ಇಂದಿನಿಂದ 3 ದಿನ ಅರುಣ್ ಸಿಂಗ್ ರಾಜ್ಯ ಪ್ರವಾಸ; ಬೆಂಗಳೂರಿನಿಂದ ದಾವಣಗೆರೆಗೆ ತೆರಳಿ ಅಲ್ಲೇ ವಾಸ್ತವ್ಯ

ಸೆಪ್ಟೆಂಬರ್ 19ರಂದು ದಾವಣಗೆರೆಯಲ್ಲಿ ಬಿಜೆಪಿ ರಾಜ್ಯ ಕಾರ್ಯಕಾರಣಿ ಸಭೆ ನಡೆಯಲಿದ್ದು, ಭಾನುವಾರ ಸಂಜೆ ದೆಹಲಿಗೆ ರಾಜ್ಯ ಬಿಜೆಪಿ ಉಸ್ತುವಾರಿ ಅರುಣ್ ಸಿಂಗ್ ವಾಪಸ್ ಆಗಲಿದ್ದಾರೆ.

ಇಂದಿನಿಂದ 3 ದಿನ ಅರುಣ್ ಸಿಂಗ್ ರಾಜ್ಯ ಪ್ರವಾಸ; ಬೆಂಗಳೂರಿನಿಂದ ದಾವಣಗೆರೆಗೆ ತೆರಳಿ ಅಲ್ಲೇ ವಾಸ್ತವ್ಯ
ಅರುಣ್ ಸಿಂಗ್

ಬೆಂಗಳೂರು: ರಾಜ್ಯ ಬಿಜೆಪಿ ಉಸ್ತುವಾರಿ ಅರುಣ್ ಸಿಂಗ್ ಇಂದು ಸಂಜೆ 6.40ಕ್ಕೆ ಬೆಂಗಳೂರಿಗೆ ಆಗಮಿಸಲಿದ್ದಾರೆ. ಇಂದಿನಿಂದ ಮೂರು ದಿನಗಳ ಕಾಲ ಅರುಣ್ ಸಿಂಗ್ ರಾಜ್ಯ ಪ್ರವಾಸ ಕೈಗೊಳ್ಳಲಿದ್ದಾರೆ. ಇಂದು ಬೆಂಗಳೂರಿನಿಂದ ದಾವಣಗೆರೆಗೆ ತೆರಳಿ ಅಲ್ಲೇ ವಾಸ್ತವ್ಯ ಹೂಡಲಿರುವ ಅರುಣ್ ಸಿಂಗ್, ನಾಳೆ ದಾವಣಗೆರೆಯಲ್ಲಿ ಬಿಜೆಪಿ ವಿಭಾಗೀಯ ಪ್ರಭಾರಿಗಳ ಸಭೆ, ರಾಜ್ಯ ಪ್ರಧಾನ ಕಾರ್ಯದರ್ಶಿಗಳ ಸಭೆ, ರಾಜ್ಯ ಪದಾಧಿಕಾರಿಗಳ ಸಭೆ ಮತ್ತು ರಾಜ್ಯ ಕೋರ್ ಕಮಿಟಿ ಸಭೆಯಲ್ಲಿ ಭಾಗಿಯಾಗಲಿದ್ದಾರೆ.

ಸೆಪ್ಟೆಂಬರ್ 19ರಂದು ದಾವಣಗೆರೆಯಲ್ಲಿ ಬಿಜೆಪಿ ರಾಜ್ಯ ಕಾರ್ಯಕಾರಣಿ ಸಭೆ ನಡೆಯಲಿದ್ದು, ಭಾನುವಾರ ಸಂಜೆ ದೆಹಲಿಗೆ ರಾಜ್ಯ ಬಿಜೆಪಿ ಉಸ್ತುವಾರಿ ಅರುಣ್ ಸಿಂಗ್ ವಾಪಸ್ ಆಗಲಿದ್ದಾರೆ.

ದಾವಣಗೆರೆ: ಬಿಜೆಪಿ ರಾಜ್ಯ ಕಾರ್ಯಕಾರಣಿ ಹಾಗೂ ಕೋರ್ ಕಮಿಟಿ ಸಭೆಗೆ ಕ್ಷಣ ಗಣನೆ
ಬೆಣ್ಣೆ ನಗರಿ ದಾವಣಗೆರೆಯಲ್ಲಿ ನಾಳೆ ಶನಿವಾರ (ಸೆಪ್ಟೆಂಬರ್ 18) ಹಾಗೂ ಭಾನುವಾರ (ಸೆಪ್ಟೆಂಬರ್ 19) ಎರಡು ದಿನಗಳ ಕಾಲ ನಡೆಯಲಿರುವ ರಾಜ್ಯ ಬಿಜೆಪಿ ಕೋರ್ ಕಮಿಟಿ ಸಭೆ ಹಾಗೂ ರಾಜ್ಯ ಕಾರ್ಯಕಾರಣಿ ಸಭೆಗೆ ಕ್ಷಣಗಣನೆ ಶುರುವಾಗಿದೆ. ಪ್ರತಿನಿಧಿಗಳ ಸ್ವಾಗತಕ್ಕೆ ಭರ್ಜರಿ ಸಿದ್ಧತೆ ಮಾಡುತ್ತಿದ್ದು, ಬಹುತೇಕ ಕಡೆ ಕೇಸರಿ ಬಾವುಟಗಳ ಹಾರಾಟ ಶುರುವಾಗಿದೆ.

ನಾಳೆ ಸಂಜೆ ನಾಲ್ಕು ಗಂಟೆಗೆ ದಾವಣಗೆರೆ ನಗರದ ಹೊರ ವಲಯದ ಅಪೂರ್ವ ರೆಸಾರ್ಟ್​ನಲ್ಲಿ ರಾಜ್ಯ ಬಿಜೆಪಿ ಕೋರ್ ಕಮಿಟಿ ಸಭೆ ಹಾಗೂ ಪದಾಧಿಕಾರಿಗಳ ಸಭೆ ನಡೆಯಲಿದೆ. ರಾಜ್ಯ ಬಿಜೆಪಿ ಅಧ್ಯಕ್ಷ ನಳಿನ್​​ ಕುಮಾರ್​ ಕಟೀಲ್ ಅಧ್ಯಕ್ಷತೆಯಲ್ಲಿ ಈ ಸಭೆ ನಡೆಯಲಿದೆ.

ಸಿಎಂ ಬೊಮ್ಮಾಯಿ, ಮಾಜಿ ಸಿಎಂ ಬಿ.ಎಸ್​.ಯಡಿಯೂರಪ್ಪ, ಕೇಂದ್ರ ಸಚಿವ ಪ್ರಲ್ಹಾದ ಜೋಶಿ ಸೇರಿ 14 ಜನ ಸದಸ್ಯರು ಹಾಗೂ ವಿಶೇಷ ಆಹ್ವಾನಿತರಾಗಿ ರಾಜ್ಯ ಉಸ್ತುವಾರಿ ಅರುಣ್ ಸಿಂಗ್, ಸಹ ಉಸ್ತುವಾರಿ ಡಿ‌ಕೆ ಅರುಣಾ ಹಾಗು ಬಿಜೆಪಿ ರಾಷ್ಟ್ರೀಯ ಪ್ರಧಾನ ಕಾರ್ಯದರ್ಶಿ ಸಿ.ಟಿ.ರವಿ ಭಾಗಿಯಾಗಲಿದ್ದಾರೆ.

19 ರಂದು ಬೆಳಿಗ್ಗೆ 10.30ಕ್ಕೆ ದಾವಣಗೆರೆ ನಗರದ ತ್ರಿಶೂಲ ಕಲಾಭವನದಲ್ಲಿ ಬಿಜೆಪಿ ರಾಜ್ಯ ಕಾರಣಿ ಸಭೆ ನಡೆಯಲಿದೆ. ಸಿಎಂ ಬಸವರಾಜ್ ಬೊಮ್ಮಾಯಿ ಕಾರ್ಯಕಾರಣಿ ಸಭೆ ಉದ್ಘಾಟನೆ ಮಾಡಲಿದ್ದಾರೆ. ಬಿಜೆಪಿ ರಾಷ್ಟ್ರೀಯ ಸಂಘಟನಾ ಪ್ರಧಾನ ಕಾರ್ಯದರ್ಶಿ ಬಿ.ಎಲ್.ಸಂತೋಷ, ಮಾಜಿ ಸಿಎಂ ಬಿ.ಎಸ್ ಯಡಿಯೂರಪ್ಪ ಸೇರಿ ಪ್ರಮುಖರು ಭಾಗಿಯಾಗಲಿದ್ದಾರೆ. 99 ಜನ ಶಾಸಕರು, 18 ಜನ ಸಂಸದರು, ನಾಲ್ವರು ರಾಜ್ಯಸಭಾ ಸದಸ್ಯರು ಸೇರಿ 572 ಜನಕ್ಕೆ ಕಾರ್ಯಕಾರಣಿ ಸಭೆಗೆ ಆಹ್ವಾನಿಸಲಾಗಿದೆ.

ಇದನ್ನೂ ಓದಿ:

ಶಾಸಕ ಸುನೀಲ್ ಕುಮಾರ್ ಜತೆ 20 ನಿಮಿಷ ಚರ್ಚಿಸಿದ ಅರುಣ್​ ಸಿಂಗ್​; ಅದೊಂದು ಪತ್ರವೇ ಕಾರಣ ಪ್ರತ್ಯೇಕ ಮಾತುಕತೆಗೆ

74ನೇ ಕಲ್ಯಾಣ ಕರ್ನಾಟಕ ಉತ್ಸವ: ಸಿಎಂ ಬಸವರಾಜ ಬೊಮ್ಮಾಯಿ ಧ್ವಜಾರೋಹಣ, ವಿವಿಧ ಜಿಲ್ಲೆಗಳಲ್ಲಿ ಸಂಭ್ರಮಾಚರಣೆ

 

Read Full Article

Click on your DTH Provider to Add TV9 Kannada