ಕರ್ನಾಟಕ ಬಂದ್: ಇಂದು ಬನ್ನೇರುಘಟ್ಟ ಜೈವಿಕ ಉದ್ಯಾನವನ ಬಂದ್

| Updated By: ರಮೇಶ್ ಬಿ. ಜವಳಗೇರಾ

Updated on: Sep 29, 2023 | 10:20 AM

ತಮಿಳುನಾಡಿಗೆ ಕಾವೇರಿ ನೀರು ಹರಿಸುತ್ತಿರುವುದನ್ನು ಖಂಡಿಸಿ ಇಂದು (ಸೆಪ್ಟೆಂಬರ್ 29) ಕರ್ನಾಟಕ ಬಂದ್​ಗೆ ಕರೆ ನೀಡಲಾಗಿದೆ. ವಾಟಾಳ್ ನಾಗರಾಜ್ ನೇತೃತ್ವದಲ್ಲಿ ಬಂದ್​ಗೆ ಕರೆ ನೀಡಲಾಗಿದೆ. ಇದ ಬಿಸಿ ಬನ್ನೇರುಘಟ್ಟ ಜೈವಿಕ ಉದ್ಯಾನವನಕ್ಕೂ ತಟ್ಟಿದೆ. ವಾಹನ ಸಂಪರ್ಕ ಸಮಸ್ಯೆ ಸಾಧ್ಯತೆ ಹಿನ್ನೆಲೆ ಉದ್ಯಾನವನಕ್ಕೆ ನಾಳೆ ರಜೆ ಘೋಷಣೆ ಮಾಡಲಾಗಿದೆ.

ಕರ್ನಾಟಕ ಬಂದ್: ಇಂದು ಬನ್ನೇರುಘಟ್ಟ ಜೈವಿಕ ಉದ್ಯಾನವನ ಬಂದ್
ಕರ್ನಾಟಕ ಬಂದ್ ಹಿನ್ನೆಲೆ ಸೆ.29 ರಂದು ಬನ್ನೇರುಘಟ್ಟ ಜೈವಿನ ಉದ್ಯಾನವನಕ್ಕೆ ರಜೆ
Image Credit source: letmebreathe
Follow us on

ಬೆಂಗಳೂರು, ಸೆ.28: ತಮಿಳುನಾಡಿಗೆ ಕಾವೇರಿ ನೀರು ಹರಿಸುತ್ತಿರುವುದನ್ನು ಖಂಡಿಸಿ ಇಂದು (ಸೆಪ್ಟೆಂಬರ್ 29) ಕರ್ನಾಟಕ ಬಂದ್​ಗೆ (Karnataka Bandh) ಕರೆ ನೀಡಲಾಗಿದೆ. ವಾಟಾಳ್ ನಾಗರಾಜ್ ನೇತೃತ್ವದಲ್ಲಿ ಬಂದ್​ಗೆ ಕರೆ ನೀಡಲಾಗಿದೆ. ಇದ ಬಿಸಿ ಬನ್ನೇರುಘಟ್ಟ ಜೈವಿಕ ಉದ್ಯಾನವನಕ್ಕೂ (Bannerghatta Biological Park) ತಟ್ಟಿದೆ. ವಾಹನ ಸಂಪರ್ಕ ಸಮಸ್ಯೆ ಸಾಧ್ಯತೆ ಹಿನ್ನೆಲೆ ಇಂದು ಉದ್ಯಾನವನಕ್ಕೆ ನಾಳೆ ರಜೆ ಘೋಷಣೆ ಮಾಡಲಾಗಿದೆ.

ಬೆಂಗಳೂರು ನಗರ ಜಿಲ್ಲೆಯ ಆನೇಕಲ್ ತಾಲೂಕಿನಲ್ಲಿರುವ ಬನ್ನೇರುಘಟ್ಟ ಉದ್ಯಾನಕ್ಕೆ ಪ್ರತೀ ದಿನ ಸಾವಿರಾರು ಪ್ರವಾಸಿಗರು ಭೇಟಿ ನೀಡಿ ವನ್ಯ ಜೀವಿಗಳನ್ನು ವೀಕ್ಷಿಸುತ್ತಿದ್ದರು. ಬಸ್​ ಹಾಗೂ ಟ್ಯಾಕ್ಸಿಗಳ ಮೂಲಕವೂ ಆಗಮಿಸುತ್ತಿದ್ದರು.

ಇದನ್ನೂ ಓದಿ: Karnataka Bandh:ನಾಳೆ ಕರ್ನಾಟಕ ಬಂದ್ ವೇಳೆ ಏನಿರುತ್ತೆ? ಏನಿಲ್ಲ?

ಆದರೆ, ಕರ್ನಾಟಕ ಬಂದ್​ಗೆ ಕರೆ ನೀಡಿರುವ ಹಿನ್ನೆಲೆ ಸಾರಿಗೆ ಸಂಘಟನೆಗಳು ಕೂಡ ಬೆಂಬಲ ಸೂಚಿಸಿದ್ದು, ಸಾರ್ವಜನಿಕರಿಗೆ ವಾಹನದ ಕೊರತೆ ಕಾಡಲಿದೆ. ಹೀಗಾಹಿ ಪ್ರವಾಸಿಗರಿಗೆ ತೊಂದರೆ ಆಗುವ ಸಾಧ್ಯತೆ ಹಿನ್ನೆಲೆಯಲ್ಲಿ ಬನ್ನೇರುಘಟ್ಟ ಜೈವಿಕ ಉದ್ಯಾನಕ್ಕೆ ರಜೆ ನೀಡಲಾಗಿದೆ ಎಂದು ಇಡಿ ಸೂರ್ಯಸೇನ್ ಮಾಹಿತಿ ನೀಡಿದ್ದಾರೆ.

ರಾಜ್ಯದ ಮತ್ತಷ್ಟು ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

Published On - 7:01 pm, Thu, 28 September 23