Karnataka Bandh: ಸಿಎಂ ಸಿದ್ದರಾಮಯ್ಯ ಭೇಟಿಯಾದ ಗೃಹ ಸಚಿವ ಡಾ.ಜಿ.ಪರಮೇಶ್ವರ್
ರಾಜ್ಯಾದ್ಯಂತ ಪ್ರತಿಭಟನೆ ತೀವ್ರತೆ ಪಡೆದುಕೊಳ್ಳುತ್ತಿರುವ ಹಿನ್ನಲೆ ಗೃಹ ಸಚಿವ ಡಾ.ಜಿ ಪರಮೇಶ್ವರ್, ಡಿಜಿಪಿ ಅಲೋಕ್ ಮೋಹನ್ ಮತ್ತು ಬೆಂಗಳೂರು ನಗರ ಪೊಲೀಸ್ ಆಯುಕ್ತ ದಯಾನಂದ ಭೇಟಿ ನೀಡಿದ್ದಾರೆ. ಈ ವೇಳೆ ಕರ್ನಾಟಕ ಬಂದ್ ಸೇರಿದಂತೆ ರಾಜ್ಯದ ಎಲ್ಲ ಜಿಲ್ಲೆಗಳ ಬಂದ್ ಪರಿಸ್ಥಿತಿ ಬಗ್ಗೆ ಹಾಗೂ ಕಾನೂನು ಕ್ರಮಗಳ ಬಗ್ಗೆ ಸಿಎಂ ಸಿದ್ದರಾಮಯ್ಯಗೆ ವಿವರಿಸಿದ್ದಾರೆ.

ಬೆಂಗಳೂರು, ಸೆ.29: ತಮಿಳುನಾಡಿಗೆ ನೀರು ಹರಿಸುತ್ತಿರುವುದನ್ನು ಖಂಡಿಸಿ ಇಂದು(ಸೆ.29) ಕರ್ನಾಟಕ ಬಂದ್ಗೆ ಕರೆ ನೀಡಲಾಗಿದೆ. ಅದರಂತೆ ಇದೀಗ ರಾಜ್ಯಾದ್ಯಂತ ವಿವಿಧ ಸಂಘಟನೆಗಳು ಪ್ರತಿಭಟನೆ ನಡೆಸುತ್ತಿದ್ದು, ಇದೀಗ ಹೋರಾಟ ತೀವ್ರ ಸ್ವರೂಪ ಪಡೆದಿದೆ. ಈ ಹಿನ್ನಲೆ ಮುಂಜಾಗೃತವಾಗಿ ಗೃಹ ಸಚಿವ ಡಾ.ಜಿ.ಪರಮೇಶ್ವರ್(Dr.G. Parameshwara) ಅವರು ದಿಢೀರ್ ಸಿಎಂ ಸಿದ್ದರಾಮಯ್ಯ(Siddaramaiah) ಅವರನ್ನು ಭೇಟಿಯಾಗಿದ್ದಾರೆ. ಈ ವೇಳೆ ರಾಜ್ಯಾದ್ಯಂತ ಕಾನೂನು ಸುವ್ಯವಸ್ಥೆ ಕಾಪಾಡುವ ವಿಚಾರದಲ್ಲಿ ಕೈಗೊಂಡ ಕ್ರಮಗಳ ಬಗ್ಗೆ ಸಿಎಂಗೆ ಮಾಹಿತಿ ನೀಡಿದ್ದಾರೆ.
ಸಿಎಂ ಕಾವೇರಿ ನಿವಾಸಕ್ಕೆ ಡಿಜಿ & ಐಜಿಪಿ ಅಲೋಕ್ ಮೋಹನ್
ರಾಜ್ಯಾದ್ಯಂತ ಪ್ರತಿಭಟನೆ ತೀವ್ರತೆ ಪಡೆದುಕೊಳ್ಳುತ್ತಿರುವ ಹಿನ್ನಲೆ ಗೃಹ ಸಚಿವ ಡಾ.ಜಿ ಪರಮೇಶ್ವರ್, ಡಿಜಿಪಿ ಅಲೋಕ್ ಮೋಹನ್ ಮತ್ತು ಬೆಂಗಳೂರು ನಗರ ಪೊಲೀಸ್ ಆಯುಕ್ತ ದಯಾನಂದ ಭೇಟಿ ನೀಡಿದ್ದಾರೆ. ಈ ವೇಳೆ ಕರ್ನಾಟಕ ಬಂದ್ ಸೇರಿದಂತೆ ರಾಜ್ಯದ ಎಲ್ಲ ಜಿಲ್ಲೆಗಳ ಬಂದ್ ಪರಿಸ್ಥಿತಿ ಬಗ್ಗೆ ಹಾಗೂ ಕಾನೂನು ಕ್ರಮಗಳ ಬಗ್ಗೆ ಸಿಎಂ ಸಿದ್ದರಾಮಯ್ಯಗೆ ವಿವರಿಸಿದ್ದಾರೆ. ಈ ವೇಳೆ ಸಿಎಂ ‘ಕಾನೂನು ಸುವ್ಯವಸ್ಥೆ ಬಗ್ಗೆ ಹೆಚ್ಚು ಗಮನ ನೀಡುವಂತೆ ಸೂಚಿಸಿದ್ದಾರೆ.
ಇದನ್ನೂ ಓದಿ:ಬಂದ್ ಮಾಡುವುದರಿಂದ ಉಪಯೋಗವಿಲ್ಲ: ಪ್ರತಿಭಟನಕಾರರಿಗೆ ಗೃಹ ಸಚಿವ ಪರಮೇಶ್ವರ್ ಕಿವಿ ಮಾತು
ಕರ್ನಾಟಕ ಬಂದ್ ಹಿನ್ನೆಲೆಯಲ್ಲಿ ಇಂದು ಕೂಡಾ ಸಚಿವಾಲಯದಲ್ಲಿ ಸರ್ಕಾರಿ ನೌಕರರ ಹಾಜರಾತಿ ಕಡಿಮೆ ಕಂಡು ಬಂದಿದೆ. ಸರ್ಕಾರಿ ವಾಹನ ಮತ್ತು ಖಾಸಗಿ ವಾಹನದ ವ್ಯವಸ್ಥೆ ಇರುವವರು ಮಾತ್ರ ಕರ್ತವ್ಯಕ್ಕೆ ಹಾಜರಾಗಿದ್ದು, ಸಾರ್ವಜನಿಕ ಸಾರಿಗೆ ಅವಲಂಬಿಸಿರುವ ನೌಕರರ ಹಾಜರಾತಿ ಕಡಿಮೆ ಆಗಿದೆ.
ರಾಜ್ಯದ ಮತ್ತಷ್ಟು ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ
Published On - 11:40 am, Fri, 29 September 23