ಕುಮಾರಸ್ವಾಮಿ ರಾಜಕೀಯ ಜೀವನವೇ ಒಂದು ಡ್ರಾಮ; ಸದಾರಮೆ ನಾಟಕ ಕುಮಾರಸ್ವಾಮಿಗೆ ಹೊಸತಲ್ಲ, ಟ್ವೀಟ್ ಮೂಲಕ ಬಿಜೆಪಿ ವಾಗ್ದಾಳಿ

ಕುಮಾರಸ್ವಾಮಿ ರಾಜಕೀಯ ಜೀವನವೇ ಒಂದು ಡ್ರಾಮ; ಸದಾರಮೆ ನಾಟಕ ಕುಮಾರಸ್ವಾಮಿಗೆ ಹೊಸತಲ್ಲ, ಟ್ವೀಟ್ ಮೂಲಕ ಬಿಜೆಪಿ ವಾಗ್ದಾಳಿ
ಹೆಚ್​ಡಿ ಕುಮಾರಸ್ವಾಮಿ

ಸಾಂದರ್ಭಿಕ ಕೂಸೊಂದು ಹಿಂದುತ್ವದ ಬಗ್ಗೆ ಹಿಂದೂ ಸಂಘಟನೆಗಳಿಗೆ ಪಾಠ ಮಾಡುತ್ತಿದೆ. ಹಿಂದೂ ಸಂಘಟನೆಗಳು ಅವರಂತೆ ಕೇವಲ ತನ್ನ ಕುಟುಂಬದ ಉನ್ನತಿಗಾಗಿ ಕೆಲಸ ಮಾಡುತ್ತಿಲ್ಲ. ಅವರು ಅಧಿಕಾರಕ್ಕಾಗಿ ಕಣ್ಣೀರು ಹಾಕುತ್ತಾರೆ ಆದರೆ ಹಿಂದೂ ಸಂಘಟನೆಗಳು ಹಿಂದೂ ಸಮಾಜದ ಕಣ್ಣೀರು ಒರೆಸುವ ಕೆಲಸ ಮಾಡುತ್ತಿವೆ.

TV9kannada Web Team

| Edited By: Ayesha Banu

Apr 02, 2022 | 4:17 PM

ಬೆಂಗಳೂರು: ರಾಜ್ಯ ಬಿಜೆಪಿ ಘಟಕ(BJP Karnataka) ಸರಣಿ ಟ್ವೀಟ್ ಮಾಡುವ ಮೂಲಕ ಮಾಜಿ ಸಿಎಂ ಹೆಚ್ಡಿ ಕುಮಾರಸ್ವಾಮಿ(HD Kumaraswamy) ವಿರುದ್ಧ ವಾಗ್ದಾಳಿ ನಡೆಸಿದೆ. ಕುಮಾರಸ್ವಾಮಿ ಟ್ವೀಟ್‌ಗಳಿಗೆ ರಾಜ್ಯ ಬಿಜೆಪಿ ಘಟಕ ತಿರುಗೇಟು ನೀಡಿದೆ. ಉಪಸಭಾಪತಿಯ ಕುರ್ಚಿಗೆ ಗಂಟುಬಿದ್ದು ಅದು ಸಿಗದಿದ್ದಾಗ ಕಾಂಗ್ರೆಸ್‌ ತ್ಯಜಿಸಿ ಜೆಡಿಎಸ್‌ ಸೇರಿರುವ ವ್ಯಕ್ತಿಯ ಸಮುದಾಯವನ್ನು ಮೆಚ್ಚಿಸಲು ಹೆಚ್‌ಡಿಕೆ ಸರ್ಕಸ್‌ ಮಾಡುತ್ತಿದ್ದಾರೆ. ಇಂತಹ ಸದಾರಮೆ ನಾಟಕ ಕುಮಾರಸ್ವಾಮಿಗೆ ಹೊಸತಲ್ಲ. ಕುಮಾರ ಸ್ವಾಮಿಯ ರಾಜಕೀಯ ಜೀವನವೇ ಒಂದು ಡ್ರಾಮಾ. ಇವರ ಕುಟುಂಬವೇ ದೊಡ್ಡ ಡ್ರಾಮಾ ಕಂಪನಿ ಎಂದು ಹ್ಯಾಷ್ ಟ್ಯಾಗ್ ಬಳಸಿ #ಹಿಂದೂವಿರೋಧಿಜೆಡಿಎಸ್‌ ಎಂದು ಬಿಜೆಪಿ ಟ್ವೀಟ್ ಮಾಡಿದೆ.

ಸಾಂದರ್ಭಿಕ ಕೂಸೊಂದು ಹಿಂದುತ್ವದ ಬಗ್ಗೆ ಹಿಂದೂ ಸಂಘಟನೆಗಳಿಗೆ ಪಾಠ ಮಾಡುತ್ತಿದೆ. ಹಿಂದೂ ಸಂಘಟನೆಗಳು ಅವರಂತೆ ಕೇವಲ ತನ್ನ ಕುಟುಂಬದ ಉನ್ನತಿಗಾಗಿ ಕೆಲಸ ಮಾಡುತ್ತಿಲ್ಲ. ಅವರು ಅಧಿಕಾರಕ್ಕಾಗಿ ಕಣ್ಣೀರು ಹಾಕುತ್ತಾರೆ ಆದರೆ ಹಿಂದೂ ಸಂಘಟನೆಗಳು ಹಿಂದೂ ಸಮಾಜದ ಕಣ್ಣೀರು ಒರೆಸುವ ಕೆಲಸ ಮಾಡುತ್ತಿವೆ.

ಮಾನ್ಯ #LuckyDipCM ಕುಮಾರಸ್ವಾಮಿ ಅವರೇ, ಓತಿಕ್ಯಾತಕ್ಕೆ ಬೇಲಿಯ ಗೂಟ ಸಾಕ್ಷಿ ಎಂಬ ಗಾದೆ ಮಾತು ನೆನಪಿಸಿಕೊಳ್ಳಿ. ನಿಮ್ಮ ಜಾತ್ಯತೀತ ನಡೆ ಎಂಬುದು ಅವಕಾಶವಾದದ ಪರಿಷ್ಕೃತ ರೂಪ. ಅಧಿಕಾರ ಅನುಭವಿಸಲು ಏನೂ ಬೇಕಾದರೂ ಮಾಡಲು ಸಿದ್ದವಾಗಿರುವವರು ನೀವು. ನಿಮ್ಮಿಂದ ಯಾವ ವ್ಯಕ್ತಿಯೂ, ಯಾವ ಸಂಘಟನೆಯೂ ಪಾಠ ಕಲಿಯಬೇಕಾಗಿಲ್ಲ ಎಂದು ಟ್ವೀಟ್ ಮೂಲಕ ಮಾಜಿ ಸಿಎಂ ಕುಮಾರಸ್ವಾಮಿ ವಿರುದ್ಧ ಗುಡುಗಿದೆ.

ಬಾಯಿಗೆ ಬಂದಂತೆ ಮಾತನಾಡುವುದು ಆ ಬಳಿಕ ವಿಷಾದ ವ್ಯಕ್ತಪಡಿಸುವುದು ಸಾಂದರ್ಭಿಕ ಸಿಎಂ ಕುಮಾರ ಸ್ವಾಮಿ. ಅವರ ರಾಜಕೀಯ ವರಸೆ. ಯಾವ ವಿಚಾರದಲ್ಲಿ ತನ್ನ ಮತಬ್ಯಾಂಕ್‌ ಗಟ್ಟಿಯಾಗುತ್ತದೋ ಆ ವಿಚಾರವನ್ನು ಗಟ್ಟಿಯಾಗಿ ಹಿಡಿದುಕೊಳ್ಳುವುದು ಇವರ ಜಾಯಮಾನ. ಕುಮಾರಸ್ವಾಮಿ ಅವರೇ, ಗಂಡಸ್ತನದ ಬಗ್ಗೆ ಮಾತನಾಡುವುದರಲ್ಲಿ “ಪುರುಷಾರ್ಥ” ಅಡಗಿದೆಯೇ? ಎಂದು ಕುಮಾರಸ್ವಾಮಿಗೆ ಬಿಜೆಪಿ ಪ್ರಶ್ನಿಸಿದೆ.

ಇದನ್ನೂ ಓದಿ: ಹೊಸ ಹಾಡಿನಲ್ಲಿ ಸಖತ್​ ಗ್ಲಾಮರಸ್​ ಆಗಿ ಕಾಣಿಸಿಕೊಂಡ ಆಶಿಕಾ ರಂಗನಾಥ್

ಕಪಾಳಕ್ಕೆ ಹೊಡೆದ ಪ್ರಕರಣ: ವಿಲ್​ ಸ್ಮಿತ್ ಮಹತ್ವದ ನಿರ್ಧಾರ; ನಟನ ವಿರುದ್ಧ ಶಿಸ್ತಿನ ಕ್ರಮ ಎಂದ ಅಕಾಡೆಮಿ

Follow us on

Related Stories

Most Read Stories

Click on your DTH Provider to Add TV9 Kannada