ರಾಜ್ಯ ಬಿಜೆಪಿ ಕೋರ್​​ ಕಮಿಟಿ ಸಭೆ: ಹಿರಿಯೂರು ಉಪಚುನಾವಣೆ ಗೆಲ್ಲಲು ರಣತಂತ್ರ, SIR ವಿವಾದವಾಗಿ ಹೋರಾಟ ತೀವ್ರಕ್ಕೂ ನಿರ್ಧಾರ

ಬೆಂಗಳೂರಿನ ಬಿಜೆಪಿ ಕಚೇರಿಯಲ್ಲಿ ನಡೆದ ಕೋರ್ ಕಮಿಟಿ ಸಭೆಯಲ್ಲಿ ಹಿರಿಯೂರು ವಿಧಾನಸಭಾ ಉಪಚುನಾವಣೆಗೆ ಬಿಜೆಪಿ ಅಭ್ಯರ್ಥಿ ಕಣಕ್ಕಿಳಿಸುವ ರಣತಂತ್ರ ಹಾಗೂ ಎಸ್‌ಐಆರ್ ವಿವಾದದ ವಿರುದ್ಧ ಹೋರಾಟ ತೀವ್ರಗೊಳಿಸುವ ಕುರಿತು ಪ್ರಮುಖ ನಿರ್ಣಯಗಳನ್ನು ಕೈಗೊಳ್ಳಲಾಗಿದೆ. ಇದೇ ವೇಳೆ ರಾಜ್ಯ ಬಿಜೆಪಿ ಸಹ ಉಸ್ತುವಾರಿ ವೆಂಕಟೇಶ್ವರಲು ಅವರನ್ನು ಬಿಜೆಪಿಗರು ಸನ್ಮಾನಿಸಿದ್ದಾರೆ.

ರಾಜ್ಯ ಬಿಜೆಪಿ ಕೋರ್​​ ಕಮಿಟಿ ಸಭೆ: ಹಿರಿಯೂರು ಉಪಚುನಾವಣೆ ಗೆಲ್ಲಲು ರಣತಂತ್ರ, SIR ವಿವಾದವಾಗಿ ಹೋರಾಟ ತೀವ್ರಕ್ಕೂ ನಿರ್ಧಾರ
ರಾಜ್ಯ ಬಿಜೆಪಿ ಕೋರ್​​ ಕಮಿಟಿ ಸಭೆ
Image Credit source: BJP Karnataka X Page
Edited By:

Updated on: Oct 11, 2026 | 1:28 PM

ಬೆಂಗಳೂರು, ಅಕ್ಟೋಬರ್​​ 11: ಮಲ್ಲೇಶ್ವರಂನಲ್ಲಿರುವ ಬಿಜೆಪಿ ಕಚೇರಿಯಲ್ಲಿ ನಡೆದ ಕೋರ್ ಕಮಿಟಿ ಸಭೆಯಲ್ಲಿ ಹಲವು ಮಹತ್ವದ ವಿಚಾರಗಳ ಬಗ್ಗೆ ಚರ್ಚೆ ನಡೆದಿದೆ. ಹಿರಿಯೂರು ವಿಧಾನಸಭಾ ಉಪಚುನಾವಣೆ ಹಿನ್ನೆಲೆ ಬಿಜೆಪಿಯಿಂದಲೇ ಅಭ್ಯರ್ಥಿ ಕಣಕ್ಕಿಳಿಸುವ ಬಗ್ಗೆ ಸಭೆಯಲ್ಲಿ ಪ್ರಸ್ತಾಪವಾಗಿದೆ. ಮಿತ್ರ ಪಕ್ಷ ಜೆಡಿಎಸ್ ವಿಶ್ವಾಸದೊಂದಿಗೆ ಬಿಜೆಪಿ ಅಭ್ಯರ್ಥಿ ಸ್ಫರ್ಧೆಯ ಸಾಧಕ ಬಾಧಕಗಳ ಬಗ್ಗೆ ನಾಯಕರು ಚರ್ಚಿಸಿದ್ದು, ಮೂರ್ನಾಲ್ಕು ಅಭ್ಯರ್ಥಿಗಳ ಸಂಭಾವ್ಯ ಪಟ್ಟಿ ಸಿದ್ದಪಡಿಸುವ ಅಧಿಕಾರವನ್ನು ರಾಜ್ಯಾಧ್ಯಕ್ಷರಿಗೆ ಕೋರ್ ಕಮಿಟಿ ನೀಡಿದೆ.

ಅಲ್ಲದೆ ಹಿರಿಯೂರು ಉಪಚುನಾವಣೆಗೆ ಸಂಬಂಧಿಸಿದಂತೆ ಸಮನ್ವಯ ಸಮಿತಿ ರಚಿಸುವ ಬಗ್ಗೆಯೂ ಸಭೆಯಲ್ಲಿ ಚರ್ಚೆಯಾಗಿದ್ದು, ಜಿ.ಪಂ.ಮತ್ತು ತಾ.ಪಂ. ಚುನಾವಣೆಗೆ ಪ್ರತಿ ಜಿಲ್ಲೆಗಳಿಗೂ ಉಸ್ತುವಾರಿಗಳು ಮತ್ತು ಚುನಾವಣಾ ನಿರ್ವಹಣಾ ಸಮಿತಿ ರಚಿಸಲು ತೀರ್ಮಾನಿಸಲಾಗಿದೆ. ಎಸ್ಐಆರ್ ಪ್ರಕ್ರಿಯೆಯಲ್ಲಿ ಬಿಜೆಪಿಗೆ ಸ್ವಲ್ಪ ಹಿನ್ನೆಡೆಯಾಗಿದೆ ಎಂಬ ಬಗ್ಗೆಯೂ ಸಭೆಯಲ್ಲಿ ಪ್ರಸ್ತಾಪವಾಗಿದ್ದು, ಹಿನ್ನೆಡೆಯಾಗಿರುವ ಕಡೆ ಹೆಚ್ಚು ಗಮನ ಹರಿಸಲು ನಿರ್ಧರಿಸಲಾಗಿದೆ. ಬಿಜೆಪಿ ಕಾರ್ಯಕರ್ತರ ಮೇಲೆ ಎಫ್ಐಆರ್ ಮುಂದುವರಿದರೆ ಎಸ್ಪಿ ಕಚೇರಿಗೆ ಮುತ್ತಿಗೆ ಹಾಕಲೂ ಸಭೆಯಲ್ಲಿ ತೀರ್ಮಾನಿಸಲಾಗಿದೆ.

ಇದನ್ನೂ ಓದಿ: ನನಗೆ ಮೇಲ್ಜಾತಿಯವರ ವೋಟುಗಳು ಬೇಡ; ನನ್ನ ಕ್ಷೇತ್ರಕ್ಕೆ ನಾನೇ ಬಾಸ್; ಪ್ರದೀಪ್ ಈಶ್ವರ್ ಭಾಷಣದ ವಿಡಿಯೋ ವೈರಲ್

ಕೋರ್ ಕಮಿಟಿ ಸಭೆಯಲ್ಲಿ ಯಾರೆಲ್ಲ ಭಾಗಿ?

ರಾಜ್ಯ ಬಿಜೆಪಿ ಸಹ ಉಸ್ತುವಾರಿ ವೆಂಕಟೇಶ್ವರಲು ನೇತೃತ್ವದಲ್ಲಿ ನಡೆದ ಸಭೆಯಲ್ಲಿ ರಾಜ್ಯ ಬಿಜೆಪಿ ಅಧ್ಯಕ್ಷ ವಿಜಯೇಂದ್ರ, ಮಾಜಿ ಸಿಎಂ ಯಡಿಯೂರಪ್ಪ, ವಿಪಕ್ಷ ನಾಯಕರಾದ ಆರ್.ಅಶೋಕ್, ಛಲವಾದಿ ನಾರಾಯಣಸ್ವಾಮಿ, ಕೇಂದ್ರ ಸಚಿವ ಪ್ರಹ್ಲಾದ್ ಜೋಶಿ, ಸಂಸದ ಬೊಮ್ಮಾಯಿ, ರಾಷ್ಟ್ರೀಯ ಉಪಾಧ್ಯಕ್ಷರಾದ ಪ್ರೊ. ಎಂ. ನಾಗರಾಜ್, ಮಾಜಿ ಉಪ ಮುಖ್ಯಮಂತ್ರಿ ಗೋವಿಂದ ಕಾರಜೋಳ, ಡಾ. ಸಿ. ಎನ್. ಅಶ್ವತ್ಥ್ ನಾರಾಯಣ್, ಮಾಜಿ ಸಚಿವ ಸಿ. ಟಿ. ರವಿ, ಬಿ. ಶ್ರೀರಾಮುಲು, ಮಾಜಿ ರಾಜ್ಯಾಧ್ಯಕ್ಷ ನಳಿನ್ ಕುಮಾರ್ ಕಟೀಲ್, ಮಾಜಿ ರಾಜ್ಯ ಉಪಾಧ್ಯಕ್ಷರಾದ ನಿರ್ಮಲ್ ಕುಮಾರ್ ಸುರಾನ, ರಾಜ್ಯ ಪ್ರಧಾನ ಕಾರ್ಯದರ್ಶಿ ಪಿ. ರಾಜೀವ್ ಉಪಸ್ಥಿತರಿದ್ದರು.

ಡಾ. ಕಾಸಂ ವೆಂಕಟೇಶ್ವರಲುಗೆ ಸನ್ಮಾನ

ಬೆಂಗಳೂರಿಗೆ ಆಗಮಿಸಿದ ರಾಜ್ಯ ಬಿಜೆಪಿ ಸಹ ಉಸ್ತುವಾರಿ ವೆಂಕಟೇಶ್ವರಲು ಅವರನ್ನು ಕೆಂಪೇಗೌಡ ಏರ್​ಪೋರ್ಟ್​ನಲ್ಲಿ ಬಿಜೆಪಿ ನಾಯಕರು ಅಧ್ದೂರಿಯಾಗಿ ಬರಮಾಡಿಕೊಂಡರು. ವಿಧಾನಪರಿಷತ್ ವಿಪಕ್ಷ ನಾಯಕ ಛಲವಾದಿ ನಾರಾಯಣಸ್ವಾಮಿ ಮತ್ತು ರಾಜ್ಯ ಬಿಜೆಪಿ ಕಾರ್ಯದರ್ಶಿ ತಮ್ಮೇಶ್ ಗೌಡ ವೆಂಕಟೇಶ್ವರಲು ಅವರನ್ನು ಸ್ವಾಗತಿಸಿದರು. ಆ ಬಳಿಕ ಕೋರ್​​ ಕಮಿಟಿ ಸಭೆ ಆರಂಭಕ್ಕೂ ಮುನ್ನ ಅವರನ್ನು ರಾಜ್ಯ ಬಿಜೆಪಿ ಘಟಕದಿಂದ ಸನ್ಮಾನಿಸಲಾಯಿತು.

ಮತ್ತಷ್ಟು ಸುದ್ದಿ ಓದಲು ಇಲ್ಲಿ ಕ್ಲಿಕ್​​ ಮಾಡಿ.

Published On - 1:16 pm, Sun, 11 October 26

ಕಿರಣ್​ ಹನಿಯಡ್ಕ

TV9 ಕನ್ನಡದಲ್ಲಿ ಹಿರಿಯ ರಾಜಕೀಯ ವರದಿಗಾರ. ಮಂಗಳೂರು ವಿಶ್ವವಿದ್ಯಾನಿಲಯದಿಂದ ಸಮೂಹ ಸಂವಹನ ಮತ್ತು ಪತ್ರಿಕೋದ್ಯಮದಲ್ಲಿ ಸ್ನಾತಕೋತ್ತರ ಪದವಿ. 17 ವರ್ಷಗಳಿಂದ ಮಾಧ್ಯಮ ವೃತ್ತಿ. ಮುದ್ರಣ ಮಾಧ್ಯಮದಲ್ಲಿ ಸಬ್ ಎಡಿಟರ್, ವಿದ್ಯುನ್ಮಾನ ಮಾಧ್ಯಮದಲ್ಲಿ ನ್ಯೂಸ್ ಡೆಸ್ಕ್ ಮತ್ತು ರಾಜಕೀಯ ವರದಿಗಾರಿಕೆಯಲ್ಲಿ ಅನುಭವ.

Read More
Loading...
Unable to load recommendations.
Follow Us