ಬೆಂಗಳೂರಿನಲ್ಲಿ ಕಾಂಗ್ರೆಸ್ ಶಾಸಕ ಕ್ಷೇತ್ರಗಳಿಗೆ ಬಿಜೆಪಿ ಸರ್ಕಾರದಿಂದ ನಿರಂತರ ತಾರತಮ್ಯ ನಡೆಯುತ್ತಿದೆ: ರಾಮಲಿಂಗಾ ರೆಡ್ಡಿ ಗರಂ

S Ramalinga Reddy: ‘ಮುಖ್ಯಮಂತ್ರಿಗಳ ನಗರೋತ್ಥಾನ, ಅಮೃತ್ ನಗರ ಯೋಜನೆ ಹಾಗೂ ಬೃಹತ್ ಮಳೆನೀರುಗಾಲುವೆಗೆ ನೀಡಲಾಗಿರುವ ಅನುದಾನ ಎಲ್ಲದರಲ್ಲೂ ಬಿಜೆಪಿ ಶಾಸಕರಿಗೆ ಹೆಚ್ಚಿನ ಅನುದಾನವನ್ನು ನೀಡಲಾಗಿದೆ. ಮಳೆನೀರುಗಾಲುವೆಗೆ ನೀಡಲಾಗಿರುವ ಅನುದಾನದಲ್ಲಿ ಬಿಟಿಎಂ ಹಾಗೂ ಜಯನಗರ ಕ್ಷೇತ್ರಗಳಿಗೆ ಶೂನ್ಯ ಅನುದಾನ ಕೊಟ್ಟಿದ್ದಾರೆ’ ಎಂದು ಕೆಪಿಸಿಸಿ ಕಾರ್ಯಾಧ್ಯಕ್ಷ ರಾಮಲಿಂಗಾ ರೆಡ್ಡಿ ಕಿಡಿಕಾರಿದರು.

ಬೆಂಗಳೂರಿನಲ್ಲಿ ಕಾಂಗ್ರೆಸ್ ಶಾಸಕ ಕ್ಷೇತ್ರಗಳಿಗೆ ಬಿಜೆಪಿ ಸರ್ಕಾರದಿಂದ ನಿರಂತರ ತಾರತಮ್ಯ ನಡೆಯುತ್ತಿದೆ: ರಾಮಲಿಂಗಾ ರೆಡ್ಡಿ ಗರಂ
ಬೆಂಗಳೂರಿನಲ್ಲಿ ಕಾಂಗ್ರೆಸ್ ಶಾಸಕರ ಕ್ಷೇತ್ರಗಳಿಗೆ ಬಿಜೆಪಿ ಸರ್ಕಾರದಿಂದ ನಿರಂತರವಾಗಿ ತಾರತಮ್ಯ ನಡೆಯುತ್ತಿದೆ: ರಾಮಲಿಂಗಾ ರೆಡ್ಡಿ ವಿಷಾದ
Follow us
TV9 Web
| Updated By: ಸಾಧು ಶ್ರೀನಾಥ್​

Updated on: Mar 12, 2022 | 2:47 PM

ಬೆಂಗಳೂರು: ‘ಬಿಜೆಪಿ ಸರ್ಕಾರ ಅಧಿಕಾರಕ್ಕೆ ಬಂದಾಗಿನಿಂದಲೂ (Karnataka BJP Government) ಬೆಂಗಳೂರಿನಲ್ಲಿರುವ ಕಾಂಗ್ರೆಸ್ ಶಾಸಕರ ಕ್ಷೇತ್ರಗಳಿಗೆ (Congress MLAs in Bangalore) ನಿರಂತರವಾಗಿ ತಾರತಮ್ಯ ಮಾಡುತ್ತಿದೆ. ಮುಖ್ಯಮಂತ್ರಿಗಳು ಈ ತಾರತಮ್ಯವನ್ನು ಸರಿಪಡಿಸಬೇಕು ಅಥವಾ ಸಮಗ್ರ ಬೆಂಗಳೂರು ಅಭಿವೃದ್ಧಿ ಎಂದು ಹೇಳಿಕೊಳ್ಳುವ ಬದಲು, ಬಿಜೆಪಿ ಶಾಸಕರ ಕ್ಷೇತ್ರದ ಅಭಿವೃದ್ಧಿ ಎಂದು ಹೇಳಬೇಕು’ ಎಂದು ಕೆಪಿಸಿಸಿ ಕಾರ್ಯಾಧ್ಯಕ್ಷ ರಾಮಲಿಂಗಾ ರೆಡ್ಡಿ ಆಗ್ರಹಿಸಿದರು (KPCC working President S Ramalinga Reddy).

ಕೆಪಿಸಿಸಿ ಕಚೇರಿಯಲ್ಲಿ ಮಾಧ್ಯಮಗೋಷ್ಠಿಯಲ್ಲಿ ಶನಿವಾರ ಮಾತನಾಡಿದ ರಾಮಲಿಂಗಾ ರೆಡ್ಡಿ ಅವರು, ‘ಬಿಜೆಪಿ ಸರ್ಕಾರ ಅಧಿಕಾರಕ್ಕೆ ಬಂದ ನಂತರ ಬಿಜೆಪಿ ಶಾಸಕರ 15 ಕ್ಷೇತ್ರಗಳಿಗೆ ಒಟ್ಟು 9888 ಕೋಟಿ ರೂಪಾಯಿಗಳಷ್ಟು ಅನುದಾನ ನೀಡಿದ್ದು, ಕಾಂಗ್ರೆಸ್ ಶಾಸಕರ 12 ಕ್ಷೇತ್ರಗಳಿಗೆ 2,186.48 ಕೋಟಿ ರೂಪಾಯಿ ನೀಡಿದೆ. ಇನ್ನು ಜೆಡಿಎಸ್ ಶಾಸಕರಿರುವ ದಾಸರಹಳ್ಳಿಗೆ 288.5 ಕೋಟಿ ಕೊಟ್ಟಿದ್ದಾರೆ. ಆ ಮೂಲಕ ಕಾಂಗ್ರೆಸ್ ಹಾಗೂ ಜೆಡಿಎಸ್ ಶಾಸಕರ ಕ್ಷೇತ್ರಗಳಿಗಿಂತ 5 ಪಟ್ಟು ಹೆಚ್ಚಿನ ಅನಪದಾನವನ್ನು ಬಿಜೆಪಿಯವರಿಗೆ ನೀಡಲಾಗಿದೆ’ ಎಂದು ಅಂಕಿ ಅಂಶಗಳ ಸಮೇತ ವಿವರಿಸಿದರು.

ಸಿದ್ದರಾಮಯ್ಯ ಅವರ ಸರ್ಕಾರದಲ್ಲಿ ಬೆಂಗಳೂರಿಗೆ 7,200 ಕೋಟಿ, ಸಮ್ಮಿಶ್ರ ಸರ್ಕಾರದಲ್ಲಿ 1 ಸಾವಿರ ಕೋಟಿ ಹಣವನ್ನು ವಿವಿಧ ಕ್ಷೇತ್ರಗಳಿಗೆ ಅನುದಾನವಾಗಿ ನೀಡಿತ್ತು. ಈ ಹಣವನ್ನು ಬಿಜೆಪಿ ಸರ್ಕಾರ ಅಧಿಕಾರಕ್ಕೆ ಬಂದ ನಂತರ ಕೊಡಲಾಗಿದ್ದ ಅನುದಾವನ್ನು ಹಿಂಪಡೆದು ಮುಖ್ಯಮಂತ್ರಿಗಳ ನಗರೊತ್ಥಾನ ಮರುಹಂಚಿಕೆ ಮಾಡಲಾಗಿದೆ. ಇತ್ತೀಚೆಗೆ ಅಮೃತ್ ನಗರ ಯೋಜನೆ ಅಡಿಯಲ್ಲಿ 3600 ಕೋಟಿ ಕೊಟ್ಟಿದ್ದಾರೆ. 1500 ಕೋಟಿಯನ್ನು ಮಳೆ ನೀರುಗಾಲುವೆಗಾಗಿ ನೀಡಲಾಗಿದೆ.

‘ಮುಖ್ಯಮಂತ್ರಿಗಳ ನಗರೋತ್ಥಾನ, ಅಮೃತ್ ನಗರ ಯೋಜನೆ ಹಾಗೂ ಬೃಹತ್ ಮಳೆನೀರುಗಾಲುವೆಗೆ ನೀಡಲಾಗಿರುವ ಅನುದಾನ ಎಲ್ಲದರಲ್ಲೂ ಬಿಜೆಪಿ ಶಾಸಕರಿಗೆ ಹೆಚ್ಚಿನ ಅನುದಾನವನ್ನು ನೀಡಲಾಗಿದೆ. ಮಳೆನೀರುಗಾಲುವೆಗೆ ನೀಡಲಾಗಿರುವ ಅನುದಾನದಲ್ಲಿ ಬಿಟಿಎಂ ಹಾಗೂ ಜಯನಗರ ಕ್ಷೇತ್ರಗಳಿಗೆ ಶೂನ್ಯ ಅನುದಾನ ಕೊಟ್ಟಿದ್ದಾರೆ’ ಎಂದು ಕಿಡಿಕಾರಿದರು.

‘ಈ ಮೂರು ಯೋಜನೆಗಳು ಸೇರಿದಂತೆ ಬಿಜೆಪಿ ಶಾಸಕರ ಕ್ಷೇತ್ರಗಳಾದ ಬೆಂಗಳೂರು ದಕ್ಷಿಣ 821.75 ಕೋಟಿ, ಬಸವನಗುಡಿ 377.5, ಬೊಮ್ಮನಹಳ್ಳಿ 915.83, ಸಿವಿ ರಾಮನ್ ನಗರ 485.93, ಚಿಕ್ಕಪೇಟೆ 380.4, ಗೋವಿಂದರಾಜನಗರ 630.5, ಮಹದೇವಪುರ 752.85, ಮಲ್ಲೇಶ್ವರಂ 403.6, ಪದ್ಮನಾಭನಗರ 415.24, ರಾಜಾಜಿನಗರ 335.2, ಯಲಹಂಕ, 665.56, ಕೆ.ಆರ್ ಪುರಂ 926.7, ಮಹಾಲಕ್ಷ್ಮಿ ಬಡಾವಣೆ 527.25, ರಾಜರಾಜೇಶ್ವರಿ ನಗರ 1253.35, ಯಶವಂತಪುರ 1046.48 ಕೋಟಿ ಅನುದಾನ ನೀಡಲಾಗಿದೆ.

ಉಳಿದಂತೆ ಕಾಂಗ್ರೆಸ್ ಶಾಸಕರ ಕ್ಷೇತ್ರಗಳಾದ ಬಿಟಿಎಂ ಬಡಾವಣೆ 232.84, ಬ್ಯಾಟರಾಯನಪುರ 253.39, ಚಾಮರಾಜಪೇಟೆ 136, ಗಾಂಧಿನಗರ 202.41, ಹೆಬ್ಬಾಳ 196.84, ಜಯನಗರ 182, ಪುಲಕೇಶಿನಗರ 140.95, ಸರ್ವಜ್ಞನಗರ 225.52, ಶಾಂತಿನಗರ 159.75, ವಿಜಯನಗರ 198.26, ಆನೇಕಲ್ 10, ಶಿವಾಜಿ ನಗರಕ್ಕೆ 248.52 ಕೋಟಿ ನೀಡಲಾಗಿದೆ. ಇನ್ನು ಜೆಡಿಎಶ್ ಶಾಸಕರಿರುವ ದಾಸರಹಳ್ಳಿ ಕ್ಷೇತ್ರಕ್ಕೆ 288.5 ಕೋಟಿ ಅನುದಾನ ನೀಡಲಾಗಿದೆ. ಹೀಗೆ ಬಿಜೆಪಿಯ ಇಂದಿನ ಹಾಗೂ ಈ ಹಿಂದೆ ಇದ್ದ ಮುಖ್ಯಮಂತ್ರಿಗಳು ಈ ರೀತಿ ಕಾಂಗ್ರೆಸ್ ಶಾಸಕರ ಕ್ಷೇತ್ರಗಳಿಗೆ ಅನ್ಯಾಯ ಮಾಡುತ್ತಿದ್ದಾರೆ. ನಮ್ಮ ಕ್ಷೇತ್ರದ ಜನರು ಕೂಡ ತೆರಿಗೆ ಪಾವತಿಸುತ್ತಿದ್ದು, ಬಿಜೆಪಿ ಸರ್ಕಾರದಲ್ಲಿ ಇಂತಹ ತಾರತಮ್ಯ ನಿರಂತರವಾಗಿ ನಡೆಯುತ್ತಿದೆ’ ಎಂದು ಆರೋಪಿಸಿದರು.

‘ಬಿಜೆಪಿ ಸರ್ಕಾರ ಸಮಗ್ರ ಬೆಂಗಳೂರು ಅಭಿವೃದ್ಧಿ ಮಾಡಲಾಗುವುದು ಎಂದು ಹೇಳಿ ಈ ರೀತಿ ಅನುದಾನದಲ್ಲಿ ತಾರತಮ್ಯ ಮಾಡಿದರೆ ಬೆಂಗಳೂರು ಸಮಗ್ರ ಅಭಿವೃದ್ಧಿ ಹೇಗೆ ಸಾಧ್ಯವಾಗುತ್ತದೆ? ನಾನು ಬೆಂಗಳೂರು ನಗರಾಭಿವೃದ್ಧಿ ಸಚಿವನಾಗಿದ್ದ ಸಂದರ್ಭದಲ್ಲಿ ಯಾರೂ ಕೂಡ ಅದಾನ ಕಡಿಮೆಯಾಗಿದೆ ಎಂದು ಹೇಳಿರಲಿಲ್ಲ. ಕಾಂಗ್ರೆಸ್ ಶಆಸಕರಿಗೆ ಹೆಚ್ಚಿನ ಅನುದಾನ ಕೊಟ್ಟಿದ್ದರೂ ಇಷ್ಟು ದೊಡ್ಡ ಪ್ರಮಾಣದಲ್ಲಿ ತಾರತಮ್ಯ ಮಾಡಿರಲಿಲ್ಲ’ ಎಂದರು.

‘ಈ ವಿಚಾರವಾಗಿ ನಾನು ಮುಖ್ಯಮಂತ್ರಿಗಳಿಗೆ ಪತ್ರ ಬರೆಯುತ್ತೇನೆ ಹಾಗೂ ಈ ವಿಚಾರವನ್ನು ವಿಧಾನಸಭೆ ಕಲಾಪದಲ್ಲಿ ಚರ್ಚಿಸುತ್ತೇನೆ’ ಎಂದು ಕೆಪಿಸಿಸಿ ಕಾರ್ಯಾಧ್ಯಕ್ಷರಾದ ರಾಮಲಿಂಗಾ ರೆಡ್ಡಿ ತಿಳಿಸಿದರು.

ರಾಹುಲ್- ಜೈಸ್ವಾಲ್ ಜೊತೆಯಾಟಕ್ಕೆ ರನ್ ಸಾಮ್ರಾಟನೇ ಫುಲ್ ಫಿದಾ
ರಾಹುಲ್- ಜೈಸ್ವಾಲ್ ಜೊತೆಯಾಟಕ್ಕೆ ರನ್ ಸಾಮ್ರಾಟನೇ ಫುಲ್ ಫಿದಾ
ಕಾರು ಅಪಘಾತದಲ್ಲಿ ಜೀವ ಉಳಿಸಿದವರ ಮರೆಯದ ರಿಷಬ್ ಪಂತ್
ಕಾರು ಅಪಘಾತದಲ್ಲಿ ಜೀವ ಉಳಿಸಿದವರ ಮರೆಯದ ರಿಷಬ್ ಪಂತ್
ಕ್ಷೇತ್ರದ ಸಮಗ್ರ ಅಭಿವೃದ್ಧಿ ಕಡೆ ಯೋಗೇಶ್ವರ್ ಗಮನ ಹರಿಸಲಿದ್ದಾರೆ: ಶೀಲಾ
ಕ್ಷೇತ್ರದ ಸಮಗ್ರ ಅಭಿವೃದ್ಧಿ ಕಡೆ ಯೋಗೇಶ್ವರ್ ಗಮನ ಹರಿಸಲಿದ್ದಾರೆ: ಶೀಲಾ
ಗ್ಯಾರಂಟಿ ಯೋಜನೆಗಳು ರಾಜ್ಯ ಉಪ ಚುನಾವಣೆಗಳಲ್ಲಿ ನಮ್ಮ ಕೈ ಹಿಡಿದಿವೆ: ಸಿಎಂ
ಗ್ಯಾರಂಟಿ ಯೋಜನೆಗಳು ರಾಜ್ಯ ಉಪ ಚುನಾವಣೆಗಳಲ್ಲಿ ನಮ್ಮ ಕೈ ಹಿಡಿದಿವೆ: ಸಿಎಂ
ರಾಜ್ಯ ಬಿಜೆಪಿ ನಾಯಕರನ್ನು ಪ್ರಧಾನಿ ಮೋದಿಯವರೇ ಸರಿಮಾಡಬೇಕು: ಕಾರ್ಯಕರ್ತ
ರಾಜ್ಯ ಬಿಜೆಪಿ ನಾಯಕರನ್ನು ಪ್ರಧಾನಿ ಮೋದಿಯವರೇ ಸರಿಮಾಡಬೇಕು: ಕಾರ್ಯಕರ್ತ
‘ಹೊರಗೆ ಕಳಿಸುತ್ತೇನೆ’ ನಗುತ್ತಲೇ ರಜತ್​ಗೆ ಎಚ್ಚರಿಕೆ ಕೊಟ್ಟ ಕಿಚ್ಚ
‘ಹೊರಗೆ ಕಳಿಸುತ್ತೇನೆ’ ನಗುತ್ತಲೇ ರಜತ್​ಗೆ ಎಚ್ಚರಿಕೆ ಕೊಟ್ಟ ಕಿಚ್ಚ
ಮೂರನೇ ಸೋಲಿನಿಂದ ನಿಖಿಲ್ ಕುಮಾರಸ್ವಾಮಿ ಎದೆಗುಂದಬಾರದು: ಜಿಟಿ ದೇವೇಗೌಡ
ಮೂರನೇ ಸೋಲಿನಿಂದ ನಿಖಿಲ್ ಕುಮಾರಸ್ವಾಮಿ ಎದೆಗುಂದಬಾರದು: ಜಿಟಿ ದೇವೇಗೌಡ
ಬೈ ಎಲೆಕ್ಷನ್ ಸೋಲು: TV ಎಸೆದು ನಾಯಕರ ವಿರುದ್ಧ ಬಿಜೆಪಿ ಕಾರ್ಯಕರ್ತ ಆಕ್ರೋಶ
ಬೈ ಎಲೆಕ್ಷನ್ ಸೋಲು: TV ಎಸೆದು ನಾಯಕರ ವಿರುದ್ಧ ಬಿಜೆಪಿ ಕಾರ್ಯಕರ್ತ ಆಕ್ರೋಶ
ಯಡಿಯೂರಪ್ಪ ಒಂದೇ ಕಲ್ಲಿಂದ ಎರಡು ಹಕ್ಕಿ ಹೊಡೆದುರುಳಿಸಿದ್ದಾರೆ: ಯೋಗೇಶ್ವರ್
ಯಡಿಯೂರಪ್ಪ ಒಂದೇ ಕಲ್ಲಿಂದ ಎರಡು ಹಕ್ಕಿ ಹೊಡೆದುರುಳಿಸಿದ್ದಾರೆ: ಯೋಗೇಶ್ವರ್
ಬಿಜೆಪಿ ಹೀನಾಯ ಸೋಲಿಗೆ ಪೂಜ್ಯ ತಂದೆ, ಮಗ ಕಾರಣ: ಗುಡುಗಿದ ಯತ್ನಾಳ್
ಬಿಜೆಪಿ ಹೀನಾಯ ಸೋಲಿಗೆ ಪೂಜ್ಯ ತಂದೆ, ಮಗ ಕಾರಣ: ಗುಡುಗಿದ ಯತ್ನಾಳ್