AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಮೂರು ದಿನ ಮೊದಲೇ ವಿಧಾನಮಂಡಲ ಅಧಿವೇಶನಕ್ಕೆ ತೆರೆ: ಉಭಯ ಸದನಗಳು ಅನಿರ್ದಿಷ್ಟಾವಧಿಗೆ ಮುಂದೂಡಿಕೆ

ವಾಲ್ಮೀಕಿ ನಿಗಮ ಹಗರಣ ಸಂಬಂಧ ಸಚಿವ ಬಿ. ನಾಗೇಂದ್ರ ರಾಜೀನಾಮೆಗೆ ಆಗ್ರಹಿಸಿ ವಿಪಕ್ಷಗಳ ತೀವ್ರ ಪ್ರತಿಭಟನೆ ನಡುವೆಯೇ, ಕರ್ನಾಟಕ ವಿಧಾನಮಂಡಲದ ಮಳೆಗಾಲದ ಅಧಿವೇಶನವನ್ನು ನಿಗದಿತ ಸಮಯಕ್ಕಿಂತ 3 ದಿನ ಮುಂಚಿತವಾಗಿ ಅನಿರ್ದಿಷ್ಟಾವಧಿಗೆ ಮುಂದೂಡಲಾಗಿದೆ. ಆ ಬೆನ್ನಲ್ಲೇ ರಾಜ್ಯ ಸರ್ಕಾರದ ವಿರುದ್ಧ ವಿಪಕ್ಷ ನಾಯಕ ಆರ್​​. ಅಶೋಕ್​​ ವಾಗ್ದಾಳಿ ನಡೆಸಿದ್ದು, ​20-30 ವರ್ಷಗಳಲ್ಲಿ ಮೊದಲ ಬಾರಿ ವಿಪಕ್ಷಗಳಿಗೆ ಹೆದರಿ ಸರ್ಕಾರ ಓಡಿದೆ ಎಂದಿದ್ದಾರೆ.

ಮೂರು ದಿನ ಮೊದಲೇ ವಿಧಾನಮಂಡಲ ಅಧಿವೇಶನಕ್ಕೆ ತೆರೆ: ಉಭಯ ಸದನಗಳು ಅನಿರ್ದಿಷ್ಟಾವಧಿಗೆ ಮುಂದೂಡಿಕೆ
ಮೂರು ದಿನ ಮೊದಲೇ ವಿಧಾನಮಂಡಲ ಅಧಿವೇಶನಕ್ಕೆ ತೆರೆ
ಕಿರಣ್​ ಹನಿಯಡ್ಕ
| Edited By: |

Updated on:Aug 24, 2026 | 7:22 PM

Share

ಮುಖ್ಯಾಂಶಗಳು

  • ನಿಗದಿಗಿಂತ ಮೊದಲೇ ವಿಧಾನಮಂಡಲ ಅಧಿವೇಶನಕ್ಕೆ ತೆರೆ
  • ಉಭಯ ಸದನಗಳು ಅನಿರ್ದಿಷ್ಟಾವಧಿಗೆ ಮುಂದೂಡಿಕೆ
  • ಆಗಸ್ಟ್​​ 27ರ ವರೆಗೂ ಈ ಹಿಂದೆ ನಿಗದಿಯಾಗಿದ್ದ ಅಧಿವೇಶನ

ಬೆಂಗಳೂರು, ಆಗಸ್ಟ್​​ 24: ವಾಲ್ಮೀಕಿ ನಿಗಮ ಹಗರಣ ಸಂಬಂಧ ಸಚಿವ ಬಿ. ನಾಗೇಂದ್ರ (B. Nagendra) ರಾಜೀನಾಮೆಗೆ ಆಗ್ರಹಿಸಿ ವಿಪಕ್ಷಗಳ ತೀವ್ರ ಪ್ರತಿಭಟನೆಗೆ ಸಾಕ್ಷಿಯಾದ ಕರ್ನಾಟಕ (Karnataka) ವಿಧಾನಮಂಡಲ ಅಧಿವೇಶನಕ್ಕೆ 3 ದಿನಗಳ ಮೊದಲೇ ತೆರೆ ಬಿದ್ದಿದೆ. ಆಗಸ್ಟ್​​ 13ರಿಂದ 27ರ ವರೆಗೆ ಮಳೆಗಾಲದ ಅಧಿವೇಶನ ನಡೆಸಲು ಆರಂಭದಲ್ಲಿ ತೀರ್ಮಾನಿಸಲಾಗಿತ್ತು. ಆದರೀಗ ಮೂರು ದಿನಗಳ ಮುಂಚಿತವಾಗಿಯೇ ಅಂದರೆ ಆಗಸ್ಟ್​​ 24ರಂದೇ ವಿಧಾನ ಸಭೆ ಮತ್ತು ಪರಿಷತ್​​ ಕಲಾಪಗಳನ್ನು ಅನಿರ್ದಿಷ್ಟಾವಧಿಗೆ ಮುಂದೂಡಲಾಗಿದೆ.

‘ವಿಪಕ್ಷಗಳಿಗೆ ಹೆದರಿ ಸರ್ಕಾರ ಓಡಿದೆ’

ರಾಜ್ಯ ಸರ್ಕಾರದ ನಡೆ ವಿರುದ್ಧ ವಿಧಾನ ಸಭೆಯ ವಿಪಕ್ಷ ನಾಯಕ ಆರ್. ಅಶೋಕ್​​ ವಾಗ್ದಾಳಿ ನಡೆಸಿದ್ದು, ​20-30 ವರ್ಷಗಳಲ್ಲಿ ಮೊದಲ ಬಾರಿ ವಿಪಕ್ಷಗಳಿಗೆ ಹೆದರಿ ಸರ್ಕಾರ ಓಡಿದೆ. ಸಭಾಧ್ಯಕ್ಷರು ಸರಿಯಾದ ರೀತಿ ಸದನವನ್ನೇ ನಡೆಸಿಲ್ಲ. ಕಾಂಗ್ರೆಸ್ ರಾಜಕೀಯ ಮಾಡಬಹುದು, ನಾವು ಮಾಡಲ್ಲ. ದಲಿತರ ಹಣ ನುಂಗಿದ್ದಾರೆ, ಆ ಹಣ ವಾಪಸಾಗಬೇಕು. ಶೇ.5ರಷ್ಟು ಪಾರ್ಕ್​​ಗಳನ್ನು ಲೂಟಿ ಮಾಡುವುದಕ್ಕೆ ಹೊರಟಿದ್ದಾರೆ ಎಂದವರು ಕಿಡಿ ಕಾರಿದ್ದಾರೆ.

ಇದನ್ನೂ ಓದಿ: ಸಚಿವ ನಾಗೇಂದ್ರ ರಾಜೀನಾಮೆಗೆ ಆಗ್ರಹಿಸಿ ಮುಂದುವರಿದ ಪ್ರತಿಭಟನೆ: ಬಿಜೆಪಿ ಸದಸ್ಯರಿಗೆ ಖಡಕ್​​ ವಾರ್ನಿಂಗ್​​ ಕೊಟ್ಟ ಸಭಾಪತಿ ಸಲೀಂ ಅಹ್ಮದ್​

ಕಾಂಗ್ರೆಸ್ ಹಿಂಬಾಗಿಲಿನಿಂದ ಓಡಿ ಹೋಗಿದೆ. ಇದು ಭ್ರಷ್ಟರಿಂದ ಭ್ರಷ್ಟರಿಗಾಗಿ ನಡೆಯುತ್ತಿರುವ ಸರ್ಕಾರ. ದಲಿತರ ಹಣ ಲೂಟಿ ಮಾಡಿದವರ ಬಗ್ಗೆ ಅವರಿಗೆ ಭಯ ಕಾಡುತ್ತಿದೆ. ಇವರ ಬಣ್ಣ ಬಯಲಾಗುತ್ತದೆ, ಭ್ರಷ್ಟಾಚಾರ ಬಯಲಿಗೆ ಬರುತ್ತದೆ ಎಂದು ನಾಗೇಂದ್ರರನ್ನು ರಕ್ಷಣೆ ಮಾಡ್ತಿದ್ದಾರೆ. 85 ಕೋಟಿ ಹಗರಣ ಎಂದು ಸ್ವತಃ ಸಿದ್ದರಾಮಯ್ಯನವರೇ ಒಪ್ಪಿಕೊಂಡಿದ್ದರು. ಇಷ್ಟಾದ್ರೂ ಕೂಡ ಸರ್ಕಾರ ಭಂಡತನದಿಂದ ಮೆರೆಯುತ್ತಿದೆ ಎಂದು ರಾಜ್ಯ ಬಿಜೆಪಿ ಅಧ್ಯಕ್ಷ, ಶಾಸಕ ವಿಜಯೇಂದ್ರ ವಾಗ್ದಾಳಿ ನಡೆಸಿದ್ದಾರೆ.

ರಾಜ್ಯಪಾಲರಿಗೆ ದೂರು ಸಲ್ಲಿಕೆ

ವಿಧಾನಸಭೆ ವಿಪಕ್ಷ ನಾಯಕ ಆರ್. ಅಶೋಕ್ ಮತ್ತು ಬಿಜೆಪಿ ರಾಜ್ಯಾಧ್ಯಕ್ಷ ಬಿ.ವೈ. ವಿಜಯೇಂದ್ರ ನೇತೃತ್ವದಲ್ಲಿ ವಿಧಾನಸೌಧದಿಂದ ಲೋಕಭವನಕ್ಕೆ ಬಿಜೆಪಿ ಶಾಸಕರು ಪಾದಯಾತ್ರೆ ನಡೆಸಿದ್ದು, ಸಚಿವ ನಾಗೇಂದ್ರ ವಿಚಾರವಾಗಿ ರಾಜ್ಯಪಾಲರಿಗೆ ದೂರು ಸಲ್ಲಿಕೆ ಮಾಡಿದ್ದಾರೆ. ಈ ವೇಳೆ ಜೆಡಿಎಸ್ ಶಾಸಕರು ಕೂಡ ಉಪಸ್ಥಿತರಿದ್ದರು.

ಮತ್ತಷ್ಟು ಸುದ್ದಿ ಓದಲು ಇಲ್ಲಿ ಕ್ಲಿಕ್​​ ಮಾಡಿ.

Published On - 7:15 pm, Mon, 24 August 26

Follow Us
ಕಿರಣ್​ ಹನಿಯಡ್ಕ
ಕಿರಣ್​ ಹನಿಯಡ್ಕ

TV9 ಕನ್ನಡದಲ್ಲಿ ಹಿರಿಯ ರಾಜಕೀಯ ವರದಿಗಾರ. ಮಂಗಳೂರು ವಿಶ್ವವಿದ್ಯಾನಿಲಯದಿಂದ ಸಮೂಹ ಸಂವಹನ ಮತ್ತು ಪತ್ರಿಕೋದ್ಯಮದಲ್ಲಿ ಸ್ನಾತಕೋತ್ತರ ಪದವಿ. 17 ವರ್ಷಗಳಿಂದ ಮಾಧ್ಯಮ ವೃತ್ತಿ. ಮುದ್ರಣ ಮಾಧ್ಯಮದಲ್ಲಿ ಸಬ್ ಎಡಿಟರ್, ವಿದ್ಯುನ್ಮಾನ ಮಾಧ್ಯಮದಲ್ಲಿ ನ್ಯೂಸ್ ಡೆಸ್ಕ್ ಮತ್ತು ರಾಜಕೀಯ ವರದಿಗಾರಿಕೆಯಲ್ಲಿ ಅನುಭವ.

Read More
‘ಪ್ರೇಮದ ಊರಲಿ’ ಸಿನಿಮಾಕ್ಕೆ ನಟಿ ರಮಿಕಾ ಡಬ್ಬಿಂಗ್: ವಿಡಿಯೋ ನೋಡಿ
‘ಪ್ರೇಮದ ಊರಲಿ’ ಸಿನಿಮಾಕ್ಕೆ ನಟಿ ರಮಿಕಾ ಡಬ್ಬಿಂಗ್: ವಿಡಿಯೋ ನೋಡಿ
‘ಪ್ರೇಮದ ಊರಲಿ’ ಸಿನಿಮಾ ಗಳಿಸಿರುವುದೆಷ್ಟು? ನಟ ಶ್ರೀರಾಮ್ ಹೇಳಿದ್ದೇನು?
‘ಪ್ರೇಮದ ಊರಲಿ’ ಸಿನಿಮಾ ಗಳಿಸಿರುವುದೆಷ್ಟು? ನಟ ಶ್ರೀರಾಮ್ ಹೇಳಿದ್ದೇನು?
11 ದಿನ ದಸರಾ ವಿಶೇಷತೆ ಬಗ್ಗೆ ಇತಿಹಾಸ ತಜ್ಞ ಡಾ.ಶೆಲ್ವಪಿಳೈ ಹೇಳಿದ್ದಿಷ್ಟು
11 ದಿನ ದಸರಾ ವಿಶೇಷತೆ ಬಗ್ಗೆ ಇತಿಹಾಸ ತಜ್ಞ ಡಾ.ಶೆಲ್ವಪಿಳೈ ಹೇಳಿದ್ದಿಷ್ಟು
ಅಜ್ಜಿ ಸಾವಿನ ಸುದ್ದಿ ತಿಳಿದರೂ ಮನೆಗೆ ತೆರಳಲು ನಿರಾಕರಿಸಿದ ಅಭಿಜೀತ್ ದಿಪ್ಕೆ
ಅಜ್ಜಿ ಸಾವಿನ ಸುದ್ದಿ ತಿಳಿದರೂ ಮನೆಗೆ ತೆರಳಲು ನಿರಾಕರಿಸಿದ ಅಭಿಜೀತ್ ದಿಪ್ಕೆ
ರೂಪಗೊಳ್ಳುತ್ತಿದೆ ಮೈ ಹೋಂ ಗ್ರೂಪ್​​​ನ ಮತ್ತೊಂದು ಅಲ್ಟ್ರಾ ಲಕ್ಸುರಿ ಯೋಜನೆ
ರೂಪಗೊಳ್ಳುತ್ತಿದೆ ಮೈ ಹೋಂ ಗ್ರೂಪ್​​​ನ ಮತ್ತೊಂದು ಅಲ್ಟ್ರಾ ಲಕ್ಸುರಿ ಯೋಜನೆ
ರೇವಣ್ಣ ಬೆನ್ನಲ್ಲೇ ಹಾಸನ ಜಿಲ್ಲಾಧಿಕಾರಿ ವಿರುದ್ಧ ಸಮರಕ್ಕಿಳಿದ ಕುಮಾರಸ್ವಾಮಿ
ರೇವಣ್ಣ ಬೆನ್ನಲ್ಲೇ ಹಾಸನ ಜಿಲ್ಲಾಧಿಕಾರಿ ವಿರುದ್ಧ ಸಮರಕ್ಕಿಳಿದ ಕುಮಾರಸ್ವಾಮಿ
ರಾಜಕಾರಣದಲ್ಲಿ ಸಂಚಲನ ಮೂಡಿಸಿದ ಕುಮಾರಸ್ವಾಮಿಯ ಸ್ಟಿಂಗ್ ಆಪರೇಷನ್ ಮಾತು
ರಾಜಕಾರಣದಲ್ಲಿ ಸಂಚಲನ ಮೂಡಿಸಿದ ಕುಮಾರಸ್ವಾಮಿಯ ಸ್ಟಿಂಗ್ ಆಪರೇಷನ್ ಮಾತು
'ನನ್ನನ್ನು ಬಂಧಿಸಿರಲಿಲ್ಲ, ಅಪಹರಿಸಿದ್ದರು'; ಯೂಟ್ಯೂಬರ್ ಧ್ರುವ್ ರಾಠೀ
'ನನ್ನನ್ನು ಬಂಧಿಸಿರಲಿಲ್ಲ, ಅಪಹರಿಸಿದ್ದರು'; ಯೂಟ್ಯೂಬರ್ ಧ್ರುವ್ ರಾಠೀ
‘ತಪ್ಪು ಮಾಡಿಬಿಟ್ಟೆ’: ಎಲಿಮಿನೇಟ್ ಆದ ಬಳಿಕ ಸುದೀಪ್ ಎದುರು ಮಂಜನ ಕಣ್ಣೀರು
‘ತಪ್ಪು ಮಾಡಿಬಿಟ್ಟೆ’: ಎಲಿಮಿನೇಟ್ ಆದ ಬಳಿಕ ಸುದೀಪ್ ಎದುರು ಮಂಜನ ಕಣ್ಣೀರು
ಚಿನ್ನದ ಸಿಂಹಾಸನವೇರಿದ ಯದುವೀರ ಒಡೆಯರ್:ಮೈಸೂರು ಅರಮನೆಯಲ್ಲಿ ಖಾಸಗಿ ದರ್ಬಾರ್
ಚಿನ್ನದ ಸಿಂಹಾಸನವೇರಿದ ಯದುವೀರ ಒಡೆಯರ್:ಮೈಸೂರು ಅರಮನೆಯಲ್ಲಿ ಖಾಸಗಿ ದರ್ಬಾರ್