ಕರ್ನಾಟಕ ಬಿಜೆಪಿ ಸಾಮಾಜಿಕ ಜಾಲತಾಣದ ಸಂಚಾಲಕ ಪೊಲೀಸ್ ವಶಕ್ಕೆ

| Updated By: ರಮೇಶ್ ಬಿ. ಜವಳಗೇರಾ

Updated on: May 09, 2024 | 7:38 PM

ಲೋಕಸಭಾ ಚುನಾವಣೆ ಹಿನ್ನೆಲೆಯಲ್ಲಿ ಕಾಂಗ್ರೆಸ್‌ ವಿರುದ್ಧ ಸಮುದಾಯಾಧಾರಿತವಾಗಿ ಟೀಕೆ ಮಾಡಿದ ಪ್ರಕರಣಕ್ಕೆ ಸಂಬಂಧಿಸಿದಂತೆ ಕರ್ನಾಟಕ ಬಿಜೆಪಿ ಸಾಮಾಜಿಕ ಜಾಲತಾಣದ ಮುಖ್ಯಸ್ಥನನ್ನು ಪೊಲೀಸರು ವಶಕ್ಕೆ ಪಡೆದುಕೊಂಡಿದ್ದಾರೆ. ಏನಿದು ಪ್ರಕರಣ?

ಕರ್ನಾಟಕ ಬಿಜೆಪಿ ಸಾಮಾಜಿಕ ಜಾಲತಾಣದ ಸಂಚಾಲಕ ಪೊಲೀಸ್ ವಶಕ್ಕೆ
ಪ್ರಶಾಂತ್ ಮಾಕನೂರು
Follow us on

ಬೆಂಗಳೂರು, (ಮೇ 09): ಲೋಕಸಭಾ ಚುನಾವಣೆ (Lok Sabha Election 2024) ಹಿನ್ನೆಲೆಯಲ್ಲಿ ಕಾಂಗ್ರೆಸ್‌ ವಿರುದ್ಧ ಸಮುದಾಯಾಧಾರಿತವಾಗಿ ಸಾಮಾಜಿಕ ಜಾಲತಾಣಗಳಲ್ಲಿ ಟೀಕೆ ಮಾಡಿದ ಪ್ರಕರಣಕ್ಕೆ ಸಂಬಂಧಿಸಿದಂತೆ ಕರ್ನಾಟಕ ಬಿಜೆಪಿ ಸಾಮಾಜಿಕ ಜಾಲತಾಣದ ಸಂಚಾಲಕ ಪ್ರಶಾಂತ್ ಮಾಕನೂರು ಎನ್ನುವರನ್ನು ಬೆಂಗಳೂರಿನ ಹೈಗ್ರೌಂಡ್ಸ್​ ಪೊಲೀಸರು ವಶಕ್ಕೆ ಪಡೆದುಕೊಂಡಿದ್ದಾರೆ. ಈ ವೇಳೆ ಪ್ರಶಾಂತ್ ಮಾಕನೂರು ಕೋರ್ಟ್​ನ ನಿರೀಕ್ಷಣಾ ಜಾಮೀನು ಆದೇಶ ಪ್ರತಿ ಪೊಲೀಸರ ಮುಂದೆ ಹಾಜರು ಪಡಿಸಿದ್ದಾರೆ.

ಕಾಂಗ್ರೆಸ್‌ ವಿರುದ್ಧ ಸಮುದಾಯಾಧಾರಿತವಾಗಿ ಟೀಕೆ ಮಾಡುವ ಸಂಬಂಧ ಬಿಜೆಪಿಯ (BJP Karnataka) ಸೋಷಿಯಲ್‌ ಮೀಡಿಯಾ ಎಕ್ಸ್‌ ಖಾತೆಯಲ್ಲಿ ಮೊಟ್ಟೆ ವಿಡಿಯೋ ಅಪ್ಲೋಡ್‌ ಮಾಡಲಾಗಿತ್ತು. ಈ ಸಂಬಂಧ ಈ ಸಂಬಂಧ ಬುಧವಾರವಷ್ಟೇ (ಮೇ 8)  ಕಾಂಗ್ರೆಸ್​ ದೂರಿನ ಮೇರೆಗೆ ಬಿಜೆಪಿ ರಾಷ್ಟ್ರೀಯ ಅಧ್ಯಕ್ಷ ಜೆ.ಪಿ. ನಡ್ಡಾ (JP Nadda), ಐಟಿ ಘಟಕದ ಮುಖ್ಯಸ್ಥ ಅಮಿತ್‌ ಮಾಳವೀಯಾ (Amit Malaveya) ಹಾಗೂ ರಾಜ್ಯಾಧ್ಯಕ್ಷ ಬಿ.ವೈ. ವಿಜಯೇಂದ್ರ (BY Vijayendra) ವಿರುದ್ಧ ಬೆಂಗಳೂರಿನ ಹೈಗ್ರೌಂಡ್ಸ್ ಪೊಲೀಸ್ ಠಾಣೆಯಲ್ಲಿ ಎಫ್​ಐಆರ್ ದಾಖಲಾಗಿತ್ತು. ಈ ಹಿನ್ನೆಲೆಯಲ್ಲಿ ಹೈ ಗ್ರೌಂಡ್ಸ್ ಪೊಲೀಸರು ನೋಟಿಸ್‌ ಜಾರಿ ಮಾಡಿ 7 ದಿನಗಳೊಳಗೆ ಉತ್ತರಿಸುವಂತೆ ಸೂಚಿಸಿದ್ದರು. ಇದರ ಬೆನ್ನಲೇ ಇಂದು ಬಿಜೆಪಿಯ ಸಾಮಾಜಿಕ ಜಾಲತಾಣದ ಮುಖ್ಯಸ್ಥ ಪ್ರಶಾಂತ್ ಮಾಕನೂರು ಅವರನ್ನು ಪೊಲೀಸರು ವಶಕ್ಕೆ ಪಡೆದುಕೊಂಡಿದ್ದಾರೆ.

ಇದನ್ನೂ ಓದಿ: ಜೆಪಿ ನಡ್ಡಾ, ಬಿವೈ ವಿಜಯೇಂದ್ರ, ಐಟಿ ಸೆಲ್ ಮುಖ್ಯಸ್ಥನಿಗೆ ಹೈಗ್ರೌಂಡ್ಸ್ ಪೊಲೀಸ್​​ ಸಮನ್ಸ್

ಆದ್ರೆ, ಪ್ರಶಾಂತ್ ಮಾಕನೂರು ಕೋರ್ಟ್​ನ ನಿರೀಕ್ಷಣಾ ಜಾಮೀನು ಆದೇಶ ಪ್ರತಿ ಪೊಲೀಸರ ಮುಂದೆ ಹಾಜರು ಪಡಿಸಿದ್ದಾರೆ.  ಹೀಗಾಗಿ ಜಾಮೀನು ಪ್ರಕ್ರಿಯೆ ಹಾಗೂ ಪ್ರಶಾಂತ್ ಹೇಳಿಕೆಯನ್ನು ದಾಖಲಿಸಿಕೊಳ್ಳುತ್ತಿದ್ದಾರೆ.

ರಾಜ್ಯದ ಮತ್ತಷ್ಟು ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ