AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಕರ್ನಾಟಕ ಬಂದ್​​: ಬೆಂಗಳೂರಿನಿಂದ ತಮಿಳುನಾಡಿಗೆ ತೆರಳುವ ಬಸ್​ಗಳಿಗೆ ತಾತ್ಕಾಲಿಕ ತಡೆ

Karnataka Bandh: ಕಾವೇರಿ ಜಲ ವಿವಾದಕ್ಕೆ ಸಂಬಂಧಿಸಿದಂತೆ ಇಂದು (ಆಗಸ್ಟ್ 13) ಕರ್ನಾಟಕ ಬಂದ್​​ಗೆ ಕರೆ ನಡುವೆಯೂ ರಾಜಧಾನಿ ಬೆಂಗಳೂರಿನಲ್ಲಿ ಜನಜೀವನ ಮತ್ತು ಸ್ಥಳೀಯ ಸಾರಿಗೆ ವ್ಯವಸ್ಥೆ ಎಂದಿನಂತೆ ಆರಂಭವಾಗಿದೆ. ಆದರೆ, ಮುನ್ನೆಚ್ಚರಿಕಾ ಕ್ರಮವಾಗಿ ತಮಿಳುನಾಡಿಗೆ ತೆರಳುವ ಬಸ್‌ಗಳ ಸಂಚಾರವನ್ನು ತಾತ್ಕಾಲಿಕವಾಗಿ ಸ್ಥಗಿತಗೊಳಿಸಿರುವ ಕಾರಣ ನೆರೆ ರಾಜ್ಯದ ಪ್ರಯಾಣಿಕರಿಗೆ ಕೊಂಚ ಅನಾನುಕೂಲವಾಗಿದೆ.

ಕರ್ನಾಟಕ ಬಂದ್​​: ಬೆಂಗಳೂರಿನಿಂದ ತಮಿಳುನಾಡಿಗೆ ತೆರಳುವ ಬಸ್​ಗಳಿಗೆ ತಾತ್ಕಾಲಿಕ ತಡೆ
ಬೆಂಗಳೂರಿನಿಂದ ತಮಿಳುನಾಡಿಗೆ ತೆರಳುವ ಬಸ್​ಗಳಿಗೆ ತಾತ್ಕಾಲಿಕ ತಡೆImage Credit source: Tv9 Kannada
ಶಿವಪ್ರಸಾದ್​ ಬಿ.
| Edited By: |

Updated on:Aug 13, 2026 | 7:38 AM

Share

ಮುಖ್ಯಾಂಶಗಳು

  • ಕಾವೇರಿ ಜಲ ವಿವಾದ ಸಂಬಂಧ ಇಂದು ಕರ್ನಾಟಕ ಬಂದ್​​
  • ಬೆಂಗಳೂರಿನಿಂದ ತಮಿಳುನಾಡಿಗೆ ತೆರಳುವ ಬಸ್​ಗಳಿಗೆ ತಾತ್ಕಾಲಿಕ ತಡೆ
  • ಉಳಿದಂತೆ ನಗರದಲ್ಲಿ ಎಂದಿನಂತೆ ಬಸ್​​, ವಾಹನಗಳ ಸಂಚಾರ

ಬೆಂಗಳೂರು, ಆಗಸ್ಟ್​​ 13: ಕಾವೇರಿ ಜಲ ವಿವಾದ ಸಂಬಂಧ ಇಂದು (ಆಗಸ್ಟ್​ 13) ಕರ್ನಾಟಕ ಬಂದ್​​ಗೆ ಕರೆ ನೀಡಿರುವ ನಡುವೆಯೂ ರಾಜಧಾನಿ ಬೆಂಗಳೂರಿನಲ್ಲಿ ಜನ ಜೀವನ, ವಾಹನಗಳ ಸಂಚಾರ ಎಂದಿನಂತೆ ಆರಂಭವಾಗಿದೆ. ಹೀಗಿದ್ದರೂ ಮುನ್ನೆಚ್ಚರಿಕಾ ಕ್ರಮವಾಗಿ ಪೊಲೀಸರ ಸೂಚನೆ ಮೇರೆಗೆ ನಗರದಿಂದ ತಮಿಳುನಾಡಿಗೆ ಸಂಚರಿಸುವ ಬಸ್​​ಗಳ ಸಂಚಾರವನ್ನು ತಾತ್ಕಾಲಿಕವಾಗಿ ಸ್ಥಗಿತಗೊಳಿಸಲಾಗಿದೆ. ಹೀಗಾಗಿ ಸ್ಯಾಟ್​ಲೈಟ್​ ಬಸ್ ನಿಲ್ದಾಣದಿಂದ ತಮಿಳುನಾಡಿನ ಪ್ರಮುಖ ನಗರಗಳಾದ ಊಟಿ, ತಿರುವಣ್ಣಾಮಲೈ, ತಲ್ಲಕುರ್ಚಿ, ಸೇಲಂ, ವೇಲೂರು, ಕಲ್ಪಕಂ,‌ ಕಾಂಜಿವರಂ, ವಂದಾವಾಸಿ, ತಿರುವಳ್ಳೂರು, ಉಳುಂದೂರು ಪೇಟೆ, ತಿರುಪ್ಪತ್ತೂರು, ಕಡಲೂರು, ತಿರುತ್ತಣಿ, ತಿಟ್ಟಕುಡಿ, ತಿರುಕ್ಕೋವಿಲೂರು, ಚಿದಂಬರಂ, ವಿರುತ್ತಾಚಲಂ ಸೇರಿ ಹಲವು ಊರುಗಳಿಗೆ ತೆರಳಬೇಕಿದ್ದ ಬಸ್​​ಗಖ ಸಂಚಾರದಲ್ಲಿ ವ್ಯತ್ಯಯ ಉಂಟಾಗಿದೆ.

ಸಹಜ ಸ್ಥಿತಿಯಲ್ಲಿರುವ ವಾಹನಗಳ ಸಂಚಾರ

ಉಳಿದಂತೆ ರಾಜ್ಯದ ವಿವಿಧೆಡೆ ಸಂಚರಿಸುವ ಬಸ್​ಗಳ ಸಹಜ ಸ್ಥಿತಿಯಲ್ಲಿ ಆರಂಭವಾಗಿದ್ದು, ಮೈಸೂರು, ಟಿ.ನರಸೀಪುರ, ಹುಣಸೂರು, ರಾಮನಗರ, ಚನ್ನಪಟ್ಟಣ, ಮಂಡ್ಯ, ಶ್ರೀರಂಗಪಟ್ಟಣ, ಮದ್ದೂರು, ಮಡಿಕೇರಿ, ಕುಶಾಲ ನಗರ, ಮಂಗಳೂರು ಸೇರಿ ಹಲವು ಕಡೆಗೆ KSRTC ಬಸ್​ಗಳು ಸಂಚಾರ ಆರಂಭಿಸಿವೆ.

ಇದನ್ನೂ ಓದಿ: ಇಂದು ಕರ್ನಾಟಕ ಬಂದ್​​; ಬೆಂಗಳೂರಲ್ಲಿ ಪೊಲೀಸರಿಂದ ಹೈ ಅಲರ್ಟ್​​

ಹೇಗಿದೆ ಏರ್​ಪೋರ್ಟ್​​ ಬಳಿಯ ಸ್ಥಿತಿ?

ಇನ್ನು ಕೆಂಪೇಗೌಡ ಅಂತಾರಾಷ್ಟ್ರೀಯಾ ವಿಮಾನ ನಿಲ್ಥಾಣದಲ್ಲಿಯೂ ಎಂದಿನಂತೆ ಕ್ಯಾಬ್ಗಳ ಸಂಚಾರವಿದ್ದು, ಬಂದ್ ಹಿನ್ನೆಲೆ ಬೆಳಗ್ಗೆಯೇ ಹೆಚ್ಚಿನ ಸಂಖ್ಯೆಯ ಪ್ರಯಾಣಿಕರ ಓಡಾಟ ಕಂಡುಬಂದಿದೆ. ಬಂದ್​​ನಿಂದ‌ ಕ್ಯಾಬ್ಗಳು ಇರುತ್ತೋ? ಇಲ್ವೋ? ಎಂಬ ಆತಂಕದಲ್ಲಿಯೇ ಪ್ರಯಾಣಿಕರು ಆಗಮಿಸುತ್ತಿದ್ದಾರೆ. ಆದರೆ ಟರ್ಮಿನಲ್ 1 ಮತ್ತು 2ರಲ್ಲಿ ಎಂದಿನಂತೆ ಕ್ಯಾಬ್ ಸೇರಿದಂತೆ ಖಾಸಗಿ ವಾಹನಗಳ ಸಂಚಾರವಿದೆ. ಡ್ರಾಪ್ ಮತ್ತು ಪಿಕಪ್​​ಗಳಲ್ಲಿ ಯಾವುದೇ ವ್ಯತ್ಯಾಸವಾಗಿಲ್ಲ. ಹೀಗಿದ್ದರೂ ಮುಂಜಾಗ್ರತಾ ಕ್ರಮವಾಗಿ ಏರ್ಪೋಟ್ ಆವರಣದಲ್ಲಿಯೂ ಪೊಲೀಸರು ಭದ್ರತೆ ಕೈಗೊಂಡಿದ್ದಾರೆ.

ಮತ್ತಷ್ಟು ಸುದ್ದಿ ಓದಲು ಇಲ್ಲಿ ಕ್ಲಿಕ್​​ ಮಾಡಿ.

Published On - 7:31 am, Thu, 13 August 26

Follow Us
ಅಖಾಡಕ್ಕಿಳಿದ ಡಿಕೆಶಿ: ಬಳ್ಳಾರಿಯತ್ತ ತೋಳೇರಿಸಿ ಹೊರಟ ಬಿಜೆಪಿಗೆ ಕೌಂಟರ್!
ಅಖಾಡಕ್ಕಿಳಿದ ಡಿಕೆಶಿ: ಬಳ್ಳಾರಿಯತ್ತ ತೋಳೇರಿಸಿ ಹೊರಟ ಬಿಜೆಪಿಗೆ ಕೌಂಟರ್!
ಕಿರ್ಗಿಸ್ತಾನ್ ಭೇಟಿಯ ಹೈಲೈಟ್ಸ್ ಹಂಚಿಕೊಂಡ ಪ್ರಧಾನಿ ಮೋದಿ
ಕಿರ್ಗಿಸ್ತಾನ್ ಭೇಟಿಯ ಹೈಲೈಟ್ಸ್ ಹಂಚಿಕೊಂಡ ಪ್ರಧಾನಿ ಮೋದಿ
ಆರ್‌ಎಸ್‌ಎಸ್ ಕಚೇರಿ ಮುಂದೆ ಮನುಸ್ಮೃತಿ ಸುಟ್ಟ ಕಾಂಗ್ರೆಸ್‌ ನಾಯಕ ಪೊಲೀಸ್ ವಶ
ಆರ್‌ಎಸ್‌ಎಸ್ ಕಚೇರಿ ಮುಂದೆ ಮನುಸ್ಮೃತಿ ಸುಟ್ಟ ಕಾಂಗ್ರೆಸ್‌ ನಾಯಕ ಪೊಲೀಸ್ ವಶ
ಮಹಾತ್ಮ ಗಾಂಧೀಜಿ ಹತ್ಯೆಯಾದ ಸ್ಥಳ ಯಾವುದು? ಅದು ಈಗ ಹೇಗಿದೆ ನೋಡಿ
ಮಹಾತ್ಮ ಗಾಂಧೀಜಿ ಹತ್ಯೆಯಾದ ಸ್ಥಳ ಯಾವುದು? ಅದು ಈಗ ಹೇಗಿದೆ ನೋಡಿ
ನಾನ್ ವೆಜ್​ ಪ್ರಿಯರಿಗೆ ಶಾಕ್:2 ದಿನ ಬೆಂಗಳೂರಲ್ಲಿ ಸಿಗಲ್ಲ ಮಟನ್-ಚಿಕನ್​!
ನಾನ್ ವೆಜ್​ ಪ್ರಿಯರಿಗೆ ಶಾಕ್:2 ದಿನ ಬೆಂಗಳೂರಲ್ಲಿ ಸಿಗಲ್ಲ ಮಟನ್-ಚಿಕನ್​!
ದರ್ಶನ್ ಭೇಟಿ ಮಾಡಿದ ವಿಜಯಲಕ್ಷ್ಮಿ, ಶಾಸಕ ದರ್ಶನ್ ಪುಟ್ಟಣ್ಣಯ್ಯ, ಝೈದ್ ಖಾನ್
ದರ್ಶನ್ ಭೇಟಿ ಮಾಡಿದ ವಿಜಯಲಕ್ಷ್ಮಿ, ಶಾಸಕ ದರ್ಶನ್ ಪುಟ್ಟಣ್ಣಯ್ಯ, ಝೈದ್ ಖಾನ್
ಮಾಫಿ ಸಾಕ್ಷಿಗೆ ದರ್ಶನ್ ಆಕ್ಷೇಪ; ತುರ್ತು ವಿಚಾರಣೆಗೆ ಹೈಕೋರ್ಟ್ ಸಮ್ಮತಿ
ಮಾಫಿ ಸಾಕ್ಷಿಗೆ ದರ್ಶನ್ ಆಕ್ಷೇಪ; ತುರ್ತು ವಿಚಾರಣೆಗೆ ಹೈಕೋರ್ಟ್ ಸಮ್ಮತಿ
ಬಗೆದಷ್ಟು ಬಯಲಾಗ್ತಿದೆ KPSC ಹಗರಣ: Dysp ನೇಮಕಾತಿಯಲ್ಲೂ ಅಕ್ರಮ ಶಂಕೆ
ಬಗೆದಷ್ಟು ಬಯಲಾಗ್ತಿದೆ KPSC ಹಗರಣ: Dysp ನೇಮಕಾತಿಯಲ್ಲೂ ಅಕ್ರಮ ಶಂಕೆ
ಇಲ್ಲಿ ಎದೆಮಟ್ಟದ ನೀರಿನಲ್ಲಿ ನಡೆದರೆ ಮಾತ್ರ ನರಸಿಂಹನ ದರ್ಶನ ಭಾಗ್ಯ!
ಇಲ್ಲಿ ಎದೆಮಟ್ಟದ ನೀರಿನಲ್ಲಿ ನಡೆದರೆ ಮಾತ್ರ ನರಸಿಂಹನ ದರ್ಶನ ಭಾಗ್ಯ!
ನೆಲಮಂಗಲ-ಹಾಸನ ಹೆದ್ದಾರಿ ಟೋಲ್ ದರ ಹೆಚ್ಚಳ: ವಾಹನ ಸವಾರರ ಆಕ್ರೋಶ
ನೆಲಮಂಗಲ-ಹಾಸನ ಹೆದ್ದಾರಿ ಟೋಲ್ ದರ ಹೆಚ್ಚಳ: ವಾಹನ ಸವಾರರ ಆಕ್ರೋಶ