Sign In

By signing in or creating an account, you agree with Associated Broadcasting Company's Terms & Conditions and Privacy Policy.

Bengaluru Suburban Rail project: ಬೆಂಗಳೂರು ಉಪನಗರ ರೈಲು ಯೋಜನೆಗಾಗಿ 764 ಮರಗಳಿಗೆ ಕೊಡಲಿ

ಬೆಂಗಳೂರು ಉಪನಗರ ರೈಲು ಯೋಜನೆಗಾಗಿ 764 ಮರಗಳನ್ನು ಕಡಿಯಲಿ ಬಿಬಿಎಂಪಿ ಅನುಮತಿ ನೀಡಿದೆ. ಯೋಜನೆಯ ಮೊದಲ ಹಂತದ 2 ಕಾರಿಡಾರ್​​ಗಳ ಕಾಮಗಾರಿಯನ್ನು ಆರಂಭಿಸಲಾಗಿದೆ.

Bengaluru Suburban Rail project: ಬೆಂಗಳೂರು ಉಪನಗರ ರೈಲು ಯೋಜನೆಗಾಗಿ 764 ಮರಗಳಿಗೆ ಕೊಡಲಿ
ಸಾಂದರ್ಭಿಕ ಚಿತ್ರ
Follow us
Ganapathi Sharma
|

Updated on: Apr 04, 2023 | 9:14 PM

ಬೆಂಗಳೂರು: ಬೆಂಗಳೂರು ಉಪನಗರ ರೈಲು ಯೋಜನೆಯ (Bengaluru Suburban Rail project) ಮೊದಲ ಹಂತದ 2 ಕಾರಿಡಾರ್​​ಗಳ ಕಾಮಗಾರಿಯನ್ನು ಕರ್ನಾಟಕ ರೈಲು ಮೂಲಸೌಕರ್ಯ ಅಭಿವೃದ್ಧಿ ನಿಯಮಿತ (K-RIDE) ಆರಂಭಿಸಿದೆ. ಮೊದಲ ಹಂತದ 2 ಕಾರಿಡಾರ್​​ಗಳು ಬೈಯಪ್ಪನಹಳ್ಳಿ ಹಾಗೂ ಚಿಕ್ಕಬಾಣಾವರ ಮಧ್ಯೆ ನಿರ್ಮಾಣವಾಗಲಿವೆ. ಇದಕ್ಕಾಗಿ 1,500 ಮರಗಳನ್ನು ಕಡಿಯಲು ಅನುಮತಿ ಕೋರಿ ಬಿಬಿಎಂಪಿಗೆ ಕೆಆರ್​ಐಡಿಇ ಮನವಿ ಸಲ್ಲಿಸಿತ್ತು. ಆದರೆ, ಸದ್ಯ ಬಿಬಿಎಂಪಿ 764 ಮರಗಳನ್ನು ಕಡಿಯಲು ಅನುಮತಿ ನೀಡಿದೆ. 56 ಮರಗಳನ್ನು ಸ್ಥಳಾಂತರಗೊಳಿಸುವಂತೆಯೂ ಕೆಆರ್​ಐಡಿಇಗೆ ಬಿಬಿಎಂಪಿ ಸೂಚಿಸಿದೆ. ಪ್ರಸ್ತಾವನೆ ಬಗ್ಗೆ ಬಿಬಿಎಂಪಿ ಅಧಿಕಾರಿಗಳು ಈಗಲೂ ಪರಿಶೀಲನೆ ನಡೆಸುತ್ತಿದ್ದಾರೆ.

764 ಮರಗಳನ್ನು ಕಡಿಯಲು ಸದ್ಯ ಅನುಮತಿ ನೀಡಲಾಗಿದೆ. ಆದರೆ, ಈ ಸಂಖ್ಯೆಯನ್ನು ಇನ್ನಷ್ಟು ಕಡಿಮೆ ಮಾಡಲು ಸಾಧ್ಯವೇ ಎಂಬ ಕುರಿತು ಪರಿಶೀಲನೆ ನಡೆಸಲಾಗುತ್ತಿದೆ. ಕಡಿಯಲಾಗುವ ಮರಗಳ ಸಂಖ್ಯೆಯನ್ನು ಕಡಿಮೆ ಮಾಡುವ ನಿರೀಕ್ಷೆ ಇದೆ ಎಂದು ಬಿಬಿಎಂಪಿ ಅಧಿಕಾರಿಯೊಬ್ಬರು ತಿಳಿಸಿದ್ದಾರೆ. ವರದಿಗಳ ಪ್ರಕಾರ, ಮರ ಕಡಿಯುವ ವಿಚಾರವಾಗಿ ಸಾರ್ವಜನಿಕ ಪ್ರಕಟಣೆ ಹೊರಡಿಸಿದ್ದಕ್ಕೆ ಯಾವುದೇ ರೀತಿಯ ವಿರೋಧ ವ್ಯಕ್ತವಾಗಿಲ್ಲ ಎನ್ನಲಾಗಿದೆ.

ಮೊದಲ ಹಂತದ ಎರಡು ಕಾರಿಡಾರ್​ಗಳಿಗಾಗಿ ಶೇ 80ರಷ್ಟು ಭಾರತೀಯ ರೈಲ್ವೆಗೆ ಸೇರಿದ ಭೂಪ್ರದೇಶವನ್ನೇ ಬಳಸಲಾಗುವುದು. ಉಳಿದವುಗಳನ್ನು ಭೂಸ್ವಾಧೀನ ಪ್ರಕ್ರಿಯೆಯ ಮೂಲಕ ಪಡೆಯಲಾಗುವುದು ಎಂದು ಕೆಆರ್​ಐಡಿಇ ತಿಳಿಸಿದೆ.

ಇದನ್ನೂ ಓದಿ: Suburban Railway: ಬೆಂಗಳೂರು ಉಪನಗರ ರೈಲು ಯೋಜನೆಗೆ ಕೊನೆಗೂ ಸಿಕ್ಕಿತು ವೇಗ; 4ನೇ ಕಾರಿಡಾರ್ ಕಾಮಗಾರಿಗೆ ಟೆಂಡರ್

ಹಳಿಗಳ ನಿರ್ಮಾಣಕ್ಕೆ, ನಿಲ್ದಾಣಗಳನ್ನು ನಿರ್ಮಿಸಲು ಮತ್ತು ಇತರ ಮೂಲಸೌಕರ್ಯಗಳಿಗಾಗಿ ಮರಗಳನ್ನು ಕಡಿಯಲಾಗುತ್ತದೆ. ಮೊದಲ ಹಂತದ ಎರಡು ಕಾರಿಡಾರ್​​ಗಳ ಒಟ್ಟು ವ್ಯಾಪ್ತಿ 25.01 ಕಿಲೋ ಮೀಟರ್ ಇರಲಿದೆ. ಈ ಮಾರ್ಗದಲ್ಲಿ 14 ನಿಲ್ದಾಣಗಳು ಬರಲಿವೆ. ಈ ನಿಲ್ದಾಣಗಳ ಪೈಕಿ ಆರು ನಿಲ್ದಾಣಗಳು ಎಲಿವೇಟೆಡ್ ಮತ್ತು ಉಳಿದ 8 ಸಾಮಾನ್ಯ ನಿಲ್ದಾಣಗಳಾಗಿರಲಿವೆ ಎಂದು ಕೆಆರ್​ಐಡಿಇ ಮಾಹಿತಿ ನೀಡಿದೆ.

ರಾಜ್ಯದ ಮತ್ತಷ್ಟು ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

ಲಾಲು ಯಾದವ್ ಸರ್ಕಾರ ಜಂಗಲ್ ರಾಜ್ ಎಂದೇ ನೆನಪುಳಿಯುತ್ತದೆ; ಅಮಿತ್ ಶಾ
ಲಾಲು ಯಾದವ್ ಸರ್ಕಾರ ಜಂಗಲ್ ರಾಜ್ ಎಂದೇ ನೆನಪುಳಿಯುತ್ತದೆ; ಅಮಿತ್ ಶಾ
ಉಪ್ಪಿ, ಶಿವಣ್ಣ, ರಾಜ್ ಶೆಟ್ಟಿ ನಟನೆ ‘45’ ಸಿನಿಮಾ ಟೀಸರ್ ಲಾಂಚ್ ಲೈವ್ ನೋಡಿ
ಉಪ್ಪಿ, ಶಿವಣ್ಣ, ರಾಜ್ ಶೆಟ್ಟಿ ನಟನೆ ‘45’ ಸಿನಿಮಾ ಟೀಸರ್ ಲಾಂಚ್ ಲೈವ್ ನೋಡಿ
ಬುಡಕಟ್ಟು ನೃತ್ಯದ ಮೂಲಕ ಛತ್ತೀಸ್​ಗಢದಲ್ಲಿ ಮೋದಿಗೆ ಸಾಂಪ್ರದಾಯಿಕ ಸ್ವಾಗತ
ಬುಡಕಟ್ಟು ನೃತ್ಯದ ಮೂಲಕ ಛತ್ತೀಸ್​ಗಢದಲ್ಲಿ ಮೋದಿಗೆ ಸಾಂಪ್ರದಾಯಿಕ ಸ್ವಾಗತ
ಬೌಂಡರಿ ಬಳಿ ಅತ್ಯದ್ಭುತ ಕ್ಯಾಚ್ ಹಿಡಿದ ಜ್ಯಾಕ್ ಫ್ರೇಸರ್
ಬೌಂಡರಿ ಬಳಿ ಅತ್ಯದ್ಭುತ ಕ್ಯಾಚ್ ಹಿಡಿದ ಜ್ಯಾಕ್ ಫ್ರೇಸರ್
ಚೊಚ್ಚಲ ಐಪಿಎಲ್ ಅರ್ಧಶತಕ ಸಿಡಿಸಿದ ಅನಿಕೇತ್ ವರ್ಮಾ
ಚೊಚ್ಚಲ ಐಪಿಎಲ್ ಅರ್ಧಶತಕ ಸಿಡಿಸಿದ ಅನಿಕೇತ್ ವರ್ಮಾ
ಮೋದಿ ಭೇಟಿಗೂ ಕೆಲವೇ ಗಂಟೆ ಮೊದಲು ಛತ್ತೀಸ್‌ಗಢದಲ್ಲಿ 50 ನಕ್ಸಲರ ಶರಣಾಗತಿ
ಮೋದಿ ಭೇಟಿಗೂ ಕೆಲವೇ ಗಂಟೆ ಮೊದಲು ಛತ್ತೀಸ್‌ಗಢದಲ್ಲಿ 50 ನಕ್ಸಲರ ಶರಣಾಗತಿ
ನಾಗ್ಪುರದಲ್ಲಿ ರೋಡ್ ಶೋ ನಡೆಸಿದ ಮೋದಿ; ಜೈ ಶ್ರೀರಾಮ್ ಘೋಷಣೆ ಕೂಗಿದ ಜನರು
ನಾಗ್ಪುರದಲ್ಲಿ ರೋಡ್ ಶೋ ನಡೆಸಿದ ಮೋದಿ; ಜೈ ಶ್ರೀರಾಮ್ ಘೋಷಣೆ ಕೂಗಿದ ಜನರು
ಟ್ರಕ್​ ಕದ್ದವನ ಅತಿಯಾದ ವೇಗವೇ ಸಿಕ್ಕಿಬೀಳಲು ಕಾರಣವಾಯ್ತು
ಟ್ರಕ್​ ಕದ್ದವನ ಅತಿಯಾದ ವೇಗವೇ ಸಿಕ್ಕಿಬೀಳಲು ಕಾರಣವಾಯ್ತು
ಭಟ್ಕಳದಲ್ಲಿ ಬಾಂಬ್ ಸ್ಕ್ವಾಡ್​​ ಹಾಗೂ ಶ್ವಾನದಳದಿಂದ ಪರಿಶೀಲನೆ
ಭಟ್ಕಳದಲ್ಲಿ ಬಾಂಬ್ ಸ್ಕ್ವಾಡ್​​ ಹಾಗೂ ಶ್ವಾನದಳದಿಂದ ಪರಿಶೀಲನೆ
ವಿಜಯದಶಮಿಗೆ ಹೊಸ ಪಕ್ಷ ಕಟ್ಟುವ ಸುಳಿವು ನೀಡಿದ ಬಸನಗೌಡ ಪಾಟೀಲ್​ ಯತ್ನಾಳ್​
ವಿಜಯದಶಮಿಗೆ ಹೊಸ ಪಕ್ಷ ಕಟ್ಟುವ ಸುಳಿವು ನೀಡಿದ ಬಸನಗೌಡ ಪಾಟೀಲ್​ ಯತ್ನಾಳ್​