Karnataka Bandh: ಕೇಂಪೇಗೌಡ ವಿಮಾನ ನಿಲ್ದಾಣಕ್ಕೆ ಮುತ್ತಿಗೆ ಯತ್ನ,ಕರವೇ ಕಾರ್ಯಕರ್ತರು ಪೊಲೀಸ್ ವಶಕ್ಕೆ

ದೇವನಹಳ್ಳಿ ಬಳಿಯ ಕೆಂಪೇಗೌಡ ಅಂತರಾಷ್ಟ್ರೀಯ ವಿಮಾನ ನಿಲ್ದಾಣದ ಅರೈವಲ್ ಗೇಟ್ ಬಳಿ ಕರವೇ ಕಾರ್ಯಕರ್ತರು ಕನ್ನಡ ಬಾವುಟಗಳನ್ನು ಕೈಲಿಡಿದು ಆಕ್ರೋಶ ವ್ಯಕ್ತಪಡಿಸಿದ್ದು, ಈ ವೇಳೆ ಕರವೇ ಕಾರ್ಯಕರ್ತರನ್ನು ವಶಕ್ಕೆ ಪಡೆಯಲು ಪೊಲೀಸರು ಹರಸಾಹಸ ನಡೆಸಿದ್ದಾರೆ.

Karnataka Bandh: ಕೇಂಪೇಗೌಡ ವಿಮಾನ ನಿಲ್ದಾಣಕ್ಕೆ ಮುತ್ತಿಗೆ ಯತ್ನ,ಕರವೇ ಕಾರ್ಯಕರ್ತರು ಪೊಲೀಸ್ ವಶಕ್ಕೆ
ಕರವೇ ಪ್ರತಿಭಟನೆ
Edited By:

Updated on: Sep 29, 2023 | 7:38 AM

ಬೆಂಗಳೂರು, ಸೆ.29: ಕಾವೇರಿ ನೀರನ್ನು ತಮಿಳುನಾಡಿಗೆ ಹರಿಸುವಂತೆ ಸುಪ್ರೀಂಕೋರ್ಟ್​ ಆದೇಶದ ಬೆನ್ನಲ್ಲೇ ರಾಜ್ಯದಲ್ಲಿ ರೈತರ ಆಕ್ರೋಶ ಭುಗಿಲೆದ್ದಿದ್ದು, ಇದಕ್ಕೆ ವಿವಿಧ ಸಂಘಟನೆಗಳು ಬೆಂಬಲ ಸೂಚಿಸಿವೆ. ಅದರಂತೆ ಇಂದು(ಸೆ.29) ಕರ್ನಾಟಕ ಬಂದ್​(Karnataka Bandh) ಗೆ ಕರೆ ನೀಡಿದೆ. ಈ ಹಿನ್ನಲೆ ಬೆಳಿಗ್ಗೆಯಿಂದಲೇ ಬಂದ್​ಗೆ ಉತ್ತಮ ಪ್ರತಿಕ್ರಿಯೆ ಬಂದಿದ್ದು, ಅದರಂತೆ ಇದೀಗ ಕರವೇ ಕಾರ್ಯಕರ್ತರು ಕಾವೇರಿ ನೀರು ಬಿಡದಂತೆ ಘೋಷಣೆ ಕೂಗುತ್ತಾ ಏರ್ಪೋರ್ಟ್ಗೆ ಮುತ್ತಿಗೆ ಹಾಕಿದ್ದಾರೆ.

ದೇವನಹಳ್ಳಿ ಬಳಿಯ ಕೆಂಪೇಗೌಡ ಅಂತರಾಷ್ಟ್ರೀಯ ವಿಮಾನ ನಿಲ್ದಾಣದ ಅರೈವಲ್ ಗೇಟ್ ಬಳಿ ಕರವೇ ಕಾರ್ಯಕರ್ತರು ಕನ್ನಡ ಬಾವುಟಗಳನ್ನು ಕೈಲಿಡಿದು ಆಕ್ರೋಶ ವ್ಯಕ್ತಪಡಿಸಿದ್ದು, ಈ ವೇಳೆ ಕರವೇ ಕಾರ್ಯಕರ್ತರನ್ನು ವಶಕ್ಕೆ ಪಡೆಯಲು ಪೊಲೀಸರು ಹರಸಾಹಸ ನಡೆಸಿದ್ದಾರೆ. ಇದೀಗ 20 ಕ್ಕೂ ಅಧಿಕ ಕರವೇ ಕಾರ್ಯಕರ್ತರನ್ನ ವಶಕ್ಕೆ ಪಡೆದು, ಎಲ್ಲರನ್ನೂ ಕಾರುಗಳಲ್ಲಿ ತುಂಬಿಕೊಂಡು ಹೋಗಿದ್ದಾರೆ.

ಇದನ್ನೂ ಓದಿ:Karnataka Bandh Live Video: ಕರ್ನಾಟಕ ಬಂದ್​ ಚಿತ್ರಣದ ನೇರ ಪ್ರಸಾರ

ಇನ್ನು ಬಂದ್ ಹಿನ್ನೆಲೆ ಕೆ.ಆರ್ ಮಾರುಕಟ್ಟೆಯಲ್ಲಿ ವ್ಯಾಪಾರ ವಹಿವಾಟು ಆಗುತ್ತಿಲ್ಲ. ಹೀಗಾಗಿ ವ್ಯಾಪಾರಸ್ಥರು ಹೂಗಳನ್ನು ದಾರಿಗೆ ಎಸೆದು ಹೋಗುತ್ತಿದ್ದಾರೆ. ಹೌದು, ಕಡಿಮೆ ಬೆಲೆ ಕೊಡುವುದಕ್ಕೆ ಮುಂದಾದರೂ ಜನರು ಹೂಗಳನ್ನ ಖರೀದಿ ಮಾಡುತ್ತಿಲ್ಲ. ಜೊತೆಗೆ ಗ್ರಾಹಕರು ಮಾರ್ಕೆಟ್​ಗೆ ಬಂದಿಲ್ಲ. ಈ ಹಿನ್ನಲೆ ವ್ಯಾಪರ ವಿಲ್ಲದೇ ಮನೆಗಳಿಗೆ ಹೋಗುತ್ತಿದ್ದಾರೆ.

ರಾಜ್ಯದ ಮತ್ತಷ್ಟು ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

Published On - 7:21 am, Fri, 29 September 23

Naveen Kumar

ನವೀನ್ ಕುಮಾರ್ ಟಿ ಎಂಬ ನಾನು ಮೂಲತಃಹ ಚಿಕ್ಕಬಳ್ಳಾಪುರ ಜಿಲ್ಲೆ ಚಿಂತಾಮಣಿ ನಿವಾಸಿಯಾಗಿದ್ದು ಕಳೆದ 9 ವರ್ಷಗಳಿಂದ ನಮ್ಮ ಹೆಮ್ಮೆಯ ಟಿವಿನೈನ್ ನ ದೇವನಹಳ್ಳಿ ಬೆಂಗಳೂರು ಗ್ರಾಮಾತರ ಜಿಲ್ಲಾ ವರದಿಗಾರನಾಗಿ ಕರ್ತವ್ಯ ನಿರ್ವಹಿಸುತ್ತಿದ್ದೇನೆ. ಎಂಎಸ್ಸಿ ಎಲೆಕ್ಟ್ರಾನಿಕ್ ಮೀಡಿಯಾ ವ್ಯಾಸಾಂಗ ಮಾಡಿರುವ ನಾನು ಪದವಿ ಮುಗಿಯುತ್ತಿದ್ದಂತೆ ಟಿವಿನೈನ್ ನಲ್ಲಿ ವರದಿಗಾರನಾಗಿ ಉದ್ಯೋಗಕ್ಕೆ ಸೇರಿದ್ದು ಆರು ತಿಂಗಳ ಕಾಲ ಮುಖ್ಯ ಕಛೇರಿಯಲ್ಲಿ ಕೆಲಸ ಮಾಡಿದ್ದೇನೆ. ಜೊತೆಗೆ ಸಂಸ್ಥೆ ನೀಡಿದ ಮಹತ್ವದ ವರದಿಗಾರನ ಉದ್ದೇಯನ್ನ ಪಡೆದು ಕಳೆದ 9 ವರ್ಷದಿಂದ ಸಿಲಿಕಾನ್ ಸಿಟಿ ಹೊರ ವಲಯದಲ್ಲಿರುವ ಬೆಂಗಳೂರು ಗ್ರಾಮಾಂತರ ಜಿಲ್ಲೆಯ ದೇವನಹಳ್ಳಿ ದೊಡ್ಡಬಳ್ಳಾಪುರ ಹೊಸಕೋಟೆ ಮತ್ತು ನಗರ ಜಿಲ್ಲೆಯ ಯಲಹಂಕ ಭಾಗದ ಸುದ್ದಿಗಳನ್ನ ವರದಿ ಮಾಡುತ್ತಾ ವರದಿಗಾರನಾಗಿ ಕೆಲಸ ಮಾಡ್ತಿದ್ದೀನಿ. ಪ್ರಮುಖವಾಗಿ ದೇಶದ ಟಾಪ್ 3 ನಲ್ಲಿ ಹೆಸರು ಪಡೆದು ಹೆಸರುವಾಸಿಯಾಗಿರುವ ಕೆಂಪೇಗೌಡ ಅಂತರಾಷ್ಟ್ರಿಯಾ ವಿಮಾನ ನಿಲ್ಥಾಣದ ಪ್ರಮುಖ ಸುದ್ದಿಗಳು ರಾಜಕೀಯ ಹಾಗೂ ಸಿಲಿಕಾನ್ ಸಿಟಿ ಹೊರ ವಲಯದಲ್ಲಿ ನಡೆಯುವ ಕ್ರೈಂ ಸೇರಿದಂತೆ ಇತರೆ ಸುದ್ದಿಗಳನ್ನ ವರದಿ ಮಾಡುತ್ತಾ ಎಕ್ಸಕ್ಲೂಸಿವ್ ವರದಿಗಳನ್ನ ನೀಡುತ್ತಾ ಬಂದಿದ್ದೇನೆ.

Read More
Follow Us