AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ವಿರೋಧದ ಮಧ್ಯೆ ಜಿ ರಾಮ್‌ ಜಿ ಕಾಯ್ದೆ ವಿರುದ್ಧದ ನಿರ್ಣಯ ಅಂಗೀಕಾರ: ಬಿಜೆಪಿ ನಾಯಕರು ಆಕ್ರೋಶ

ಮನ್ರೇಗಾ ಹೆಸರು ಬದಲಾಯಿಸಿ ಜಿ ರಾಮ್ ಜಿ ಕಾಯ್ದೆ ತಂದಿರುವ ಕೇಂದ್ರದ ನಡೆಯನ್ನ ಖಂಡಿಸಲೆಂದೇ ರಾಜ್ಯ ಸರ್ಕಾರ ವಿಶೇಷ ಅಧಿವೇಶನ ಕರೆದಿತ್ತು. ನಿನ್ನೆ ಸಿಎಂ ಸಿದ್ದರಾಮಯ್ಯ ಕಾಯ್ದೆ ವಿರುದ್ಧ ನಿರ್ಣಯವನ್ನೂ ಮಂಡಿಸಿದ್ದರು. ಇಂದು ಅಂಗೀಕಾರವೂ ಆಗಿದೆ. ಸರ್ಕಾರ ತಂದಿರುವ ಈ ನಿರ್ಣಯ ಅಕ್ರಮ ಎಂದು ಆರ್​​. ಅಶೋಕ್ ಕಿಡಿಕಾರಿದ್ದಾರೆ.​

ವಿರೋಧದ ಮಧ್ಯೆ ಜಿ ರಾಮ್‌ ಜಿ ಕಾಯ್ದೆ ವಿರುದ್ಧದ ನಿರ್ಣಯ ಅಂಗೀಕಾರ: ಬಿಜೆಪಿ ನಾಯಕರು ಆಕ್ರೋಶ
ವಿಧಾನಸಭೆImage Credit source: tv9 kannada
ಹರೀಶ್ ಜಿ.ಆರ್​.
| Edited By: |

Updated on: Feb 04, 2026 | 9:52 PM

Share

ಬೆಂಗಳೂರು, ಫೆಬ್ರವರಿ 04: ಕೇಂದ್ರ ಸರ್ಕಾರ ಜಾರಿಗೆ ತಂದಿರುವ ವಿಬಿಜಿ ರಾಮ್ ಜಿ (G-RAM-G) ಕಾಯ್ದೆಯನ್ನು ವಾಪಸ್ ಪಡೆಯಬೇಕು ಹಾಗೂ ಮಹಾತ್ಮ ಗಾಂಧಿ ಗ್ರಾಮೀಣ ಉದ್ಯೋಗ ಖಾತರಿ ಕಾಯ್ದೆಯನ್ನು ಮರುಜಾರಿಗೊಳಿಸುವಂತೆ ಒತ್ತಾಯಿಸಿ ಸಿಎಂ ಸಿದ್ದರಾಮಯ್ಯ (Siddaramaiah) ಮಂಡಿಸಿದ್ದ ಅಧಿಕೃತ ನಿರ್ಣಯವನ್ನು, ವಿರೋಧದ ಮಧ್ಯೆ ಇಂದು ವಿಧಾನಸಭೆಯಲ್ಲಿ ಅಂಗೀಕರಿಸಲಾಗಿದೆ.

ಕೇಂದ್ರ ಜಾರಿಗೆ ತಂದ ಜಿ ರಾಮ್ ಜಿ ಕಾಯ್ದೆ ವಿರುದ್ಧವೇ ನಿರ್ಣಯ ಮಂಡಿಸಲು ಸರ್ಕಾರ ವಿಶೇಷ ಅಧಿವೇಶನ ಕರೆದಿತ್ತು. ಮನ್ರೇಗಾ ಪರವಾಗಿ, ವಿಬಿ ಜಿ ರಾಮ್‌ ಜಿ ವಿರುದ್ಧವಾಗಿ ಸಿಎಂ ಸಿದ್ದರಾಮಯ್ಯ ಸದನದಲ್ಲಿ ನಿನ್ನೆ ನಿರ್ಣಯ ಮಂಡಿಸಿದ್ದರು. ಈ ನಿರ್ಣಯವನ್ನು ಸ್ಪೀಕರ್ ಮತಕ್ಕೆ ಹಾಕಿದ್ದರು. ಧ್ವನಿ ಮತದ ಮೂಲಕ ಖಂಡನಾ ನಿರ್ಣಯ ಅಂಗೀಕಾರವಾಗಿದೆ ಎಂದು ಸ್ಪೀಕರ್ U.T.ಖಾದರ್​ ಪ್ರಕಟಿಸಿದರು. ನಿರ್ಣಯ ಅಂಗೀಕಾರವಾದ ಬಳಿಕ ಅನಿರ್ದಿಷ್ಟಾವಧಿಗೆ ಕಲಾಪವನ್ನು ಮುಂದೂಡಲಾಯಿತು.

ಕೇಂದ್ರ ಸರ್ಕಾರದ ವಿರುದ್ಧ ಸಚಿವ ಪ್ರಿಯಾಂಕ್ ಖರ್ಗೆ ವಾಗ್ದಾಳಿ

ವಿಧಾನಸಭೆಯಲ್ಲಿ ಗ್ರಾಮೀಣಾಭಿವೃದ್ಧಿ ಮತ್ತು ಪಂಚಾಯತ್​ರಾಜ್ ಸಚಿವ ಪ್ರಿಯಾಂಕ್ ಖರ್ಗೆ ಮಾತನಾಡಿ, ನರೇಗಾ ಯೋಜನೆಯನ್ನು ಎಲ್.ಕೆ.ಅಡ್ವಾಣಿ ಹೊಗಳಿದ್ದರು. ಈಗ ತಂದಿರುವ ವಿಬಿ ಜಿ ರಾಮ್ ಜಿ ಕಾಯ್ದೆಯಲ್ಲಿ ಏನಿದೆ ಎಂದು ಪ್ರಶ್ನಿಸಿದರು.

ಇದನ್ನೂ ಓದಿ: ʼವಿಬಿಜಿ ರಾಮ್ ಜಿ ಕಾಯ್ದೆʼ ಭ್ರಷ್ಟಾಚಾರಿ ಕಾಂಗ್ರೆಸ್‌ ಮಧ್ಯವರ್ತಿಗಳಿಗೆ ತೊಡಕು: ಜೋಶಿ ತಿರುಗೇಟು

ವಿಬಿ ಜಿ ರಾಮ್ ಜಿ ಕಾಯ್ದೆ ಬಗ್ಗೆ ಬಿಜೆಪಿಯವರಿಗೆ ಗೊತ್ತಿಲ್ಲ. ಕಾರ್ಮಿಕರ ಬದುಕಿನ ಬಗ್ಗೆ ಲೋಕಸಭೆಯಲ್ಲಿ ಬಿಜೆಪಿ ಸದಸ್ಯ ವರುಣ್ ಗಾಂಧಿ ಪ್ರಶ್ನಿಸಿದ್ದಾರೆ. ಆಗ ಕೇಂದ್ರ ಸರ್ಕಾರ ಪಾದರ್ಶಕವಾಗಿದೆ ಎಂದು ಉತ್ತರಿಸಿದೆ. ಆದರೆ ಈಗ ಮನ್​ರೇಗಾ ಕಾಯ್ದೆಯನ್ನೇ ಬದಲಾಯಿಸಿದ್ದಾರೆ ಎಂದು ಕೇಂದ್ರ ಸರ್ಕಾರದ ವಿರುದ್ಧ ಸಚಿವ ಪ್ರಿಯಾಂಕ್ ಖರ್ಗೆ ವಾಗ್ದಾಳಿ ಮಾಡಿದ್ದಾರೆ.

ಸರ್ಕಾರ ತಂದಿರುವ ನಿರ್ಣಯ ಅಕ್ರಮ ಎಂದ ಆರ್.ಅಶೋಕ್

ಇನ್ನು ವಿಧಾನಸೌಧದಲ್ಲಿ ವಿಪಕ್ಷ ನಾಯಕ ಆರ್.ಅಶೋಕ್ ಮಾತನಾಡಿ, ವಿಧಾನಸಭೆಯಲ್ಲಿ ದೌರ್ಜನ್ಯ ಮಾಡಿ ನಿರ್ಣಯ ತಂದಿದ್ದಾರೆ. ಸರ್ಕಾರ ತಂದಿರುವ ನಿರ್ಣಯ ಅಕ್ರಮ. 5 ಗಂಟೆಗಳ ಮೇಲೆ ಚರ್ಚೆ ಆಗಬಾರದೆಂದು ನಿಯಮವಿದೆ, ಏಳು ದಿನ ಮೊದಲೇ ನೋಟಿಸ್ ಕೊಟ್ಟಿಲ್ಲ. ಸ್ಪೀಕರ್ ನಡೆ ಸರಿ ಇಲ್ಲ ಎಂದು  ಆಕ್ರೋಶ ವ್ಯಕ್ತಪಡಿಸಿದರು.

ಇದನ್ನೂ ಓದಿ: ಕೇಂದ್ರದ ವಿರುದ್ಧ ಸುಳ್ಳು ಜಾಹೀರಾತು ಆರೋಪ: ಸಚಿವ ಪ್ರಿಯಾಂಕ್​​ ಖರ್ಗೆ ವಿರುದ್ಧ ಮಂಡ್ಯ ಬಿಜೆಪಿ ದೂರು

ಜಿ ರಾಮ್ ಜಿ ಯೋಜನೆ ಪಾರದರ್ಶಕವಾಗಿದೆ. ಕಮಿಷನ್ ಹೊಡೆಯಲು ಆಗಲ್ಲ, ಕೇಂದ್ರದ ನಿಗಾ ಇರುತ್ತೆ. BJB-ಜೆಡಿಎಸ್ ಒಟ್ಟಾಗಿ ಸರ್ಕಾರ ಇಕ್ಕಟ್ಟಿಗೆ ಸಿಲುಕಿಸಿದೆ. 40-50 ಸಾವಿರ ಕೋಟಿ ರೂ ಹಣವನ್ನು ಲೂಟಿ ಮಾಡಿದ್ದಾರೆ. ಅಬಕಾರಿ ಇಲಾಖೆ ಲೂಟಿ, ಹಗರಣ ಬಯಲಿಗೆಳೆದಿದ್ದೇವೆ. ತನಿಖೆ ಆಗಬೇಕು, ಅಬಕಾರಿ ಮಂತ್ರಿ ರಾಜೀನಾಮೆ ಕೊಡಬೇಕು. ನಮ್ಮ ಧರಣಿ ನಿಲ್ಲಲ್ಲ, ರಾಜ್ಯವ್ಯಾಪಿ ಹೋರಾಟ ಮಾಡುತ್ತೇವೆ ಎಂದು ಆರ್.ಅಶೋಕ್ ಹೇಳಿದ್ದಾರೆ.

ಅರವಿಂದ ಬೆಲ್ಲದ್ ಹೇಳಿದಿಷ್ಟು 

ವಿಪಕ್ಷ ಉಪನಾಯಕ ಅರವಿಂದ ಬೆಲ್ಲದ್ ಮಾತನಾಡಿ, ವಿಬಿ ಜಿ ರಾಮ್‌ ಜಿ ಯೋಜನೆಗೆ ಕೇಂದ್ರ ಸರ್ಕಾರ ಹಣವನ್ನು ಕೊಡಬೇಕು ಎನ್ನುವುದು ಕಾಂಗ್ರೆಸ್ ಟೀಕೆ. ವಾಜಪೇಯಿ ಸರ್ವಶಿಕ್ಷಾ ಅಭಿಯಾನ‌ ತಂದಿದ್ದರು. ನಂತರ ಯುಪಿಎ ಸರ್ಕಾರ ಆ ಯೋಜನೆಗೆ 50-50 ಅನುಪಾತ ಜಾರಿಗೆ ತಂದರು. ಯುಪಿಎ ಅವಧಿಯಲ್ಲಿಯೂ ಕೇಂದ್ರದ ಪಾಲನ್ನು ಕಡಿಮೆ ಮಾಡಿಕೊಳ್ಳುತ್ತಾ ಬಂದರು. ಕಾಂಗ್ರೆಸ್ ಸಹ ಹೊಸ ಕಾನೂನು ಜಾರಿ ಮಾಡಲು ಅನುದಾನ ಕಡಿಮೆ ಮಾಡಿತು. ಮನ್ರೇಗಾದಲ್ಲಿ ಲೂಟಿ ಹೊಡೆಯುತ್ತಿದ್ದರೆಂದು ಹಳ್ಳಿಯ ಜನರು ಹೇಳುತ್ತಾರೆ. ವೋಟ್ ಚೋರಿ ಎನ್ನುವ ಅಭಿಯಾನ ಮಾಡಿದರು. ಈಗ ಇದನ್ನು ಆರಂಭಿಸಿದ್ದಾರೆ, ಇದರಲ್ಲೂ ಮುಖಭಂಗ ಅನುಭವಿಸುತ್ತಾರೆ ಎಂದರು.

ಕರ್ನಾಟಕದ ಮತ್ತಷ್ಟು ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ.

Follow Us
ಹರೀಶ್ ಜಿ.ಆರ್​.
ಹರೀಶ್ ಜಿ.ಆರ್​.

ಹರೀಶ್ ಜಿ.ಆರ್ ಮೂಲತಃ ಚಿಕ್ಕಮಗಳೂರಿನವರಾಗಿದ್ದು, ಪೌಢ ಶಿಕ್ಷಣವನ್ನು ಉಜಿರೆಯ ಎಸ್ ಡಿಎಂ ಸಂಸ್ಥೆಯಲ್ಲಿ ಹಾಗೂ ಮೈಸೂರಿನ ಮಹಾರಾಜ ಕಾಲೇಜಿನಲ್ಲಿ ಪತ್ರಿಕೋದ್ಯಮ ದಲ್ಲಿ ಬಿ.ಎ ಪದವಿಯನ್ನು, ಮಾನಸ ಗಂಗೋತ್ರಿಯ EMMRC ಸಂಸ್ಥೆಯ ಎಲೆಕ್ಟ್ರಾನಿಕ್ ಮೀಡಿಯಾ ವಿಷಯದಲ್ಲಿ ಎಂಎಸ್ಸಿ ಸ್ನಾತಕೋತ್ತರ ಪದವಿ ಪಡೆದಿದ್ದಾರೆ. ಸಧ್ಯ ಪತ್ರಿಕೋದ್ಯಮದಲ್ಲಿ 14 ವರ್ಷದ ಅನುಭವ ಹೊಂದಿರುವ ಇವರು, ದೆಹಲಿಯಲ್ಲಿಯೇ 10 ವರ್ಷಗಳ ಪತ್ರಿಕೋದ್ಯಮದಲ್ಲಿ ಸೇವೆ ಸಲ್ಲಿಸಿದ್ದಾರೆ. ರಾಜ್ಯ, ರಾಜಕೀಯ, ರಾಷ್ಟ್ರೀಯ, ಅಂತರರಾಷ್ಟ್ರೀಯ, ಸುಪ್ರೀಂಕೋರ್ಟ್ ವರದಿಗಾರಿಕೆಯಲ್ಲಿ ಅಪಾರ ಅನುಭವ ಹೊಂದಿದ್ದಾರೆ. ಅಯೋಧ್ಯೆ ರಾಮಮಂದಿರದ ತೀರ್ಪು ನಿಂದ ಹಿಡಿದು ಮಂದಿರ ಉದ್ಘಾಟನೆವರೆಗೂ ವರದಿ ಮಾಡಿದ ಅನುಭವ ಹೊಂದಿದ್ದಾರೆ. ಪುಲ್ವಾಮ ಉಗ್ರರ ದಾಳಿ, ಪಹಲ್ಗಾಂ ಉಗ್ರರ ದಾಳಿ, ಆದಾದ ನಂತರದ ಆಪರೇಷನ್ ಸಿಂಧೂರ್ ಕಾರ್ಯಾಚರಣೆಗಳನ್ನು ಜಮ್ಮು ಮತ್ತು ಕಾಶ್ಮೀರದಲ್ಲಿ ಗ್ರೌಂಡ್ ರಿಪೋರ್ಟ್ ಮಾಡಿರುವ ಅನುಭವ ಹೊಂದಿದ್ದಾರೆ.. ಉತ್ತರಖಂಡದಲ್ಲಿ ಸಂಭವಿಸಿದ ಪ್ರಕೃತಿ ವಿಕೋಪಗಳನ್ನು ಗ್ರೌಂಡ್ ರಿಪೋರ್ಟ್ ಮಾಡಿದ್ದಾರೆ. 2019‌ ಹಾಗೂ 2024ರ ಲೋಕಸಭಾ ಚುನಾವಣೆಯಲ್ಲಿ ವಿವಿಧ ರಾಜ್ಯಗಳನ್ನು ಸುತ್ತಿ ಜನರ ರಾಜಕೀಯ ನಾಡಿಮಿಡಿತದ ವರದಿ ಮಾಡಿದ್ದಾರೆ.. ಸಧ್ಯ ಇವರು ಬೆಂಗಳೂರಿನಲ್ಲಿ ರಾಜಕೀಯ ವರದಿಗಾರರಾಗಿ ಕೆಲಸ ನಿರ್ವಹಿಸುತ್ತಿದ್ದಾರೆ.

Read More
ಹಾಸನಾಂಬೆ ಮಹೋತ್ಸವ: ಗುತ್ತಿಗೆದಾರನ ಜತೆ ಸಚಿವ ಶಿವಲಿಂಗೇಗೌಡ ಚೌಕಾಸಿ
ಹಾಸನಾಂಬೆ ಮಹೋತ್ಸವ: ಗುತ್ತಿಗೆದಾರನ ಜತೆ ಸಚಿವ ಶಿವಲಿಂಗೇಗೌಡ ಚೌಕಾಸಿ
ಹೀರೋಗಳೇ ವಿಲನ್ ಆಗಿದ್ದಕ್ಕೆ ಕನ್ನಡ ಚಿತ್ರರಂಗಕ್ಕೆ ಸಮಸ್ಯೆ ಆಯ್ತಾ?
ಹೀರೋಗಳೇ ವಿಲನ್ ಆಗಿದ್ದಕ್ಕೆ ಕನ್ನಡ ಚಿತ್ರರಂಗಕ್ಕೆ ಸಮಸ್ಯೆ ಆಯ್ತಾ?
‘ಪ್ರೇಮದ ಊರಲಿ’ ಗೆಲುವನ್ನು ತಮ್ಮದೇ ರೀತಿಯಲ್ಲಿ ವಿಶ್ಲೇಷಿಸಿದ ತರುಣ್ ಸುಧೀರ್
‘ಪ್ರೇಮದ ಊರಲಿ’ ಗೆಲುವನ್ನು ತಮ್ಮದೇ ರೀತಿಯಲ್ಲಿ ವಿಶ್ಲೇಷಿಸಿದ ತರುಣ್ ಸುಧೀರ್
ರಾಷ್ಟ್ರಪತಿ ಭವನದತ್ತ ಮೆರವಣಿಗೆಯಲ್ಲಿ ಸಿಎಂ ಡಿಕೆ ಶಿವಕುಮಾರ್ ಕೂಡ ಭಾಗಿ
ರಾಷ್ಟ್ರಪತಿ ಭವನದತ್ತ ಮೆರವಣಿಗೆಯಲ್ಲಿ ಸಿಎಂ ಡಿಕೆ ಶಿವಕುಮಾರ್ ಕೂಡ ಭಾಗಿ
ಪ್ರತಿಭಟನೆಯಲ್ಲಿ ಭಾಗವಹಿಸದಂತೆ ಮುಸ್ಲಿಮರಿಗೆ ಇಮಾಮ್ ಉಮರ್ ಇಲ್ಯಾಸಿ ಮನವಿ
ಪ್ರತಿಭಟನೆಯಲ್ಲಿ ಭಾಗವಹಿಸದಂತೆ ಮುಸ್ಲಿಮರಿಗೆ ಇಮಾಮ್ ಉಮರ್ ಇಲ್ಯಾಸಿ ಮನವಿ
ಬೇಡ್ತಿ ನದಿ ತಿರುವಿನಿಂದಾಗುವ ಪರಿಣಾಮಗಳೇನು? ಯೋಜನೆಗೆ ವಿರೋಧವೇಕೆ?
ಬೇಡ್ತಿ ನದಿ ತಿರುವಿನಿಂದಾಗುವ ಪರಿಣಾಮಗಳೇನು? ಯೋಜನೆಗೆ ವಿರೋಧವೇಕೆ?
ಬರಿದಾಗ್ತಿದೆ KRS: CWMA ಆದೇಶದಿಂದ ಕುಡಿಯುವ ನೀರಿಗೂ ಹಾಹಾಕಾರದ ಭೀತಿ
ಬರಿದಾಗ್ತಿದೆ KRS: CWMA ಆದೇಶದಿಂದ ಕುಡಿಯುವ ನೀರಿಗೂ ಹಾಹಾಕಾರದ ಭೀತಿ
‘ಆ ಸಿನಿಮಾ ದರ್ಶನ್​​​ಗೆ ಮಾತ್ರ’: ತರುಣ್ ಸುಧೀರ್ ಹೇಳಿದ್ದು ಯಾವ ಕತೆ?
‘ಆ ಸಿನಿಮಾ ದರ್ಶನ್​​​ಗೆ ಮಾತ್ರ’: ತರುಣ್ ಸುಧೀರ್ ಹೇಳಿದ್ದು ಯಾವ ಕತೆ?
ಭಾರತೀಯ ಕಂಪನಿಗಳನ್ನ ಅಮೆರಿಕ ಟಾರ್ಗೆಟ್ ಮಾಡಿರೋ ಕಾರಣ ಬಿಚ್ಚಿಟ್ಟ ಪೈ!
ಭಾರತೀಯ ಕಂಪನಿಗಳನ್ನ ಅಮೆರಿಕ ಟಾರ್ಗೆಟ್ ಮಾಡಿರೋ ಕಾರಣ ಬಿಚ್ಚಿಟ್ಟ ಪೈ!
ಯಡಿಯೂರಪ್ಪ ಡ್ರೈವರ್ ಗ್ಯಾರಂಟಿ ಯೋಜನೆಗೆ ಮೊದಲು ಅರ್ಜಿ ಹಾಕಿದ್ದು
ಯಡಿಯೂರಪ್ಪ ಡ್ರೈವರ್ ಗ್ಯಾರಂಟಿ ಯೋಜನೆಗೆ ಮೊದಲು ಅರ್ಜಿ ಹಾಕಿದ್ದು