ಕರ್ನಾಟಕ ಬಂದ್ ಬೆಂಗಳೂರಿನಲ್ಲಿ ಶಾಂತಿಯುತ: ಸಹಜ ಸ್ಥಿತಿಯತ್ತ ರಾಜಧಾನಿ

ಸಂಜೆಯಾಗುತ್ತಿದ್ದಂತೆಯೇ ಬೆಂಗಳೂರು ನಗರದ ಬಹುತೇಕ ಪ್ರದೇಶಗಳು ಸಹಜ ಸ್ಥಿತಿಗೆ ಮರಳುತ್ತಿವೆ. ಮಲ್ಲೇಶ್ವರಂ ಭಾಗದಲ್ಲಿ ಸ್ವಲ್ಪ ಹೆಚ್ಚಿನ ಸಂಖ್ಯೆಯಲ್ಲಿ ವಾಹನಗಳು ರಸ್ತೆಗಿಳಿದಿವೆ. ಹೂವಿನ ಮಾರುಕಟ್ಟೆ ಓಪನ್ ಇದ್ದರೂ ವ್ಯಾಪಾರ ಇಲ್ಲ ಎಂದು ಮಾಲೀಕರು ಅಳಲುತೋಡಿಕೊಂಡಿದ್ದಾರೆ. ನೀರು ಬೇಕು ವ್ಯಾಪಾರವೂ ಬೇಕು ಎಂದು ಅವರು ಹೇಳಿದ್ದಾರೆ.

ಕರ್ನಾಟಕ ಬಂದ್ ಬೆಂಗಳೂರಿನಲ್ಲಿ ಶಾಂತಿಯುತ: ಸಹಜ ಸ್ಥಿತಿಯತ್ತ ರಾಜಧಾನಿ
ಬೆಂಗಳೂರಿನಲ್ಲಿ ಸಂಜೆಯಾಗುತ್ತಿದ್ದಂತೆಯೇ ರಸ್ತೆಗಿಳಿದ ಬಸ್​ಗಳು
Follow us
Jagadisha B
| Updated By: Ganapathi Sharma

Updated on: Sep 29, 2023 | 6:10 PM

ಬೆಂಗಳೂರು, ಸೆಪ್ಟೆಂಬರ್ 29: ತಮಿಳುನಾಡಿಗೆ ಕಾವೇರಿ ನೀರು (Cauvery Water) ಬಿಡುವುದನ್ನು ವಿರೋಧಿಸಿ ಕರೆ ನೀಡಲಾಗಿದ್ದ ಕರ್ನಾಟಕ ಬಂದ್ (Karnataka Bandh) ಬೆಂಗಳೂರಿನಲ್ಲಿ ಶಾಂತಿಯುತವಾಗಿ ನಡೆದಿದೆ ಎಂದು ನಗರ ಪೊಲೀಸ್ ಆಯುಕ್ತ ಬಿ. ದಯಾನಂದ್ (B Dayanand) ತಿಳಿಸಿದರು. ಶುಕ್ರವಾರ ಸಂಜೆ ಪತ್ರಿಕಾಗೋಷ್ಠಿ ನಡೆಸಿ ಮಾಹಿತಿ ನೀಡಿದ ಅವರು, ಕೆಲವು ಸಂಘಟನೆ, ರಾಜಕೀಯ ಪಕ್ಷಗಳು ಇವತ್ತಿನ ಬಂದ್​ಗೆ ಕರೆ ಕೊಟ್ಟಿದ್ದವು. ಬೆಂಗಳೂರಿನಲ್ಲಿ ಶಾಂತಿಯುತವಾಗಿ ನಡೆದಿದೆ. ಗುರುವಾರ ರಾತ್ರಿಯಿಂದಲೇ ಪೊಲೀಸರನ್ನು ನಿಯೋಜಿಸಲಾಗಿತ್ತು. ಇಡೀ ದಿನ ಅವರು ಕರ್ತವ್ಯ ನಿರ್ವಹಿಸಿದ್ದಾರೆ. ಯಾವುದೇ ಅಹಿತಕರ ಘಟನೆ ಬೆಂಗಳೂರಿನಲ್ಲಿ ನಡೆದಿಲ್ಲ ಎಂದು ತಿಳಿಸಿದರು.

ಕೆಲವು ಭಾಗಗಳಲ್ಲಿ ರ್ಯಾಲಿ, ಪ್ರತಿಭಟನೆ ಮಾಡಿದಾಗ ಸೆಕ್ಷನ್ 144 ಅಡಿ ನಿಷೇಧಾಜ್ಞೆ ಜಾರಿಯಲ್ಲಿ ಇದ್ದ ಕಾರಣ ಮುನ್ನೆಚ್ಚರಿಕಾ ಕ್ರಮವಾಗಿ ಹಲವರನ್ನು ಬಂಧಿಸಲಾಗಿದೆ. ಫ್ರೀಡಂ ಪಾರ್ಕ್​​ನಲ್ಲಿ ಪ್ರತಿಭಟನೆಗೆ ಅವಕಾಶ ನೀಡಲಾಗಿತ್ತು. ವಿವಿಧ ಸಂಘಟನೆಗಳ ಸುಮಾರು ಒಂದೂವರೆ ಸಾವಿರದಷ್ಟು ಮಂದಿ ಪ್ರತಿಭಟನೆಯಲ್ಲಿ ಭಾಗಿಯಾಗಿದ್ದರು. ಪ್ರತಿಭಟನಾ ರ್ಯಾಲಿಗೆ ಮುಂದಾಗಿದ್ದ 785 ಮಂದಿಯನ್ನು ಮುನ್ನೆಚ್ಚರಿಕಾ ಕ್ರಮವಾಗಿ ಬಂಧಿಸಿ ನಂತರ ಬಿಡುಗಡೆ ಮಾಡಲಾಗಿದೆ ಎಂದು ಪೊಲೀಸ್ ಆಯುಕ್ತ ಬಿ. ದಯಾನಂದ್ ಮಾಹಿತಿ ನೀಡಿದರು.

ಈ ಮಧ್ಯೆ, ಸಂಜೆಯಾಗುತ್ತಿದ್ದಂತೆಯೇ ಬೆಂಗಳೂರು ನಗರದ ಬಹುತೇಕ ಪ್ರದೇಶಗಳು ಸಹಜ ಸ್ಥಿತಿಗೆ ಮರಳುತ್ತಿವೆ. ಮಲ್ಲೇಶ್ವರಂ ಭಾಗದಲ್ಲಿ ಸ್ವಲ್ಪ ಹೆಚ್ಚಿನ ಸಂಖ್ಯೆಯಲ್ಲಿ ವಾಹನಗಳು ರಸ್ತೆಗಿಳಿದಿವೆ. ಹೂವಿನ ಮಾರುಕಟ್ಟೆ ಓಪನ್ ಇದ್ದರೂ ವ್ಯಾಪಾರ ಇಲ್ಲ ಎಂದು ಮಾಲೀಕರು ಅಳಲುತೋಡಿಕೊಂಡಿದ್ದಾರೆ. ನೀರು ಬೇಕು ವ್ಯಾಪಾರವೂ ಬೇಕು ಎಂದು ಅವರು ಹೇಳಿದ್ದಾರೆ.

ಇದನ್ನೂ ಓದಿ: ಕರ್ನಾಟಕದ ವಾದಕ್ಕಿಲ್ಲ ಕಿಂಚಿತ್ತೂ ಕಿಮ್ಮತ್ತು: ತಮಿಳುನಾಡಿಗೆ ಪ್ರತಿ ದಿನ 3000 ಕ್ಯೂಸೆಕ್ ನೀರು ಹರಿಸುವಂತೆ ಮತ್ತೆ ಆದೇಶ

ರಾಜ್ಯದ ಇತರ ನಗರಗಳಾದ ಮೈಸೂರು, ಹಾಸನಗಳಲ್ಲಿಯೂ ಜನಜೀವನ ಸಹಜ ಸ್ಥಿತಿಗೆ ಬರುತ್ತಿದೆ. ಹಾಸನದಲ್ಲಿ ಬಂದ್ ಅವದಿ ಮುಗಿಯುತ್ತಲೇ ವರ್ತಕರು ವ್ಯಾಪಾರ ವಹಿವಾಟು ಆರಂಬಿಸಿದರು. ಹಾಸನದ ಮುಖ್ಯ ರಸ್ತೆಗಳು ಸಹಜ ಸ್ಥಿತಿಯತ್ತ ಮರಳಿವೆ. ಸಾರಿಗೆ ಬಸ್ ಸಂಚಾರ ಕೂಡ ಸಹಜ ಸ್ಥಿತಿಗೆ ಮರಳಿದೆ. ಮೈಸೂರಿನಲ್ಲಿ ಕೂಡ ಜನಜೀವನ ಸಹಜ ಸ್ಥಿತಿಗೆ ಮರಳುತ್ತಿದ್ದು, ವರ್ತಕರು ಅಂಗಡಿ ಮುಂಗಟ್ಟುಗಳನ್ನು ತೆರೆಯುತ್ತಿದ್ದಾರೆ. ಮೈಸೂರು ಹಾಗೂ ಬೆಂಗಳೂರು ಮಧ್ಯೆ ಬಸ್​ ಸಂಚಾರವೂ ಆರಂಭಗೊಂಡಿದೆ.

ರಾಜ್ಯಕ್ಕೆ ಸಂಬಂಧಿಸಿದ ಸುದ್ದಿಗಳನ್ನು ಓದಲು ಇದರ ಮೇಲೆ ಕ್ಲಿಕ್ ಮಾಡಿ

ಹನುಮಂತ ಕೊಟ್ಟ ತಿರುಗೇಟಿಗೆ ರಜತ್ ಕಂಗಾಲು; ಸುದೀಪ್ ಪ್ರತಿಕ್ರಿಯೆ ನೋಡಿ..
ಹನುಮಂತ ಕೊಟ್ಟ ತಿರುಗೇಟಿಗೆ ರಜತ್ ಕಂಗಾಲು; ಸುದೀಪ್ ಪ್ರತಿಕ್ರಿಯೆ ನೋಡಿ..
ಮಹಾಕುಂಭದಲ್ಲಿ ಸ್ನೇಹಿತರೊಂದಿಗೆ ಭಜನೆ ಹಾಡಿದ ಪ್ರಧಾನಿ ಸಹೋದರನ ಮಗ ಸಚಿನ್
ಮಹಾಕುಂಭದಲ್ಲಿ ಸ್ನೇಹಿತರೊಂದಿಗೆ ಭಜನೆ ಹಾಡಿದ ಪ್ರಧಾನಿ ಸಹೋದರನ ಮಗ ಸಚಿನ್
ಭವ್ಯಾ-ತ್ರಿವಿಕ್ರಮ್ ಪ್ರೇಮಕತೆ, ಬಹಿರಂಗ ಮಾಡಿದ ಸುದೀಪ್
ಭವ್ಯಾ-ತ್ರಿವಿಕ್ರಮ್ ಪ್ರೇಮಕತೆ, ಬಹಿರಂಗ ಮಾಡಿದ ಸುದೀಪ್
ಶಿವಲಿಂಗಕ್ಕೆ ಪೂಜೆ ಸಲ್ಲಿಸಿದ ಡಿಕೆಶಿ, ರುದ್ರಾಕ್ಷಿಮಾಲೆ ಹಿಡ್ದು ಜಪ
ಶಿವಲಿಂಗಕ್ಕೆ ಪೂಜೆ ಸಲ್ಲಿಸಿದ ಡಿಕೆಶಿ, ರುದ್ರಾಕ್ಷಿಮಾಲೆ ಹಿಡ್ದು ಜಪ
ನೈಜೀರಿಯಾದಲ್ಲಿ ಗ್ಯಾಸೋಲಿನ್ ಟ್ಯಾಂಕರ್ ಸ್ಫೋಟ, 70 ಮಂದಿ ಸಾವು
ನೈಜೀರಿಯಾದಲ್ಲಿ ಗ್ಯಾಸೋಲಿನ್ ಟ್ಯಾಂಕರ್ ಸ್ಫೋಟ, 70 ಮಂದಿ ಸಾವು
ಜನವರಿ 20 ರಿಂದ 26ರವರೆಗಿನ ವಾರ ಭವಿಷ್ಯ ಮತ್ತು ಗ್ರಹಗಳ ಸಂಚಾರ ತಿಳಿಯಿರಿ
ಜನವರಿ 20 ರಿಂದ 26ರವರೆಗಿನ ವಾರ ಭವಿಷ್ಯ ಮತ್ತು ಗ್ರಹಗಳ ಸಂಚಾರ ತಿಳಿಯಿರಿ
ತಾಮ್ರದ ಪಾತ್ರೆಯಲ್ಲಿ ನೀರಿಡುವುದರ ಹಿಂದಿನ ರಹಸ್ಯ ತಿಳಿಯಿರಿ
ತಾಮ್ರದ ಪಾತ್ರೆಯಲ್ಲಿ ನೀರಿಡುವುದರ ಹಿಂದಿನ ರಹಸ್ಯ ತಿಳಿಯಿರಿ
Daily horoscope: ಈ ರಾಶಿಯವರು ಆರ್ಥಿಕವಾಗಿ ಪ್ರಗತಿ ಕಾಣುವರು
Daily horoscope: ಈ ರಾಶಿಯವರು ಆರ್ಥಿಕವಾಗಿ ಪ್ರಗತಿ ಕಾಣುವರು
ವಾರ್ಡ್​ನನ್ನು ಸಸ್ಪೆಂಡ್ ಮಾಡುವಂತೆ ಅದೇಶಿಸಿದ ಉಪಲೋಕಾಯುಕ್ತ ವೀರಪ್ಪ
ವಾರ್ಡ್​ನನ್ನು ಸಸ್ಪೆಂಡ್ ಮಾಡುವಂತೆ ಅದೇಶಿಸಿದ ಉಪಲೋಕಾಯುಕ್ತ ವೀರಪ್ಪ
ಸೂಟ್​ಕೇಸ್​ನಲ್ಲಿ ಅಡಗಿದೆ ಸ್ಪರ್ಧಿಗಳ ಭವಿಷ್ಯ, ಮನೆಗೆ ಹೋಗುವರ್ಯಾರು?
ಸೂಟ್​ಕೇಸ್​ನಲ್ಲಿ ಅಡಗಿದೆ ಸ್ಪರ್ಧಿಗಳ ಭವಿಷ್ಯ, ಮನೆಗೆ ಹೋಗುವರ್ಯಾರು?