾಟವಾದಾಗ; ಹದ್ದುಮೀರಿ ನಡೆದುಕೊಂಡ ಸ್ಪರ್ಧಿಗಳು
ಕೈ ತುತ್ತಿನ ಹಿಂದಿರುವ ಮಹತ್ವದ ಬಗ್ಗೆ ನಿಮಗೆ ಗೊತ್ತಾ?
ಕೈ ತುತ್ತಿನ ಹಿಂದಿರುವ ಮಹತ್ವದ ಬಗ್ಗೆ ನಿಮಗೆ ಗೊತ್ತಾ?
ವಿಷ್ಣು, ಗಣೇಶನ ಲಹರಿ ಇರುವ ಈ ದಿನದ ರಾಶಿ ಭವಿಷ್ಯ ಹೇಗಿದೆ ತಿಳಿಯಿರಿ
ವಿಷ್ಣು, ಗಣೇಶನ ಲಹರಿ ಇರುವ ಈ ದಿನದ ರಾಶಿ ಭವಿಷ್ಯ ಹೇಗಿದೆ ತಿಳಿಯಿರಿ
2025ರ ಸರ್ಕಾರಿ ಕ್ಯಾಲೆಂಡರ್ ಹೇಗಿರುತ್ತದೆ? ಇಲ್ಲಿದೆ ನೋಡಿ ವಿಡಿಯೋ
2025ರ ಸರ್ಕಾರಿ ಕ್ಯಾಲೆಂಡರ್ ಹೇಗಿರುತ್ತದೆ? ಇಲ್ಲಿದೆ ನೋಡಿ ವಿಡಿಯೋ
ಹಿಮದಿಂದ ತುಂಬಿದ ಕಣಿವೆಯಲ್ಲಿ ಚಿರತೆಗಳ ಕುಣಿದಾಟ
ಹಿಮದಿಂದ ತುಂಬಿದ ಕಣಿವೆಯಲ್ಲಿ ಚಿರತೆಗಳ ಕುಣಿದಾಟ
ನಾಸಿಕ್‌ನಲ್ಲಿ 11 ವರ್ಷದ ಬಾಲಕಿ ಮೇಲೆ ಬೀದಿನಾಯಿಗಳ ದಾಳಿ; ವಿಡಿಯೋ ಇಲ್ಲಿದೆ
ನಾಸಿಕ್‌ನಲ್ಲಿ 11 ವರ್ಷದ ಬಾಲಕಿ ಮೇಲೆ ಬೀದಿನಾಯಿಗಳ ದಾಳಿ; ವಿಡಿಯೋ ಇಲ್ಲಿದೆ
ಕಷ್ಟ ಬಂದರೆ ಪ್ರಸಾದ ತಿಂದು ಬದುಕ್ತೀನಿ, ಯಾರ ಜತೆಗೂ ಹೋಗಿ ಇರಲ್ಲ: ರಚಿತಾ
ಕಷ್ಟ ಬಂದರೆ ಪ್ರಸಾದ ತಿಂದು ಬದುಕ್ತೀನಿ, ಯಾರ ಜತೆಗೂ ಹೋಗಿ ಇರಲ್ಲ: ರಚಿತಾ
ದಲಿತ ಸಮುದಾಯದ ಸಮಸ್ಯೆಗಳ ಚರ್ಚೆಗೆ ಮೀಟಿಂಗ್ ಕರೆದಿದ್ದಾರೆ: ಮಹಾದೇವಪ್ಪ
ದಲಿತ ಸಮುದಾಯದ ಸಮಸ್ಯೆಗಳ ಚರ್ಚೆಗೆ ಮೀಟಿಂಗ್ ಕರೆದಿದ್ದಾರೆ: ಮಹಾದೇವಪ್ಪ
ಕಾಂಗ್ರೆಸ್ 135 ಸ್ಥಾನ ಪಡೆಯುವಲ್ಲಿ ಶಿವಕುಮಾರ್ ಪಾತ್ರ ದೊಡ್ಡದು: ವಿಶ್ವನಾಥ್
ಕಾಂಗ್ರೆಸ್ 135 ಸ್ಥಾನ ಪಡೆಯುವಲ್ಲಿ ಶಿವಕುಮಾರ್ ಪಾತ್ರ ದೊಡ್ಡದು: ವಿಶ್ವನಾಥ್
ಚುನಾಯಿತ ಪ್ರತಿನಿಧಿಗಳ ಅನುಪಸ್ಥಿತಿಯಲ್ಲಿ ಪಾಲಿಕೆ ಅಧಿಕಾರಿಗಳದ್ದೇ ಪಾರಮ್ಯ
ಚುನಾಯಿತ ಪ್ರತಿನಿಧಿಗಳ ಅನುಪಸ್ಥಿತಿಯಲ್ಲಿ ಪಾಲಿಕೆ ಅಧಿಕಾರಿಗಳದ್ದೇ ಪಾರಮ್ಯ