ಬಿಜೆಪಿ ಶಾಸಕಾಂಗ ಪಕ್ಷದ ಸಭೆ: ಕ್ಷೇತ್ರಾನುದಾನ ನೀಡುವಂತೆ ಸಿಎಂ ಬೊಮ್ಮಾಯಿಗೆ ಶಾಸಕರ ಆಗ್ರಹ
ವಿಧಾನಸಭೆ ಅಧಿವೇಶನ ಹಿನ್ನೆಲೆಯಲ್ಲಿ ಭಾರತೀಯ ಜನತಾ ಪಾರ್ಟಿ (BJP) ಬೆಂಗಳೂರಿನ ಖಾಸಗಿ ಹೋಟೆಲ್ನಲ್ಲಿ ಶಾಸಕಾಂಗ ಪಕ್ಷದ ಸಭೆ ನಡೆಸುತ್ತಿದೆ.
ಬೆಂಗಳೂರು: ವಿಧಾನಸಭೆ ಅಧಿವೇಶನ ಹಿನ್ನೆಲೆಯಲ್ಲಿ ಭಾರತೀಯ ಜನತಾ ಪಾರ್ಟಿ (BJP) ಬೆಂಗಳೂರಿನ (Bengaluru) ಖಾಸಗಿ ಹೋಟೆಲ್ನಲ್ಲಿ ಶಾಸಕಾಂಗ ಪಕ್ಷದ ಸಭೆ ನಡೆಸುತ್ತಿದೆ. ಸಭೆಯಲ್ಲಿ ಶಾಸಕರು ಕ್ಷೇತ್ರಾನುದಾನ ನೀಡುವಂತೆ ಮುಖ್ಯಂತ್ರಿ ಬಸವರಾಜ ಬೊಮ್ಮಾಯಿ ಅವರ ಮುಂದೆ ಬೇಡಿಕೆ ಇಟ್ಟಿದ್ದಾರೆ. ಚುನಾವಣೆ ಹತ್ತಿರ ಬರುತ್ತಿದೆ, ಕ್ಷೇತ್ರಗಳ ಅಭಿವೃದ್ಧಿ ಚುರುಕುಗೊಳಿಸಬೇಕಿದೆ. ಹೀಗಾಗಿ ನಮ್ಮದೇ ಸರ್ಕಾರ ಆಡಳಿತದಲ್ಲಿದೆ, ಹೆಚ್ಚಿನ ಅನುದಾನವನ್ನು ನೀಡಿ ಎಂದು ಬೇಡಿಕೆ ಇಟ್ಟಿದ್ದಾರೆ.
ಚುನಾವಣೆ ವೇಳೆ ಕಾಂಗ್ರೆಸ್‌ನವರೂ ಶಾಸಕರಿಗೆ ಅನುದಾನ ನೀಡಿದ್ದರು. ಈಗ ನಮಗೂ ಅನುದಾನ ನೀಡಿ ಎಂದು ಸಿಎಂ ಬೊಮ್ಮಾಯಿ ಅವರಿಗೆ ಆಗ್ರಹಿಸಿದ್ದಾರೆ.
ಬಿಜೆಪಿ ಸಂಸದೀಯ ಮಂಡಳಿ ಸದಸ್ಯ ಯಡಿಯೂರಪ್ಪಗೆ ಅಭಿನಂದನೆ
ಬಿಜೆಪಿ ಶಾಸಕಾಂಗ ಪಕ್ಷದ ಸಭೆಗೆ ಮಾಜಿ ಮುಖ್ಯಮಂತ್ರಿ ಬಿ ಎಸ್ ಯಡಿಯೂರಪ್ಪ ಬಿಜೆಪಿ ಸಂಸದೀಯ ಮಂಡಳಿ ಸದಸ್ಯರಾದ ಬಳಿಕ ಮೊದಲ ಬಾರಿಗೆ ಭಾಗಿಯಾಗಿದ್ದಾರೆ. ಹೀಗಾಗಿ ಬಿಜೆಪಿ ಸಂಸದೀಯ ಮಂಡಳಿ ಸದಸ್ಯ ಯಡಿಯೂರಪ್ಪ ಅವರಿಗೆ ಶಾಸಕರು ಅಭಿನಂದನೆ ಸಲ್ಲಿಸಿದ್ದಾರೆ.
ಚುನಾವಣೆ ಹತ್ತಿರ ಬರುತ್ತಿದೆ ಹೆಸರು ಕೆಡಿಸಿಕೊಳ್ಳಬೇಡಿ : ಸಿಎಂ ಮತ್ತು ಕಟೀಲ್ ಕಿವಿಮಾತು
ಚುನಾವಣೆ ಹತ್ತಿರ ಬರುತ್ತಿದೆ ಹೆಸರು ಕೆಡಿಸಿಕೊಳ್ಳಬೇಡಿ ಎಂದು ಬಿಜೆಪಿ ರಾಜ್ಯಾಧ್ಯಕ ನಳೀನ ಕುಮಾರ ಕಟೀಲ್ ಶಾಸಕರಿಗೆ ಕಿವಿಮಾತು ಹೇಳಿದ್ದಾರೆ. ವೈಯಕ್ತಿಕವಾಗಿ, ಪಕ್ಷಕ್ಕೆ, ಸರ್ಕಾರಕ್ಕೆ ಮುಜುಗರ ತರುವಂತ ಎಡವಟ್ಟುಗಳನ್ನು ಮಾಡಿಕೊಳ್ಳಬೇಡಿ.
ಕ್ಷೇತ್ರಗಳಲ್ಲಿ ವಿರೋಧಿಗಳ ಸಂಚಿನ ಬಗ್ಗೆ ಎಚ್ಚರಿಕೆ ವಹಿಸಿ. ಅನಗತ್ಯ ವಿವಾದಗಳಲ್ಲಿ ಸಿಕ್ಕಿಕೊಳ್ಳಬೇಡಿ. ಕ್ಷೇತ್ರದ ಜನರಿಗೆ ಡಬಲ್ ಇಂಜಿನ್ ಸರ್ಕಾರದ ಸಾಧನೆಗಳ ಮನವರಿಕೆ ಮಾಡಿಕೊಡಿ. ಕಾರ್ಯಕರ್ತರ ವಿಶ್ವಾಸ ಉಳಿಸಿಕೊಳ್ಳಿ ಎಂದು ಶಾಸಕರಿಗೆ ಹೇಳಿದ್ದಾರೆ.
ರಾಜ್ಯದ ಮತ್ತಷ್ಟು ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ
Published On - 9:50 pm, Tue, 13 September 22