ಕರ್ನಾಟಕ ಕಾಂಗ್ರೆಸ್ ಸರ್ಕಾರದ (Karnataka Congress Government) ಮಹತ್ವಾಕಾಂಕ್ಷಿ ಶಕ್ತಿ ಯೋಜನೆಗೆ ಸಿಎಂ ಸಿದ್ದರಾಮಯ್ಯ(Siddaramaiah) ಚಾಲನೆ ನೀಡಿದ್ದು ರಾಜ್ಯಾದ್ಯಂತ ಮಹಿಳೆಯರು ಫುಲ್ ಖುಷ್ ಆಗಿದ್ದಾರೆ. ಶಕ್ತಿ ಯೋಜನೆ (Free Bus Travel For Women Scheme) ಎರಡನೇ ದಿನಕ್ಕೆ ಕಾಲಿಟ್ಟು ಮಹಿಳೆಯರು, ಯುವತಿಯರು, ವಿದ್ಯಾರ್ಥಿಗಳು ಹಣ ಖರ್ಚು ಮಾಡದೆ ಓಡಾಡುತ್ತಿದ್ದಾರೆ. ಬಹುತೇಕ ಕೆಎಸ್ಆರ್ಟಿಸಿ, ಸರ್ಕಾರಿ ಬಸ್ಗಳು ಫುಲ್ ಆಗಿದ್ದು ಖಾಸಗಿ ಬಸ್ಗಳು ಖಾಲಿ ಖಾಲಿಯಾಗಿವೆ. ಸರ್ಕಾರದ ಫ್ರೀ ಬಸ್ ಯೋಜನೆಗೆ ಮಹಿಳೆಯರು ಸಂತಸ ವ್ಯಕ್ತಪಡಿಸಿದ್ದಾರೆ. ಇನ್ನು ಮತ್ತೊಂದೆಡೆ ಸಿಎಂ ಗೃಹಕಚೇರಿ ಕೃಷ್ಣಾದಲ್ಲಿ ಇಂದು ಅಧಿಕಾರಿಗಳ ಜೊತೆ ಸಿಎಂ ಸಭೆ ನಡೆಸಲಿದ್ದಾರೆ. ಕುಡಿಯುವ ನೀರು, ಜಲಜೀವನ್ ಮಿಷನ್, ಇಂದಿರಾ ಕ್ಯಾಂಟೀನ್ ಸೇರಿದಂತೆ ವಿವಿಧ ಯೋಜನೆಗಳ ಪ್ರಗತಿ ಬಗ್ಗೆ ಸಿದ್ದರಾಮಯ್ಯ ನೇತೃತ್ವದಲ್ಲಿ ಸಭೆ ನಡೆಯಲಿದೆ. ಇನ್ನು ರಾಜ್ಯದ ಕರಾವಳಿ ಜಿಲ್ಲೆಗಳಾದ ದಕ್ಷಿಣ ಕನ್ನಡ, ಉತ್ತರ ಕನ್ನಡ, ಉಡುಪಿ ಜಿಲ್ಲೆಗಳಲ್ಲಿ ಇಂದು ಭಾರಿ ಮಳೆಯಾಗಲಿದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ. ರಾಜಕೀಯ ಮತ್ತು ಮಳೆಯ ಲೈವ್ ಅಪ್ಡೇಟ್ಸ್ಗಳಿಗಾಗಿ ಟವಿ9 ಡಿಜಿಟಲ್ ಫಾಲೋ ಮಾಡಿ.
ಸಿಲಿಕಾನ್ ಸಿಟಿಯಲ್ಲಿ ಸಂಜೆ ವೇಳೆಗೆ ಮಳೆ ಸುರಿದ್ದು, ಹಲವು ಕಡೆ ರಸ್ತೆ ಜಲಾವೃತಗೊಂಡಿವೆ. ಮಾರತ್ತಹಳ್ಳಿ ವರ್ತೂರು ಭಾಗದಲ್ಲಿ ರಸ್ತೆಗಳು ಜಲಾವೃತಗೊಂಡಿದ್ದು, ಬಳಗೆರೆ ರಸ್ತೆ ಮತ್ತು ಕರಿಯಮ್ಮನ ಅಗ್ರಹಾರದ ರಸ್ತೆ ಮೇಲೆ ನೀರು ನಿಂತಿವೆ. ರಸ್ತೆ ಜಲಾವೃತ ಆಗಿದ್ದರಿಂದ ವಾಹನ ಸವಾರರು ಪರದಾಡಿದ್ದಾರೆ.
ಬೆಂಗಳೂರು ಮಹಾನಗರದ ಹಲವೆಡೆ ವರುಣನ ಆರ್ಭಟ ಜೋರಾಗಿದ್ದು, ವರ್ತೂರಿನಲ್ಲಿ ಮಳೆಯಿಂದ ಮನೆಗಳಿಗೆ ರಾಜಕಾಲುವೆ ನೀರು ನುಗ್ಗಿದೆ. ಮನೆಗಳಿಗೆ ನೀರು ನುಗ್ಗಿದ್ದರಿಂದ ಸ್ಥಳೀಯ ನಿವಾಸಿಗಳು ಪರದಾಡಿದ್ದಾರೆ.
ರಾಜ್ಯ ಸರ್ಕಾರದ ವರ್ಗಾವಣೆ ಆದೇಶ ಪ್ರಶ್ನಿಸಿ ಐಪಿಎಸ್ ಅಧಿಕಾರಿ ರವಿ ಡಿ.ಚನ್ನಣ್ಣನವರ್ ಸಿಎಟಿ ಮೊರೆ ಹೋಗಿದ್ದರು. ಸಿಎಟಿಯಿಂದ ರವಿ ಡಿ.ಚನ್ನಣ್ಣನವರ್ ವರ್ಗಾವಣೆ ಆದೇಶಕ್ಕೆ ತಡೆ
ಬೆಂಗಳೂರು: ಜೂನ್ 8ರಂದು ಐಪಿಎಸ್ ಅಧಿಕಾರಿ ರವಿ ಡಿ.ಚನ್ನಣ್ಣನವರ್ ವರ್ಗಾವಣೆ ಮಾಡಿ ಆದೇಶ ಹೊರಡಿಸಿದ್ದ ಸರ್ಕಾರ ಸದ್ಯ ಅದನ್ನು ತಡೆ ಹಿಡಿದೆ. ಕಿಯೋನಿಕ್ಸ್ ಎಂಡಿ ಹುದ್ದೆಯಿಂದ ಐಎಸ್ಡಿಗೆ ವರ್ಗಾವಣೆ ಮಾಡಿತ್ತು. ಆಂತರಿಕ ಭದ್ರತಾ ವಿಭಾಗದ ಡಿಐಜಿಪಿ ಆಗಿ ವರ್ಗಾವಣೆ ಮಾಡಿತ್ತು.
ಬೆಳಗಾವಿಯಿಂದ 13 ಕೀಮಿ ಮಹಾರಾಷ್ಟ್ರ ಗಡಿ ಇದೆ ಹೀಗಾಗಿ ಎಲ್ಲರೂ ಅಲ್ಲಿಗೆ ಹೋಗುತ್ತಾರೆ. ವಿದ್ಯುತ್ ದರ ಏರಿಕೆ ನಿಯಂತ್ರಿಸದಿದ್ದರೆ ಕರ್ನಾಟಕದಾದ್ಯಂತ ಉಗ್ರ ಹೋರಾಟ ಮಾಡಬೇಕಾಗುತ್ತೆ. ನಮ್ಮ ವಿನಂತಿ ಪುರಸ್ಕರಿಸದಿದ್ದರೆ ಒಂದು ದಿನ ಕರ್ನಾಟಕದಲ್ಲಿ ಕೈಗಾರಿಕೆ ಬಂದ್ ಮಾಡುತ್ತೇವೆ. ಇದಕ್ಕೂ ಮೀರಿ ಕ್ರಮ ಜರುಗಿಸದಿದ್ದರೆ ಕಾನೂನು ಹೋರಾಟ ಮಾಡುತ್ತೇವೆ ಎಂದು ಸರ್ಕಾರಕ್ಕೆ ಎಚ್ಚರಿಕೆ ನೀಡಿದರು.
ವಿದ್ಯುತ್ ದರ ಹೆಚ್ಚಳ ಮಾಡುತ್ತಾ ಹೋದರೆ ಮಹಾರಾಷ್ಟ್ರಕ್ಕೆ ಹೋಗಬೇಕಾಗುತ್ತೆ ಎಂದು ವಾಣಿಜ್ಯೋದ್ಯಮ ಸಂಸ್ಥೆಯ ಅಧ್ಯಕ್ಷ ಹೇಮಂತ್ ಪೋರವಾಲ್ ಹೇಳಿದರು. ಉದ್ಯಮಿಗಳ ಜಂಟಿ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ಬೆಳಗಾವಿಯ ಉದ್ಯಮಭಾಗ ಕೈಗಾರಿಕಾ ಪ್ರದೇಶದಲ್ಲಿ 50 ರಿಂದ 60 ಸಾವಿರ ಕಾರ್ಮಿಕರು ಕೆಲಸ ಮಾಡುತ್ತಾರೆ. ಮಹಾರಾಷ್ಟ್ರದವರ ಪ್ರೊಡಕ್ಷನ್ ಜಾಸ್ತಿ ಇದೆ ಅವರು ಈ ಅವಕಾಶ ಬಳಸಿಕೊಳ್ಳುತ್ತಾರೆ ಎಂದರು.
ಈ ಹಿಂದೆ ಏಪ್ರಿಲ್ 1ರಂದೇ ಹೆದ್ದಾರಿ ಪ್ರಾಧಿಕಾರ ದರ ಏರಿಕೆ ಮಾಡಿತ್ತು. ಸಾರ್ವಜನಿಕ ಆಕ್ರೋಶ ಹಿನ್ನೆಲೆ ದರ ಹೆಚ್ಚಳ ವಾಪಸ್ಸ್ ಪಡೆದಿತ್ತು. ಆದರೆ ಇದೀಗ ಮತ್ತೆ ಏರಿಕೆ ಮಾಡಿದೆ.
ರಾಮನಗರ: ಬೆಂಗಳೂರು-ಮೈಸೂರು ದಶಪಥ ರಸ್ತೆಯ ಟೋಲ್ ದರ ಮತ್ತೆ ಹೆಚ್ಚಸಿ ರಾಷ್ಟ್ರೀಯ ಹೆದ್ದಾರಿ ಪ್ರಾಧಿಕಾರ ಆದೇಶ ಹೊರಡಿಸಿದೆ. ಶೇ.22ರಷ್ಟು ಟೋಲ್ ದರವನ್ನು ಹೆದ್ದಾರಿ ಪ್ರಾಧಿಕಾರ ಏರಿಕೆ ಮಾಡಿದೆ. ಜೂನ್ 1ರಿಂದಲೇ ದುಬಾರಿ ಶುಲ್ಕ ಅನ್ವಯವಾಗಲಿದೆ.
ನರ್ಸಿಂಗ್ ವೃತ್ತಿ ಬಹಳ ಪವಿತ್ರವಾದ ವೃತ್ತಿ ಎಂದು ಸಿಎಂ ಸಿದ್ದರಾಮಯ್ಯ ಹೇಳಿದರು. ನರ್ಸಿಂಗ್ ಪ್ರಶಸ್ತಿ ಪ್ರದಾನ ಸಮಾರಂಭದಲ್ಲಿ ಮಾತನಾಡಿದ ಅವರು, ಬಹಳ ದೀರ್ಘಕಾಲ ನರ್ಸಿಂಗ್ ವೃತ್ತಿ ಮಾಡಿದವರಿಗೆ ಪ್ರಶಸ್ತಿ ಸಿಕ್ಕಿದೆ ಎಂದು ಹೇಳಿದರು.
ದಾವಣಗೆರೆ: ವಿದ್ಯುತ್ ದರ ಹೆಚ್ಚಿಸಿದ್ದಾರೆ, ಯಾರೂ ಕರೆಂಟ್ ಬಿಲ್ ಕಟ್ಟಬೇಡಿ ಎಂದು ಮಾಜಿ ಸಚಿವ ರೇಣುಕಾಚಾರ್ಯ ಆಕ್ರೋಶ ವ್ಯಕ್ತಪಡಿಸಿದರು. 20 ಸಾವಿರ ರೂ. ಕೋಟಿ ಕಾಮಗಾರಿ ಹಣ ವಾಪಸ್ ಪಡೆದಿದ್ದಾರೆ. ನಮ್ಮ ಅವಧಿಯ ಕಾಮಗಾರಿ ಹಣ ವಾಪಸ್ ಪಡೆಯಲು ಆಗುತ್ತದೆ. ವಿದ್ಯುತ್ ಬೆಲೆ ಏರಿಕೆ ಆದೇಶ ವಾಪಸ್ ಪಡೆಯುವುದಕ್ಕೆ ಬರಲ್ವಾ ಎಂದು ಪ್ರಶ್ನಿಸಿದರು.
ಸರ್ಕಾರ ಸರಿಯಾಗಿ ವ್ಯವಸ್ಥೆ ಮಾಡಿಕೊಂಡರೆ ಗ್ಯಾರಂಟಿ ಯೋಜನೆಗಳಿಗೆ ರಾಜ್ಯ ಸರ್ಕಾರ ಹಣ ಹೊಂದಿಸಬಹುದು. ಆದರೆ ಬಿಜೆಪಿಯವರ ಹೇಳಿಕೆ ಬಾಲಿಶವಾದುದು ಎಂದು ಮಾಜಿ ಸಿಎಂ ಹೆಚ್.ಡಿ ಕುಮಾರಸ್ವಾಮಿ ಹೇಳಿದರು.
ರಾಮನಗರ: ಗ್ಯಾರಂಟಿ ಯೋಜನೆ ಜಾರಿಗೆ ಸರ್ಕಾರ ಹಣ ಒದಗಿಸುವ ವಿಚಾರವಾಗಿ ಚನ್ನಪಟ್ಟಣದಲ್ಲಿ ಮಾಜಿ ಸಿಎಂ ಹೆಚ್.ಡಿ. ಕುಮಾರಸ್ವಾಮಿ ಹೇಳಿಕೆ ನೀಡಿದ್ದು, ಗ್ಯಾರೆಂಟಿಗೆ ಹಣ ಒದಸಲಿಕ್ಕೆ ಆಗಲ್ಲ ಅಂತ ನಾನು ಹೇಳುವುದಿಲ್ಲ. ಸರ್ಕಾರ ಮನಸ್ಸು ಮಾಡಿದ್ರೆ ಹಣ ಹೊಂದಿಸುವುದು ಕಷ್ಟ ಆಗಲ್ಲ. ನಾನು ಸ್ವಲ್ಪ ದಿನ ಸರ್ಕಾರ ನಡೆಸಿದ್ದೇನೆ. ಹಣವನ್ನ ಹೊಂದಿಸಲು ಸರ್ಕಾರಕ್ಕೆ ಯಾವುದೇ ಸಮಸ್ಯೆ ಆಗುವುದಿಲ್ಲ
ಎಂದು ಹೇಳಿದರು.
ಚುನಾವಣೆ ಬಳಿಕ ಸುರ್ಜೇವಾಲ ರಾಜ್ಯಕ್ಕೆ ಬಂದಿದ್ದಾರೆ. ಬಂದು ಭೇಟಿ ಮಾಡಲು ಹೇಳಿದ್ರು. ಸೌಹಾರ್ದ ಭೇಟಿ ಸುರ್ಜೇವಾಲ ಜೊತೆ ಆಗಿದೆ. ಮೊದಲಿನಿಂದ ಹೇಳುತ್ತ ಬಂದಿದ್ದೇನೆ. ಪಕ್ಷ ವಹಿಸಿದ ಜವಾಬ್ದಾರಿ ನಿರ್ವಹಣೆ ಮಾಡುತ್ತೇನೆ. ಸ್ಥಾನ ಮಾನದ ವಿಚಾರ ಯಾವುದೇ ಚರ್ಚೆ ಆಗಿಲ್ಲ ಎಂದು ಮಾಜಿ ಸಿಎಂ ಜಗದೀಶ್ ಶೆಟ್ಟರ್ ಹೇಳಿದರು.
ಸರ್ಕಾರಿ ಬಸ್ಗಳಲ್ಲಿ ಮಹಿಳೆಯರ ಉಚಿತ ಪ್ರಯಾಣಕ್ಕೆ ಅವಕಾಶ ನೀಡಲಾಗಿದೆ. ನಿನ್ನೆ ಒಂದೇ ದಿನ 5.71 ಲಕ್ಷ ಮಹಿಳೆಯರು ಸರ್ಕಾರಿ ಬಸ್ನಲ್ಲಿ ಪ್ರಯಾಣ ಮಾಡಿದ್ದು, ನಿನ್ನೆ ಮಧ್ಯಾಹ್ನ 1ರಿಂದ ರಾತ್ರಿ 12ರವರೆಗೆ 5.71 ಲಕ್ಷ, ಬಿಎಂಟಿಸಿ ಬಸ್ನಲ್ಲಿ ಒಟ್ಟು 2,01,215, ವಾಯವ್ಯ ಸಾರಿಗೆ ಬಸ್ನಲ್ಲಿ 1,22,354, ಕಲ್ಯಾಣ ಕರ್ನಾಟಕ ಸಾರಿಗೆಯಲ್ಲಿ 53,623, ಸಾರಿಗೆ ಬಸ್ಗಳಲ್ಲಿ ಓಡಾಡಿರುವ ಒಟ್ಟು ಮಹಿಳೆಯರ ಸಂಖ್ಯೆ 5,71,023 ಮಹಿಳಾ ಪ್ರಯಾಣಿಕರ ಟಿಕೆಟ್ ವೆಚ್ಚ 1,40,22,878 ರೂ.
ಬಿಜೆಪಿ ಅವಧಿಯಲ್ಲಿ ಇಂದಿರಾ ಕ್ಯಾಂಟೀನ್ ಸರಿಯಾಗಿ ನಿರ್ವಹಣೆಯಾಗಲಿಲ್ಲ. ಬೆಂಗಳೂರಿನ ಬಹುತೇಕ ಕಡೆ ಇಂದಿರಾ ಕ್ಯಾಂಟೀನ್ ಮುಚ್ಚಿಹೋಗಿದೆ. ಈಗ ಮತ್ತೆ ತಮ್ಮ ಸರ್ಕಾರ ಬಂದ ಹಿನ್ನೆಲೆಯಲ್ಲಿ ತಮ್ಮ ಹಿಂದಿನ ಆಡಳಿತದಲ್ಲಿ ತಂದಿದ್ದ ಮಹತ್ವಾಕಾಂಕ್ಷೆಯ ಇಂದಿರಾ ಕ್ಯಾಂಟೀನ್ ಪುನಾರಾಂಭಿಸಲು ಸಿಎಂ ಸಿದ್ಧರಾಮಯ್ಯ ನಿರ್ಧರಿಸಿದ್ದಾರೆ.
ಬೆಂಗಳೂರು: ಇಂದಿರಾ ಕ್ಯಾಂಟೀನ್ ವಿಚಾರವಾಗಿ ಹೊಸ ಟೆಂಡರ್ ಕರೆಯುತ್ತೇವೆ. ಕ್ವಾಲಿಟಿ, ಕ್ವಾಂಟಿಟಿಗೂ ಹೆಚ್ಚಿನ ಒತ್ತು ಕೊಡುತ್ತೇವೆ. ಮತ್ತೊಮ್ಮೆ ಟೆಂಡರ್ ಆದ ಬಳಿಕ ರೀ ಲಾಂಚ್ ಮಾಡುತ್ತೇವೆ ಎಂದು ಸಿಎಂ ಸಿದ್ಧರಾಮಯ್ಯ ಹೇಳಿದರು. ಗೃಹ ಕಚೇರಿ ಕೃಷ್ಣಾದಲ್ಲಿ ಮಾತನಾಡಿದ ಅವರು, ಬೆಂಗಳೂರಿನಲ್ಲಿ 250 ಇಂದಿರಾ ಕ್ಯಾಂಟೀನ್ ಆರಂಭಿಸಲು ಸೂಚನೆ ನೀಡಲಾಗಿದೆ.
ಕಳಪೆ ಕಾಮಗಾರಿ ಬಗ್ಗೆ ಎಲ್ಲಾ ಶಾಸಕರು ಕೂಡ ಬರೆದುಕೊಟ್ಟಿದ್ದಾರೆ. ಪೈಪ್ಲೈನ್ ಲೋಪ, ಟೆಂಡರ್ ಅಕ್ರಮ ಬಗ್ಗೆ ಪರಿಶೀಲನೆ ಮಾಡುತ್ತೇವೆ. ಎಲ್ಲಾ ಕಡೆಯೂ ಅಕ್ರಮವಾಗಿದೆ ಎಂದು ಹೇಳುತ್ತಿಲ್ಲ. ಗುರುಮಠಕಲ್, ತುಮಕೂರಿನಲ್ಲಿ ಲೋಪದ ಬಗ್ಗೆ ಮಾಹಿತಿ ಬಂದಿದೆ. ಈ ಬಗ್ಗೆ ಸ್ಥಳೀಯ ಅಧಿಕಾರಿಗಳು ತನಿಖೆ ಮಾಡಿ ವರದಿ ಕೊಡುತ್ತಾರೆ. ಸಿಎಂ ಸಿದ್ದರಾಮಯ್ಯ ಕೂಡ ವರದಿ ನೀಡಲು ಸೂಚನೆ ನೀಡಿದ್ದಾರೆ ಎಂದು ಟಿವಿ9ಗೆ ಗ್ರಾಮೀಣಾಭಿವೃದ್ಧಿ ಸಚಿವ ಪ್ರಿಯಾಂಕ್ ಖರ್ಗೆ ಹೇಳಿದರು.
ಬೆಳಗಾವಿ: ಪ್ರತ್ಯೇಕ ಲಿಂಗಾಯತ ಧರ್ಮದ ಬಗ್ಗೆ ಈಗಾಗಲೇ ಕೇಂದ್ರ ಸರ್ಕಾರಕ್ಕೆ ವರದಿಯನ್ನು ಸಲ್ಲಿಸಿತ್ತು. ಇದೀಗ ವರದಿ ಬಗ್ಗೆ ಕೇಂದ್ರ ಸರ್ಕಾರವೂ ಉತ್ತರ ನೀಡಿದೆ. ಈಗ ಅದಕ್ಕೆ ಕರ್ನಾಟಕ ಸರ್ಕಾರ ಮರು ಉತ್ತರ ಕೊಡಬೇಕಿದೆ ಎಂದು ಜಾಗತಿಕ ಲಿಂಗಾಯತ ಮಹಾಸಭಾದ ಮಹಾಪ್ರಧಾನ ಕಾರ್ಯದರ್ಶಿ ಡಾ.ಶಿವಾನಂದ ಜಾಮದಾರ ಆಗ್ರಹಿಸಿದ್ದಾರೆ. ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ಈ ಹಿಂದೆ ಲಿಂಗಾಯತ ಧರ್ಮ ವಿಚಾರದಲ್ಲಿ ಏನೆಲ್ಲ ನಡೆದಿದೆ ಗೊತ್ತು. ಹೆಚ್.ಡಿ ಕುಮಾರಸ್ವಾಮಿ ಲಿಂಗಾಯತ ಧರ್ಮದ ಫೈಲ್ ಮುಟ್ಟಲ್ಲ ಎಂದು ಬೇಜವಾಬ್ದಾರಿ ಹೇಳಿಕೆ ನೀಡಿದ್ದರು ಎಂದು ಕಿಡಿಕಾರಿದ್ದಾರೆ.
ಮತ್ತೆ ಮುನ್ನಲೆಗೆ ಬಂದ ಲಿಂಗಾಯತ ಸ್ವತಂತ್ರ ಧರ್ಮ: ಕಾರ್ಯಕಾರಿಣಿ ಸಭೆಯಲ್ಲಿ ನಾಲ್ಕು ನಿರ್ಣಯ
ಬೆಂಗಳೂರು: ಇಬ್ಬರು ಐಪಿಎಸ್ ಅಧಿಕಾರಿಗಳನ್ನು ವರ್ಗಾವಣೆ ಮಾಡಿ ಸರ್ಕಾರ ಆದೇಶ ಹೊರಡಿಸಿದೆ. ಡಾ.ಸಿಮಿ ಮರಿಯಂ ಜಾರ್ಜ್, ಎಐಜಿಪಿ, ಅಪರಾಧ ವಿಭಾಗ, ಬೆಂಗಳೂರು, ಅರುಣ್ ರಂಗರಾಜನ್, ಎಸ್ಪಿ, ಐಎಸ್ಡಿ, ಉತ್ತರ ವಿಭಾಗ, ಹುಬ್ಬಳ್ಳಿ ವರ್ಗಾವಣೆ ಮಾಡಲಾಗಿದೆ.
ಬೆಂಗಳೂರು: ರಾಜ್ಯಸಭೆಯ ಬಿಜೆಪಿ ಸದಸ್ಯ ಜಗ್ಗೇಶ್ ಅವರು ಇಂದು ಡಿಸಿಎಂ ಡಿಕೆ ಶಿವಕುಮಾರ್ ಅವರನ್ನು ಭೇಟಿ ಮಾಡಿದ್ದಾರೆ. ನಗರದ ಕುಮಾರಕೃಪಾ ಅತಿಥಿಗೃಹದಲ್ಲಿ ಜಗ್ಗೇಶ್ ದಂಪತಿ ಭೇಟಿ ಮಾಡಿದ್ದಾರೆ. ಸ್ನೇಹಿತನಾಗಿ ಡಿ.ಕೆ.ಶಿವಕುಮಾರ್ಗೆ ಅಭಿನಂದನೆ ಸಲ್ಲಿಸಲು ಬಂದಿದ್ದೇನೆ ಎಂದು ಜಗ್ಗೇಶ್ ಹೇಳಿದ್ದಾರೆ.
ಹಿಂದಿನ ಬಿಜೆಪಿ ಸರ್ಕಾರದ ಪಾಪದ ಕಲೆಗಳನ್ನು ತೊಳೆಯುತ್ತೇವೆ ಎಂದು ಬಿಜೆಪಿ ವಿರುದ್ಧ ಕರ್ನಾಟಕ ಪ್ರದೇಶ ಕಾಂಗ್ರೆಸ್ ಘಟಕ ಟ್ವೀಟ್ ಮಾಡಿದೆ. ಶಿಕ್ಷಣ ವಿಚಾರದಲ್ಲಿ ಬಿಜೆಪಿ ಮಕ್ಕಳಾಟವಾಡಿದ ಪರಿಣಾಮ ಸರ್ಕಾರಿ ಶಾಲೆ ತೊರೆಯುವವರ ಸಂಖ್ಯೆ ಹೆಚ್ಚಳವಾಗಿದೆ. ನಮ್ಮ ಸರ್ಕಾರ ಶೈಕ್ಷಣಿಕ ಕ್ಷೇತ್ರಕ್ಕೆ ಹೆಚ್ಚು ಒತ್ತು ಕೊಟ್ಟು ಮಕ್ಕಳನ್ನು ಮರಳಿ ಶಾಲೆಗೆ ಕರೆತರುವ ಪ್ರಯತ್ನ ಮಾಡ್ತೇವೆ ಎಂದು ಟ್ವೀಟ್ ಮೂಲಕ ಬಿಜೆಪಿ ವಿರುದ್ಧ ಕಾಂಗ್ರೆಸ್ ಘಟಕ ವಾಗ್ದಾಳಿ ನಡೆಸಿದೆ.
ರಾಜ್ಯದಲ್ಲಿ ಹಿಂದಿನ ಬಿಜೆಪಿ ಸರ್ಕಾರ ಮಾಡಿದ ಪಾಪದ ಕಲೆಗಳನ್ನು ಒಂದೊಂದಾಗಿಯೇ ತೊಳೆಯುತ್ತೇವೆ.
ಬಿಜೆಪಿ ಶಿಕ್ಷಣ ವ್ಯವಸ್ಥೆಯಲ್ಲಿ ಮಕ್ಕಳಾಟ ಮಾಡಿದ ಪರಿಣಾಮ ಶಾಲೆ ತೊರೆಯುವವರ ಸಂಖ್ಯೆ ಹೆಚ್ಚಿದೆ.
ನಮ್ಮ ಸರ್ಕಾರ ಶೈಕ್ಷಣಿಕ ಕ್ಷೇತ್ರಕ್ಕೆ ಹೆಚ್ಚು ಒತ್ತು ಕೊಟ್ಟು ಮಕ್ಕಳನ್ನು ಮರಳಿ ಶಾಲೆಗೆ ಕರೆತರುವ ಎಲ್ಲಾ ಪ್ರಯತ್ನಗಳೂ ಮಾಡಲಿದೆ. pic.twitter.com/ar7CKkZCfs
— Karnataka Congress (@INCKarnataka) June 12, 2023
ಕಾಂಗ್ರೆಸ್ ಸರ್ಕಾರದ ಗ್ಯಾರಂಟಿ ಯೋಜನೆಗೆ ವಿಪಕ್ಷಗಳ ಟೀಕೆ ವಿಚಾರಕ್ಕೆ ಸಂಬಂಧಿಸಿ ಮಹಿಳಾ ಸಮಾನತೆ ವಿರೋಧಿಸಿದವರೇ ಶಕ್ತಿ ಯೋಜನೆ ವಿರೋಧಿಸ್ತಿದ್ದಾರೆ ಎಂದು ಮೈಸೂರಿನಲ್ಲಿ ಸಮಾಜ ಕಲ್ಯಾಣ ಸಚಿವ ಡಾ.H.C.ಮಹದೇವಪ್ಪ ವಾಗ್ದಾಳಿ ನಡೆಸಿದರು. ಅಂದು ಮನುವಾದಿಗಳು ಮಹಿಳೆಯರ ಸಮಾನತೆಯನ್ನ ವಿರೋಧಿಸಿದ್ದರು. ಇಂದು ಮಹಿಳೆಯರ ಉಚಿತ ಬಸ್ ಸೌಲಭ್ಯವನ್ನೂ ಟೀಕೆ ಮಾಡ್ತಿದ್ದಾರೆ. ಮಹಿಳೆಯರ ಉಚಿತ ಬಸ್ ಸೌಲಭ್ಯದ ಬಗ್ಗೆಯೂ ವ್ಯಂಗ್ಯವಾಡುತ್ತಿದ್ದಾರೆ ಎಂದು ವಾಗ್ದಾಳಿ ನಡೆಸಿದರು.
ಹಿಂದಿನ ಸರ್ಕಾರದ ವಿದ್ಯುತ್ ದರ ಏರಿಕೆ ಆದೇಶ ಜಾರಿಯಾಗಿದೆ. ಕೆಇಆರ್ಸಿ ಒಮ್ಮೆ ಆದೇಶ ಮಾಡಿದರೆ ಹಿಂಪಡೆಯಲು ಆಗುವುದಿಲ್ಲ ಎಂದು ವಿಧಾನಸೌಧದಲ್ಲಿ ಇಂಧನ ಇಲಾಖೆ ಸಚಿವ ಕೆ.ಜೆ.ಜಾರ್ಜ್ ತಿಳಿಸಿದ್ದಾರೆ. ಕೆಇಆರ್ಸಿ ಕಾಯ್ದೆ ಕೇಂದ್ರ ಸರ್ಕಾರದ ಅಧೀನದಲ್ಲಿದೆ. ವಿದ್ಯುತ್ ಏರಿಕೆ ವಿಚಾರವನ್ನು ಕೇವಲ ಅಧಿಕಾರಿಗಳು ನಿರ್ಧರಿಸುವುದಿಲ್ಲ. ಸಿಎಂ, ಇಂಧನ ಇಲಾಖೆ ಸಚಿವರು ಸಭೆ ನಡೆಸಿ ನಿರ್ಧಾರ ಕೈಗೊಳ್ತಾರೆ. ನಾವು ಹೊಣೆಗಾರಿಕೆಯಿಂದ ತಪ್ಪಿಸಿಕೊಳ್ಳಲು ಕೆಇಆರ್ಸಿ ಮೇಲೆ ಹಾಕಲ್ಲ. ಹಿಂದಿನ ಬಿಲ್ ಪಾವತಿಸಲು ಗ್ರಾಹಕರಿಗೆ 3 ತಿಂಗಳ ಕಾಲಾವಕಾಶವಿದೆ. ಗೃಹಜ್ಯೋತಿ ಯೋಜನೆ ಅಡಿ ಹೊಸ ಮನೆಗಳಿಗೆ 53 ಯೂನಿಟ್ ಉಚಿತ. ಗೃಹಜ್ಯೋತಿ ಜಾರಿ ಹೊರೆಯನ್ನು ಗ್ರಾಹಕರ ಮೇಲೆ ಹಾಕುವುದಿಲ್ಲ. ಗೃಹಜ್ಯೋತಿ ಯೋಜನೆ ವೆಚ್ಚವನ್ನು ರಾಜ್ಯ ಸರ್ಕಾವೇ ಭರಿಸಲಿದೆ ಎಂದು ವಿಧಾನಸೌಧದಲ್ಲಿ ಇಂಧನ ಇಲಾಖೆ ಸಚಿವ ಕೆ.ಜೆ.ಜಾರ್ಜ್ ತಿಳಿಸಿದರು.
ಕಾಂಗ್ರೆಸ್ ಸರ್ಕಾರದಿಂದ ಐದು ಗ್ಯಾರಂಟಿಗಳ ಜಾರಿ ವಿಚಾರಕ್ಕೆ ಸಂಬಂಧಿಸಿ ಕಾಂಗ್ರೆಸ್ನ ಗ್ಯಾರಂಟಿಗಳ ಬಗ್ಗೆ ನಾನು ತಲೆ ಕೆಡಿಸಿಕೊಳ್ಳುವುದಿಲ್ಲ. ಆ ಬಗ್ಗೆ ಚರ್ಚೆ ಮಾಡುವುದಕ್ಕೆ ಇನ್ನೂ ಸಮಯವಿದೆ ಎಂದು ಹೆಚ್ಡಿ ಕುಮಾರಸ್ವಾಮಿ ಹೇಳಿದರು. ಯಾವುದೇ ಕಾರ್ಯಕ್ರಮಕ್ಕೆ ಹಣ ಒದಗಿಸುವುದು ಕಷ್ಟವಲ್ಲ. ಫಲಾನುಭವಿಗಳಿಗೆ ಎಷ್ಟರಮಟ್ಟಿಗೆ ತಲುಪುತ್ತದೆ ಎಂಬುದು ಮುಖ್ಯ. ಬಾಡಿಗೆದಾರರಿಗೆ ಅಗ್ರಿಮೆಂಟ್ ಪೇಪರ್ ಕೊಡಲ್ಲವೆಂದು ಹೇಳ್ತಿದ್ದಾರೆ. ವಿದ್ಯುತ್ ದರ ಏರಿಕೆಗೆ 2 ರಾಷ್ಟ್ರೀಯ ಪಕ್ಷಗಳು ಕಾರಣ. 2017-18ರಲ್ಲೇ ಮುಂದೆ ಆಗುವ ಅನಾಹುತ ಬಗ್ಗೆ ನಾನು ಹೇಳಿದ್ದೆ ಎಂದರು.
ಲೋಕಸಭಾ ಚುನಾವಣೆಯಲ್ಲಿ ಬಿಜೆಪಿ ಜೊತೆ JDS ಮೈತ್ರಿ ವಿಚಾರಕ್ಕೆ ಸಂಬಂಧಿಸಿ ರಾಜಕಾರಣದಲ್ಲಿ ಚರ್ಚೆ, ಊಹಾಪೋಹ ಹುಟ್ಟುವುದು ಸಹಜ. ಕೆಲವೊಮ್ಮೆ ಗಾಳಿ ಸುದ್ದಿಗಾಗಿ ಚರ್ಚೆ ಮಾಡ್ತಾರೆ ಎಂದು ಹೆಚ್.ಡಿ.ಕುಮಾರಸ್ವಾಮಿ ತಿಳಿಸಿದ್ದಾರೆ. ಇದಕ್ಕೆಲ್ಲ ಚುನಾವಣೆ ಪ್ರಕ್ರಿಯೆ ಆರಂಭವಾದಾಗ ಉತ್ತರ ಸಿಗಲಿದೆ. ಬಿಜೆಪಿ ಜೊತೆ ಮೈತ್ರಿ ವಿಚಾರವಾಗಿ ನನ್ನ ಮುಂದೆ ಚರ್ಚೆ ಆಗಿಲ್ಲ. ಸದ್ಯಕ್ಕೆ ಜಿಲ್ಲಾವಾರು ಜೆಡಿಎಸ್ ಮುಖಂಡರ ಸಭೆ ಮಾಡಿದ್ದೇನೆ. ನಿಮ್ಮ ಜೊತೆ ನಿಲ್ಲುತ್ತೇವೆ ಎಂದು ಜೆಡಿಎಸ್ ಮುಖಂಡರು ಹೇಳಿದ್ದಾರೆ. ಏನು ಮಾಡಬೇಕೆಂದು ಆ ಸಂದರ್ಭದಲ್ಲಿ ನಿರ್ಧಾರ ಕೈಗೊಳ್ಳುತ್ತೇವೆ. ನನಗೆ ರಾಜಕಾಣವೇ ಒಲವಿಲ್ಲ, ಕಾರ್ಯಕರ್ತರಿಗಾಗಿ ಇದ್ದೇನೆ. ಸಿಎಂ ಸ್ಥಾನದಿಂದ ಕೆಳಗಿಳಿದಾಗಲೇ ತೀರ್ಮಾನ ಮಾಡಬೇಕೆಂದಿದ್ದೆ. ಸಿಎಂ ಲೋಕಸಭಾ ಚುನಾವಣೆಯಲ್ಲಿ 20 ಸ್ಥಾನ ಗೆಲ್ತೇವೆ ಎಂದಿದ್ದಾರೆ ಎಂದು ಕಾಂಗ್ರೆಸ್ ವಿರುದ್ಧ ಹೆಚ್.ಡಿ.ಕುಮಾರಸ್ವಾಮಿ ವಾಗ್ದಾಳಿ ನಡೆಸಿದರು.
ಮೈಸೂರಿನ ಸರ್ಕಾರಿ ಅತಿಥಿಗೃಹದಲ್ಲಿ ಅಧಿಕಾರಿಗಳ ಜೊತೆ ಸಚಿವ ಹೆಚ್.ಸಿ.ಮಹದೇವಪ್ಪ ಸಭೆ ನಡೆಸಿದ್ದಾರೆ. ಸಚಿವರ ಸಭೆಯ ಪ್ರಾರಂಭದಲ್ಲಿ ಅಧಿಕಾರಿಗಳು, ಜನಪ್ರತಿನಿಧಿಗಳಿಂದ ಸಂವಿಧಾನದ ಪೀಠಿಕೆ ಬೋಧನೆ ಮಾಡಲಾಯಿತು. ಸಭೆಯಲ್ಲಿ ಶಾಸಕರಾದ ತನ್ವೀರ್ ಸೇಠ್, ಶ್ರೀವತ್ಸ, ಡಿಸಿ ಡಾ.ಕೆ.ವಿ.ರಾಜೇಂದ್ರ, ಪೊಲೀಸ್ ಆಯುಕ್ತ ರಮೇಶ್ ಬಾನೋತ್, SP ಸೀಮಾ ಲಾಟ್ಕರ್ ಉಪಸ್ಥಿತರಿದ್ದರು.
ರಾಜ್ಯಾದ್ಯಂತ ಶಕ್ತಿ ಯೋಜನೆ ಜಾರಿ ಹಿನ್ನಲೆ ಮಹಿಳೆಯರಿಗೆ ಬಸ್ ನಲ್ಲಿ ಉಚಿತ ಪ್ರಯಾಣ ಇದೆ. ಹೀಗಾಗಿ ಹುಬ್ಬಳ್ಳಿಯಲ್ಲಿ ಆಟೋ ಚಾಲಕರ ಸಂಘ ಬೃಹತ್ ಪ್ರತಿಭಟನೆ ನಡೆಸುತ್ತಿದೆ. ಹುಬ್ಬಳ್ಳಿಯ ಚೆನ್ಮಮ್ಮ ಸರ್ಕಲ್ ನಿಂದ ಮಿನಿ ವಿಧಾನಸೌಧವರೆಗೂ ನೂರಾರು ಆಟೋ ಚಾಲಕರು ಪ್ರತಿಭಟನೆ ನಡೆಸಿದ್ದಾರೆ. ಸಿದ್ದರಾಮಯ್ಯ, ಡಿಕೆ ಶಿವಕುಮಾರ್ ವಿರುದ್ಧ ದಿಕ್ಕಾರ ಕೂಗಿ ಆಕ್ರೋಶ ವ್ಯಕ್ತಪಡಿಸಿದ್ದಾರೆ.
ರಾಜ್ಯದ ಎಂಟು ಜಿಲ್ಲೆಗಳಲ್ಲಿ ಕುಡಿಯುವ ನೀರಿನ ಸಮಸ್ಯೆ ಹಿನ್ನೆಲೆ ಎಂಟು ಜಿಲ್ಲೆಗಳ ಡಿಸಿಗಳು, ಜಿ.ಪಂ. ಸಿಇಒಗಳ ಜೊತೆ ಸಿಎಂ ಸಿದ್ದರಾಮಯ್ಯ ಸಭೆ ನಡೆಸಿದ್ದಾರೆ. ಗೃಹಕಚೇರಿ ಕೃಷ್ಣಾದಲ್ಲಿ ಸಿಎಂ ಸಿದ್ದರಾಮಯ್ಯ ವಿಡಿಯೋ ಕಾನ್ಫರೆನ್ಸ್ ಮೂಲಕ ಸಭೆ ಮಾಡಿದ್ದು ಯಾವುದೇ ಕಾರಣಕ್ಕೂ ಕುಡಿಯುವ ನೀರಿಗೆ ಸಮಸ್ಯೆ ಆಗಬಾರದು ಎಂದು ಅಗತ್ಯ ಕ್ರಮಕ್ಕೆ ಜಿಲ್ಲಾಧಿಕಾರಿಗಳಿಗೆ ಸೂಚನೆ ನೀಡಿದ್ದಾರೆ.
ಕಾಂಗ್ರೆಸ್ಗೆ ಸಂಪೂರ್ಣ ಬಹುಮತದ ನಂತರ ಗ್ಯಾರೆಂಟಿ ಅನುಷ್ಠಾನಕ್ಕೆ ತರುತ್ತಿದ್ದಾರೆ. ನಾನು ಸರ್ಕಾರಕ್ಕೆ ಆಗ್ರಹಿಸೋದು ಅಂದ್ರೆ ಕೊಟ್ಟಿರುವ ಭರವಸರ ಈಡೇರಿಸುವ ಭರದಲ್ಲಿ ಜನರಿಗೆ ಹೊರೆ ಆಗಬಾರದು. ಒಂದು ಕಡೆ ಹೊರೆ ಇನ್ನೊಂದು ಬರೆ ಕೊಡುವ ಕೆಲಸ ಆಗಬಾರದು, ಪೆಟ್ರೋಲ್ ಸೆಸ್ ಏರಿಕೆ ಮಾಡಬಾರದು. ವಿದ್ಯುಚ್ಛಕ್ತಿ ಬೆಲೆ ಏರಿಕೆಯಾಗಿದೆ ಬಿಜೆಪು ಮೇಲೆ ಗೂಬೆ ಕೂರಿಸುವ ಕೆಲಸ ಮಾಡುತ್ತಿದ್ದಾರೆ ಅಂತ ಶಾಸಕ ವಿಜಯೇಂದ್ರ ಹೇಳಿದ್ದಾರೆ.
ಬೆಂಗಳೂರಿನ ಎಂ.ಜಿ ರಸ್ತೆ ಬಳಿಯ ಗಾಂಧಿ ಪ್ರತಿಮೆ ಬಳಿ ಬಾಲಕಾರ್ಮಿಕ ಪದ್ಧತಿ ವಿರೋಧಿ ದಿನ ಜಾಥಾಗೆ ಸಿಎಂ ಸಿದ್ದರಾಮಯ್ಯ ಚಾಲನೆ ನೀಡಿದ್ದಾರೆ. ಜಾಥಾಗೆ ಚಾಲನೆ ನೀಡಿದ ಬಳಿಕ ಸಿಎಂ ಸಿದ್ದರಾಮಯ್ಯ ಮಾತನಾಡಿದ್ದು, ಯಾರಾದ್ರೂ ಬಾಲ ಕಾರ್ಮಿಕರು ಕಂಡರೆ ಕೆಲಸದಿಂದ ಬಿಡಿಸಿ. ಮಕ್ಕಳು ಶಿಕ್ಷಣದಿಂದ ವಂಚಿತರಾಗಬಾರದು. ಜಾತಿ ವ್ಯವಸ್ಥೆ ಪದ್ಧತಿಯಿಂದಾಗಿ ಶಿಕ್ಷಣದಿಂದ ವಂಚಿತರಾಗಿದ್ದಾರೆ. ಗುಲಾಮಗಿರಿ ಮನಸ್ಥಿತಿಯಿಂದ ಹೊರ ಬರಬೇಕು ಎಂದರು.
ಎಸ್ಕಾಂ ಅಧಿಕಾರಿಗಳು ಜನರಿಗೊಂದು, ಸರ್ಕಾರಿ ಇಲಾಖೆ ಮತ್ತು ಸಂಸ್ಥೆಗಳಿಗೊಂದು ನಿಯಮ ಮಾಡಲು ಹೊರಟಿದ್ದಾರಾ ಎಂಬ ಅನುಮಾನ ವ್ಯಕ್ತವಾಗಿದೆ. ಹೌದು ಸರ್ಕಾರಿ ಇಲಾಖೆ ಮತ್ತು ಸಂಸ್ಥೆಗಳು ಎಸ್ಕಾಂಗಳಿಗೆ ಕಟ್ಟಬೇಕಾದ ಕೋಟಿ ಕೋಟಿ ಬಿಲ್ ಅನ್ನು ಬಾಕಿ ಉಳಿಸಿಕೊಂಡರೂ, ಅಧಿಕಾರಿಗಳು ಮಾತ್ರ ಧ್ವನಿ ಎತ್ತದೆ ಶಾಂತರೂಪಿಗಳಾಗಿದ್ದಾರೆ.
ಸರ್ಕಾರಿ ಇಲಾಖೆ-ಸಂಸ್ಥೆಗಳ ಸಾವಿರಾರು ಕೋಟಿ ಬಿಲ್ ಬಾಕಿ, ಮೌನವಹಿಸಿದ ಸರ್ಕಾರ#KPTCL #BESCOM #karnatakagovernment https://t.co/jfRlUmHkCS
— TV9 Kannada (@tv9kannada) June 12, 2023
ಮುಖ್ಯಮಂತ್ರಿ ಸಿದ್ದರಾಮಯ್ಯಗೆ ಶಾಸಕ ಸುರೇಶ್ ಕುಮಾರ್ ಪತ್ರ ಬರೆದಿದ್ದಾರೆ. ಸಿದ್ದರಾಮಯ್ಯ ಬಳಿಯೇ ಇರುವ ಸಕಾಲ ಇಲಾಖೆ ಜವಾಬ್ದಾರಿಯನ್ನು ಸಚಿವರೊಬ್ಬರಿಗೆ ವಹಿಸುವಂತೆ ಪತ್ರ ಬರೆದಿದ್ದಾರೆ. ಶಾಸಕ ಸುರೇಶ್ ಕುಮಾರ್, ಬಿಜೆಪಿ ಸರ್ಕಾರದಲ್ಲಿ ಸಕಾಲ ಸಚಿವರಾಗಿದ್ದರು.
ಸಿದ್ದರಾಮಯ್ಯ ಅವರಿಗೆ ಅಜ್ಜಿ ನಿಂಗವ್ವಾ ಶಿಂಗಾಡಿ ಧನ್ಯವಾದ ಹೇಳಿದ್ದಾರೆ. ನಿಂಗವ್ವಾ ಶಿಂಗಾಡಿ ನಿನ್ನೆ ಬಸ್ ಹತ್ತುವ ವೇಳೆ ಶಿರಬಾಗಿ ನಮಸ್ಕರಿಸಿದ್ದರು. ಅಜ್ಜಿಯ ಫೋಟೋವನ್ನ ಹಾಕಿ ಸಿಎಂ ಸಿದ್ದರಾಮಯ್ಯ ಟ್ವೀಟ್ ಮಾಡಿದ್ದರು. ಸಿದ್ದರಾಮಯ್ಯ ಅವರ ಬಗ್ಗೆ ಮಾತಾಡಿದ್ದಕ್ಕೆ ಖುಷಿ ಆಗಿದೆ ಎಂದು ಅಜ್ಜಿ ಸಂತಸ ಹೊರ ಹಾಕಿದ್ದಾರೆ. ನಿನ್ನೆ ಧಾರವಾಡದಿಂದ ಸವದತ್ತಿಗೆ ಸಂಬಂಧಿಕರ ಮನೆ ವಾಸ್ತು ಶಾಂತಿಗೆ ಹೊರಟ್ಟಿದ್ದೆ. ಈ ವೇಳೆ ಉಚಿತ ಪ್ರಯಾಣಕ್ಕೆ ಬಿಟ್ಟಿದ್ದಕ್ಕೆ ಬಸ್‌ಗೆ ನಮಸ್ಕರಿಸಿ ಹತ್ತಿದೆ. ಎಲ್ಲ ಹೆಣ್ಣು ಮಕ್ಕಳಿಗೆ ಫ್ರೀ ಮಾಡಿದ್ದಕ್ಕೆ ಬಹಳ ಅನುಕೂಲ ಆಗಿದೆ ಎಂದರು.
ರಾಜ್ಯಾದ್ಯಂತ ಮಹಿಳೆಯರಿಗೆ ಉಚಿತ ಬಸ್ ಪ್ರಯಾಣ ಹಿನ್ನೆಲೆ ಮಹಿಳಾ ಪ್ರಯಾಣಿಕರು ಇಲ್ಲದೆ ಖಾಸಗಿ ಬಸ್ಗಳು ಖಾಲಿ ಖಾಲಿಯಾಗಿವೆ. ಪ್ರತಿದಿನ 30 ರಿಂದ 40 ಜನ ಮಹಿಳಾ ಪ್ರಯಾಣಿಕರು ಪ್ರಯಾಣ ಮಾಡುತ್ತಿದ್ದರು. ನಿನ್ನೆ ಮಧ್ಯಾಹ್ನದಿಂದ ಮಹಿಳೆಯರು ಖಾಸಗಿ ಬಸ್ಸನ್ನ ಹತ್ತುತ್ತಿಲ್ಲ. ಇದರಿಂದ ಸಾಕಷ್ಟು ತೊಂದರೆ ಆಗುತ್ತಿದೆ ಎಂದು ಖಾಸಗಿ ಬಸ್ ಚಾಲಕರು, ನಿರ್ಹವಾಕರು ಅಳಲು ತೋಡಿಕೊಂಡಿದ್ದಾರೆ.
ಕರಾವಳಿ ಭಾಗ ಸೇರಿ ರಾಜ್ಯದ ನಾನಾ ಭಾಗದಲ್ಲಿ ವರುಣಾರ್ಭಟ ಶುರುವಾಗಿದೆ. ದಕ್ಷಿಣ ಕನ್ನಡ, ಉತ್ತರ ಕನ್ನಡ, ಚಿಕ್ಕಮಗಳೂರು ಉಡುಪಿ, ಹಾಸನ, ಶಿವಮೊಗ್ಗ ಹಾಗೂ ಕೊಡಗು ಸೇರಿದಂತೆ ಬಹುತೇಕ ಜಿಲ್ಲೆಗಳು ಹಾಗೂ ಉತ್ತರ ಒಳನಾಡಿನ ಕೆಲವು ಭಾಗದಲ್ಲಿ ಭಾರಿ ಮಳೆಯಾಗಲಿದೆ. ಈ ಬಗ್ಗೆ ಈಗಾಗಲೇ ಹವಾಮಾನ ಇಲಾಖೆ ಮುನ್ಸೂಚನೆ ನೀಡಿದ್ದು, ಅಲರ್ಟ್ ಘೋಷಿಸಿದೆ.
ರಾಜ್ಯದಲ್ಲಿ ಸ್ತ್ರೀ ಶಕ್ತಿ ಯೋಜನೆಗೆ ಚಾಲನೆಗೆ ಬಂದಿದ್ದು ಮಹಿಳೆಯರು ರಾಜ್ಯದ KSRTC ಹಾಗೂ ನಗರದ BMTC ಬಸ್ಗಳಲ್ಲಿ ಉಚಿತವಾಗಿ ಪ್ರಯಾಣ ಮಾಡಬಹುದಾಗಿದೆ. ನಿನ್ನೆ ಸಿಎಂ ಸಿದ್ದರಾಮಯ್ಯ ಇದಕ್ಕೆ ಚಾಲನೆ ಕೊಟ್ಟಿದ್ದು, ಎಲ್ಲಾ ಮಹಿಳೆಯರಿಗೆ ಉಚಿತ ಪ್ರಯಾಣಕ್ಕೆ ಫ್ರೀ ಟಿಕೆಟ್ ನೀಡಲಾಗ್ತಿದೆ. ಹಾಸನದಲ್ಲಿ ಮಹಿಳೆಯ ಮಧ್ಯೆ ಕಂಡಕ್ಟರ್ ಸಿಲುಕಿದ್ದು ನೂಕುನುಗ್ಗಲಾದ ಘಟನೆ ನಡೆದಿದೆ.
ಸಿಎಂ ಗೃಹಕಚೇರಿ ಕೃಷ್ಣಾದಲ್ಲಿ ಸಿಎಂ ಸಿದ್ದರಾಮಯ್ಯ ವಿವಿಧ ಯೋಜನೆಗಳ ಪ್ರಗತಿ ಬಗ್ಗೆ ಅಧಿಕಾರಿಗಳ ಜೊತೆ ಸಭೆ ನಡೆಸಲಿದ್ದಾರೆ. ರಾಜ್ಯ ಕೆಲ ಜಿಲ್ಲೆಗಳಲ್ಲಿ ಕುಡಿಯುವ ನೀರಿನ ಸಮಸ್ಯೆ ಹಿನ್ನೆಲೆ ಬೆಳಗ್ಗೆ 11ಕ್ಕೆ ಜಲಜೀವನ್ ಮಿಷನ್ ಬಗ್ಗೆ ಅಧಿಕಾರಿಗಳ ಜತೆ ಸಿಎಂ ಸಭೆ ನಡೆಸಲಿದ್ದಾರೆ. 8 ಜಿಲ್ಲೆಗಳ ಡಿಸಿಗಳ ಜತೆ ವಿಡಿಯೋ ಕಾನ್ಫರೆನ್ಸ್ ಮೂಲಕ ಸಿಎಂ ಸಭೆ ನಡೆಸಲಿದ್ದಾರೆ. ಮಧ್ಯಾಹ್ನ 1 ಗಂಟೆಗೆ ಇಂದಿರಾ ಕ್ಯಾಂಟೀನ್ ಸಂಬಂಧ ಗೃಹಕಚೇರಿ ಕೃಷ್ಣಾದಲ್ಲಿ ಹಿರಿಯ ಅಧಿಕಾರಿಗಳ ಜೊತೆ ಸಭೆ ನಡೆಸಲಿದ್ದಾರೆ.
Published On - 9:44 am, Mon, 12 June 23