AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ನಿಗಮ, ಮಂಡಳಿ ಹಾಗೂ ಪ್ರಾಧಿಕಾರಗಳ ಅಧ್ಯಕ್ಷರ ಅವಧಿ ವಿಸ್ತರಣೆ: ಮಹತ್ವದ ಆದೇಶ

ಕರ್ನಾಟಕ ಸರ್ಕಾರವು ನಿಗಮ, ಮಂಡಳಿ ಹಾಗೂ ಪ್ರಾಧಿಕಾರಗಳ ಅಧ್ಯಕ್ಷರ ಅವಧಿಯನ್ನು ವಿಸ್ತರಿಸಿ ಆದೇಶ ಹೊರಡಿಸಿದೆ. ಸಿಬ್ಬಂದಿ ಮತ್ತು ಆಡಳಿತ ಸುಧಾರಣಾ ಇಲಾಖೆಯು ಈ ಕುರಿತು ಅಧಿಸೂಚನೆ ಹೊರಡಿಸಿದ್ದು, ಡಿಸಿಎಂ ಡಿ.ಕೆ. ಶಿವಕುಮಾರ್ ಅವರು ಸಿಎಂ ಸಿದ್ದರಾಮಯ್ಯ ಅವರಿಗೆ ಪತ್ರ ಬರೆದು ಈ ಅವಧಿ ವಿಸ್ತರಣೆಗೆ ನಿನ್ನೆಯಷ್ಟೇ ಮನವಿ ಮಾಡಿದ್ದರು.

ನಿಗಮ, ಮಂಡಳಿ ಹಾಗೂ ಪ್ರಾಧಿಕಾರಗಳ ಅಧ್ಯಕ್ಷರ ಅವಧಿ ವಿಸ್ತರಣೆ: ಮಹತ್ವದ ಆದೇಶ
ಆದೇಶ ಪತ್ರ
Anil Kalkere
| Edited By: |

Updated on: Feb 28, 2026 | 12:12 PM

Share

ಬೆಂಗಳೂರು, ಫೆಬ್ರವರಿ 28: ನಿಗಮ, ಮಂಡಳಿ ಹಾಗೂ ಪ್ರಾಧಿಕಾರಗಳಿಗೆ ನಾಮನಿರ್ದೇಶನಗೊಂಡಿದ್ದ ಅಧ್ಯಕ್ಷರ ಅವಧಿ ವಿಸ್ತರಣೆ ಮಾಡಿ ಸಿಬ್ಬಂದಿ ಮತ್ತು ಆಡಳಿತ ಸುಧಾರಣಾ ಇಲಾಖೆಯಿಂದ ಆದೇಶ ಮಾಡಲಾಗಿದೆ. ಈಗಾಗಲೇ ಅವಧಿ ಮುಕ್ತಾಯಗೊಂಡ ಮತ್ತು ಮುಕ್ತಾಯಗೊಳ್ಳಲಿರುವ ಪ್ರಾಧಿಕಾರಗಳ ಅಧ್ಯಕ್ಷರುಗಳ ಇದು ಅನ್ವಯವಾಗಲಿದ್ದು, ಅಧ್ಯಕ್ಷರು ಕಾರ್ಯನಿರ್ವಹಿಸಲು ಅಧಿಸೂಚನೆ ಹೊರಡಿಸುವಂತೆ ಸೂಚನೆ ನೀಡಲಾಗಿದೆ.

ಆದೇಶದಲ್ಲಿ ಏನಿದೆ?

ಸರ್ಕಾರದ ವಿವಿಧ ಇಲಾಖೆಗಳ ಅಧೀನದಲ್ಲಿ ಬರುವ ನಿಗಮ, ಮಂಡಳಿ ಹಾಗೂ ಪ್ರಾಧಿಕಾರಗಳ ನಾಮನಿರ್ದೇಶನಗೊಂಡ ಅಧ್ಯಕ್ಷರುಗಳ ಮುಕ್ತಾಯಗೊಂಡ/ಮುಕ್ತಾಯಗೊಳ್ಳಲಿರುವ ಅವಧಿಯನ್ನು ಮುಂದಿನ ಆದೇಶದವರೆಗೆ ಮುಂದುವರಿಸಲಾಗಿದೆ. ಈ ಆದೇಶದ ಅನ್ವಯ ಆಡಳಿತ ಇಲಾಖೆಯ ಸಂಬಂಧಿಸಿದ ಅಧಿನಿಯಮ/ನಿಯಮಗಳ ರೀತಿ ತಕ್ಷಣದಿಂದ ಅಧ್ಯಕ್ಷರು ಕಾರ್ಯನಿರ್ವಹಿಸಲು ಸೂಕ್ತ ಅಧಿಸೂಚನೆ ಹೊರಡಿಸುವಂತೆ ಆಡಳಿತ ಇಲಾಖೆಗಳಿಗೆ ಸೂಚಿಸಲಾಗಿದೆ ಎಂದು ಸಿಬ್ಬಂದಿ ಮತ್ತು ಆಡಳಿತ ಸುಧಾರಣಾ ಇಲಾಖೆ ಉಪ ಕಾರ್ಯದರ್ಶಿ ಅಭಿಜಿನ್​​ ಬಿ. ತಮ್ಮ ಆದೇಶದಲ್ಲಿ ತಿಳಿಸಿದ್ದಾರೆ.

ಇದನ್ನೂ ಓದಿ: ಕಾಂಗ್ರೆಸ್​ನಲ್ಲಿ ಕ್ಷಿಪ್ರ ಬೆಳವಣಿಗೆ? ಬೆಂಗಳೂರಿನ ಖಾಸಗಿ ಹೊಟೆಲ್​ನಲ್ಲಿ ಡಿಕೆ ಶಿವಕುಮಾರ್ ಬೆಂಬಲಿಗ 40ಕ್ಕೂ ಹೆಚ್ಚು ಶಾಸಕರ ಸಭೆ!

ಕೆಲವು ಕಾಡಾ ಅಭಿವೃದ್ಧಿ ಪ್ರಾಧಿಕಾರ ಹಾಗೂ ಯೋಜನಾ ಪ್ರಾಧಿಕಾರದ ಅಧ್ಯಕ್ಷರ ಅವಧಿಯನ್ನು ಮುಂದುವರೆಸಿ ಆದೇಶ ಹೊರಡಿಸುವಂತೆ ಕೋರಿ ನಿನ್ನೆಯಷ್ಟೇ ಸಿಎಂ ಸಿದ್ದರಾಮಯ್ಯಗೆ ಡಿಸಿಎಂ ಡಿ.ಕೆ. ಶಿವಕುಮಾರ್​​ ಪತ್ರ ಬರೆದಿದ್ದರು. ವಿವಿಧ ಪ್ರಾಧಿಕಾರದ ಅಧ್ಯಕ್ಷರು ಹಾಗೂ ನಿಗಮ ಮಂಡಳಿಗಳಿಗೆ ಡಿಸಿಸಿ ಅಧ್ಯಕ್ಷರು, ಪದಾಧಿಕಾರಿಗಳು ಹಾಗೂ ಮುಖಂಡರುಗಳನ್ನು ಎರಡು ವರ್ಷಗಳ ಅವಧಿಗೆ ಅಥವಾ ಮುಂದಿನ ಆದೇಶದವೆರೆಗೆ ನೇಮಕ ಮಾಡಲಾಗಿದ್ದು, ಫೆ.7ರ ಆದೇಶದ ಪಟ್ಟಿಯಲ್ಲಿರುವ ಕೆಲವರಿಗೆ ರಾಜ್ಯ ಸಚಿವ ಸ್ಥಾನಮಾನ ನೀಡಿ ಮುಂದಿನ ಆದೇಶದವೆರೆಗೆ ಅವರನ್ನು ವಿಸ್ತರಣೆ ಮಾಡಲಾಗಿದೆ. ಆದರೆ ಇದರಲ್ಲಿ ಕಾಡಾ ಅಭಿವೃದ್ಧಿ ಪ್ರಾಧಿಕಾರದ ಅಧ್ಯಕ್ಷರುಗಳನ್ನು ಮತ್ತು ಯೋಜನಾ ಅಧ್ಯಕ್ಷರುಗಳನ್ನು ಕೈಬಿಡಲಾಗಿದೆ. ಪ್ರಸ್ತುತ ಈ ಪ್ರಾಧಿಕಾರಗಳಿಗೆ ಬೇರೆ ಅಧ್ಯಕ್ಷರನ್ನು ನೇಮಕ ಮಾಡಿಲ್ಲವಾದ್ದರಿಂದ ಮುಂದಿನ ಆದೇಶದವರೆಗೆ ಅಥವಾ ನೇಮಕ ಮಾಡುವವರೆಗೆ ಅವರನ್ನೇ ಮುಂದುವರಿಸವಂತೆ ಡಿಕೆಶಿ ಆಗ್ರಹಿಸಿದ್ದರು.

ಮತ್ತಷ್ಟು ಸುದ್ದಿ ಓದಲು ಇಲ್ಲಿ ಕ್ಲಿಕ್​​ ಮಾಡಿ.

Follow Us
Anil Kalkere
Anil Kalkere
ವಿಡಿಯೋ: ಸಿನಿಮಾಗಳಲ್ಲಿ ಆಕ್ಷನ್ ದೃಶ್ಯ ಎಷ್ಟು ಕಷ್ಟವಾಗಿರುತ್ತೆ ನೋಡಿ
ವಿಡಿಯೋ: ಸಿನಿಮಾಗಳಲ್ಲಿ ಆಕ್ಷನ್ ದೃಶ್ಯ ಎಷ್ಟು ಕಷ್ಟವಾಗಿರುತ್ತೆ ನೋಡಿ
ಮತದಾನವಿಲ್ಲದೇ ಕರ್ನಾಟಕದಿಂದ ನಾಲ್ವರು ರಾಜ್ಯಸಭೆಗೆ ಅವಿರೋಧವಾಗಿ ಆಯ್ಕೆ
ಮತದಾನವಿಲ್ಲದೇ ಕರ್ನಾಟಕದಿಂದ ನಾಲ್ವರು ರಾಜ್ಯಸಭೆಗೆ ಅವಿರೋಧವಾಗಿ ಆಯ್ಕೆ
‘ಬಾಯ್ಸ್ ನೆವರ್ ಕಾಂಪ್ರಮೈಸ್’: ಸಿನಿಮಾ ಬಗ್ಗೆ ನಿರ್ದೇಶಕರ ಮಾತು
‘ಬಾಯ್ಸ್ ನೆವರ್ ಕಾಂಪ್ರಮೈಸ್’: ಸಿನಿಮಾ ಬಗ್ಗೆ ನಿರ್ದೇಶಕರ ಮಾತು
'ಅವನು ನನ್ನ ವಿರುದ್ಧವೇ ಕೆಲಸ ಮಾಡಿದ್ದಾನೆ': ಜಮಿರ್ ವಿರುದ್ಧ ಸಿದ್ದು ಗರಂ
'ಅವನು ನನ್ನ ವಿರುದ್ಧವೇ ಕೆಲಸ ಮಾಡಿದ್ದಾನೆ': ಜಮಿರ್ ವಿರುದ್ಧ ಸಿದ್ದು ಗರಂ
ಹಿಂದುಳಿದ ವರ್ಗಗಳ ಇಲಾಖೆಯಲ್ಲಿ ಅನುದಾನ ತಾರತಮ್ಯದ ಆರೋಪ
ಹಿಂದುಳಿದ ವರ್ಗಗಳ ಇಲಾಖೆಯಲ್ಲಿ ಅನುದಾನ ತಾರತಮ್ಯದ ಆರೋಪ
ಸಿಎಂ ಡಿಕೆಶಿಗೆ ಯಾವುದೇ ಕಂಟಕವಿಲ್ಲ: ನೊಣವಿನಕೆರೆ ಸ್ವಾಮೀಜಿ ಭವಿಷ್ಯ
ಸಿಎಂ ಡಿಕೆಶಿಗೆ ಯಾವುದೇ ಕಂಟಕವಿಲ್ಲ: ನೊಣವಿನಕೆರೆ ಸ್ವಾಮೀಜಿ ಭವಿಷ್ಯ
26 ವರ್ಷಗಳ ಬಳಿಕ ಮನೆಗೆ ಮರಳಿದ ಮಗ: ಭಾವುಕ ಕ್ಷಣಕ್ಕೆ ಸಾಕ್ಷಿಯಾದ ಧರ್ಮಸ್ಥಳ
26 ವರ್ಷಗಳ ಬಳಿಕ ಮನೆಗೆ ಮರಳಿದ ಮಗ: ಭಾವುಕ ಕ್ಷಣಕ್ಕೆ ಸಾಕ್ಷಿಯಾದ ಧರ್ಮಸ್ಥಳ
ವಿಧಾನ ಪರಿಷತ್ ಕದನದಲ್ಲಿ ಜೆಡಿಎಸ್​ಗೆ ಡಬಲ್ ಟೆನ್ಷನ್!
ವಿಧಾನ ಪರಿಷತ್ ಕದನದಲ್ಲಿ ಜೆಡಿಎಸ್​ಗೆ ಡಬಲ್ ಟೆನ್ಷನ್!
ಕೆಆರ್​ಎಸ್ ಜಲಮಟ್ಟ 81 ಅಡಿಗೆ ಕುಸಿತ, ತಮಿಳುನಾಡಿಗೆ ನೀರು ಬಿಡುಗಡೆ ಸವಾಲು
ಕೆಆರ್​ಎಸ್ ಜಲಮಟ್ಟ 81 ಅಡಿಗೆ ಕುಸಿತ, ತಮಿಳುನಾಡಿಗೆ ನೀರು ಬಿಡುಗಡೆ ಸವಾಲು
ಒಮಾನ್​ನಲ್ಲಿ ಟ್ಯಾಂಕರ್ ದಾಳಿ, ಅಮೆರಿಕ ರಾಜತಾಂತ್ರಿಕರಿಗೆ ಭಾರತ ಸಮನ್ಸ್
ಒಮಾನ್​ನಲ್ಲಿ ಟ್ಯಾಂಕರ್ ದಾಳಿ, ಅಮೆರಿಕ ರಾಜತಾಂತ್ರಿಕರಿಗೆ ಭಾರತ ಸಮನ್ಸ್