AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

‘ಕರ್ನಾಟಕ ಭಾರತ್​​ ಗೌರವ ಕಾಶಿ ದರ್ಶನ’ 4ನೇ ಟ್ರಿಪ್​​ ಜುಲೈ 29ರಂದು ಆರಂಭ: ರಾಜ್ಯ ಸರ್ಕಾರ ನೀಡಲಿದೆ ತಲಾ 5.000 ರೂ.

“ಕರ್ನಾಟಕ ಭಾರತ್ ಗೌರವ ಕಾಶಿ ದರ್ಶನ” ಯೋಜನೆ ಅಡಿ ಪುಣ್ಯ ಕ್ಷೇತ್ರಗಳಾದ ವಾರಣಾಸಿ, ಅಯೋಧ್ಯೆ ಮತ್ತು ಪ್ರಯಾಗ್-ರಾಜ್ ಕ್ಷೇತ್ರಗಳಿಗೆ ಕಡಿಮೆ ವೆಚ್ಚದಲ್ಲಿ ತೆರಳಲು ಅನುಕೂಲವಾಗುವಂತ ರಿಯಾಯಿತಿ ದರದಲ್ಲಿ ಪ್ಯಾಕೇಜ್‌ ರೂಪಿಸಲಾಗಿದೆ.

‘ಕರ್ನಾಟಕ ಭಾರತ್​​ ಗೌರವ ಕಾಶಿ ದರ್ಶನ’ 4ನೇ ಟ್ರಿಪ್​​ ಜುಲೈ 29ರಂದು ಆರಂಭ: ರಾಜ್ಯ ಸರ್ಕಾರ ನೀಡಲಿದೆ ತಲಾ 5.000 ರೂ.
ಪ್ರಾತಿನಿಧಿಕ ಚಿತ್ರ
ಗಂಗಾಧರ​ ಬ. ಸಾಬೋಜಿ
|

Updated on: Jul 19, 2023 | 9:08 PM

Share

ಬೆಂಗಳೂರು: ಕರ್ನಾಟಕ ರಾಜ್ಯ ಪುಣ್ಯ ಕ್ಷೇತ್ರಗಳಾದ ವಾರಣಾಸಿ, ಅಯೋಧ್ಯೆ ಮತ್ತು ಪ್ರಯಾಗ್-ರಾಜ್ ಕ್ಷೇತ್ರಗಳಿಗೆ ಕಡಿಮೆ ವೆಚ್ಚದಲ್ಲಿ ತೆರಳಲು ಅನುಕೂಲವಾಗುವಂತ ರಿಯಾಯಿತಿ ದರದಲ್ಲಿ ಪ್ಯಾಕೇಜ್‌ ರೂಪಿಸಿ “ಕರ್ನಾಟಕ ಭಾರತ್ ಗೌರವ ಕಾಶಿ ದರ್ಶನ” (Karnataka Bharat Gaurav Kashi Darshan) ಯೋಜನೆಯನ್ನು IRCTC ಮತ್ತು ಭಾರತೀಯ ರೈಲ್ವೇ ಇಲಾಖೆಯ ಸಹಯೋಗದಲ್ಲಿ ಕೈಗೊಳ್ಳಲಾಗಿದೆ. ಈ ಕುರಿತಾಗಿ ಸರ್ಕಾರ ಪ್ರಕಟಣೆ ಹೊರಡಿಸಿದೆ.

ಈ ಯೋಜನೆಯಡಿ ಪ್ರಯಾಣಿಸುವ ಯಾತ್ರಾರ್ಥಿಗಳಿಗೆ ತಲಾ 20,000 ರೂ. ಪ್ಯಾಕೇಜ್​ ನೀಡಲಾಗಿದ್ದು, ತಲಾ 5,000 ರೂ. ಅನ್ನು ರಾಜ್ಯ ಸರ್ಕಾರದ ವತಿಯಿಂದ ಭರಿಸಲಾಗುತ್ತದೆ. ಬಾಕಿ 15,000 ರೂ.ಅನ್ನು ಯಾತ್ರಾರ್ಥಿಗಳು ಪಾವತಿಸಬೇಕು. ಈ ವಿಶೇಷ ರೈಲಿನಲ್ಲಿ ತೆರಳುವ ಯಾತ್ರಾರ್ಥಿಗಳಿಗೆ ಉಪಹಾರ, ಊಟ, ತಂಗುವಿಕೆ, ಸ್ಥಳೀಯ ಸಾರಿಗೆ ಮತ್ತು ಸ್ಥಳೀಯ ವೀಕ್ಷಣೆ ಒಳಗೊಂಡಿದ್ದು, ಇದು ಒಟ್ಟು 07 ದಿನಗಳ ಪ್ರವಾಸವಾಗಿದೆ.

ಇದನ್ನೂ ಓದಿ: ಸಂವಿಧಾನದ 371 ಜೆ ವಿಧಿಯಡಿ ಕಲ್ಯಾಣ ಕರ್ನಾಟಕ ಭಾಗಕ್ಕೆ ವಿಶೇಷ ಸ್ಥಾನಮಾನ

“ಕರ್ನಾಟಕ ಭಾರತ್ ಗೌರವ ಕಾಶಿ ದರ್ಶನ” ಯೋಜನೆಯಡಿ ಈವರೆಗೂ ಒಟ್ಟು 03 ಟ್ರಿಪ್‌ಗಳನ್ನು ಪೂರೈಸಲಾಗಿದೆ. ಸದರಿ ವಿಶೇಷ ರೈಲಿನಲ್ಲಿ ಒಟ್ಟು 1644 ಯಾತ್ರಾರ್ಥಿಗಳು ಯಾತ್ರೆ ಪೂರೈಸಿದ್ದು, ಸದರಿ ಯಾತ್ರಾರ್ಥಿಗಳಿಗೆ ಪ್ರಯಾಣದ ಒಟ್ಟು ಪ್ಯಾಕೇಜ್‌ ದರ 20,000 ರೂ. ಪೈಕಿ ಸರ್ಕಾರದಿಂದ ತಲಾ 5,000 ರೂ. ಅಂತೆ ಒಟ್ಟು 82.20 ಲಕ್ಷ ರೂ. ಸಹಾಯಧನವನ್ನು ಒದಗಿಸಲಾಗಿದೆ.

ಸದ್ಯ 4ನೇ ಟ್ರಿಪ್ಪಿನ ವಿಶೇಷ ರೈಲು ಜುಲೈ 29 ರಂದು ಬೆಂಗಳೂರಿನಿಂದ ಹೊರಡಲಿದ್ದು, ಸದರಿ ಯಾತ್ರೆಗೆ ತೆರಳುವ ಯಾತ್ರಾರ್ಥಿಗಳು ಈ ಕಳಕಂಡ ಲಿಂಕ್ ಮೂಲಕ ಅಥವಾ ಐ.ಆರ್.ಸಿ.ಟಿ.ಸಿ (IRCTC) ಪೋರ್ಟಲ್ ಮೂಲಕ ತಮ್ಮ ಟಿಕೇಟ್​ ಅನ್ನು ಕಾಯ್ದಿರಿಸಿಕೊಳ್ಳಬಹುದು.

ಇದನ್ನೂ ಓದಿ: Yatnal rushed to hospital: ವಿಧಾನ ಸಭೆಯಲ್ಲಿ ಕುಸಿದು ಬಿದ್ದ ಶಾಸಕ ಬಸನಗೌಡ ಯತ್ನಾಳ್, ಬಿಪಿ ಹೊರತು ಯಾವುದೇ ಸಮಸ್ಯೆಯಿಲ್ಲ ಎಂದ ವೈದ್ಯರು

ಇದೀಗ ಹೊಸದಾಗಿ ಸುಸಜ್ಜಿತ LHB ಕೋಚ್‌ಗಳನ್ನು ಅಳವಡಿಸಲಾಗಿದ್ದು, ಇದು ಸುಸಜ್ಜಿತವಾದ ಸ್ಥಳದಲ್ಲಿಯೇ ಅಡುಗೆ ತಯಾರು ಮಾಡುವ ಅಡುಗೆ ಮನೆ (PANTRY CAR) ಒಳಗೊಂಡಿದೆ. ಹಾಗೂ ಯಾತ್ರಾರ್ಥಿಗಳ ಹಿತ ದೃಷ್ಟಿಯಿಂದ ಇಬ್ಬರು ವೈದ್ಯರು ಸಹ ಪ್ರಯಾಣಿಸಲಿದ್ದಾರೆ. ಈ ಸೌಲಭ್ಯವನ್ನು ರಾಜ್ಯದ ಎಲ್ಲಾ ಭಕ್ತಾಧಿಗಳು ಸದುಪಯೋಗ ಪಡಿಸಿಕೊಂಡು, ಶ್ರೀ ಕಾಶಿ ವಿಶ್ವನಾಥ ಸ್ವಾಮಿ ದರ್ಶನ ಪಡೆಯಲು ಪ್ರಕಟಣೆ ಮೂಲಕ ಕೋರಲಾಗಿದೆ.

ರಾಜ್ಯದ ಮತ್ತಷ್ಟು ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ.