ನೂತನ ಸರ್ಕಾರದಲ್ಲಿ ಸಚಿವ ಸ್ಥಾನ: ವಿಧಾನಸಭೆ ಸ್ಪೀಕರ್ ಸ್ಥಾನಕ್ಕೆ ಯು.ಟಿ.ಖಾದರ್ ರಾಜೀನಾಮೆ

ನೂತನ ಡಿ.ಕೆ. ಶಿವಕುಮಾರ್ ಸರ್ಕಾರದ ಭಾಗವಾಗುತ್ತಿರುವ ಹಿನ್ನೆಲೆ, ವಿಧಾನಸಭೆ ಸ್ಪೀಕರ್ ಹುದ್ದೆಗೆ ಯು.ಟಿ. ಖಾದರ್ ರಾಜೀನಾಮೆ ನೀಡಿದ್ದಾರೆ. ಡೆಪ್ಯುಟಿ ಸ್ಪೀಕರ್‌ಗೆ ರಾಜೀನಾಮೆ ಪತ್ರ ಸಲ್ಲಿಸಿದ ಅವರು ಸಚಿವರಾಗಿ ಪ್ರಮಾಣವಚನ ಸ್ವೀಕರಿಸಲಿದ್ದಾರೆ. ಇನ್ನು ಸಚಿವ ಸ್ಥಾನದ ವಿಚಾರವಾಗಿ ಪ್ರತಿಕ್ರಿಯಿಸಿರುವ ಯು.ಟಿ. ಖಾದರ್​​, ನಾನು ಯಾವುದೇ ಖಾತೆಗೆ ಬೇಡಿಕೆ ಇಟ್ಟಿಲ್ಲ. ಆದರೆ ಆರೋಗ್ಯ ಖಾತೆ ಅಥವಾ ವಸತಿ ಖಾತೆ ಸಿಕ್ಕರೆ ಒಳಿತೆಂಬ ಬಯಕೆ ಇದೆ ಎಂದಿದ್ದಾರೆ.

ನೂತನ ಸರ್ಕಾರದಲ್ಲಿ ಸಚಿವ ಸ್ಥಾನ: ವಿಧಾನಸಭೆ ಸ್ಪೀಕರ್ ಸ್ಥಾನಕ್ಕೆ ಯು.ಟಿ.ಖಾದರ್ ರಾಜೀನಾಮೆ
ಯು.ಟಿ. ಖಾದರ್ ರಾಜೀನಾಮೆ
Image Credit source: PTI
Edited By:

Updated on: Jun 03, 2026 | 12:18 PM

ಬೆಂಗಳೂರು, ಜೂನ್​​ 03: ಡಿ.ಕೆ. ಶಿವಕುಮಾರ್ (DK Shivakumar)​​ ನೇತೃತ್ವದ ನೂತನ ಸರ್ಕಾರದಲ್ಲಿ ಸಚಿವರಾಗುವುದು ಪಕ್ಕಾ ಆದ ಹಿನ್ನೆಲೆ ವಿಧಾನಸಭೆ ಸ್ಪೀಕರ್ ಸ್ಥಾನಕ್ಕೆ ಯು.ಟಿ.ಖಾದರ್ (U. T. Khader) ರಾಜೀನಾಮೆ ಸಲ್ಲಿಕೆ ಮಾಡಿದ್ದಾರೆ. ಲೋಕಭವನದಲ್ಲೇ ಡೆಪ್ಯುಟಿ ಸ್ಪೀಕರ್​ಗೆ ಖಾದರ್​​ ರಾಜೀನಾಮೆ ಪತ್ರ ಸಲ್ಲಿಸಿದ್ದು, ಸಚಿವರಾಗಿ ಪ್ರಮಾಣವಚನ ಸ್ವೀಕರಿಸಲು ಬರುವಂತೆ ನಿಯೋಜಿತ ಸಿಎಂ ಡಿ.ಕೆ. ಶಿವಕುಮಾರ್​​ ಅವರಿಂದ ಕರೆ ಬೆನ್ನಲ್ಲೇ ಈ ವಿದ್ಯಮಾನ ನಡೆದಿದೆ.

ಮುಖ್ಯಾಂಶಗಳು

  • ವಿಧಾನಸಭೆ ಸ್ಪೀಕರ್ ಸ್ಥಾನಕ್ಕೆ ಯು.ಟಿ.ಖಾದರ್ ರಾಜೀನಾಮೆ
  • ಡೆಪ್ಯುಟಿ ಸ್ಪೀಕರ್​ಗೆ ರಾಜೀನಾಮೆ ಪತ್ರ ಸಲ್ಲಿಸಿರುವ ಖಾದರ್​​
  • ನೂತನ ಸರ್ಕಾರದಲ್ಲಿ ಯು.ಟಿ. ಖಾದರ್​​ಗೆ ಸಚಿವ ಸ್ಥಾನ

ರಾಜ್ಯಪಾಲರಿಗೆ ಧನ್ಯವಾದ

ಸ್ಪೀಕರ್ ಆಗಿ ಮೂರು ವರ್ಷಗಳ ಅವಧಿಯಲ್ಲಿ ಸಹಕಾರ ನೀಡಿದ್ದಕ್ಕೆ ರಾಜ್ಯಪಾಲ ಥಾವರ್​​ಚಂದ್​ ಗೆಹ್ಲೋಟ್​​ಗೆ ಯು.ಟಿ. ಖಾದರ್​​ ಧನ್ಯವಾದ ತಿಳಿಸಿದ್ದಾರೆ. ಲೋಕಭವನಕ್ಕೆ ತೆರಳಿ ಗವರ್ನರ್​​ ಭೇಟಿಯಾಗಿರುವ ಅವರು, ರಾಜ್ಯಪಾಲರಿಗೆ ರಾಜೀನಾಮೆ ವಿಷಯ ತಿಳಿಸಿದ್ದಾರೆ ಎನ್ನಲಾಗಿದೆ. ಇನ್ನು ಈ ಹಿಂದೆ ಆರೋಗ್ಯ ಸಚಿವರಾಗಿ ಸೇವೆ ಸಲ್ಲಿಸಿರುವ ಅನುಭವ ಹೊಂದಿರುವ ಖಾದರ್​​ಗೆ ಡಿಕೆಶಿ ಸರ್ಕಾರದಲ್ಲೂ ಅದೇ ಖಾತೆ ಸಿಗಬಹುದೆಂಬ ನಿರೀಕ್ಷೆ ಇದೆ.

ಇದನ್ನೂ ಓದಿ: ಸತೀಶ್​​ ಜಾರಕಿಹೊಳಿ ಕೈತಪ್ಪಿತಾ ಕೆಪಿಸಿಸಿ ಅಧ್ಯಕ್ಷ ಸ್ಥಾನ? ಬಿ.ಕೆ. ಹರಿಪ್ರಸಾದ್​​ಗೆ ಒಲಿದ ಅದೃಷ್ಟ?

ಖಾದರ್​​ ಫಸ್ಟ್​ ರಿಯಾಕ್ಷನ್​​

ಇನ್ನು ಸಚಿವ ಸ್ಥಾನದ ವಿಚಾರವಾಗಿ ಪ್ರತಿಕ್ರಿಯಿಸಿರುವ ಯು.ಟಿ. ಖಾದರ್​​, ನಾನು ಯಾವುದೇ ಖಾತೆಗೆ ಬೇಡಿಕೆ ಇಟ್ಟಿಲ್ಲ. ಆದರೆ ಆರೋಗ್ಯ ಖಾತೆ ಅಥವಾ ವಸತಿ ಖಾತೆ ಸಿಕ್ಕರೆ ಒಳಿತೆಂಬ ಬಯಕೆ ಇದೆ. ನಾಯಕರು ಯಾವುದೇ ಜವಾಬ್ದಾರಿ ಕೊಟ್ಟರೂ ನಿಭಾಯಿಸುತ್ತೇನೆ. ಉಪಮುಖ್ಯಮಂತ್ರಿ ಸ್ಥಾನ ಕೊಟ್ಟರೂ ನಿಭಾಯಿಸಲು ತಾನು ಸಿದ್ಧ. ಯಾವ ಬಾಲ್ ಬಂದರೂ ಬ್ಯಾಟಿಂಗ್ ಮಾಡುತ್ತೇವೆ ಎಂದು ತಿಳಿಸಿದ್ದಾರೆ.

ಬೆಂಬಲಿಗರ ಸಂಭ್ರಮ

ಯು.ಟಿ. ಖಾದರ್ ಸಚಿವರಾಗುವುದು ಖಚಿತವಾಗಿರುವ ಹಿನ್ನೆಲೆ ಬೆಂಬಲಿಗರಿಂದ ಸಂಭ್ರಮಾಚರಣೆ ನಡೆದಿದೆ. ಬೆಂಗಳೂರಿನ ಗಾಲ್ಫ್ ಗ್ರೌಂಡ್ ಬಳಿ ಇರುವ ಖಾದರ್​ ನಿವಾಸಕ್ಕೆ ಆಗಮಿಸಿ ಹಲವರು ಶುಭ ಕೋರುತ್ತಿದ್ದಾರೆ.

ಮತ್ತಷ್ಟು ಸುದ್ದಿ ಓದಲು ಇಲ್ಲಿ ಕ್ಲಿಕ್​​ ಮಾಡಿ.

Published On - 12:16 pm, Wed, 3 June 26

ಕಿರಣ್​ ಹನಿಯಡ್ಕ

TV9 ಕನ್ನಡದಲ್ಲಿ ಹಿರಿಯ ರಾಜಕೀಯ ವರದಿಗಾರ. ಮಂಗಳೂರು ವಿಶ್ವವಿದ್ಯಾನಿಲಯದಿಂದ ಸಮೂಹ ಸಂವಹನ ಮತ್ತು ಪತ್ರಿಕೋದ್ಯಮದಲ್ಲಿ ಸ್ನಾತಕೋತ್ತರ ಪದವಿ. 17 ವರ್ಷಗಳಿಂದ ಮಾಧ್ಯಮ ವೃತ್ತಿ. ಮುದ್ರಣ ಮಾಧ್ಯಮದಲ್ಲಿ ಸಬ್ ಎಡಿಟರ್, ವಿದ್ಯುನ್ಮಾನ ಮಾಧ್ಯಮದಲ್ಲಿ ನ್ಯೂಸ್ ಡೆಸ್ಕ್ ಮತ್ತು ರಾಜಕೀಯ ವರದಿಗಾರಿಕೆಯಲ್ಲಿ ಅನುಭವ.

Read More
Loading...
Unable to load recommendations.
Follow Us